davangere Archives - Samyukta Karnataka

8ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ
ದಾವಣಗೆರೆ: ತಾಲೂಕಿನ ಎಚ್. ಕಲ್ಪನಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿರುವ ಸಿಲಿಂಡರ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಗೋದಾಮಿನಲ್ಲಿದ್ದ 8ಕ್ಕೂ ಹೆಚ್ಚು ಸಿಲಿಂಡರ್‌ಗಳು ಭೀಕರವಾಗಿ ಸ್ಫೋಟಗೊಂಡಿವೆ.

ದೊಗ್ಗಳ್ಳಿ ಶಿವಕುಮಾರ್ ಅವರಿಗೆ ಸೇರಿದ ಈ ಅಡಿಕೆ ಸಂಸ್ಕರಣಾ ಗೋದಾಮನ್ನು ಖಾಲಿ ಇದ್ದ ಕಾರಣಕ್ಕೆ, ಅನಿಲ್ ಎಂಬುವವರಿಗೆ ಸಿಲಿಂಡರ್ ಸಂಗ್ರಹಿಸಿಡಲು ಬಾಡಿಗೆಗೆ ನೀಡಲಾಗಿತ್ತು ಎನ್ನಲಾಗಿದೆ. ಘಟನೆಯಲ್ಲಿ ಅನಿಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗೋದಾಮಿನಲ್ಲಿದ್ದ 20 ರಿಂದ 25 ಸಿಲಿಂಡರ್‌ಗಳ ಪೈಕಿ 8ಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಸಿಲಿಂಡರ್‌ಗಳು 100ರಿಂದ 200 ಮೀಟರ್ ದೂರದವರೆಗೂ ಹಾರಿ ಬಿದ್ದಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯಾರೋ ಧೂಮಪಾನ (ಸಿಗರೇಟ್) ಮಾಡುತ್ತಿದ್ದಾಗ ಕಿಡಿ ತಗುಲಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಯಾವುದೇ ಮುಂಜಾಗ್ರತಾ ಅಥವಾ ಸುರಕ್ಷತಾ ಕ್ರಮಗಳಿಲ್ಲದೆ ಕಾನೂನುಬಾಹಿರವಾಗಿ ಇಲ್ಲಿ ಸಿಲಿಂಡರ್‌ಗಳನ್ನು ಸಂಗ್ರಹಿಸಿಡಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಹಾಗೂ ಉಳಿದ ಸಿಲಿಂಡರ್‌ಗಳು ಸ್ಫೋಟಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಅದೃಷ್ಟವಶಾತ್ ಸುತ್ತಮುತ್ತ ಯಾವುದೇ ಜನವಸತಿ ಇಲ್ಲದ ಕಾರಣ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ಕುಂಕುಮ ಭಾಗ್ಯ’ ಖ್ಯಾತಿಯ ನಟಿ ಸಂಚಿತಾ ಆತ್ಮಹತ್ಯೆ!

The post 8ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟ: ಓರ್ವ ವ್ಯಕ್ತಿಗೆ ಗಂಭೀರ ಗಾಯ appeared first on Samyukta Karnataka.

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗದಿದ್ದದ್ದೇ ಒಳ್ಳೆಯದಾಯಿತು!
ದಾವಣಗೆರೆ: ತಮ್ಮ ಸಹೋದರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದೇ ಇದ್ದದ್ದೇ ಒಳ್ಳೆಯದಾಯಿತು. ಯಾಕಂದರೆ, 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಿಂದ ನಾಯಕ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತಿತ್ತು ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.

ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ ಬ್ಯಾಂಕ್ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ‘ಸಂವಿಧಾನ ಬದ್ಧ ಶೇ. 7ರ ಎಸ್‌ಟಿ ಮೀಸಲಾತಿ ಜಾರಿಯಾಗಲೇ ಬೇಕು’ ಎಂಬ ಕುರಿತು ಆಯೋಜಿಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಒಂದು ವೇಳೆ ಸಹೋದರ ಅಧ್ಯಕ್ಷರಾಗಿದ್ದರೆ, ಇಡೀ ನಮ್ಮ ಸಮಾಜ ಕೆಡುತ್ತಿತ್ತು. ನೋಡಿ, ಲಿಂಗಾಯತರು, ಒಕ್ಕಲಿಗರು, ಕುರುಬರು ಎಲ್ಲರೂ ಇದ್ದಾರೆ. ಆದರೆ, ನಮ್ಮ ಸಮಾಜ ಬಂದಾಗ ಕಾಂಗ್ರೆಸ್ ಸೋತರೆ, ನಾಯಕ ಸಮಾಜದ ಲೀಡರ್‌ಶಿಪ್‌ನಿಂದಲೇ ಸೋತರು ಎಂದು ನಮ್ಮ ಮೇಲೆ ಅಪವಾದ ಹೊರಿಸುತ್ತಿದ್ದರು. ಅದಕ್ಕೆ ದೇವರು ಒಳ್ಳೆಯದು ಮಾಡಿದ್ದಾನೆ ಎಂದು ಮಾರ್ಮಿಕವಾಗಿ ನುಡಿದರು.

ಬಿಜೆಪಿ ಸರ್ಕಾರದ ತಪ್ಪಿನಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂತು: ಬಿಜೆಪಿ ಸರ್ಕಾರದ ತಪ್ಪಿನಿಂದಲೇ ಇವತ್ತು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲಾ ಸಮಾಜವನ್ನು ಜೊತೆಗೆ ಕರೆದುಕೊಂಡು ಹೋಗಿದ್ದರೆ ನಾವು ಸೋಲುತ್ತಿರಲಿಲ್ಲ. ಗೆದ್ದ ಮೇಲೆ ಒಂದೇ ಸಮುದಾಯದ ರಾಜಕೀಯ ಮಾಡಬಾರದು. ಅದನ್ನು ನಾವು ಹೋರಾಟದ ಮೂಲಕ ಗಟ್ಟಿಯಾಗಿ ಎದುರಿಸಬೇಕು ಎಂದರು.

9ನೇ ಶೆಡ್ಯೂಲ್ ಬಗ್ಗೆ ಕಾಂಗ್ರೆಸ್ ನಾಯಕರಿಂದ ತಪ್ಪು ಮಾಹಿತಿ: ಕಾಂಗ್ರೆಸ್‌ನ ನಾಯಕರು 9ನೇ ಶೆಡ್ಯೂಲ್ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. 9ನೇ ಶೆಡ್ಯೂಲ್ ಮಾಡಲು ಕೇಂದ್ರದಲ್ಲಿ ಮೋದಿ ಸರ್ಕಾರವಿದೆ, ಅದರಿಂದ ತೊಂದರೆಯಾಗುತ್ತದೆ ಎನ್ನುವುದು ತಪ್ಪು. 9ನೇ ಶೆಡ್ಯೂಲ್‌ಗೂ ನಮ್ಮ ಮೀಸಲಾತಿಗೂ ಸಂಬಂಧವಿಲ್ಲ. ದೇಶದ ಹಿತದೃಷ್ಟಿಯಿಂದ ಕಾನೂನು ಮಾಡುವಾಗ ಮಾತ್ರ 9ನೇ ಶೆಡ್ಯೂಲ್ ಬರುತ್ತದೆ. ಮೀಸಲಾತಿ ಅದಕ್ಕೆ ಒಳಪಡುವುದಿಲ್ಲ. ಕಾಂಗ್ರೆಸ್ ನಾಯಕರು ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡುತ್ತಿರುವುದನ್ನು ಪ್ರತಿಯೊಬ್ಬ ಹಂತದಲ್ಲೂ ನಾವು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸ್ಪಷ್ಟಪಡಿಸಿದರು.

