hubli Archives - Samyukta Karnataka

ಸಲೀಂ ಅಹ್ಮದ್‌ಗೆ ಸಚಿವ ಸ್ಥಾನ ಆಗ್ರಹಿಸಿ ಕಾರ್ಯಕರ್ತರ ಪ್ರತಿಭಟನೆ
ಸಲೀಂ ಅಹ್ಮದ್‌ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಹುಬ್ಬಳ್ಳಿ: ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ರಸ್ತೆ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಕಾಂಗ್ರೆಸ್ ಪಕ್ಷದಲ್ಲಿ ದೀರ್ಘಕಾಲದಿಂದ ಸಂಘಟನಾ ಹಾಗೂ ಆಡಳಿತಾತ್ಮಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಸಲೀಂ ಅಹ್ಮದ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿತ್ವದ ದೃಷ್ಟಿಯಿಂದಲೂ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಬಂಡಾಯಗಾರರಿಗೆ ಶಾಕ್ ಕೊಟ್ಟ HDK : JDSನಲ್ಲಿ ‘Gen Z’ ಯುಗ

ಪ್ರತಿಭಟನಾಕಾರರ ಪ್ರಕಾರ, ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಜನಪರ ಕಾರ್ಯಕ್ರಮಗಳು ಮತ್ತು ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಅವರು ಸಚಿವರಾದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಪ್ರತಿಭಟನೆಯ ವೇಳೆ ಮಾತನಾಡಿದ ಮುಖಂಡರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆಯ ಸಂದರ್ಭದಲ್ಲಿ ಸಲೀಂ ಅಹ್ಮದ್ ಅವರಿಗೆ ಅವಕಾಶ ನೀಡಬೇಕು ಎಂದು ಸರ್ಕಾರ ಮತ್ತು ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು. ಅಲ್ಪಸಂಖ್ಯಾತ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರಿಗೆ ನ್ಯಾಯ ದೊರೆಯಬೇಕು ಎಂಬುದು ನಮ್ಮ ಆಗ್ರಹ ಎಂದು ತಿಳಿಸಿದರು.

ಇದನ್ನೂ ಓದಿ: ಅಡ್ಡಮತದಾನದ ಸತ್ಯಾಸತ್ಯತೆ ಪರಿಶೀಲನೆಗೆ BJP ತಂಡ ರಚನೆ

ಸಚಿವ ಸ್ಥಾನ ನೀಡುವ ವಿಚಾರದಲ್ಲಿ ನಿರ್ಲಕ್ಷ್ಯ ಮುಂದುವರಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಅಗತ್ಯವಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆಗಳು ಮತ್ತು ಜನಾಂದೋಲನಗಳನ್ನು ಸಂಘಟಿಸುವುದಾಗಿ ಅವರು ಹೇಳಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್.ಡಿ. ಮಕಾಂದರ್, ಶಹಜಮಾನ್ ಮುಜಾಹೀದ್, ಇನಾಯಿತ್ ಖಾನ್ ಪಠಾಣ್, ಪರ್ವೇಜ್ ಬ್ಯಾಹಟ್ಟಿ, ರಶೀದ್ ಶೇಖ್, ಇಮ್ತಾಯಿಜ್ ಕುಮಟಾಕರ, ಇರ್ಷಾದ್ ಕುಸುಗಲ್, ಮುಜೀಬ್ ಮಕಾಂದರ್, ಜಾಕೀರ್ ಖದೀಬ್ ಸೇರಿದಂತೆ ಹಲವು ಮುಖಂಡರು ಹಾಗೂ ನೂರಾರು ಬೆಂಬಲಿಗರು ಭಾಗವಹಿಸಿದ್ದರು.

ರಾಜ್ಯದ ಎರಡು ಪ್ರಮುಖ ಕೋರ್ಟ್‌ಗಳಿಗೆ ಏಕಕಾಲದಲ್ಲಿ ಬಾಂಬ್ ಬೆದರಿಕೆ

The post ಸಲೀಂ ಅಹ್ಮದ್‌ಗೆ ಸಚಿವ ಸ್ಥಾನ ಆಗ್ರಹಿಸಿ ಕಾರ್ಯಕರ್ತರ ಪ್ರತಿಭಟನೆ appeared first on Samyukta Karnataka.

ನೂತನ ಸಿಎಂ DKಗೆ ಕೃಷ್ಣಾ, ಮಹದಾಯಿ ಸವಾಲು!
ತೆಲಂಗಾಣ, ಆಂಧ್ರ ರಾಜ್ಯಗಳ ಮನವೊಲಿಕೆ ಅಗತ್ಯ | ಮಹದಾಯಿ ಕೈಬಿಟ್ಟ ಕೇಂದ್ರ ವನ್ಯಜೀವಿ ಮಂಡಳಿ

ಬಿ.ಅರವಿಂದ

ಸಂ.ಕ.ಸಮಾಚಾರ, ಹುಬ್ಬಳ್ಳಿ : ಕೃಷ್ಣಾ ಮೇಲ್ದಂಡೆ ಯೋಜನೆಯು ಅಧಿಸೂಚನೆಯ ನಿರ್ಲಕ್ಷö್ಯ ಮತ್ತು ಮಹದಾಯಿ ಯೋಜನೆಯು ಕೇಂದ್ರಪಟ್ಟಿಯಿAದಲೇ ದೂರವಾಗಿರುವ ಹೊಸ ಸವಾಲುಗಳನ್ನು ಎದುರಿಸುತ್ತಿವೆ. ಇವೇ ಈಗ ಹೊಸ ಸಿಎಂ ಡಿ.ಕೆ.ಶಿವಕುಮಾರ್ ಎದುರು ಹೊಸ ಸವಾಲುಗಳೂ ಆಗಿವೆ.

