Dharwad Archives - Samyukta Karnataka

ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಶುಭ ಕೋರಿದ ಸಂತೋಷ್‌ ಲಾಡ್‌
ಬೆಂಗಳೂರು: ಕಲಘಟಗಿ- ಅಳ್ನಾವರ ಮತಕ್ಷೇತ್ರದ ಶಾಸಕರಾದ ಸಂತೋಷ್‌  ಲಾಡ್‌ ಅವರು, ನಿಯೋಜಿತ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಶುಭ ಕೋರಿದರು.

ಶನಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್‌ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದರು.

ನೂತನ ಮುಖ್ಯಮಂತ್ರಿಗಳಾಗಿ ಡಿ ಕೆ ಶಿವಕುಮಾರ್‌ ಅವರು ಜೂನ್‌ 3 ರಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

The post ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಶುಭ ಕೋರಿದ ಸಂತೋಷ್‌ ಲಾಡ್‌ appeared first on Samyukta Karnataka.

ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಧಾರವಾಡ: ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ.

ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) ಮೃತಪಟ್ಟ ದುರ್ದೈವಿಗಳು ಎಂದು ಗೊತ್ತಾಗಿದೆ.

ಮೆಹಬೂಬ್ ವಟ್ನಾಳ ಹಾಗೂ ಅನ್ವರ್ ವಟ್ನಾಳ ಸೋದರರು. ಇವರಿಬ್ಬರೂ ಸಿಂಗನಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸುಭಾನಿ ಭಾಗಜಿಕೊಪ್ಪ ಬೈಲಹೊಂಗಲ ತಾಲೂಕಿನವನು. ಬೇಸಿಗೆ ರಜೆಗಾಗಿ ಸಂಬಂಧಿಕರ ಮನೆಗೆ ಬಂದಿದ್ದನು. ಬೇಸಿಗೆಯ ತಾಪ ಹೆಚ್ಚಾಗಿದ್ದರಿಂದ ಮೂವರೂ ಬಾಲಕರು ಮಧ್ಯಾಹ್ನದ ವೇಳೆ ಈಜಾಡಲು ಕರೆಮ್ಮನಕೆರೆಗೆ ತೆರಳಿದ್ದರು. ನೀರಿನ ಆಳ ತಿಳಿಯದೇ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಮೂವರೂ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಬಾಲಕರು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಪೋಷಕರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಗರಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರ ನೆರವಿನಿಂದ ಶವಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

The post ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು appeared first on Samyukta Karnataka.

ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಕೊಲೆ ರಹಸ್ಯ ಬಯಲು: ಹಣಕ್ಕಾಗಿ ಕೊಂದ ಹಂತಕರು ಪೊಲೀಸ್ ಬಲೆಗೆ!
ಧಾರವಾಡ: ಇತ್ತೀಚೆಗೆ ಧಾರವಾಡ ಬೈಪಾಸ್ ಬಳಿ ಟಿಬೆಟಿಯನ್ ಮೂಲದ ಬೌದ್ಧ ಸನ್ಯಾಸಿ ತಾಶಿ ಧೊಂದೂಪ ಎಂಬುವವರ ಶವ ನಿಗೂಢ ರೀತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಇದು ರಸ್ತೆ ಅಪಘಾತ ಎನ್ನಲಾಗಿತ್ತಾದರೂ, ಪೊಲೀಸರು ಸತತ ತನಿಖೆ ನಡೆಸಿ ಇದು ಹಣಕ್ಕಾಗಿ ನಡೆದ ಬರ್ಬರ ಹತ್ಯೆ ಎಂಬುವುದನ್ನು ಬಯಲಿಗೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ: ಬೌದ್ಧ ಸನ್ಯಾಸಿಗಳ ಬಳಿ ಅಪಾರ ಹಣವಿರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹಂತಕರು ಸಂಚು ರೂಪಿಸಿದ್ದರು. ಏಪ್ರಿಲ್ 28 ರಂದು ಮುಂಡಗೋಡದಲ್ಲಿ ಸನ್ಯಾಸಿ ತಾಶಿ ಧೊಂದೂಪ ಅವರು ವಾಕಿಂಗ್ ಮಾಡುತ್ತಿದ್ದ ವೇಳೆ ಆರೋಪಿಗಳು ಅವರನ್ನು ಕಾರಿನಲ್ಲಿ ಅಪಹರಿಸಿದ್ದರು. ಕಾರಿನಲ್ಲೇ ಹಣಕ್ಕಾಗಿ ಪೀಡಿಸಿ, ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಆದರೆ ಸನ್ಯಾಸಿಯ ಬಳಿ ಹಣವಿಲ್ಲದಿದ್ದಾಗ ಆಕ್ರೋಶಗೊಂಡ ದುಷ್ಕರ್ಮಿಗಳು ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ನಂತರ ಪೊಲೀಸರ ಕಣ್ಣು ತಪ್ಪಿಸಲು ಶವವನ್ನು ಧಾರವಾಡ ಬೈಪಾಸ್ ಬಳಿ ಎಸೆದು ಪರಾರಿಯಾಗಿದ್ದರು.