ಮೀಸಲಾತಿ ಬಗ್ಗೆ ಸತೀಶ್ ಜಾರಕಿಹೊಳಿ ಬಾಯಿ ಬಿಡಲಿಲ್ಲ…

The post ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗದಿದ್ದದ್ದೇ ಒಳ್ಳೆಯದಾಯಿತು! appeared first on Samyukta Karnataka.

ಮೀಸಲಾತಿ ಬಗ್ಗೆ ಸತೀಶ್ ಜಾರಕಿಹೊಳಿ ಬಾಯಿ ಬಿಡಲಿಲ್ಲ…
ದಾವಣಗೆರೆ: ‘ಸತೀಶ್ ಅಣ್ಣನಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಲೋಕೋಪಯೋಗಿ ಸಚಿವ ಸ್ಥಾನ ಎರಡನ್ನೂ ನೀಡಿದ್ದರು. ಬಳಿಕ ಅಧ್ಯಕ್ಷ ಸ್ಥಾನವನ್ನು ಕಿತ್ತುಕೊಂಡರು. ಆದರೂ ಅವರು ಏನೂ ಕೇಳಲಿಲ್ಲ. ಮುಖ್ಯಮಂತ್ರಿ ಆಗುವ ಆಸೆಯಿಂದ ಶೇ. 7ರಷ್ಟು ಮೀಸಲಾತಿ ಬಗ್ಗೆ ಅವರು ಬಾಯಿ ಬಿಡಲಿಲ್ಲ. ಸಿದ್ದರಾಮಯ್ಯನವರು ಹೇಳಿದ್ದಕ್ಕೆಲ್ಲ ಸುಮ್ಮನೆ ಹೂಂ ಎಂದರು ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಚಿವ ರಾಜುಗೌಡ ವಾಗ್ದಾಳಿ ನಡೆಸಿದರು.

ನಗರದ ದಾವಣಗೆರೆ-ಹರಿಹರ ಅರ್ಬನ್ ಕೋ ಬ್ಯಾಂಕ್ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ‘ಸಂವಿಧಾನ ಬದ್ಧ ಶೇ. 7ರ ಎಸ್‌ಟಿ ಮೀಸಲಾತಿ ಜಾರಿಯಾಗಲೇ ಬೇಕು’ ಎಂಬ ಕುರಿತು ಆಯೋಜಿಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಸತೀಶ್ ಅಣ್ಣ, ಅಂದು ನಮ್ಮ ಸಮುದಾಯದ ಶೇ. 4ರಷ್ಟು ಮೀಸಲಾತಿಯನ್ನು ಕಟ್ ಮಾಡಿದ ತಕ್ಷಣವೇ, ‘ನನ್ನ ಸಮುದಾಯಕ್ಕೆ ಅನ್ಯಾಯವಾಗಿದೆ, ಇಂದೇ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ನೀವು ಸವಾಲು ಹಾಕಬೇಕಿತ್ತು. ಹಾಗೆ ಮಾಡಿದ್ದರೆ ನಿಮ್ಮ ಸ್ಥಾನವನ್ನು ಮುಟ್ಟುವ ತಾಕತ್ತು ಯಾರಿಗೂ ಇರುತ್ತಿರಲಿಲ್ಲ. ನಿಮ್ಮ ಜಾಗದಲ್ಲಿ ರಮೇಶ್ ಜಾರಕಿಹೊಳಿ ಇದ್ದಿದ್ದರೆ ಸುಮ್ಮನೆ ಬಿಡುತ್ತಿದ್ದರೇ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು ಶೇ. 7ರಿಂದ ಶೇ. 3ಕ್ಕೆ ಇಳಿಸಲಾಗಿದೆ. ಶೇ. 4ರಷ್ಟು ಮೀಸಲಾತಿಯನ್ನು ಕಡಿತಗೊಳಿಸಿದರೂ, ಕಾಂಗ್ರೆಸ್‌ನಲ್ಲಿರುವ ಸಮುದಾಯದ 15 ಶಾಸಕರು ಒಬ್ಬರೂ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರದ ಆಸೆಗೆ ಬಿದ್ದು ನಮ್ಮ ಶಾಸಕರು ಸುಮ್ಮನಾಗಿದ್ದಾರೆ. ಟಾಂಗಾ ಕುದುರೆಗೆ ಮುಂದೆ ಹುಲ್ಲು ತೋರಿಸಿ ಓಡಿಸುವಂತೆ, ‘ನಿನಗೆ ಮಂತ್ರಿ ಮಾಡ್ತೀವಿ, ನಿನಗೆ ಮಂತ್ರಿ ಮಾಡ್ತೀವಿ’ ಎಂದು ಆಸೆ ತೋರಿಸಿ ಕಾಂಗ್ರೆಸ್ ಸರ್ಕಾರ ನಮ್ಮ ಶಾಸಕರನ್ನು ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

The post ಮೀಸಲಾತಿ ಬಗ್ಗೆ ಸತೀಶ್ ಜಾರಕಿಹೊಳಿ ಬಾಯಿ ಬಿಡಲಿಲ್ಲ… appeared first on Samyukta Karnataka.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ
ದಾವಣಗೆರೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟಿದ್ದ ಮೀಸಲಾತಿ ತಡೆಯಾಜ್ಞೆಯನ್ನು ಕೂಡಲೇ ಕಾಂಗ್ರೆಸ್ ಸರ್ಕಾರ ತೆರವುಗೊಳಿಸಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ (ಎಸ್‌ಟಿ) ಸಮುದಾಯಕ್ಕೆ ಶೇ. 3ರಿಂದ ಶೇ. 7ಕ್ಕೆ ಹಾಗೂ ಎಸ್‌ಸಿ ಸಮುದಾಯಕ್ಕೆ ಶೇ. 15 ರಿಂದ ಶೇ. 17ಕ್ಕೆ ಮೀಸಲಾತಿ ಹೆಚ್ಚಿಸಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಬಂದ ನಂತರ ಈ ಹೆಚ್ಚುವರಿ ಮೀಸಲಾತಿ ಕಸಿದುಕೊಳ್ಳುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ

