#Jobs Archives - Samyukta Karnataka

ಅಯೋಧ್ಯೆ ರಾಮ ಮಂದಿರಕ್ಕೆ CEO ನೇಮಕ: ಅರ್ಜಿ ಆಹ್ವಾನಿಸಿದ ಟ್ರಸ್ಟ್
ರಾಮ ಮಂದಿರಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇಮಕ; ಅರ್ಜಿ ಆಹ್ವಾನಿಸಿದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ನವದೆಹಲಿ : ಅಯೋಧ್ಯೆಯ ಶ್ರೀರಾಮ ಮಂದಿರದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಹೆಜ್ಜೆ ಇಟ್ಟಿದೆ. ಶ್ರೀ ರಾಮ ಜನ್ಮಭೂಮಿ ಮಂದಿರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Chief Executive Officer – CEO) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 18, 2026 ಸಂಜೆ 4 ಗಂಟೆ ಕೊನೆಯ ದಿನಾಂಕ ಎಂದು ಟ್ರಸ್ಟ್ ಪ್ರಕಟಿಸಿದೆ. ಟ್ರಸ್ಟ್ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಸಿಇಒ ರಾಮ ಮಂದಿರದ ದೈನಂದಿನ ಆಡಳಿತ, ಭಕ್ತರ ಸೇವೆ, ಹಣಕಾಸು ನಿರ್ವಹಣೆ, ಸಿಬ್ಬಂದಿ ವ್ಯವಸ್ಥೆ ಹಾಗೂ ದೇವಸ್ಥಾನದ ಸಮಗ್ರ ಕಾರ್ಯನಿರ್ವಹಣೆಯ ಹೊಣೆಗಾರಿಕೆಯನ್ನು ವಹಿಸಲಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

ದೇವಸ್ಥಾನದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೃತ್ತಿಪರ ನಿರ್ವಹಣೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ. ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ಆಡಳಿತಾತ್ಮಕ ಅಥವಾ ವ್ಯವಸ್ಥಾಪನಾ ಅನುಭವ ಹೊಂದಿರಬೇಕು. 50 ರಿಂದ 70 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಲಾಗಿದೆ.

ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ನಿರ್ವಹಣೆಯ ಅನುಭವ ಹೊಂದಿರುವವರಿಗೆ ಆದ್ಯತೆ ನೀಡುವ ಸಾಧ್ಯತೆಯಿದೆ. ಇತ್ತೀಚೆಗೆ ರಾಮ ಮಂದಿರ ಟ್ರಸ್ಟ್‌ನ ಆಡಳಿತ ಮತ್ತು ದೇಣಿಗೆ ನಿರ್ವಹಣೆಗೆ ಸಂಬಂಧಿಸಿದಂತೆ ಕೆಲವು ವಿವಾದಗಳು ಉದ್ಭವಿಸಿದ್ದ ಹಿನ್ನೆಲೆ, ಸಂಸ್ಥೆಯ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಸಿಇಒ ಹುದ್ದೆ ಸೃಷ್ಟಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: H. D ರೇವಣ್ಣಗೆ ಮತ್ತೆ ಕಾನೂನು ಸಂಕಷ್ಟ: ಸುಪ್ರೀಂನಿಂದ ನೋಟಿಸ್

ಈ ಹುದ್ದೆ ದೇವಸ್ಥಾನದ ಆಡಳಿತದಲ್ಲಿ ಹೆಚ್ಚಿನ ಹೊಣೆಗಾರಿಕೆ, ಪಾರದರ್ಶಕತೆ ಹಾಗೂ ಪರಿಣಾಮಕಾರಿ ನಿರ್ವಹಣೆಗೆ ನೆರವಾಗಲಿದೆ ಎಂದು ಟ್ರಸ್ಟ್ ವಿಶ್ವಾಸ ವ್ಯಕ್ತಪಡಿಸಿದೆ.

ಅಯೋಧ್ಯೆಯ ರಾಮ ಮಂದಿರವು ದೇಶದ ಅತ್ಯಂತ ಮಹತ್ವದ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ನಿರ್ವಹಣೆಗೆ ವೃತ್ತಿಪರ ನಾಯಕತ್ವದ ಅಗತ್ಯ ಹೆಚ್ಚುತ್ತಿರುವುದರಿಂದ ಸಿಇಒ ನೇಮಕಾತಿಗೆ ಟ್ರಸ್ಟ್ ಮುಂದಾಗಿದೆ.