ಪೊಲೀಸರ ಭರ್ಜರಿ ಕಾರ್ಯಾಚರಣೆ: ಯಾವುದೇ ಬಲವಾದ ಸುಳಿವು ಇಲ್ಲದಿದ್ದರೂ ಧಾರವಾಡ ಗ್ರಾಮೀಣ ಪೊಲೀಸರು ತನಿಖೆಯನ್ನು ಸವಾಲಾಗಿ ಸ್ವೀಕರಿಸಿದ್ದರು. ಮುಂಡಗೋಡಿನ ಪೆಟ್ರೋಲ್ ಬಂಕ್‌ವೊಂದರಲ್ಲಿ ಹಂತಕರು ಕಾರಿಗೆ ಸಿಎನ್‍ಜಿ ತುಂಬಿಸಲು ಇಳಿದಾಗ ಸಿಸಿಟಿವಿಯಲ್ಲಿ ಸೆರೆಯಾಗಿದ್ದರು. ಈ ದೃಶ್ಯವನ್ನೇ ಬೆನ್ನತ್ತಿದ ಪೊಲೀಸರು ವಾರದ ಕಾಲ ಹಗಲಿರುಳು ಶ್ರಮಿಸಿ, ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ತೆರಳಿ ಆರೋಪಿಗಳಾದ ಸಂಕೇತ ಯಾದವ್(24), ವೈಭವ್ ಚವ್ಹಾಣ(30) ಮತ್ತು ಸಿದ್ಧೇಶ ಭೋಸ್ಲೆ(18) ಎಂಬುವವರನ್ನು ಹೆಡೆಮುರಿ ಕಟ್ಟಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

The post ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಕೊಲೆ ರಹಸ್ಯ ಬಯಲು: ಹಣಕ್ಕಾಗಿ ಕೊಂದ ಹಂತಕರು ಪೊಲೀಸ್ ಬಲೆಗೆ! appeared first on Samyukta Karnataka.

ಮಹಿಳೆಯರನ್ನು ಮುಂಚೂಣಿಗೆ ತರಲು ಕಾಂಗ್ರೆಸ್‌ಗೆ ಇಷ್ಟವಿಲ್ಲವೇ?
ಹುಬ್ಬಳ್ಳಿ: ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡಲು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷಕ್ಕೆ ಈ ದೇಶದ ಮಹಿಳೆಯರ ಬಗ್ಗೆ ಗೌರವ ಇಲ್ಲವೆಂಬುದು ಗೊತ್ತಾಗಿದೆ. ಈ ದೇಶದ ತಾಯಂದಿರು ಮತ್ತು ಸಹೋದರಿಯರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರು ನಾರಿ ಶಕ್ತಿ ಅಧಿನಿಯಮ ಜಾರಿಗೊಳಿಸಲು ದೃಢನಿರ್ಧಾರ ಮಾಡಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಲೋಕಸಭೆಯಲ್ಲಿ ಮಸೂದೆ ಅನುಮೋದನೆ ಪಡೆಯದಂತೆ ಷಡ್ಯಂತ್ರ ಮಾಡಿ ಮಸೂದೆ ಅನುಮೋದನೆ ಪಡೆಯದಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ನಾರಿ ಶಕ್ತಿಗೆ ಹೆಚ್ಚಿನ ಗೌರವ ಸಿಗಬೇಕು. ಲೋಕಸಭೆ, ವಿಧಾನಸಭೆಯಲ್ಲಿ ಶೇ 33 ಮೀಸಲಾತಿ ಮೂಲಕ ಅವರನ್ನು ಸಮಾಜದ ಮುಂಚೂಣಿಯಲ್ಲಿ ತರಲು ಪ್ರಧಾನಮಂತ್ರಿಯವರು ಬಯಸಿದ್ದರು. ಇದನ್ನು ಸಹಿಸಲು ಕಾಂಗ್ರೆಸ್ಸಿನವರಿಗೆ ಆಗುತ್ತಿಲ್ಲ. ಏನೇ ಷಡ್ಯಂತ್ರ ಮಾಡಿದರೂ ಅತಿ ಶೀಘ್ರದಲ್ಲೇ ಮುಂದೊಂದು ದಿನ ಮತ್ತೊಮ್ಮೆ ಮಸೂದೆಯನ್ನು ಅನುಮೋದನೆ ಆಗಿಯೇ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿನ ಉದ್ಧಟತನವನ್ನು ಧಿಕ್ಕರಿಸಿ, ಆ ಪಕ್ಷದ ಬಂಡವಾಳ ಬಯಲು ಮಾಡುವ ನಿಟ್ಟನಲ್ಲಿ ಬಿಜೆಪಿ ಹುಬ್ಬಳ್ಳಿಯಲ್ಲಿ ಮಹಿಳೆಯರ ನೇತೃತ್ವದಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದೆ. ಮುಂದಿನ ಹೋರಾಟದ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಹೇಳಿದರು.