ಕೃಷ್ಣೆ ರಾಜ್ಯದ ಎರಡನೇ ಕಣ್ಣು. ಆದರೆ ಇದಕ್ಕೆ ಸುಣ್ಣವೇ ಗತಿ ಎಂಬಂತಾಗಿದೆ. ಕೃಷ್ಣಾ ಜಲಾನಯನ ವ್ಯಾಪ್ತಿಯ ಸಮಸ್ಯೆಗಳು ಪರಿಹಾರವಾಗಿ, ರಾಜ್ಯದ ಪಾಲಿನ ನೀರಿನ ಪೂರ್ಣ ಬಳಕೆಯಾಗಲು (ಬಚಾವತ್ ಐತೀರ್ಪಿನ ಪ್ರಕಾರ) ಆಲಮಟ್ಟಿ ಜಲಾಶಯದ ಎತ್ತರ 524 ಮೀಟರ್‌ಗೆ ಏರಬೇಕಿದೆ. ಜೊತೆಗೆ, ಐತೀರ್ಪಿನ ಅಧಿಸೂಚನೆ ಕೂಡ ಆಗಲೇಬೇಕು. ಇಲ್ಲದಿದ್ದರೆ ಸರ್ಕಾರ ಕೆಲ ತಿಂಗಳ ಹಿಂದೆ ನಡೆಸಿರುವ ಭೂಸ್ವಾಧೀನ ಪ್ರಕ್ರಿಯೆಗೆ ತಾರ್ಕಿಕ ಅಂತ್ಯ ದೊರೆಯುವುದಿಲ್ಲ.

ಇದನ್ನೂ ಓದಿ: ಡಿಕೆಶಿ ಸಮಗ್ರ ಕರ್ನಾಟಕದ ಮುಖ್ಯಮಂತ್ರಿ ಆದಾರ?

ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ತಮ್ಮ ಪಾಲಿನ ನೀರಿನ ಮರು ನಿಗದಿಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರಿಂದ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ. ನ್ಯಾಯಾಲಯದಲ್ಲಿನ ಅರ್ಜಿಗಳ ಇತ್ಯರ್ಥವಾಗಿ ಅಧಿಸೂಚನೆ ಜಾರಿಗೊಳ್ಳದೇ ಜಲಾಶಯದ ಎತ್ತರವನ್ನು ಹೆಚ್ಚಿಸುವಂತಿಲ್ಲ.

ಕೃಷ್ಣೆಯ ಈ ಅಳಲನ್ನು ನೂತನ ಸಿಎಂ ಗಮನಿಸಬೇಕಿದೆ. ನ್ಯಾಯಾಲಯದಿಂದ ತಕರಾರು ಅರ್ಜಿಗಳನ್ನು ಹಿಂಪಡೆಯುವಂತೆ ತೆಲುಗು ಭಾಷಿಕ ರಾಜ್ಯಗಳ ಮನವೊಲಿಸುವಲ್ಲಿ ಅವರು ಯಶಸ್ವಿಯಾದರೆ ಅಧಿಸೂಚನೆಗೆ ಎದುರಾಗಿರುವ ನೆಪವೂ ದೂರವಾಗುತ್ತದೆ.
ಒಂದು ಲಕ್ಷ ಕೋಟಿ ರೂ. ಬೇಕು: ದಶಕಗಳಿಂದ ನಡೆಯುತ್ತಲೇ ಇರುವ ಈ ಮಹತ್ವದ ಯೋಜನೆ ಮುಗಿಯಲು ಕನಿಷ್ಠ ಒಂದು ಲಕ್ಷ ಕೋಟಿ ರೂಪಾಯಿ ಬೇಕು ಎಂಬುದು ತಜ್ಞರ ಅನಿಸಿಕೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ

ಆದರೆ ರಾಜ್ಯದ ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆಗಾಗಿ ಪ್ರತ್ಯೇಕವಾಗಿ 5-10 ಸಾವಿರ ಕೋಟಿ ರೂಪಾಯಿಗಳನ್ನೂ ತೆಗೆದಿಡುತ್ತಿಲ್ಲ. ಹೀಗಾಗಿ ಯೋಜನೆ ಮುಗಿಯುತ್ತಿಲ್ಲ. ಆದ್ದರಿಂದ ಈಗ ಕೃಷ್ಣೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದು ಉಳಿದಿರುವ ಸಮರ್ಪಕ ಮಾರ್ಗ. ನೂತನ ಮುಖ್ಯಮಂತ್ರಿಗಳು ಕೇಂದ್ರದ ಮೇಲೆ ಒತ್ತಡ ಹೇರಿ, ರಾಷ್ಟಿçÃಯ ಯೋಜನೆಯನ್ನಾಗಿಸುವಲ್ಲಿ ಯಶಸ್ವಿಯಾದರೆ ಅದೊಂದು ಐತಿಹಾಸಿಕ ನಡೆಯಾಗಲಿದೆ.

ಮಹದಾಯಿ ಕಗ್ಗಂಟು : ಮಹದಾಯಿ ಐತೀರ್ಪು ಹೊರಬಿದ್ದು ಎಂಟು ವರ್ಷಗಳಾದರೂ, ಗೋವಾದ ತಕರಾರಿನಿಂದಾಗಿ ಯೋಜನೆ ಜಾರಿಯಾಗುತ್ತಿಲ್ಲ. ತಕರಾರಿನ ಹಿನ್ನೆಲೆ, ವಿಷಯದ ಅಧ್ಯಯನ ಮಾಡುತ್ತಿರುವ ಕೇಂದ್ರ ವನ್ಯಜೀವಿ ಮಂಡಳಿಯು ಈಗ ತನ್ನ ಕಾರ್ಯಕಲಾಪ ಪಟ್ಟಿಯಿಂದ ಮಹದಾಯಿಯನ್ನು ಕೈಬಿಟ್ಟಿದೆ.