ಸರ್ಕಾರದ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸುವುದಾಗಿ ಎಚ್ಚರಿಸಿದ ಅವರು, ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ತಕ್ಷಣವೇ ಕೋರ್ಟ್‌ಗೆ ಹೋಗಿ ನ್ಯಾಯಾಲಯದಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಅದನ್ನು ಬಿಟ್ಟು ಕೇವಲ ‘9ನೇ ಶೆಡ್ಯೂಲ್’ ನೆಪ ಹೇಳಿ ಸಮುದಾಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬೇಡಿ ಎಂದು ಸರ್ಕಾರದ ಕಿವಿ ಹಿಂಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೀಸಲಾತಿ ಕಡಿತಗೊಳಿಸಿದ ಪರಿಣಾಮ ಪ್ರಸ್ತುತ ಶಾಲಾ-ಕಾಲೇಜುಗಳ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಎಸ್‌ಟಿ ಸಮುದಾಯದ ಮಕ್ಕಳಿಗೆ ಕೇವಲ ಶೇ. 3ರಷ್ಟು ಮಾತ್ರ ಅವಕಾಶ ಸಿಗುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ನೀಟ್ ಹಗರಣ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಸಚಿವರು ಹಾಗೂ ಶಾಸಕರಿದ್ದರೂ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂದು ದೂರಿದ ಅವರು, ಬಿಜೆಪಿಯಿಂದ ಈ ಬಾರಿ ಯಾರೂ ಗೆದ್ದಿಲ್ಲದಿರಬಹುದು. ಆದರೆ ಕಾಂಗ್ರೆಸ್‌ನಿಂದ ಗೆದ್ದಿರುವ ಶಾಸಕರು ತಮ್ಮ ಸ್ವಾರ್ಥ ಬದಿಗಿಟ್ಟು, ಸಮುದಾಯದ ಹಿತದೃಷ್ಟಿಯಿಂದ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕು. ಬೆಂಚ್ ತಟ್ಟಿ ಮೀಸಲಾತಿ ಮರಳಿ ಕೊಡಿಸುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಈ ಕಾಂಗ್ರೆಸ್ ಸರ್ಕಾರ ಮೀಸಲಾತಿ ನೀಡಲು ವಿಫಲವಾದರೆ, 2028ರಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣವೇ ಎಸ್‌ಸಿ-ಎಸ್‌ಟಿ ಸಮುದಾಯಗಳಿಗೆ ನೀಡಿದ್ದ ಹಳೆಯ ಮೀಸಲಾತಿಯನ್ನು ಯಥಾಸ್ಥಿತಿಯಲ್ಲಿ ಮರು ಸ್ಥಾಪಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಉಚ್ಚಾಟಿತ ನಾಯಕರ ಮರು ಸೇರ್ಪಡೆ: ಹೈಕಮಾಂಡ್‌ಗೆ ಬಿಟ್ಟ ವಿಷಯ

The post ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ appeared first on Samyukta Karnataka.

ಉಚ್ಚಾಟಿತ ನಾಯಕರ ಮರು ಸೇರ್ಪಡೆ: ಹೈಕಮಾಂಡ್‌ಗೆ ಬಿಟ್ಟ ವಿಷಯ
ದಾವಣಗೆರೆ: ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ನಾಯಕರ ಮರು ಸೇರ್ಪಡೆ ವಿಚಾರವು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೆ.ಎಸ್. ಈಶ್ವರಪ್ಪ ಸೇರಿದಂತೆ ಉಚ್ಚಾಟಿತ ಬಿಜೆಪಿ ನಾಯಕರ ಮರು ಸೇರ್ಪಡೆಗೆ ಹೈಕಮಾಂಡ್ ಸುಳಿವು ನೀಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

‘ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಏನಿದ್ದರೂ ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತಿದೆ’ ಎಂದು ಅವರು ನಯವಾಗಿ ಉತ್ತರಿಸಿದರು.

ಇದನ್ನೂ ಓದಿ: ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ

ಉಚ್ಚಾಟಿತ ನಾಯಕರ ಮರು ಸೇರ್ಪಡೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಶ್ರೀರಾಮುಲು ಅವರ ಈ ಹೇಳಿಕೆ ಗಮನ ಸೆಳೆದಿದೆ. ಆದರೆ, ಈ ಕುರಿತು ಅವರು ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸದೇ, ಅಂತಿಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಬಿಟ್ಟಿದ್ದಾರೆ.

ನೀವು ಗೃಹಲಕ್ಷ್ಮೀ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ರೆ ಈ ಸುದ್ದಿ ಓದಿ

The post ಉಚ್ಚಾಟಿತ ನಾಯಕರ ಮರು ಸೇರ್ಪಡೆ: ಹೈಕಮಾಂಡ್‌ಗೆ ಬಿಟ್ಟ ವಿಷಯ appeared first on Samyukta Karnataka.

ಯೋಗ, ನೈಸರ್ಗಿಕ ಚಿಕಿತ್ಸೆಗೆ ಜಾಗತಿಕ ಮನ್ನಣೆ: ರಾಜ್ಯಪಾಲರ ಪ್ರಶಂಸೆ
‘ವಿಕಸಿತ ಭಾರತ-2047’ ಕನಸಿನಲ್ಲಿ ಆರೋಗ್ಯ ಕ್ಷೇತ್ರದ ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ವಿಜ್ಞಾನಕ್ಕೆ ಯುವ ವೈದ್ಯರು ಸೇತುವೆಯಾಗಲಿ – ವೈದ್ಯರು ಸಂಶೋಧಕರಾಗಿಯೂ ಬೆಳೆಯಬೇಕು : ರಾಜ್ಯಪಾಲ

ದಾವಣಗೆರೆ : ಭಾರತ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಸ್ಥಾಪಿಸಲಾಗುತ್ತಿರುವ ‘WHO ಗ್ಲೋಬಲ್ ಸೆಂಟರ್’ ಜಾಗತಿಕ ಜ್ಞಾನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದ್ದು, ಭಾರತೀಯ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳಿಗೆ ವಿಶ್ವ ಮಟ್ಟದಲ್ಲಿ ಮತ್ತಷ್ಟು ಮಾನ್ಯತೆ ತಂದುಕೊಡಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ದಾವಣಗೆರೆ ಸಮೀಪದ ದೊಡ್ಡಬಾತಿಯ ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಯೋಗ ಹಾಗೂ ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ವೈದ್ಯಕೀಯ ಪರಂಪರೆಯು ಜಗತ್ತಿನ ಅತ್ಯಂತ ಪ್ರಾಚೀನ ಹಾಗೂ ಸಮೃದ್ಧ ಪರಂಪರೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  ಭಾರತೀಯ ವಾಯುಪಡೆಯ AN-32 ವಿಮಾನ ಪತನ

‘ವಿಕಸಿತ ಭಾರತ-2047’ ಗುರಿಯಲ್ಲಿ ಆರೋಗ್ಯ ಕ್ಷೇತ್ರದ ಪಾತ್ರ : ಭಾರತ ಇಂದು ‘ವಿಕಸಿತ ಭಾರತ-2047’ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದು, ಈ ರಾಷ್ಟ್ರೀಯ ಪಯಣದಲ್ಲಿ ಆರೋಗ್ಯ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆರೋಗ್ಯವಂತ ನಾಗರಿಕರೇ ಬಲಿಷ್ಠ ರಾಷ್ಟ್ರ ನಿರ್ಮಾಣದ ಅಡಿಪಾಯವಾಗಿದ್ದು, ವೈದ್ಯಕೀಯ ಕ್ಷೇತ್ರಕ್ಕೆ ಪದವಿ ಪಡೆದು ಹೊರಬರುತ್ತಿರುವ ಯುವಕರು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆಯುರ್ವೇದ ಜೀವನ ಪದ್ಧತಿ : ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ. ಅದು ಆರೋಗ್ಯಕರ ಜೀವನ ನಡೆಸಲು ಮಾರ್ಗದರ್ಶನ ನೀಡುವ ಸಮಗ್ರ ಜೀವನ ಪದ್ಧತಿಯಾಗಿದೆ ಎಂದು ರಾಜ್ಯಪಾಲರು ಹೇಳಿದರು.