POCSO ಪ್ರಕರಣ: ವಚನಾನಂದ ಸ್ವಾಮೀಜಿಗೆ ನಿಯಮಿತ ಜಾಮೀನು

The post ಅಯೋಧ್ಯೆ ರಾಮ ಮಂದಿರಕ್ಕೆ CEO ನೇಮಕ: ಅರ್ಜಿ ಆಹ್ವಾನಿಸಿದ ಟ್ರಸ್ಟ್ appeared first on Samyukta Karnataka.

ಅಕ್ರಮ ಆರೋಪದ ಬೆನ್ನಲ್ಲೇ KPSC ಅಧ್ಯಕ್ಷ ಸಾಹುಕಾರ್‌ ಅಮಾನತು
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ಅಕ್ರಮ, ಸ್ವಜನಪಕ್ಷಪಾತ ಆರೋಪದ ಬೆನ್ನಲ್ಲೇ ರಾಜ್ಯಪಾಲರ ಮಹತ್ವದ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾನುವಾರ (ಜುಲೈ 13) ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷರ ವಿರುದ್ಧ ಗಂಭೀರ ಸ್ವರೂಪದ ಅಕ್ರಮ, ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಆದೇಶದ ನಂತರ ರಾಜ್ಯ ರಾಜಕೀಯ ಮತ್ತು ಸರ್ಕಾರಿ ಉದ್ಯೋಗಾಕಾಂಕ್ಷಿಗಳ ವಲಯದಲ್ಲಿ ಈ ಬೆಳವಣಿಗೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಆರೋಪಗಳೇನು? : ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಕೊರತೆ, ಕೆಲ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಿದ ಆರೋಪ, ಅಧಿಕಾರದ ದುರುಪಯೋಗ ಹಾಗೂ ಸ್ವಜನಪಕ್ಷಪಾತದಂತಹ ಗಂಭೀರ ದೂರುಗಳು ದಾಖಲಾಗಿವೆ ಎನ್ನಲಾಗಿದೆ. ಈ ದೂರುಗಳ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯದ ಮೇರೆಗೆ ರಾಜ್ಯಪಾಲರು ಅಮಾನತು ಆದೇಶ ಹೊರಡಿಸಿದ್ದಾರೆ.

ಕೆಪಿಎಸ್‌ಸಿ ಮೇಲೆ ಮತ್ತೊಮ್ಮೆ ಪ್ರಶ್ನೆ: ಈ ಹಿಂದೆ ಕೂಡ ಕೆಪಿಎಸ್‌ಸಿ ಹಲವು ವಿವಾದಗಳಿಗೆ ಗುರಿಯಾಗಿತ್ತು. ನೇಮಕಾತಿ ಪರೀಕ್ಷೆಗಳ ಪಾರದರ್ಶಕತೆ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬ ಸೇರಿದಂತೆ ಹಲವು ವಿಚಾರಗಳು ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದ್ದವು. ಇದೀಗ ಅಧ್ಯಕ್ಷರ ಅಮಾನತು ಪ್ರಕರಣವು ಆಯೋಗದ ವಿಶ್ವಾಸಾರ್ಹತೆಯ ಮೇಲೂ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಭ್ಯರ್ಥಿಗಳಲ್ಲಿ ಆತಂಕ : ಕೆಪಿಎಸ್‌ಸಿ ಮೂಲಕ ವಿವಿಧ ಇಲಾಖೆಗಳ ಸಾವಿರಾರು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಅಧ್ಯಕ್ಷರ ಅಮಾನತು ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಗಳ ಮೇಲೆ ಯಾವುದೇ ಪರಿಣಾಮ ಬೀಳುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಮುಂದೇನು? : ರಾಜ್ಯಪಾಲರ ಆದೇಶದ ನಂತರ ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಮುಂದಿನ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಆರೋಪಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಿದ ಬಳಿಕ ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳು ನಿರ್ಧಾರವಾಗುವ ಸಾಧ್ಯತೆ ಇದೆ.