ಡಿ.ಕೆ.‌ ಶಿವಕುಮಾರ್‌ಗೆ ಹೊಸ ಪಟ್ಟ, ಕುಟುಂಬದ ತುಂಬ ಸಂಭ್ರಮ

The post ಮಹಿಳೆಯರನ್ನು ಮುಂಚೂಣಿಗೆ ತರಲು ಕಾಂಗ್ರೆಸ್‌ಗೆ ಇಷ್ಟವಿಲ್ಲವೇ? appeared first on Samyukta Karnataka.

ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ಧಾರವಾಡ: ಇಲ್ಲಿನ ಮೆಹಬೂಬನಗರ ನಿವಾಸಿ, ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಖಾನ್ ಪಠಾಣ ಎಂಬುವವರನ್ನು ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾತ್ರಿ 10 ಗಂಟೆ ಹೊತ್ತಿಗೆ ನಡೆದಿದೆ.

ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ದೌಡಾಯಿಸಿದ್ದು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಹತ್ಯೆಯಾದ ಫೈರೋಜ್ ಖಾನ್ ಅವರ ದೇಹವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರು, ಆಪ್ತರು, ಪಕ್ಷದ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹತ್ಯೆಗೆ ಕಾರಣವೇನು? ಹತ್ಯೆ ಮಾಡಿದವರು ಯಾರು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

IPL 2026: ವೈಭವ್‌, ಜುರೆಲ್ ಆರ್ಭಟ, ಆರ್‌ಸಿಬಿಗೆ ಮೊದಲ ಸೋಲು

The post ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ appeared first on Samyukta Karnataka.

ಪೆಟ್ರೋಲ್ ವದಂತಿ ನಂಬಿ ಕ್ಯಾನ್‌ ಫುಲ್; ಧಗಧಗ ಹೊತ್ತಿ ಉರಿದ ಇಡೀ ಮನೆ! ಗಂಭೀರ ಸ್ಥಿತಿಯಲ್ಲಿ ಗೃಹಿಣಿ.
ಧಾರವಾಡ: ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್‌ ಕ್ಯಾನ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ಗೃಹಿಣಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬವರು ಘಟನೆಯಲ್ಲಿ ಶೇ.80ರಷ್ಟು ದೇಹ ಸುಟ್ಟಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಮೊದಲು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೆಟ್ರೋಲ್ ಅಭಾವ ಇದೆ ಎಂಬ ವದಂತಿ ಹಿನ್ನೆಲೆ ಮನೆಯಲ್ಲಿ ಕ್ಯಾನ್‌ನಲ್ಲಿ ಪೆಟ್ರೋಲ್ ಸಂಗ್ರಹಿಸಿ ಫ್ರಿಡ್ಜ್ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿ ಇದ್ದಾಗ ಏಕಾಏಕಿ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡು, ಕ್ಷಣಾರ್ಧದಲ್ಲಿ ಮನೆಗೆ ಬೆಂಕಿ ವ್ಯಾಪಿಸಿದೆ.