ಇದನ್ನೂ ಓದಿ:  ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಶುಲ್ಕ ವಿರೋಧಿಸಿ ಜೂನ್ 17ರಿಂದ ಕಾಂಗ್ರೆಸ್ ರಾಷ್ಟ್ರವ್ಯಾಪಿ ಅಭಿಯಾನ

ಇಂದಿನ ವೇಗದ ಜೀವನಶೈಲಿ, ಒತ್ತಡ, ಮಾನಸಿಕ ಸಮಸ್ಯೆಗಳು ಮತ್ತು ಪರಿಸರ ಸವಾಲುಗಳ ನಡುವೆ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸೆಗಳ ಪ್ರಾಮುಖ್ಯತೆ ಮತ್ತಷ್ಟು ಹೆಚ್ಚುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

AI ಮತ್ತು Digital ತಂತ್ರಜ್ಞಾನ ಬಳಕೆ : ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ತಂತ್ರಜ್ಞಾನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಯುವ ವೈದ್ಯರು ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ವಿಜ್ಞಾನದ ನಡುವೆ ಬಲಿಷ್ಠ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ:  33 ವರ್ಷಗಳ ಬಳಿಕ ಸ್ಲೋವಾಕಿಯಾಕ್ಕೆ ಭಾರತೀಯ ಪ್ರಧಾನಿಯ ಭೇಟಿ

“ನೀವು ಕೇವಲ ವೈದ್ಯರಾಗಿ ಉಳಿಯದೇ, ಸಂಶೋಧಕರು, ನವೋದ್ಯಮಿಗಳು ಹಾಗೂ ಸಮಾಜದ ಮಾರ್ಗದರ್ಶಕರಾಗಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳಿಗೆ ಆದ್ಯತೆ ನೀಡಬೇಕು” ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಆಯುಷ್ ಸಚಿವಾಲಯದ ಕಾರ್ಯಗಳಿಗೆ ಮೆಚ್ಚುಗೆ : ಭಾರತ ಸರ್ಕಾರದ ಆಯುಷ್ ಸಚಿವಾಲಯವು ಆಯುರ್ವೇದ, ಯೋಗ, ನೈಸರ್ಗಿಕ ಚಿಕಿತ್ಸೆ, ಯುನಾನಿ ಮತ್ತು ಹೋಮಿಯೋಪಥಿ ಸೇರಿದಂತೆ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಇದರ ಪರಿಣಾಮವಾಗಿ ಭಾರತೀಯ ಜ್ಞಾನ ಪರಂಪರೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆಯುತ್ತಿದೆ ಎಂದು ರಾಜ್ಯಪಾಲರು ಹೇಳಿದರು.

ಇದನ್ನೂ ಓದಿ:  ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ದಾಳಿ: 8 JCBಗಳು ವಶಕ್ಕೆ

ಯೋಗ ಆತ್ಮಶಿಸ್ತು ಮತ್ತು ಮಾನಸಿಕ ಶಾಂತಿಯ ಮಾರ್ಗ : ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ; ಅದು ಆತ್ಮಶಿಸ್ತು, ಮಾನಸಿಕ ಸಮತೋಲನ ಮತ್ತು ಶಾಂತಿಯ ಮಾರ್ಗವಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ವಿ. ಹಲಸೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ. ಶ್ರೀನಿವಾಸ್ ಬನ್ನಿಗೋಳ, ತಪೋವನ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ವಿ.ಎಂ. ಶಶಿಕುಮಾರ್, ಡಾ. ಕೆ.ಆರ್. ಅಶ್ವಿನಿ ಹಾಗೂ ಡಾ. ಸುಮನಾ ಭಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

El Nino ಎಚ್ಚರಿಕೆ: ಈ ಬಾರಿಯ ಮುಂಗಾರು ಕೃಷಿಗೆ ಸವಾಲಾಗಲಿದೆಯೇ?

The post ಯೋಗ, ನೈಸರ್ಗಿಕ ಚಿಕಿತ್ಸೆಗೆ ಜಾಗತಿಕ ಮನ್ನಣೆ: ರಾಜ್ಯಪಾಲರ ಪ್ರಶಂಸೆ appeared first on Samyukta Karnataka.

ಸ್ವಾಮೀಜಿ ಜಾಮೀನು ರದ್ದು ಕೋರಿ ಮನವಿ: ಜೂ.18ರಂದು ಮಹತ್ವದ ತೀರ್ಪು
ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ವಿಚಾರಣೆ ಪೂರ್ಣ; ಜೂನ್ 18ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಶ್ರೀ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಪಡೆದಿರುವ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸುವಂತೆ ಪೊಲೀಸ್ ಇಲಾಖೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 18ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.

ಪ್ರಕರಣವು ರಾಜ್ಯದ ಧಾರ್ಮಿಕ ಹಾಗೂ ಸಾಮಾಜಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಇದೀಗ ನ್ಯಾಯಾಲಯದ ಮುಂದಿನ ಆದೇಶದತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ಇದನ್ನೂ ಓದಿ:  ಕರ್ನಾಟಕ ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ಗೆ 3, ಬಿಜೆಪಿಗೆ 1 ಸ್ಥಾನ

ಪ್ರಕರಣದ ಹಿನ್ನೆಲೆ : ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನಲ್ಲಿ ಹರಿಹರ ಪೀಠದ ವಿದ್ಯಾರ್ಥಿ ನಿಲಯದಲ್ಲಿದ್ದ ಬಾಲಕರನ್ನು ಮಸಾಜ್ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಗಂಭೀರ ಆರೋಪಗಳನ್ನು ಮಾಡಲಾಗಿತ್ತು.

ಆರಂಭದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಳಿಕ ಹೆಚ್ಚಿನ ತನಿಖೆಗಾಗಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ಮುಂದುವರಿದ ಸಂದರ್ಭದಲ್ಲಿ ಪ್ರಕರಣವು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದಾಖಲಾಗಿದ್ದು, ಪೊಲೀಸರು ಸಾಕ್ಷ್ಯ ಸಂಗ್ರಹ ಕಾರ್ಯ ನಡೆಸಿದ್ದರು.

ಇದನ್ನೂ ಓದಿ:  RTE ವಿಸ್ತರಣೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ನಿರೀಕ್ಷಣಾ ಜಾಮೀನು ಪಡೆದಿದ್ದ ಸ್ವಾಮೀಜಿ: ಪ್ರಕರಣದ ತನಿಖೆ ನಡೆಯುತ್ತಿರುವ ಅವಧಿಯಲ್ಲೇ ಶ್ರೀ ವಚನಾನಂದ ಸ್ವಾಮೀಜಿ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ತನಿಖೆಯ ಹಿತದೃಷ್ಟಿಯಿಂದ ಹಾಗೂ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನನ್ನು ರದ್ದುಪಡಿಸಬೇಕೆಂದು ಪೊಲೀಸರು ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ಗುರುವಾರ ನಡೆದಿದ್ದು, ಪೊಲೀಸರು ಹಾಗೂ ಸ್ವಾಮೀಜಿ ಪರ ವಕೀಲರು ತಮ್ಮ ತಮ್ಮ ವಾದಗಳನ್ನು ಮಂಡಿಸಿದರು.