ಇದನ್ನೂ ಓದಿ: BJP ನಾಯಕ ಅಣ್ಣಾಮಲೈ ರಾಜೀನಾಮೆ ಅಂಗೀಕಾರ

ಇದು ರಾಜ್ಯಕ್ಕೆ ದೊಡ್ಡ ಹಿನ್ನಡೆ. ಪರಿಸರಕ್ಕೆ ಸಂಬಂಧಿಸಿದ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಸಿಇಸಿ) ಕೇಳಿದ್ದ ಸ್ಪಷ್ಟನೆಗಳಿಗೆ ಸಂಬಂಧಿಸಿದ ಅರಣ್ಯಾಧಿಕಾರಿಗಳು ಉತ್ತರಿಸದ ಕಾರಣ, ಈ ಋಣಾತ್ಮಕ ಬೆಳವಣಿಗೆಯಾಗಿದೆ. ಡಿ.ಕೆ.ಶಿವಕುಮಾರ್, ಈ ಅಂಶವನ್ನು ಆದ್ಯತೆಯ ಮೇಲೆ ಪರಿಗಣಿಸಿ, ಮಹದಾಯಿ ವಿಷಯವನ್ನು ಪುನಃ ಕಾರ್ಯಕಲಾಪ ಪಟ್ಟಿಗೆ ಸೇರ್ಪಡೆಯಾಗುವಂತೆ ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಇದರೊಂದಿಗೆ, ಗೋವಾ ಜೊತೆ ದ್ವಿಪಕ್ಷೀಯ ಸಭೆ ನಡೆಸುವುದು ಹೆಚ್ಚು ಪ್ರಯೋಜನಕಾರಿ ಎನ್ನುವುದನ್ನೂ ಅವರು ಪರಿಗಣಿಸಲಿ ಎಂಬುದು ಜನಾಪೇಕ್ಷೆಯಾಗಿದೆ.

DK ಸರ್ಕಾರದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್‌ಗೆ ಹೊಸ ಸವಾಲು

The post ನೂತನ ಸಿಎಂ DKಗೆ ಕೃಷ್ಣಾ, ಮಹದಾಯಿ ಸವಾಲು! appeared first on Samyukta Karnataka.

ರೈತರಿಗಾಗಿ ಸಂಯುಕ್ತ ಕರ್ನಾಟಕ ‘ನೇರ ಫೋನ್ ಇನ್’ ಕಾರ್ಯಕ್ರಮ
ಸಂಯುಕ್ತ ಕರ್ನಾಟಕದಿಂದ ರೈತರಿಗಾಗಿ ಉಪಯುಕ್ತ ‘ನೇರ ಫೋನ್ ಇನ್’ ಕಾರ್ಯಕ್ರಮ

ಹುಬ್ಬಳ್ಳಿ: ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ‘ಸಂಯುಕ್ತ ಕರ್ನಾಟಕ’ ವಿಶೇಷ ‘ನೇರ ಫೋನ್ ಇನ್’ ಕಾರ್ಯಕ್ರಮವನ್ನು ಆಯೋಜಿಸಿದೆ. ಇಂದು (ಮೇ 30ರಂದು) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ರೈತರ ಪ್ರಶ್ನೆಗಳಿಗೆ ನೇರವಾಗಿ ಉತ್ತರಿಸಲಿದ್ದಾರೆ.

ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ರೈತರು ಈಗಾಗಲೇ ಬಿತ್ತನೆ ಬೀಜ, ರಸಗೊಬ್ಬರ ಖರೀದಿ ಹಾಗೂ ಹೊಲಗಳ ಸಿದ್ಧತೆಯಲ್ಲಿ ತೊಡಗಿದ್ದಾರೆ. ರೈತ ಸಂಪರ್ಕ ಕೇಂದ್ರಗಳು, ಸಹಕಾರಿ ಸಂಘಗಳು ಹಾಗೂ ಕೃಷಿ ಇಲಾಖೆಯ ವಿವಿಧ ಕೇಂದ್ರಗಳಲ್ಲಿ ಬೀಜ ಮತ್ತು ರಸಗೊಬ್ಬರಗಳ ಖರೀದಿಗೆ ರೈತರು ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.

ಕಾರ್ಯಕ್ರಮದಲ್ಲಿ ರೈತರು ಮುಂಗಾರು ಹಂಗಾಮಿನಲ್ಲಿ ಯಾವ ಬೆಳೆ ಬೆಳೆಯುವುದು ಸೂಕ್ತ, ಯಾವ ಬೀಜ ಆಯ್ಕೆ ಮಾಡಬೇಕು, ಗುಣಮಟ್ಟದ ಬೀಜವನ್ನು ಗುರುತಿಸುವ ವಿಧಾನ, ವಿವಿಧ ಬೆಳೆಗಳ ಲಾಭದಾಯಕತೆ, ಪ್ರಕೃತಿ ವಿಕೋಪದ ಅಪಾಯ ಕಡಿಮೆ ಇರುವ ಬೆಳೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನೆ ಕೇಳಬಹುದು.

ಇದರ ಜೊತೆಗೆ ಬಿತ್ತನೆಗೆ ಸೂಕ್ತ ಅವಧಿ, ಸರ್ಕಾರದಿಂದ ಲಭ್ಯವಿರುವ ಬಿತ್ತನೆ ಬೀಜ ವಿತರಣೆ ವ್ಯವಸ್ಥೆ, ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳ ಲಭ್ಯತೆ, ರಸಗೊಬ್ಬರ ವಿತರಣೆಯ ಮಾನದಂಡಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಕೃಷಿ ತಜ್ಞರಿಂದ ಮಾಹಿತಿ ಪಡೆಯುವ ಅವಕಾಶವೂ ಇದೆ.

ಬಿತ್ತನೆಗೂ ಮುನ್ನ ಬೀಜೋಪಚಾರದ ಮಹತ್ವ, ಅದರ ಸರಿಯಾದ ವಿಧಾನ, ಕಂಪನಿಗಳ ಬೀಜಗಳ ಗುಣಮಟ್ಟ ಪರಿಶೀಲನೆ, ಕಳಪೆ ಬೀಜಗಳಿಂದ ಉಂಟಾಗುವ ಸಮಸ್ಯೆಗಳು ಹಾಗೂ ಅಂತಹ ಸಂದರ್ಭಗಳಲ್ಲಿ ರೈತರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೂಡ ರೈತರು ಪ್ರಶ್ನೆ ಕೇಳಬಹುದು.