ಅಡುಗೆ ಮನೆಯಲ್ಲಿ ಸಿಲುಕಿದ್ದ ಅತ್ತಿಗೆಯನ್ನು ಮೈದುನ ಯಲ್ಲಪ್ಪ ರಕ್ಷಿಸಿದ್ದು, ಈ ವೇಳೆ ಯಲ್ಲಪ್ಪನಿಗೂ ಗಾಯಗಳಾಗಿವೆ. ಮನೆಯ ಇತರೆ ಸದಸ್ಯರು ಹೊರಗಡೆ ಇದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮದುವೆ ಕಾರ್ಯಕ್ರಮಗಳಿಗೆ ರಥ ಓಡಿಸಲು ಪೆಟ್ರೋಲ್ ಸಂಗ್ರಹಿಸಲಾಗಿತ್ತು ಎಂದು ತಿಳಿದು ಬಂದಿದೆ. ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

The post ಪೆಟ್ರೋಲ್ ವದಂತಿ ನಂಬಿ ಕ್ಯಾನ್‌ ಫುಲ್; ಧಗಧಗ ಹೊತ್ತಿ ಉರಿದ ಇಡೀ ಮನೆ! ಗಂಭೀರ ಸ್ಥಿತಿಯಲ್ಲಿ ಗೃಹಿಣಿ. appeared first on Samyukta Karnataka.

Good Friday: ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ
ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಓಡಿಸಲು ನಿರ್ಧರಿಸಿದೆ.

ವಿಶೇಷ ಎಕ್ಸಪ್ರೆಸ್ ರೈಲು (ರೈಲು ಸಂಖ್ಯೆ 06503) ಏಪ್ರಿಲ್ 2ರ ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಟು, ಮರುದಿನ ಶುಕ್ರವಾರ ಬೆಳಿಗ್ಗೆ 7.35ಕ್ಕೆ ಬೆಳಗಾವಿಗೆ ತಲುಪಲಿದೆ (ಏಕಮುಖ ಸಂಚಾರ).

ವಿಶೇಷ ಎಕ್ಸಪ್ರೆಸ್ ರೈಲು (ರೈಲು ಸಂಖ್ಯೆ 06504) ಏಪ್ರಿಲ್ 5ರ ಭಾನುವಾರ ಸಂಜೆ 5.30ಕ್ಕೆ ಬೆಳಗಾವಿ ನಿಲ್ದಾಣದಿಂದ ಹೊರಟು, ಮರುದಿನ ಸೋಮವಾರ ಬೆಳಿಗ್ಗೆ 5 ಗಂಟೆಗೆ ಬೆಂಗಳೂರು ಎಸ್‌ಎಂವಿಟಿ ನಿಲ್ದಾಣಕ್ಕೆ ಆಗಮಿಸಲಿದೆ (ಏಕಮುಖ ಸಂಚಾರ).

ಈ ವಿಶೇಷ ರೈಲುಗಳು ಒಟ್ಟು 19 ಐಸಿಎಫ್ ಬೋಗಿಗಳನ್ನು ಹೊಂದಿದ್ದು, ತನ್ನ ಮಾರ್ಗ ಮಧ್ಯದ ಸಂಚಾರದಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಹಾಗೂ ಖಾನಾಪುರ ರೈಲು ನಿಲ್ದಾಣಗಳ ಮೂಲಕ ಸಂಚರಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

The post Good Friday: ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ appeared first on Samyukta Karnataka.

ಉತ್ತರ ಕರ್ನಾಟಕದಲ್ಲಿ ಭರ್ಜರಿ ಮಳೆ
ಧಾರವಾಡ: ಉತ್ತರ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಬುಧವಾರ ಸಂಜೆ ಸುಮಾರು ಒಂದೂವರೆ ಗಂಟೆ ಕಾಲ ರಭಸದ ಮಳೆ ಸುರಿಯಿತು.