The post ಅಕ್ರಮ ಆರೋಪದ ಬೆನ್ನಲ್ಲೇ KPSC ಅಧ್ಯಕ್ಷ ಸಾಹುಕಾರ್‌ ಅಮಾನತು appeared first on Samyukta Karnataka.

KEA: 4723 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭ
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ವಿವಿಧ ಇಲಾಖೆಗಳ ಒಟ್ಟು 4,723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಇಎ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ ಮಾಹಿತಿ ನೀಡಿದ್ದು, ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಆಡಳಿತಾಧಿಕಾರಿ (VAO), ಭೂಮಾಪಕರು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯುವಜನತೆಗೆ ಉದ್ಯೋಗಾವಕಾಶ: 572 VAO ಹುದ್ದೆಗಳ ನೇಮಕಾತಿ

ಕಲ್ಯಾಣ ಕರ್ನಾಟಕಕ್ಕೂ ಪ್ರತ್ಯೇಕ ಅಧಿಸೂಚನೆ : ಈ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ ಸೇರಿದ್ದು, ಆ ಭಾಗದ ಅಭ್ಯರ್ಥಿಗಳಿಗಾಗಿ ಪ್ರತ್ಯೇಕ ಅಧಿಸೂಚನೆಗಳನ್ನು ಪ್ರಕಟಿಸಲಾಗಿದೆ.

ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ? : ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳು, ಸರ್ವೆ ಇಲಾಖೆಯ ಭೂಮಾಪಕರ ಹುದ್ದೆಗಳು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಶಿಕ್ಷಕರ ಹುದ್ದೆಗಳು ಸೇರದಂತೆ ಕೆಲವು ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ತಮ್ಮ ಅರ್ಹತೆಗೆ ಅನುಗುಣವಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ರಾಜ್ಯ ಪೊಲೀಸ್ ಇಲಾಖೆಗೆ 107 ಹೊಸ ವಾಹನಗಳ ಬಲ ನೀಡಿದ CM

ಕೆಇಎ ಅಧಿಸೂಚನೆಯಲ್ಲಿಯೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿರುವುದರಿಂದ ಅಭ್ಯರ್ಥಿಗಳು ಅದಕ್ಕೆ ಅನುಗುಣವಾಗಿ ತಯಾರಿ ನಡೆಸುವಂತೆ ಸೂಚಿಸಲಾಗಿದೆ.

ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವನ್ನು ಗಮನದಲ್ಲಿಟ್ಟುಕೊಂಡು, ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸಿ ಪರೀಕ್ಷಾ ಶುಲ್ಕ ಪಾವತಿಸುವಂತೆ ಕೆಇಎ ಮನವಿ ಮಾಡಿದೆ.

ಇದನ್ನೂ ಓದಿ: ವಿಯೆಟ್ನಾಂನಲ್ಲಿ ಭಾರತೀಯರಿದ್ದ ಬೋಟ್ ಮುಳುಗಡೆ: 15 ಸಾವು!

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ : ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ, ಅರ್ಹತೆ, ಪರೀಕ್ಷಾ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಪಡೆಯಬಹುದು.

ರಾಜ್ಯದಲ್ಲಿ ಒಂದೇ ಬಾರಿ 4,723 ಸರ್ಕಾರಿ ಹುದ್ದೆಗಳ ನೇಮಕಾತಿ ನಡೆಯುತ್ತಿರುವುದು ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಅವಕಾಶವಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಯುವಕರಿಗೆ ಸರ್ಕಾರಿ ಸೇವೆಗೆ ಸೇರುವ ಅವಕಾಶವನ್ನು ಇದು ಒದಗಿಸಲಿದೆ.

‘ಕರಾವಳಿ’ ವಿವಾದ ಏನೇ ಇರಲಿ ಸಿನಿಮಾ ಗೆಲ್ಲಿಸಿ: ಪ್ರಜ್ವಲ್ ಮನವಿ

The post KEA: 4723 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭ appeared first on Samyukta Karnataka.