ಇದಲ್ಲದೆ ಬೆಳೆ ವಿಮೆ ಯೋಜನೆಗಳು, ವಿಮೆ ಪರಿಹಾರ ಪಡೆಯುವ ವಿಧಾನ, ತಾಂತ್ರಿಕ ಅಡಚಣೆಗಳು, ಕೃಷಿ ಯಂತ್ರೋಪಕರಣಗಳ ಬಾಡಿಗೆ ವ್ಯವಸ್ಥೆ ಹಾಗೂ ‘ಕೃಷಿ ಯಂತ್ರಧಾರಾ’ ಯೋಜನೆಯಡಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಸಹ ಮಾಹಿತಿ ನೀಡಲಾಗುತ್ತದೆ.

ಕೃಷಿ ಇಲಾಖೆ ಅಧಿಕಾರಿಗಳು ರೈತರ ಎಲ್ಲ ಸಂದೇಹಗಳಿಗೆ ಉತ್ತರ ನೀಡಲಿದ್ದು, ಪ್ರಶ್ನೆಗಳನ್ನು ಸಂಕ್ಷಿಪ್ತವಾಗಿ ಮತ್ತು ವಿಷಯಕ್ಕೆ ಸಂಬಂಧಿಸಿದಂತೆ ಕೇಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರಶ್ನೆಗಳನ್ನು ಕೇಳಲು ಈ ಮೊಬೈಲ್ ಸಂಖ್ಯೆಗಳ ಸಂಪರ್ಕಿಸಬಹುದು: 📞 9916591157, 📞 9902098730

ಮುಂಗಾರು ಹಂಗಾಮಿನ ಆರಂಭದ ಸಂದರ್ಭದಲ್ಲಿ ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವ ಈ ಕಾರ್ಯಕ್ರಮ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ನೆರವಾಗುವ ನಿರೀಕ್ಷೆಯಿದೆ.

The post ರೈತರಿಗಾಗಿ ಸಂಯುಕ್ತ ಕರ್ನಾಟಕ ‘ನೇರ ಫೋನ್ ಇನ್’ ಕಾರ್ಯಕ್ರಮ appeared first on Samyukta Karnataka.

ಪೆಟ್ರೋಲ್ ವದಂತಿ ನಂಬಿ ಕ್ಯಾನ್‌ ಫುಲ್; ಧಗಧಗ ಹೊತ್ತಿ ಉರಿದ ಇಡೀ ಮನೆ! ಗಂಭೀರ ಸ್ಥಿತಿಯಲ್ಲಿ ಗೃಹಿಣಿ.
ಧಾರವಾಡ: ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್‌ ಕ್ಯಾನ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ಗೃಹಿಣಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬವರು ಘಟನೆಯಲ್ಲಿ ಶೇ.80ರಷ್ಟು ದೇಹ ಸುಟ್ಟಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಮೊದಲು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೆಟ್ರೋಲ್ ಅಭಾವ ಇದೆ ಎಂಬ ವದಂತಿ ಹಿನ್ನೆಲೆ ಮನೆಯಲ್ಲಿ ಕ್ಯಾನ್‌ನಲ್ಲಿ ಪೆಟ್ರೋಲ್ ಸಂಗ್ರಹಿಸಿ ಫ್ರಿಡ್ಜ್ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿ ಇದ್ದಾಗ ಏಕಾಏಕಿ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡು, ಕ್ಷಣಾರ್ಧದಲ್ಲಿ ಮನೆಗೆ ಬೆಂಕಿ ವ್ಯಾಪಿಸಿದೆ.

ಅಡುಗೆ ಮನೆಯಲ್ಲಿ ಸಿಲುಕಿದ್ದ ಅತ್ತಿಗೆಯನ್ನು ಮೈದುನ ಯಲ್ಲಪ್ಪ ರಕ್ಷಿಸಿದ್ದು, ಈ ವೇಳೆ ಯಲ್ಲಪ್ಪನಿಗೂ ಗಾಯಗಳಾಗಿವೆ. ಮನೆಯ ಇತರೆ ಸದಸ್ಯರು ಹೊರಗಡೆ ಇದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮದುವೆ ಕಾರ್ಯಕ್ರಮಗಳಿಗೆ ರಥ ಓಡಿಸಲು ಪೆಟ್ರೋಲ್ ಸಂಗ್ರಹಿಸಲಾಗಿತ್ತು ಎಂದು ತಿಳಿದು ಬಂದಿದೆ. ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

The post ಪೆಟ್ರೋಲ್ ವದಂತಿ ನಂಬಿ ಕ್ಯಾನ್‌ ಫುಲ್; ಧಗಧಗ ಹೊತ್ತಿ ಉರಿದ ಇಡೀ ಮನೆ! ಗಂಭೀರ ಸ್ಥಿತಿಯಲ್ಲಿ ಗೃಹಿಣಿ. appeared first on Samyukta Karnataka.

ಯುಗಾದಿ-ರಂಜಾನ್ ಸ್ಪೆಷಲ್: ಹುಬ್ಬಳ್ಳಿ–ಬೆಂಗಳೂರು ನಡುವೆ ಹೆಚ್ಚುವರಿ ರೈಲು
ಹುಬ್ಬಳ್ಳಿ: ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ನೈಋತ್ಯ ರೈಲ್ವೆ (South Western Railway) ವತಿಯಿಂದ ಹುಬ್ಬಳ್ಳಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT) ಬೆಂಗಳೂರು ನಡುವೆ ವಿಶೇಷ ರೈಲು ಸೇವೆ ಘೋಷಿಸಲಾಗಿದೆ.