ಗಾಳಿಯಿಂದ ಕೂಡಿದ ಮಳೆಯಿಂದಾಗಿ ಧಾರವಾಡ-ಹುಬ್ಬಳ್ಳಿಯ ಹಲವೆಡೆ ಮರಗಳು ಬಿದ್ದಿವೆ. ಕಲ್ಯಾಣನಗರ, ಸಪ್ತಾಪುರ, ಮರಾಠಾ ಕಾಲನಿ ಸೇರಿದಂತೆ ಹಲವೆಡೆ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಯಿತು. ಟಿವಿ ಟಾವರ್ ರಸ್ತೆಯಲ್ಲಿ ವಿದ್ಯುತ್ ತಂತಿ ಹರಿದುಬಿದ್ದಿದ್ದರಿಂದ ರಸ್ತೆ ಸಂಚಾರವನ್ನು ಬಂದ್ ಮಾಡಲಾಯಿತು. ಕೆಲ ರಸ್ತೆಗಳಲ್ಲಿ ಬ್ಯಾರಿಕೇಡ್ ಮೂಲಕ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಇದರಿಂದ ಜನರು ಅನ್ಯಮಾರ್ಗಗಳ ಮೂಲಕ ಸಂಚರಿಸುವುದು ಅನಿವಾರ್ಯವಾಯಿತು.

ಮಳೆಯಿಂದಾಗಿ ಎನ್‌ಟಿಟಿಎಫ್, ಟೋಲ್‌ನಾಕಾ ಹಾಗೂ ಯಾಲಕ್ಕಿ ಶೆಟ್ಟರ ಕಾಲನಿ ಸೇರಿದಂತೆ ಹಲವೆಡೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಭಸದ ಗಾಳಿಯ ಕಾರಣದಿಂದಾಗಿ ಬಹುತೇಕ ಬಡಾವಣೆಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿತ್ತು. ಇದರಿಂದ ಕತ್ತಲೆಯಲ್ಲಿಯೇ ಸಂಚರಿಸಬೇಕಾಯಿತು.

The post ಉತ್ತರ ಕರ್ನಾಟಕದಲ್ಲಿ ಭರ್ಜರಿ ಮಳೆ appeared first on Samyukta Karnataka.

ರಾಜು ಬೋಳಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
ಧಾರವಾಡ: ತಾಲೂಕಿನ ರಾಮಾಪುರ ಗ್ರಾಮದ ಹೊರವಲಯದಲ್ಲಿ ನಡೆದ ರಾಜು ಬೋಳಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಲಹೊಂಗಲ ತಾಲೂಕಿನ ಉಡಕೇರಿ ಗ್ರಾಮದ ರಾಜು ಬೋಳಶೆಟ್ಟಿ ಅವರನ್ನು ಕೊಲೆ ಮಾಡಿ ರಾಮಾಪುರದ ಹೊರವಲಯದಲ್ಲಿ ಕಾರಿನಲ್ಲಿ ಶವ ಇಟ್ಟು ಕಾರಿಗೆ ಬೆಂಕಿ ಹಚ್ಚಿರುವುದಾಗಿ ಗೊತ್ತಾಗಿದೆ. ಈ ಘಟನೆ ಕುರಿತು ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ಮಾಹಿತಿ ಪಡೆದು ಗುರುವಾರ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ. ತನಿಖೆ ಕಾರಣದಿಂದ ಅವರ ಹೆಸರನ್ನು ಸದ್ಯಕ್ಕೆ ಬಹಿರಂಗಪಡಿಸುವುದಿಲ್ಲ ಎಂದರು.

ಮೃತ ವ್ಯಕ್ತಿ ಸುಟ್ಟು ಕರಕಲಾಗಿದ್ದು, ಕಾರಿನ ನಂಬರ್ ಪ್ಲೇಟ್ ಆಧರಿಸಿ ಮೃತ ವ್ಯಕ್ತಿ ರಾಜು ಬೋಳಶೆಟ್ಟಿ ಎಂಬುದು ಗೊತ್ತಾಗಿದೆ. ತನಿಖೆ ಆರಂಭಿಸಿದ ನಂತರ ದೊರೆತ ಮಾಹಿತಿಯನ್ನಾಧರಿಸಿ ಮೂವರು ವ್ಯಕ್ತಿಗಳನ್ನು ಸದ್ಯಕ್ಕೆ ವಶಕ್ಕೆ ಪಡೆಯಲಾಗಿದೆ. ಇನ್ನೂ ಕೆಲವರನ್ನು ವಶಕ್ಕೆ ಪಡೆದು ಮಾಹಿತಿ ಪಡೆಯಲಾಗುವುದು. ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಕೊಲೆ ನಡೆದಿದೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ.