ಇದನ್ನೂ ಓದಿ:  ವಿದ್ಯಾರ್ಥಿನಿ ದೂರಿಗೆ ಸ್ಪಂದಿಸಿದ ರೈಲ್ವೆ ಸಚಿವರು: ಜುಲೈ 15ರೊಳಗೆ ಹೊಸ IRCTC ವೆಬ್‌ಸೈಟ್

ಎರಡೂ ಪಕ್ಷಗಳ ವಾದ ಆಲಿಸಿದ ನ್ಯಾಯಾಲಯ : ವಿಶೇಷ ಪೋಕ್ಸೋ ನ್ಯಾಯಾಲಯವು ಎರಡೂ ಪಕ್ಷಗಳ ವಾದ-ಪ್ರತಿವಾದಗಳನ್ನು ಸುದೀರ್ಘವಾಗಿ ಆಲಿಸಿದ ಬಳಿಕ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ತನಿಖೆಯ ಪ್ರಗತಿ ಹಾಗೂ ಕಾನೂನು ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಜೂನ್ 18ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿ ತೀರ್ಪು ಕಾಯ್ದಿರಿಸಿದೆ.

ಈ ತೀರ್ಪು ಪ್ರಕರಣದ ಮುಂದಿನ ತನಿಖಾ ಪ್ರಕ್ರಿಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕಾನೂನು ವಲಯದವರು ಅಭಿಪ್ರಾಯಪಡುತ್ತಿದ್ದಾರೆ.

ಇದನ್ನೂ ಓದಿ:  ‘ಗೃಹಿಣಿ’ ಪದಕ್ಕೆ ಹೊಸ ಅರ್ಥ ನೀಡಿದ ಸುಪ್ರೀಂ ಕೋರ್ಟ್

ಚಾರ್ಜ್‌ಶೀಟ್ ಕುರಿತು ಪ್ರಶ್ನೆ ಎತ್ತಿದ ವಕೀಲರು : ವಿಚಾರಣೆಯ ಬಳಿಕ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ ಪರ ವಕೀಲ ಎಸ್.ವಿ. ಪಾಟೀಲ್, ತನಿಖಾ ಪ್ರಕ್ರಿಯೆ ಕುರಿತು ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. “ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಅತ್ಯಂತ ವೇಗವಾಗಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 100ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್ ಅನ್ನು ಅಲ್ಪಾವಧಿಯಲ್ಲಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವುದನ್ನು ಗಮನಿಸಿದರೆ ತನಿಖಾ ಸಂಸ್ಥೆಯ ಮೇಲೆ ಒತ್ತಡವಿದ್ದಿರಬಹುದೇ ಎಂಬ ಅನುಮಾನ ಮೂಡುತ್ತದೆ” ಎಂದು ಅವರು ಹೇಳಿದ್ದಾರೆ.

ಆದರೆ ಈ ವಾದಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಅಂತಿಮವಾಗಿ ಜಾಮೀನು ರದ್ದುಪಡಿಸುವ ಕುರಿತು ನ್ಯಾಯಾಲಯ ನೀಡುವ ಆದೇಶವೇ ಮುಂದಿನ ಕಾನೂನು ಬೆಳವಣಿಗೆಗಳಿಗೆ ದಿಕ್ಕು ತೋರಿಸಲಿದೆ.

ಇದನ್ನೂ ಓದಿ:  ವಿವಿಯಲ್ಲಿ ಮತ್ತೊಂದು ಹಗರಣದ ಆರೋಪ; ‘ಹಣ ಕೊಟ್ಟರೆ ಪಾಸ್’ ದಂಧೆ ಬಯಲು ಎಂದ ABVP

ಜೂನ್ 18ರ ತೀರ್ಪಿನತ್ತ ಕುತೂಹಲ : ಪ್ರಕರಣದ ಸೂಕ್ಷ್ಮ ಸ್ವರೂಪ ಹಾಗೂ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದಾಖಲಾಗಿರುವ ಆರೋಪಗಳ ಹಿನ್ನೆಲೆ, ಜೂನ್ 18ರಂದು ಹೊರಬೀಳುವ ಆದೇಶಕ್ಕೆ ವಿಶೇಷ ಮಹತ್ವ ದೊರೆತಿದೆ. ನ್ಯಾಯಾಲಯ ನಿರೀಕ್ಷಣಾ ಜಾಮೀನನ್ನು ಮುಂದುವರಿಸುತ್ತದೆಯೇ ಅಥವಾ ರದ್ದುಪಡಿಸುತ್ತದೆಯೇ ಎಂಬುದರ ಬಗ್ಗೆ ಕಾನೂನು ಮತ್ತು ಸಾಮಾಜಿಕ ವಲಯಗಳಲ್ಲಿ ಕುತೂಹಲ ಮೂಡಿದೆ.

PM ಮೋದಿ ಭೇಟಿ ಮಾಡಿದ CM ಡಿ.ಕೆ. ಶಿವಕುಮಾರ್: ಅಭಿವೃದ್ಧಿ ಅಜೆಂಡಾ ಕುರಿತು ಮಾತುಕತೆ

The post ಸ್ವಾಮೀಜಿ ಜಾಮೀನು ರದ್ದು ಕೋರಿ ಮನವಿ: ಜೂ.18ರಂದು ಮಹತ್ವದ ತೀರ್ಪು appeared first on Samyukta Karnataka.

CCTV ಇಲ್ಲದಿದ್ದರೂ ಕಳ್ಳರ ಜಾಡು ಹಿಡಿದ ಪೊಲೀಸರು: ₹58 ಲಕ್ಷ ಮೌಲ್ಯದ ಮಾಲು ವಶ
ಹರಿಹರದಲ್ಲಿ ಭಾರೀ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ, ₹58.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು ₹58.50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ಬೈಕ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಡಾ. ಎಚ್.ಟಿ. ಶೇಖರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಅಂಕಣ ಬರಹ – ಹಿರಿಯರ ಕ್ಯಾತೆ ಸಾಕು, ಹೊಸಬರಿಗೆ ದಾರಿಬಿಡಿ

ದೇವಸ್ಥಾನಕ್ಕೆ ತೆರಳಿದ್ದ ಕುಟುಂಬ – ಅವಕಾಶ ಬಳಸಿಕೊಂಡ ಕಳ್ಳರು: ಮೇ 18 ಮತ್ತು 19ರ ಮಧ್ಯರಾತ್ರಿಯಲ್ಲಿ ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಮರಾವತಿ ಕಾಲೋನಿಯ ನಿವಾಸಿ ಪರೀಕ್ಷಿತ್ ನಾಯ್ಡು ಅವರು ಕುಟುಂಬದೊಂದಿಗೆ ದೇವಸ್ಥಾನಕ್ಕೆ ತೆರಳಿದ್ದರು. ಈ ಮಾಹಿತಿ ಅರಿತಿದ್ದ ಕಳ್ಳರು, ಮನೆಗೆ ಬೀಗ ಹಾಕಿರುವುದನ್ನು ಗಮನಿಸಿ ಸಂಚು ರೂಪಿಸಿದ್ದರು.