ವಿಶೇಷ ರೈಲು ವಿವರಗಳು

ಹುಬ್ಬಳ್ಳಿ → ಬೆಂಗಳೂರು (Train No. 07311), ದಿನಾಂಕ: ಮಾರ್ಚ್ 22, 2026 (ಭಾನುವಾರ), ಹೊರಡುವ ಸಮಯ: ಸಂಜೆ 6:15 (ಹುಬ್ಬಳ್ಳಿ), ತಲುಪುವ ಸಮಯ: ಬೆಳಗ್ಗೆ 9:00 (ಬೆಂಗಳೂರು – SMVT), ಮಾರ್ಗ: ಕೊಪ್ಪಳ → ಹೊಸಪೇಟೆ → ಬಳ್ಳಾರಿ → ಚಿತ್ರದುರ್ಗ

ಬೆಂಗಳೂರು → ಹುಬ್ಬಳ್ಳಿ (Train No. 07312), ದಿನಾಂಕ: ಮಾರ್ಚ್ 23, 2026 (ಸೋಮವಾರ), ಹೊರಡುವ ಸಮಯ: ಬೆಳಗ್ಗೆ 10:00 (ಬೆಂಗಳೂರು – SMVT), ತಲುಪುವ ಸಮಯ: ಸಂಜೆ 7:40 (ಹುಬ್ಬಳ್ಳಿ), ಮಾರ್ಗ: ಅರಸಿಕೇರಿ → ದಾವಣಗೇರಿ

ರೈಲಿನ ವೈಶಿಷ್ಟ್ಯ: ಈ ವಿಶೇಷ ಎಕ್ಸ್‌ಪ್ರೆಸ್ ರೈಲು ಒಟ್ಟು 19 ಎಲ್‌ಎಚ್‌ಬಿ (LHB) ಬೋಗಿಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಸುಗಮ ಪ್ರಯಾಣ ಅನುಭವ ಒದಗಿಸಲು ಸಿದ್ಧವಾಗಿದೆ.

ಹಬ್ಬದ ಹಿನ್ನೆಲೆ ವಿಶೇಷ ಎಕ್ಸ್‌ಪ್ರೆಸ್ ರೈಲು: ಯುಗಾದಿ ಹಾಗೂ ರಂಜಾನ್ ಹಬ್ಬದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಜನರು ತಮ್ಮ ಊರುಗಳಿಗೆ ಪ್ರಯಾಣಿಸುವುದು ಹೆಚ್ಚಾಗುತ್ತದೆ. ಇದರಿಂದ ರೈಲುಗಳಲ್ಲಿ ಭಾರಿ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ, ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸುವ ಮೂಲಕ ಪ್ರಯಾಣಿಕರ ಅನುಕೂಲತೆ ಹೆಚ್ಚಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ : ತನಿಖೆಗೆ ಆದೇಶ

The post ಯುಗಾದಿ-ರಂಜಾನ್ ಸ್ಪೆಷಲ್: ಹುಬ್ಬಳ್ಳಿ–ಬೆಂಗಳೂರು ನಡುವೆ ಹೆಚ್ಚುವರಿ ರೈಲು appeared first on Samyukta Karnataka.

ಹುಬ್ಬಳ್ಳಿ–ಬೆಳಗಾವಿ ವಿಮಾನ ನಿಲ್ದಾಣ ಉನ್ನತಿ ಏಕೆ ಇಲ್ಲ?: ಕೇಂದ್ರದ ವಿರುದ್ಧ ಎಂ.ಬಿ ಪಾಟೀಲ ಆಕ್ರೋಶ
ತಮಿಳನಾಡು ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಹುದ್ದೆ: ಕರ್ನಾಟಕಕ್ಕೆ ತಾರತಮ್ಯ

ಬೆಂಗಳೂರು : ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಿರುವ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ಮಾಡಿದೆ ಎಂದು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಮ್.‌ ಬಿ ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತಮಿಳುನಾಡಿಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಕರ್ನಾಟಕದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

‘ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ’: ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯವಾಗಿ ಘೋಷಿಸಿರುವುದು ನೆರೆಯ ರಾಜ್ಯಕ್ಕೆ ನೀಡಿದ ಆದ್ಯತೆಯ ಉದಾಹರಣೆ ಎಂದು ಎಂ.ಬಿ ಪಾಟೀಲ ಹೇಳಿದರು. “ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ ಎನ್ನುವಂತಾಗಿದೆ. ಈ ರೀತಿಯ ಧೋರಣೆ ಯಾವತ್ತಿಗೂ ಸರಿಯಲ್ಲ,” ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಟೀಕಿಸಿದರು.

ಚುನಾವಣೆ ದೃಷ್ಟಿಯಿಂದ ನಿರ್ಧಾರ? : ತಮಿಳುನಾಡಿನಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ಕರ್ನಾಟಕದ ಬೇಡಿಕೆಯ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ಉದಾಸೀನತೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದರು.

ಕೇಂದ್ರಕ್ಕೆ ಪತ್ರ ಬರೆದಿದ್ದ ರಾಜ್ಯ ಸರ್ಕಾರ : ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವಂತೆ ಕೋರಿ 2025ರ ಜೂನ್ 24ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾಗಿ ಸಚಿವರು ತಿಳಿಸಿದ್ದಾರೆ.

ಆದರೆ ಇಷ್ಟಾದರೂ ರಾಜ್ಯದ ಬೇಡಿಕೆಗೆ ಸ್ಪಂದಿಸದಿರುವುದು ಖೇದಕರ ಎಂದು ಅವರು ಹೇಳಿದರು.

ಕರ್ನಾಟಕದ ಕೇಂದ್ರ ಸಚಿವರು ಧ್ವನಿ ಎತ್ತಲಿ : ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಒಗ್ಗಟ್ಟಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕಿದೆ ಎಂದು ಎಂ.ಬಿ ಪಾಟೀಲ ಆಗ್ರಹಿಸಿದ್ದಾರೆ.