ಯುವಜನತೆಗೆ ಉದ್ಯೋಗಾವಕಾಶ: 572 VAO ಹುದ್ದೆಗಳ ನೇಮಕಾತಿ
ಕರ್ನಾಟಕದಲ್ಲಿ ಒಟ್ಟು 572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಜುಲೈ 30ರೊಳಗೆ ಕೆಇಎ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರು: ಕೌಶಲ್ಯ, ಸಾಮರ್ಥ್ಯ ಹಾಗೂ ಪ್ರತಿಭೆ ಹೊಂದಿರುವ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಿ, ಉತ್ತಮ ಭವಿಷ್ಯ ರೂಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳ ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ ಗ್ರೂಪ್-ಸಿ ವೃಂದದ ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಪೊಲೀಸ್ ಇಲಾಖೆಗೆ 107 ಹೊಸ ವಾಹನಗಳ ಬಲ ನೀಡಿದ CM

ಒಟ್ಟು 572 ಹುದ್ದೆಗಳ ಭರ್ತಿ : ರಾಜ್ಯದಲ್ಲಿ ಒಟ್ಟು 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 67 ಹುದ್ದೆಗಳು ಮೀಸಲಾಗಿವೆ. ಈ ನೇಮಕಾತಿಯ ಮೂಲಕ ಗ್ರಾಮ ಮಟ್ಟದಲ್ಲಿ ಆಡಳಿತ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಯಾರು ಅರ್ಜಿ ಸಲ್ಲಿಸಬಹುದು? : ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಈ ಬಾರಿ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಅನ್ವಯವಾಗುವಂತೆ ಐದು ವರ್ಷಗಳ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: Pocso ಪ್ರಕರಣದ ಆರೋಪಿಯ ಭೀಕರ ಪ್ರತೀಕಾರ: 6 ಜೀವ ಬಲಿ

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. https://cetonline.karnataka.gov.in/kea/ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜುಲೈ 30ರ ವರೆಗೆ ಕಾಲಾವಕಾಶ ಇರಲಿದೆ. ಅಭ್ಯರ್ಥಿಗಳು ಕೇವಲ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಒಂದಕ್ಕಿಂತ ಹೆಚ್ಚು ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಯುವಕರಿಗೆ ಸುವರ್ಣಾವಕಾಶ : ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಸಾವಿರಾರು ಯುವಕರಿಗೆ ಇದು ಒಂದು ಸುವರ್ಣಾವಕಾಶವಾಗಿದೆ ಎಂದು ಡಾ.ಜಿ. ಪರಮೇಶ್ವರ ಹೇಳಿದ್ದಾರೆ. “ಅಗತ್ಯ ತಯಾರಿ ನಡೆಸಿ, ನಿಮ್ಮ ಕನಸನ್ನು ನನಸಾಗಿಸಿಕೊಳ್ಳುವತ್ತ ದಾಪುಗಾಲಿಡಿ. ಯುವಜನತೆ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಅವರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ‘ಕರಾವಳಿ’ ವಿವಾದ ಏನೇ ಇರಲಿ ಸಿನಿಮಾ ಗೆಲ್ಲಿಸಿ: ಪ್ರಜ್ವಲ್ ಮನವಿ

ರಾಜ್ಯ ಸರ್ಕಾರದ ಈ ನೇಮಕಾತಿ ಪ್ರಕ್ರಿಯೆಯಿಂದ ಗ್ರಾಮೀಣ ಆಡಳಿತ ವ್ಯವಸ್ಥೆಗೆ ಹೊಸ ಚೈತನ್ಯ ಸಿಗಲಿದ್ದು, ನಿರುದ್ಯೋಗಿ ಯುವಕರಿಗೆ ಉದ್ಯೋಗದ ಅವಕಾಶಗಳು ಹೆಚ್ಚಾಗಲಿವೆ.

ವಿಯೆಟ್ನಾಂನಲ್ಲಿ ಭಾರತೀಯರಿದ್ದ ಬೋಟ್ ಮುಳುಗಡೆ: 15 ಸಾವು!

The post ಯುವಜನತೆಗೆ ಉದ್ಯೋಗಾವಕಾಶ: 572 VAO ಹುದ್ದೆಗಳ ನೇಮಕಾತಿ appeared first on Samyukta Karnataka.