ಕುಟುಂಬದವರು ಮನೆಯಲ್ಲಿ ಇಲ್ಲದ ವೇಳೆ ಮನೆ ಬೀಗ ಮುರಿದು ಒಳನುಗ್ಗಿದ ಆರೋಪಿಗಳು, ಮನೆಯಲ್ಲಿದ್ದ ಸುಮಾರು 481 ಗ್ರಾಂ ಚಿನ್ನಾಭರಣ ಹಾಗೂ ₹10 ಸಾವಿರ ನಗದು ದೋಚಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: ರಾಜ್ಯಸಭಾ ನಾಮಪತ್ರ ತಿರಸ್ಕಾರ: ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್

ಸಿಸಿಟಿವಿ ಇಲ್ಲದಿದ್ದರೂ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ : ಪ್ರಕರಣದ ತನಿಖೆ ಪೊಲೀಸರಿಗೆ ಸವಾಲಿನದ್ದಾಗಿತ್ತು. ಏಕೆಂದರೆ ಕಳ್ಳತನ ನಡೆದ ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿರಲಿಲ್ಲ. ಅಲ್ಲದೆ ಘಟನೆಯನ್ನು ನೇರವಾಗಿ ಕಂಡ ಸಾಕ್ಷಿದಾರರೂ ಇರಲಿಲ್ಲ. ಆದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ದಾವಣಗೆರೆ ಗ್ರಾಮಾಂತರ ಡಿಎಸ್ಪಿ ಬಿ.ಎಸ್. ಬಸವರಾಜ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದರು.

ತಂಡದಲ್ಲಿ ಹರಿಹರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಹಾರೂನ್ ಅಖ್ತರ್, ಶ್ರೀಪತಿ ಗಿನ್ನಿ, ಹರಿಹರ ನಗರ ಠಾಣೆಯ ಸಿಪಿಐ ಸುರೇಶ್ ಸಗರಿ, ಇನ್ಸ್ಪೆಕ್ಟರ್ ಆರ್.ಎಫ್. ದೇಸಾಯಿ, ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ, ಮಲೇಬೆನ್ನೂರು ಠಾಣೆಯ ಅಧಿಕಾರಿಗಳು, ಶ್ವಾನದಳ ಹಾಗೂ ಸೈಬರ್ ಕ್ರೈಂ ಸಿಬ್ಬಂದಿ ಭಾಗವಹಿಸಿದ್ದರು.

ಇದನ್ನೂ ಓದಿ: ಕೇಂದ್ರದಿಂದ ಸಿಹಿಸುದ್ದಿ-ಎಥೆನಾಲ್ ಮಿಶ್ರಿತ ಇಂಧನಕ್ಕೆ ತೆರಿಗೆ ವಿನಾಯಿತಿ

ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿಬಿದ್ದ ಆರೋಪಿಗಳು : ಪ್ರಕರಣದ ಸುಳಿವು ಪತ್ತೆಹಚ್ಚಲು ಪೊಲೀಸರು ವಿವಿಧೆಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಇದೇ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ವ್ಯಕ್ತಿಗಳು ಪೊಲೀಸರನ್ನು ಕಂಡು ಗಾಬರಿಗೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ಅವರನ್ನು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ನಂತರ ನಡೆಸಿದ ವಿಚಾರಣೆಯಲ್ಲಿ ಆರೋಪಿಗಳು ಹರಿಹರದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಯಾರು? : ಬಂಧಿತ ಆರೋಪಿಗಳನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಗಳಾದ ಶ್ರೀಕಾಂತ್ (30), ರಮೇಶ್ (27) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ತಿಪಟೂರು ಶಾಸಕ K ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು

ಪೊಲೀಸರ ಮಾಹಿತಿ ಪ್ರಕಾರ, ಶ್ರೀಕಾಂತ್ ವಿರುದ್ಧ ಈಗಾಗಲೇ ಆರು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಗದಗ, ದಾವಣಗೆರೆ, ಹಾವೇರಿ, ಮುನಿರಾಬಾದ್ ಹಾಗೂ ಹೊಸಪೇಟೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಅವನ ವಿರುದ್ಧ ಪ್ರಕರಣಗಳಿವೆ. ರಮೇಶ್ ವಿರುದ್ಧವೂ ಎರಡು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

₹58.50 ಲಕ್ಷ ಮೌಲ್ಯದ ಮಾಲು ವಶ : ಬಂಧಿತರಿಂದ ಪೊಲೀಸರು ಕೆಳಕಂಡ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 409.5 ಗ್ರಾಂ ಚಿನ್ನಾಭರಣ, ₹10,000 ನಗದು, ಹೀರೋ ಹೊಂಡಾ ಬೈಕ್, 2 ಮೊಬೈಲ್ ಫೋನ್‌ಗಳು ಒಟ್ಟು ₹58,50,800 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಒಮಾನ್ ದುರಂತ: 21 ಭಾರತೀಯರ ರಕ್ಷಣೆ, 3 ನಾವಿಕರು ಮೃತ

ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಇನ್ನಷ್ಟು ತನಿಖೆ ಮುಂದುವರಿದಿದ್ದು, ಆರೋಪಿಗಳು ಇತರ ಕಳ್ಳತನ ಪ್ರಕರಣಗಳಲ್ಲೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಕಳವಾಗಿದ್ದ ಬಹುತೇಕ ಚಿನ್ನಾಭರಣವನ್ನು ಮರುಪಡೆಯಲು ಸಾಧ್ಯವಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ನದಿಯ ಒಡಲಲ್ಲಿ ಬಯಲಾದ ಕಲ್ಲುಗಳು; ಜಲಸಂಕಷ್ಟದ ಮುನ್ಸೂಚನೆಯೇ?

The post CCTV ಇಲ್ಲದಿದ್ದರೂ ಕಳ್ಳರ ಜಾಡು ಹಿಡಿದ ಪೊಲೀಸರು: ₹58 ಲಕ್ಷ ಮೌಲ್ಯದ ಮಾಲು ವಶ appeared first on Samyukta Karnataka.

ನಕಲಿ ಹಾಲ್‌ಮಾರ್ಕ್ ಚಿನ್ನಾಭರಣ ಮಾರಾಟ: 100ಕ್ಕೂ ಹೆಚ್ಚು ಆಭರಣ ವಶಕ್ಕೆ
ನಕಲಿ ಹಾಲ್‌ಮಾರ್ಕ್ ವಿರುದ್ಧ ಬಿಐಎಸ್ ಕಠಿಣ ಕ್ರಮ – ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ದಾಳಿ : ಚಿನ್ನಾಭರಣ ಖರೀದಿದಾರರಿಗೆ ಎಚ್ಚರಿಕೆ

ದಾವಣಗೆರೆ: ನಕಲಿ ಬಿಐಎಸ್ (ಭಾರತೀಯ ಮಾನದಂಡಗಳ ಬ್ಯೂರೋ) ಹಾಲ್‌ಮಾರ್ಕ್ ಹೊಂದಿರುವ ಚಿನ್ನದ ಆಭರಣಗಳ ಮಾರಾಟ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಐಎಸ್ ಹುಬ್ಬಳ್ಳಿ ಶಾಖಾ ಕಚೇರಿಯ ಅಧಿಕಾರಿಗಳು ದಾವಣಗೆರೆಯಲ್ಲಿ ಶೋಧ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆ ನಡೆಸಿ 100ಕ್ಕೂ ಹೆಚ್ಚು ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

ನಗರದ ವಿಜಯಲಕ್ಷ್ಮಿ ರಸ್ತೆಯಲ್ಲಿರುವ ಪಾಂಡುರಂಗ ಬೊಮ್ಮಯ್ಯ ವರ್ನೇಕರ್ ಜ್ಯುವೆಲ್ಲರ್ಸ್ ಸಂಸ್ಥೆಯಲ್ಲಿ ಜೂನ್ 9ರಂದು ಈ ಕಾರ್ಯಾಚರಣೆ ನಡೆದಿದ್ದು, ಚಿನ್ನಾಭರಣ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ವಿಶ್ವಾಸಾರ್ಹ ಮಾಹಿತಿಯ ಆಧಾರದಲ್ಲಿ ದಾಳಿ : ನಕಲಿ ಬಿಐಎಸ್ ಹಾಲ್‌ಮಾರ್ಕ್ ಅಳವಡಿಸಲಾದ ಚಿನ್ನದ ಆಭರಣಗಳನ್ನು ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ವಿಶ್ವಾಸಾರ್ಹ ಮಾಹಿತಿ ಬಿಐಎಸ್ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಐಎಸ್ ಹುಬ್ಬಳ್ಳಿ ಶಾಖಾ ಕಚೇರಿಯ ವಿಜ್ಞಾನಿ-ಇ ಹಾಗೂ ನಿರ್ದೇಶಕ ಪಿ.ಎನ್. ಮುರಳಿ ಅವರ ಮಾರ್ಗದರ್ಶನದಲ್ಲಿ ವಿಶೇಷ ಜಾರಿ ತಂಡವನ್ನು ರಚಿಸಿ ದಾಳಿ ನಡೆಸಲಾಯಿತು.