ಉತ್ತರ ಕರ್ನಾಟಕ ಅಭಿವೃದ್ಧಿಗೆ ಅಗತ್ಯ: ಹುಬ್ಬಳ್ಳಿ ಅಥವಾ ಬೆಳಗಾವಿ ಎರಡರಲ್ಲಿ ಕನಿಷ್ಠ ಒಂದನ್ನಾದರೂ ತಕ್ಷಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದರಿಂದ ಉತ್ತರ ಕರ್ನಾಟಕದ ವ್ಯಾಪಾರ, ಉದ್ಯಮ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರವು ರಾಜ್ಯದ ಅಗತ್ಯವನ್ನು ಮನಗಂಡು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

ಟಿಕೆಟ್ ಸಿಗದ ಬೇಸರ: BJP ಶಿಸ್ತು ಸಮಿತಿ ಅಧ್ಯಕ್ಷ ಪಾಟೀಲ ರಾಜೀನಾಮೆ

The post ಹುಬ್ಬಳ್ಳಿ–ಬೆಳಗಾವಿ ವಿಮಾನ ನಿಲ್ದಾಣ ಉನ್ನತಿ ಏಕೆ ಇಲ್ಲ?: ಕೇಂದ್ರದ ವಿರುದ್ಧ ಎಂ.ಬಿ ಪಾಟೀಲ ಆಕ್ರೋಶ appeared first on Samyukta Karnataka.

ಹುಬ್ಬಳ್ಳಿ: ಕಾಲೇಜ್ ಹಾಸ್ಟೆಲ್‌ ಮೇಲಿಂದ ಬಿದ್ದು PUC ವಿದ್ಯಾರ್ಥಿ ಸಾವು
ಹುಬ್ಬಳ್ಳಿ: ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಪಿಯುಸಿ ಮೊದಲ ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಗರದ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಯಾನ್ (17) ಎಂದು ಗುರುತಿಸಲಾಗಿದೆ.

ಮೃತ ಅಯಾನ್ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು, ಹುಬ್ಬಳ್ಳಿಯಲ್ಲಿ ಖಾಸಗಿ ಇನ್ಸ್ಟಿಟ್ಯೂಟ್‌ನಲ್ಲಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅವರು ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಿ

ಪೊಲೀಸ್ ಮೂಲಗಳ ಪ್ರಕಾರ, ಅಯಾನ್ ರಾತ್ರಿ ಊಟ ಮಾಡಿದ ಬಳಿಕ ಹಾಸ್ಟೆಲ್ ಕಟ್ಟಡದ ಮೇಲ್ಮಹಡಿಗೆ ತೆರಳಿದ್ದನು ಎನ್ನಲಾಗಿದೆ. ಮೂರನೇ ಮಹಡಿಯಲ್ಲಿ ಲಿಫ್ಟ್ ನಿರ್ಮಾಣಕ್ಕಾಗಿ ಬಿಡಲಾಗಿದ್ದ ಕಾಲಿ ಜಾಗದಿಂದ ಕೆಳಗೆ ಬಿದ್ದ ಪರಿಣಾಮ ಅಯಾನ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಮಹಾನಿಂಗ ನಂದಗಾವಿ ಹಾಗೂ ನವನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯವೂ ನಡೆಯುತ್ತಿದೆ.

ಇದನ್ನೂ ಓದಿ: ಗೋ ಕಟ್ಟೆಯಲ್ಲಿ ಈಜಲು ಹೋಗಿ 10 ವರ್ಷದ ಬಾಲಕ ಸಾವು

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹುಬ್ಬಳ್ಳಿಯ ಕಿಮ್ಸ್ (KMC-RI) ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಯ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಘಟನೆವೋ, ಅಥವಾ ಇದರಲ್ಲಿ ಬೇರೆ ಯಾರಾದರೂ ಪಾತ್ರವಿದೆಯೇ ಎಂಬ ಕುರಿತು ಇನ್ನೂ ಸ್ಪಷ್ಟತೆ ಲಭ್ಯವಾಗಿಲ್ಲ.

ಈ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

The post ಹುಬ್ಬಳ್ಳಿ: ಕಾಲೇಜ್ ಹಾಸ್ಟೆಲ್‌ ಮೇಲಿಂದ ಬಿದ್ದು PUC ವಿದ್ಯಾರ್ಥಿ ಸಾವು appeared first on Samyukta Karnataka.

2028ರವರೆಗೂ ಸಿದ್ದರಾಮಯ್ಯ CM: ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ
ಹೈಕಮಾಂಡ್ ಹೇಳಿದರೆ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗುತ್ತಾರೆ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ಯಾವುದೇ ಗೊಂದಲ ಅಥವಾ ತಿಕ್ಕಾಟಗಳಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷವಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.

ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ದೆಹಲಿ ಭೇಟಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಉಪ ಮುಖ್ಯಮಂತ್ರಿ ಅವರು ಕೆಪಿಸಿಸಿ ಉಸ್ತುವಾರಿಯೂ ಹೌದು. ಹೀಗಾಗಿ ದೆಹಲಿಗೆ ಹೋಗುವುದು, ಅಲ್ಲಿನ ನಾಯಕರನ್ನು ಭೇಟಿ ಮಾಡುವುದು ಸಹಜ. ಇದನ್ನು ಎಲ್ಲ ಸಚಿವರೂ ಮಾಡುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಅಥವಾ ರಾಜಕೀಯ ಊಹಾಪೋಹಗಳಿಗೆ ಆಸ್ಪದವಿಲ್ಲ” ಎಂದು ತಿಳಿಸಿದರು.

ಯಾವುದೇ ಕ್ರಾಂತಿಯೂ ನಡೆಯಲಿಲ್ಲ: ಅಧಿಕಾರ ಹಂಚಿಕೆ ಕುರಿತಂತೆ ನಡೆಯುತ್ತಿದ್ದ ‘ನವೆಂಬರ್ ಕ್ರಾಂತಿ’ ವಿಚಾರ ಈಗಾಗಲೇ ಮುಗಿದ ಅಧ್ಯಾಯವಾಗಿದೆ ಎಂದು ಹೇಳಿದ ಅವರು, “ನವೆಂಬರ್ ಆಯ್ತು, ಡಿಸೆಂಬರ್ ಹೋಯ್ತು, ಸಂಕ್ರಾಂತಿಯೂ ಕಳೆದುಹೋಯ್ತು. ಯಾವುದೇ ಕ್ರಾಂತಿಯೂ ನಡೆಯಲಿಲ್ಲ. ಇನ್ನು ಮುಂದೆ ಯುಗಾದಿ ಬರುತ್ತದೆ. 2028ರವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ” ಎಂದು ಸ್ಪಷ್ಟವಾಗಿ ಹೇಳಿದರು.