ಅಧಿಕಾರಿಗಳು ತನಿಖೆ ಕೈಗೊಂಡಾಗ ಮಾ. 23ರಂದು ಸುಮಾರಿಗೆ ಉಡಕೇರಿ ಗ್ರಾಮದಲ್ಲಿಯೇ ರಾಜು ಬೋಳಶೆಟ್ಟಿ ಅವರ ಕೊಲೆಯಾಗಿದೆ ಎಂಬುದು ಗೊತ್ತಾಗಿದೆ. ಉಡಕೇರಿಯಿಂದ ಇನ್ನೊಂದು ವಾಹನದ ಮೂಲಕ ರಾಜು ಬೋಳಶೆಟ್ಟಿ ಇರುವ ಕಾರು ಫಾಲೋ ಮಾಡಿರುವ ಕುರಿತು ಮಾಹಿತಿ ಲಭಿಸಿದ್ದು, ಇನ್ನೊಂದು ವಾಹನದಲ್ಲಿ ಯಾರಿದ್ದರೆಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದರು. ಎಫ್‌ಎಸ್‌ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಾಧಾರ ಸಂಗ್ರಹಿಸಿದೆ. ಮೃತ ವ್ಯಕ್ತಿಯ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದರು.

The post ರಾಜು ಬೋಳಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್ appeared first on Samyukta Karnataka.

ಪೆಟ್ರೋಲ್‌, ಡೀಸೆಲ್‌ ಸಮಸ್ಯೆ ಇಲ್ಲ; ಸುಳ್ಳು ಸುದ್ದಿ ಹರಡಿದರೆ ಹುಷಾರ್!
ಧಾರವಾಡ: ಎಲ್ಪಿಜಿ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಕುರಿತಾಗಿ ಸಾರ್ವಜನಿಕರಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಧಾರವಾಡ ಜಿಲ್ಲೆಯಲ್ಲಿ ಇಂಧನ ಕೊರತೆಯಿಲ್ಲ, ವದಂತಿ ನಂಬಿ ಆತಂಕ ಪಡಬೇಡಿ; ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈಗಾಗಲೇ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದ್ದು, ನಾಲ್ಕರಿಂದ ಐದು ದಿನಗಳಿಗೆ ಬೇಕಾಗುವಷ್ಟು ಸಂಗ್ರಹ ಇದೆ ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಪ್ರತಿದಿನ 60 ರಿಂದ 65 ಕಿಲೋ ಲೀಟರ್ (ಕೆ.ಎಲ್) ಇಂಧನ ಸರಬರಾಜಾಗುತ್ತಿದ್ದು, ಕಳೆದ ಎರಡು, ಮೂರು ದಿನಗಳಲ್ಲಿ ಸುಳ್ಳು ಸುದ್ದಿ ಹರಡಿದ ಪರಿಣಾಮವಾಗಿ 100 ರಿಂದ 110 ಕೆ.ಎಲ್ ವರೆಗೆ ಸರಬರಾಜು ಮಾಡಲಾಗುತ್ತಿದೆ. ಆತಂಕದಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗಾಗಿ ಬಂಕ್‌ಗಳಲ್ಲಿ ಅನಾವಶ್ಯಕವಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಒಂದು ವೇಳೆ ದಾಸ್ತಾನು ಕಡಿಮೆಯಾದರೂ, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್), ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್(ಬಿಪಿಸಿಎಲ್) ಹಾಗೂ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಸಂಸ್ಥೆಗಳು ಅಗತ್ಯ ಸರಬರಾಜು ಮಾಡಲಿವೆ ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ 10,026 ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್‌ಗಳು ಹಾಗೂ 800 ವಾಣಿಜ್ಯ ಸಿಲಿಂಡರ್‌ಗಳು ದಾಸ್ತಾನುಗಳಲ್ಲಿ ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ಸುಳ್ಳು ಮಾಹಿತಿ ಹರಡಿ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

The post ಪೆಟ್ರೋಲ್‌, ಡೀಸೆಲ್‌ ಸಮಸ್ಯೆ ಇಲ್ಲ; ಸುಳ್ಳು ಸುದ್ದಿ ಹರಡಿದರೆ ಹುಷಾರ್! appeared first on Samyukta Karnataka.