ಅಧಿಕಾರಿಗಳು ಅಂಗಡಿಯಲ್ಲಿ ಲಭ್ಯವಿದ್ದ ಚಿನ್ನಾಭರಣಗಳನ್ನು ಪರಿಶೀಲಿಸಿದಾಗ ಹಲವಾರು ಆಭರಣಗಳ ಮೇಲೆ ಅನುಮಾನಾಸ್ಪದ ಹಾಲ್‌ಮಾರ್ಕ್ ಗುರುತುಗಳು ಕಂಡುಬಂದವು. ಬಳಿಕ ನಡೆದ ತಾಂತ್ರಿಕ ಪರಿಶೀಲನೆಯಲ್ಲಿ ಅವು ನಕಲಿ ಎಂಬುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಲಂಚ ಬೇಡಿಕೆ: ಇಬ್ಬರು ಸರ್ಕಾರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

100ಕ್ಕೂ ಹೆಚ್ಚು ಆಭರಣಗಳ ವಶ : ದಾಳಿಯ ವೇಳೆ 22 ಕ್ಯಾರಟ್ ಮತ್ತು 20 ಕ್ಯಾರಟ್ ಚಿನ್ನದ ಆಭರಣಗಳ ಮೇಲೆ ನಕಲಿ ಬಿಐಎಸ್ ಹಾಲ್‌ಮಾರ್ಕ್ ಅಳವಡಿಸಲಾಗಿರುವುದು ಪತ್ತೆಯಾಗಿದೆ. ಅಧಿಕಾರಿಗಳು 100ಕ್ಕೂ ಹೆಚ್ಚು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಕಲ್ಲುಗಳು ಮತ್ತು ಟ್ಯಾಗ್‌ಗಳನ್ನು ಒಳಗೊಂಡು ಅವುಗಳ ಒಟ್ಟು ತೂಕ 690.7 ಗ್ರಾಂ ಆಗಿದೆ ಎಂದು ತಿಳಿಸಲಾಗಿದೆ. ಈ ಆಭರಣಗಳು ಬಿಐಎಸ್ ಮಾನದಂಡಗಳಿಗೆ ವಿರುದ್ಧವಾಗಿ ಹಾಲ್‌ಮಾರ್ಕ್ ಮಾಡಲ್ಪಟ್ಟಿದ್ದರಿಂದ ಅವುಗಳನ್ನು ತನಿಖೆಯ ಭಾಗವಾಗಿ ಜಪ್ತಿ ಮಾಡಲಾಗಿದೆ.

ನಕಲಿ HUID ಸಂಖ್ಯೆ ಪತ್ತೆ : ಪರಿಶೀಲನೆಯ ವೇಳೆ ಆಭರಣಗಳ ಮೇಲೆ ಕಡ್ಡಾಯವಾಗಿ ಇರಬೇಕಾದ ಹಾಲ್‌ಮಾರ್ಕ್ ಯುನಿಕ್ ಐಡೆಂಟಿಫಿಕೇಶನ್ (HUID) ಸಂಖ್ಯೆಯೂ ನಕಲಿಯಾಗಿರುವುದು ಪತ್ತೆಯಾಗಿದೆ. ಬಿಐಎಸ್ ನಿಯಮಾವಳಿಗಳ ಪ್ರಕಾರ, ಪ್ರತಿ ಹಾಲ್‌ಮಾರ್ಕ್ ಚಿನ್ನಾಭರಣಕ್ಕೂ ವಿಶಿಷ್ಟ ಎಚ್‌ಯುಐಡಿ ಸಂಖ್ಯೆ ಇರಬೇಕು. ಈ ಸಂಖ್ಯೆಯ ಮೂಲಕ ಆಭರಣದ ಮೂಲ, ಶುದ್ಧತೆ ಮತ್ತು ಪ್ರಮಾಣೀಕರಣದ ವಿವರಗಳನ್ನು ಪತ್ತೆಹಚ್ಚಬಹುದು. ಆದರೆ ದಾಳಿಯಲ್ಲಿ ಪತ್ತೆಯಾದ ಆಭರಣಗಳ ಮೇಲಿನ ಎಚ್‌ಯುಐಡಿ ಸಂಖ್ಯೆಗಳು ಅಸಲಿ ದಾಖಲೆಗಳಿಗೆ ಹೊಂದಿಕೆಯಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ರಮಗಳಿಗೆ ಸಾಥ್ ಆರೋಪ: CPI ವಿರುದ್ಧ ಅಮಾನತು ಆದೇಶ

ಕಾನೂನು ಉಲ್ಲಂಘನೆ : ಅಧಿಕಾರಿಗಳ ಪ್ರಕಾರ, ಈ ಪ್ರಕರಣವು ಬಿಐಎಸ್ ಕಾಯ್ದೆ-2016 ಹಾಗೂ ಬಿಐಎಸ್ (ಹಾಲ್‌ಮಾರ್ಕಿಂಗ್) ನಿಯಮಾವಳಿ-2018ರ ಸ್ಪಷ್ಟ ಉಲ್ಲಂಘನೆಯಾಗಿದೆ. ನಕಲಿ ಹಾಲ್‌ಮಾರ್ಕ್ ಅಥವಾ ನಕಲಿ ಎಚ್‌ಯುಐಡಿ ಬಳಕೆ ಗ್ರಾಹಕರನ್ನು ದಾರಿ ತಪ್ಪಿಸುವುದರ ಜೊತೆಗೆ ಚಿನ್ನಾಭರಣದ ಗುಣಮಟ್ಟ ಮತ್ತು ಶುದ್ಧತೆಯ ಬಗ್ಗೆ ತಪ್ಪು ಮಾಹಿತಿ ನೀಡುವ ಗಂಭೀರ ಕೃತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಗ್ರಾಹಕರಿಗೆ BIS ಮನವಿ: ಘಟನೆಯ ನಂತರ ಬಿಐಎಸ್ ಅಧಿಕಾರಿಗಳು ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದಾರೆ. ಚಿನ್ನಾಭರಣ ಖರೀದಿಸುವ ಮೊದಲು ‘ಬಿಐಎಸ್ ಕೇರ್’ (BIS CARE) ಮೊಬೈಲ್ ಆ್ಯಪ್ ಮೂಲಕ ಹಾಲ್‌ಮಾರ್ಕ್ ಹಾಗೂ ಎಚ್‌ಯುಐಡಿ ಸಂಖ್ಯೆಯ ಪ್ರಾಮಾಣಿಕತೆಯನ್ನು ಪರಿಶೀಲಿಸುವಂತೆ ಸಲಹೆ ನೀಡಿದ್ದಾರೆ. ಯಾವುದೇ ಅನುಮಾನಾಸ್ಪದ ಹಾಲ್‌ಮಾರ್ಕ್, ನಕಲಿ ಪ್ರಮಾಣೀಕರಣ ಅಥವಾ ನಿಯಮ ಉಲ್ಲಂಘನೆ ಕಂಡುಬಂದರೆ ತಕ್ಷಣ ಬಿಐಎಸ್‌ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್: ಅಕ್ರಮ ಚಟುವಟಿಕೆಗಳಿಗೆ ಖಡಕ್ ಎಚ್ಚರಿಕೆ