ಹೈಕಮಾಂಡ್ ಬೀದಿ‌ದಾಸಯ್ಯ ಸಿಎಂ ಮಾಡಿದರೂ ಒಪ್ಪಬೇಕಾಗುತ್ತದೆ: ನಮ್ಮದು ಹೈಕಮಾಂಡ್ ಪಕ್ಷ ಎಂದು ಪುನರುಚ್ಚರಿಸಿದ ಜಮೀರ್, “ಹೈಕಮಾಂಡ್ ಹೇಳಿದರೆ ಡಿ.ಕೆ.ಶಿವಕುಮಾರ ಅವರೂ ಮುಖ್ಯಮಂತ್ರಿಯಾಗುತ್ತಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ನಾವು ಡಿ.ಕೆ.ಶಿವಕುಮಾರ ಅವರನ್ನು ಮುಖ್ಯಮಂತ್ರಿಯಾಗಿ ನೋಡಬೇಕು ಎಂದಿದ್ದೇವೆ. ಆದರೆ ಅಂತಿಮ ತೀರ್ಮಾನ ಹೈಕಮಾಂಡ್‌ದ್ದೇ. ಹೈಕಮಾಂಡ್ ಬೀದಿ ದಾಸಯ್ಯನನ್ನು ಸಿಎಂ ಮಾಡಿದರೂ ಒಪ್ಪಿಕೊಳ್ಳಬೇಕಾಗುತ್ತದೆ” ಎಂದು ವ್ಯಂಗ್ಯವಾಡಿದರು.

ಬಳ್ಳಾರಿಯಲ್ಲಿ ನಡೆದ ಇತ್ತೀಚಿನ ಘಟನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, “ಆ ಘಟನೆ ನಡೆಯಬಾರದಾಗಿತ್ತು. ಬಹಳ ವರ್ಷಗಳಿಂದ ಮಹರ್ಷಿ ವಾಲ್ಮೀಕಿ ಅವರ ಮೂರ್ತಿ ಸ್ಥಾಪಿಸುವ ಬೇಡಿಕೆ ಇತ್ತು. ಅದನ್ನು ಶಾಸಕ ಭರತ್ ರೆಡ್ಡಿ ಮಾಡಿದ್ದಾರೆ. ಇದು ಒಳ್ಳೆಯ ಕೆಲಸ. ಹಿರಿಯರು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಬೇಕಾಗಿತ್ತು. ಆದರೆ ಈಗ ಏನಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಪಾದಯಾತ್ರೆ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಹುರಳಿಲ್ಲ” ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿ ಚರ್ಚೆಗೆ ವಿರೋಧ ಪಕ್ಷದ ನಾಯಕ ಚರ್ಚೆಗೆ ಬರಲಿ:  ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ ಎಂದು ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡಿದ ಜಮೀರ್ ಅಹ್ಮದ್ ಖಾನ್, “ಬಿಜೆಪಿ ತಮ್ಮ ಆಡಳಿತಾವಧಿಯಲ್ಲಿ ಜನರಿಗೆ ಒಂದು ಮನೆ ಕೂಡ ಕೊಟ್ಟಿಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರಿಗೆ ನಾನು ಸವಾಲು ಹಾಕುತ್ತೇನೆ. ಬೇಕಿದ್ದರೆ ಚರ್ಚೆಗೆ ಬರಲಿ. ಸರ್ಕಾರ ದಿವಾಳಿಯಾಗಿಲ್ಲ. ಗ್ಯಾರಂಟಿಗಳ ನಡುವೆಯೂ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ” ಎಂದು ಹೇಳಿದರು.

The post 2028ರವರೆಗೂ ಸಿದ್ದರಾಮಯ್ಯ CM: ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ appeared first on Samyukta Karnataka.

ವಿವಸ್ತ್ರ–ಹಲ್ಲೆ ಪ್ರಕರಣ: CID ತಂಡ ಹುಬ್ಬಳ್ಳಿಗೆ – ತನಿಖೆ ಚುರುಕು
ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ, ಸಿಐಡಿ ಅಧಿಕಾರಿ ಶಾಲೋ ಅವರ ನೇತೃತ್ವದ ಎರಡು ತಂಡಗಳು ಹುಬ್ಬಳ್ಳಿಗೆ ಆಗಮಿಸಿದ್ದು ತನಿಖೆಯನ್ನು ಚುರುಕುಗೊಳಿಸಿವೆ.

ಈ ಪ್ರಕರಣಗಳ ತನಿಖೆಗೆ ಹಿರಿಯ ಐಪಿಎಸ್ ದರ್ಜೆಯ ಅಧಿಕಾರಿಯ ನೇತೃತ್ವದ ಸಿಐಡಿ ತಂಡವನ್ನು ರಚಿಸಲಾಗಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳು ಈಗಾಗಲೇ ಸಂಬಂಧಿಸಿದ ಎಲ್ಲಾ ಪ್ರಕರಣಗಳ ಕಡತಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಜನವರಿ 2 ರಿಂದ ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳು ದಾಖಲಾಗಿದ್ದು, ಆರು ಎಫ್‌ಐಆರ್‌ಗಳ ಸಂಪೂರ್ಣ ಕಡತಗಳನ್ನು ಸಂಗ್ರಹಿಸಿ ಸವಿಸ್ತಾರ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಕರಾವಳಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ: ಕೇರಳ–ಗೋವಾ ಮಾದರಿಯಲ್ಲಿ ಅಭಿವೃದ್ಧಿ – ಡಿ.ಕೆ.ಶಿವಕುಮಾರ್

ಸಿಐಡಿ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹ, ಸಾಕ್ಷಿದಾರರ ವಿಚಾರಣೆ, ತಾಂತ್ರಿಕ ಮಾಹಿತಿ ಪರಿಶೀಲನೆ ಸೇರಿದಂತೆ ಎಲ್ಲಾ ಅಂಶಗಳನ್ನು ಆಳವಾಗಿ ಪರಿಶೀಲಿಸಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ತನಿಖೆ ವೇಗವಾಗಿ ನಡೆಯುವ ನಿರೀಕ್ಷೆಯಿದೆ.

ಇನ್ನೊಂದೆಡೆ, ಸುಜಾತಾ ಹಂಡಿ ವಿವಸ್ತ್ರ ಪ್ರಕರಣವನ್ನು ಸಿಐಡಿಗೆ ವಹಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಪ್ರಕರಣವನ್ನು ನ್ಯಾಯಮೂರ್ತಿಗಳ ನೇತೃತ್ವದ ವಿಶೇಷ ತನಿಖಾ ಸಮಿತಿಗೆ (SIT) ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ರಾಜಕೀಯ ಒತ್ತಡ ಹೆಚ್ಚಾದರೂ, ರಾಜ್ಯ ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಸಿಐಡಿ ಮೂಲಕವೇ ತನಿಖೆ ಮುಂದುವರಿಸಲು ತೀರ್ಮಾನಿಸಿದೆ.

ಇದನ್ನೂ ಓದಿ: ಕನ್ನಡಿಗರ ಅಸ್ಮಿತೆಗೆ ಕೇರಳದ ಕುತ್ತು: ಪಿಣರಾಯಿ ವಿಜಯನ್‌ಗೆ ಸಿದ್ದರಾಮಯ್ಯ ‘ಖಡಕ್’ ಎಚ್ಚರಿಕೆ!

ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಸಿಐಡಿ ತನಿಖೆಯ ಫಲಿತಾಂಶದ ಮೇಲೆ ಮುಂದಿನ ರಾಜಕೀಯ ಮತ್ತು ಕಾನೂನು ಬೆಳವಣಿಗೆಗಳು ನಿರ್ಧಾರವಾಗುವ ಸಾಧ್ಯತೆ ಇದೆ.

ಕೆಂಚಪ್ಪ ಬಡಿಗೇರ ಕಲೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮೆಚ್ಚುಗೆ

The post ವಿವಸ್ತ್ರ–ಹಲ್ಲೆ ಪ್ರಕರಣ: CID ತಂಡ ಹುಬ್ಬಳ್ಳಿಗೆ – ತನಿಖೆ ಚುರುಕು appeared first on Samyukta Karnataka.

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: NCW ಸ್ವಯಂ ಪ್ರೇರಿತ ದೂರು ದಾಖಲಿಸಿ ತೀವ್ರ ಆಕ್ಷೇಪ
ನವದೆಹಲಿ: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಕುರಿತು ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದೆ.

ಆಯೋಗದ ಪ್ರಕಟಣೆಯ ಪ್ರಕಾರ, ಪಕ್ಷದ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲಾಗಿದೆ. ಈ ಪ್ರಕರಣವು ಮಹಿಳೆಯ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಗಂಭೀರವಾದ ದಾಳಿ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಮಗನ ಸಾವಿನ ಮಧ್ಯೆಯೂ ಮಾನವೀಯತೆ: ಅನಿಲ್ ಅಗರ್ವಾಲ್ ಶೇ. 75ಕ್ಕೂ ಹೆಚ್ಚು ಆಸ್ತಿ ದಾನ ಮಾಡಲು ಶಪಥ

“ಮಹಿಳೆಯ ಘನತೆಗೆ ಧಕ್ಕೆ” – ಆಯೋಗದ ಅಧ್ಯಕ್ಷೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ರಾಹತ್ಕರ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, “ಇಂತಹ ಘಟನೆಗಳು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಲಿಂಗಾಧಾರಿತ ಹಿಂಸೆಯಿಂದ ರಕ್ಷಿಸುವ ಮೂಲಭೂತ ಹಕ್ಕುಗಳ ಉಲ್ಲಂಘನೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ಡಿಜಿಪಿಗೆ ಪತ್ರ: ಈ ಪ್ರಕರಣಕ್ಕೆ ಸಂಬಂಧಿಸಿ ಆಯೋಗವು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದು, ಕೆಳಗಿನ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿರದಿದ್ದಲ್ಲಿ ಕೂಡಲೇ ದಾಖಲಿಸಬೇಕು. ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆ ನಡೆಸಬೇಕು. ದುಷ್ಕೃತ್ಯ ನಡೆದಿರುವುದು ಸಾಬೀತಾದಲ್ಲಿ, ಸಂಬಂಧಿಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾ ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಹಾಗೂ ಕಾನೂನಿನ ಪ್ರಕಾರ ಪರಿಹಾರ ದೊರಕುವಂತೆ ಖಚಿತಪಡಿಸಬೇಕು ಎಂದು ತಿಳಿಸಿದೆ.

ಇದನ್ನೂ ಓದಿ: ಪಶ್ಚಿಮ ಘಟ್ಟದ ಧ್ವನಿ ಮೌನ: ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಐದು ದಿನಗಳಲ್ಲಿ ವರದಿ ಸಲ್ಲಿಸಲು ಸೂಚನೆ: ಪ್ರಕರಣದ ಕುರಿತು ಕೈಗೊಳ್ಳಲಾದ ಕ್ರಮಗಳ ಬಗ್ಗೆ ಐದು ದಿನಗಳೊಳಗೆ ವಿವರವಾದ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ.

ಸಾರ್ವಜನಿಕ ವಲಯದಲ್ಲಿ ಆಕ್ರೋಶ: ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳಾ ಸಂಘಟನೆಗಳು ಮತ್ತು ಹಕ್ಕು ಹೋರಾಟಗಾರರು ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ತಲ್ಲಣಿಸಿದ ಸಹ್ಯಾದ್ರಿ ಕೊಳ್ಳದ ನಡುವೆ ಸಂತ-ಜನ…!

ರಾಷ್ಟ್ರೀಯ ಮಹಿಳಾ ಆಯೋಗದ ಹಸ್ತಕ್ಷೇಪದಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

The post ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: NCW ಸ್ವಯಂ ಪ್ರೇರಿತ ದೂರು ದಾಖಲಿಸಿ ತೀವ್ರ ಆಕ್ಷೇಪ appeared first on Samyukta Karnataka.