ಮೋಸದ ವ್ಯಾಪಾರಕ್ಕೆ ಕಡಿವಾಣ : ಬಿಐಎಸ್ ಅಧಿಕಾರಿಗಳ ಪ್ರಕಾರ, ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು, ಮಾರುಕಟ್ಟೆಯಲ್ಲಿ ನಕಲಿ ಹಾಗೂ ಕಳಪೆ ಗುಣಮಟ್ಟದ ಉತ್ಪನ್ನಗಳ ಹರಡುವಿಕೆಯನ್ನು ತಡೆಯುವುದು ಮತ್ತು ಮೋಸದ ವ್ಯಾಪಾರ ಪದ್ಧತಿಗಳಿಗೆ ಕಡಿವಾಣ ಹಾಕುವುದು ಇಂತಹ ಕಾರ್ಯಾಚರಣೆಗಳ ಮುಖ್ಯ ಉದ್ದೇಶವಾಗಿದೆ.

ದೇಶಾದ್ಯಂತ ಹಾಲ್‌ಮಾರ್ಕ್ ದುರುಪಯೋಗ ಮತ್ತು ನಕಲಿ ಪ್ರಮಾಣೀಕರಣದ ವಿರುದ್ಧ ಬಿಐಎಸ್ ನಿರಂತರ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ದಾವಣಗೆರೆಯ ಈ ಪ್ರಕರಣವೂ ಅಂತಹ ಕ್ರಮಗಳ ಭಾಗವಾಗಿದೆ. ಈ ಬೆಳವಣಿಗೆ ಚಿನ್ನಾಭರಣ ಖರೀದಿಸುವ ಗ್ರಾಹಕರು ಹಾಲ್‌ಮಾರ್ಕ್ ಪರಿಶೀಲನೆಯ ಬಗ್ಗೆ ಇನ್ನಷ್ಟು ಎಚ್ಚರಿಕೆ ವಹಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.

ಟೆಸ್ಟ್‌ನಲ್ಲಿ ಮಿಂಚಿದ ಮಾನವ್ ಸುತಾರ್‌ಗೆ ಕೌಂಟಿ ಕ್ರಿಕೆಟ್‌ನಲ್ಲಿ ಅವಕಾಶ

The post ನಕಲಿ ಹಾಲ್‌ಮಾರ್ಕ್ ಚಿನ್ನಾಭರಣ ಮಾರಾಟ: 100ಕ್ಕೂ ಹೆಚ್ಚು ಆಭರಣ ವಶಕ್ಕೆ appeared first on Samyukta Karnataka.

ಸಾಮೂಹಿಕ ಅತ್ಯಾಚಾರ ಪ್ರಕರಣ: 10 ಆರೋಪಿಗಳ ವಿರುದ್ಧ ಕ್ರಮ
ಚನ್ನಗಿರಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: 9 ಮಂದಿ ಜೈಲು ಪಾಲು, ಅಪ್ರಾಪ್ತ ಬಾಲಕ ಬಾಲಮಂದಿರಕ್ಕೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 10 ಆರೋಪಿಗಳನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರವೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು, ರಾತ್ರಿ ವೇಳೆ ಎಲ್ಲರಿಗೂ ವೈದ್ಯಕೀಯ ಪರೀಕ್ಷೆ ನಡೆಸಿದ್ದರು. ಬಳಿಕ ಬುಧವಾರ ಬೆಳಗ್ಗೆ ಆರೋಪಿಗಳನ್ನು ದಾವಣಗೆರೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ದಾಖಲೆಗಳು ಹಾಗೂ ತನಿಖೆಯ ಪ್ರಗತಿಯನ್ನು ಪರಿಶೀಲಿಸಿದ ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

ಬಂಧಿತ ಆರೋಪಿಗಳಲ್ಲಿ ಒಂಬತ್ತು ಮಂದಿಯನ್ನು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿಗೆ ಕೇವಲ 16 ವರ್ಷ ವಯಸ್ಸಾಗಿರುವುದರಿಂದ, ಆತನನ್ನು ಕಾನೂನು ಪ್ರಕಾರ ಬಾಲ ಅಪರಾಧಿ ಎಂದು ಪರಿಗಣಿಸಿ ಬಾಲಕರ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರತರುವ ನಿಟ್ಟಿನಲ್ಲಿ ಪೊಲೀಸರು ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸುವ ಕೆಲಸವನ್ನು ಮುಂದುವರಿಸಿದ್ದು, ತನಿಖೆ ಮಹತ್ವದ ಹಂತ ತಲುಪಿದೆ. ತನಿಖೆಯ ಅಂತಿಮ ವರದಿ ಹಾಗೂ ಹೆಚ್ಚಿನ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮಗಳು ಕೈಗೊಳ್ಳಲಾಗಲಿವೆ.

ಮದ್ಯಪಾನ ಬಿಡುವಂತೆ ಬುದ್ಧಿ ಹೇಳಿದ್ದಕ್ಕೆ ಬೇಸರಗೊಂಡು ರೈಲಿಗೆ ಡಿಕ್ಕಿ ಹೊಡೆದು ಆತ್ಮಹತ್ಯೆ

ದಾವಣಗೆರೆ: ಮದ್ಯಪಾನದ ಚಟದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ದಾವಣಗೆರೆ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿಟುವಳ್ಳಿ ನಿವಾಸಿ ಮಂಜುನಾಥ್ (೪೮) ಎಂದು ಗುರುತಿಸಲಾಗಿದೆ. ಮಂಜುನಾಥ್ ಅವರು ವಿಪರೀತ ಮದ್ಯಪಾನ ಮಾಡುತ್ತಿದ್ದು, ಮದ್ಯಪಾನ ಬಿಡುವಂತೆ ಕುಟುಂಬದವರು ಪದೇ ಪದೇ ಸಲಹೆ ಹಾಗೂ ಬುದ್ಧಿವಾದ ಹೇಳುತ್ತಿದ್ದರು ಎನ್ನಲಾಗಿದೆ.

ಇದರಿಂದ ಮನನೊಂದು ಮಂಜುನಾಥ್ ಅವರು ನಗರದ ಫೈರ್ ಆಫೀಸ್ ಹಿಂಭಾಗದ ರೈಲ್ವೆ ಹಳಿಯ ಬಳಿ ತೆರಳಿ, ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ದಾವಣಗೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

The post ಸಾಮೂಹಿಕ ಅತ್ಯಾಚಾರ ಪ್ರಕರಣ: 10 ಆರೋಪಿಗಳ ವಿರುದ್ಧ ಕ್ರಮ appeared first on Samyukta Karnataka.