Police ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ 1,600 ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 22 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 6ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯಾಗಿದೆ. ಒಟ್ಟು 1,600 ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 22ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಒಟ್ಟು 1,600 ಹುದ್ದೆಗಳ ಪೈಕಿ ಮಿಕ್ಕುಳಿದ ವೃಂದದಲ್ಲಿ 1,421 ಹುದ್ದೆಗಳು ಹಾಗೂ ಸ್ಥಳೀಯ ವೃಂದದಲ್ಲಿ 179 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮಾಜಿ ಪ್ರೇಮಿಯ ಕಾಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 6ರಂದು ನಡೆಸಲು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳಿಗೆ ಮತ್ತೊಂದು ಪ್ರಮುಖ ಮಾಹಿತಿ ಎಂದರೆ, ಲಿಖಿತ ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative Marking) ವ್ಯವಸ್ಥೆ ಜಾರಿಯಲ್ಲಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸುವಾಗ ಎಚ್ಚರಿಕೆ ವಹಿಸಬೇಕಾಗಿದೆ.

ನೇಮಕಾತಿ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಪರೀಕ್ಷಾ ಪದ್ದತಿ ಹಾಗೂ ಇತರೆ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೆಇಎ ತಿಳಿಸಿದೆ. ರಾಜ್ಯದ ಸಾವಿರಾರು ಯುವಕರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ಸಾಕಷ್ಟು ಕುತೂಹಲ ಮೂಡಿಸಿದೆ.

ಅರ್ಜಿ ಸಲ್ಲಿಸಲು ಅಧಿಕೃತ ಲಿಂಕ್ ಬಳಸಿ: https://cetonline.karnataka.gov.in/KEACAR_DAR_2026/Account/Login

ಮಾಜಿ ಪ್ರೇಮಿಯ ಕಾಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

The post Police ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ appeared first on Samyukta Karnataka.

ಯುವ ಪೀಳಿಗೆಗೆ ವರದಾನವಾಗಿರುವ ‘ರೋಜ್‌ಗಾರ್ ಮೇಳ’
ಯುವಕರಿಗೆ ಕೇಂದ್ರ ಸರ್ಕಾರದ ಭರ್ಜರಿ ಅವಕಾಶ: ಹುಬ್ಬಳ್ಳಿಯಲ್ಲಿ ನೇಮಕಾತಿ ಪತ್ರ ವಿತರಣೆ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ 19ನೇ ಆವೃತ್ತಿಯ ಅಂಗವಾಗಿ ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ಜೋಶಿ, ಉತ್ತರ ಕರ್ನಾಟಕ ಭಾಗದ ಯುವಕ-ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.

ದೇಶಾದ್ಯಂತ 51 ಸಾವಿರಕ್ಕೂ ಹೆಚ್ಚು ನೇಮಕಾತಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ರೋಜ್‌ಗಾರ್ ಮೇಳ ಉಪಕ್ರಮದಡಿ ದೇಶದಾದ್ಯಂತ 47ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ 51,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಭಾಷಣ : ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳವನ್ನು ಉದ್ಘಾಟಿಸಿ ದೇಶದ ಯುವಜನರನ್ನು ಉದ್ದೇಶಿಸಿ ಮಾತನಾಡಿದರು. ಯುವಕರು ದೇಶದ ಅಭಿವೃದ್ಧಿಯ ಪ್ರಮುಖ ಶಕ್ತಿಯಾಗಿದ್ದು, 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನಿ ಹೇಳಿದರು.

ಹುಬ್ಬಳ್ಳಿಯಲ್ಲಿ 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ : ಈ ಬಾರಿಯ ರೋಜ್‌ಗಾರ್ ಮೇಳವನ್ನು ರೈಲ್ವೆ ಇಲಾಖೆ ಆಯೋಜಿಸಿತ್ತು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಒಟ್ಟು 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು.

ವಿವಿಧ ಇಲಾಖೆಗಳ ನೇಮಕಾತಿ ವಿವರ : ಹುಬ್ಬಳ್ಳಿಯಲ್ಲಿ ನೇಮಕಾತಿ ಪತ್ರ ಪಡೆದ ಅಭ್ಯರ್ಥಿಗಳ ವಿಭಾಗವಾರು ಭಾರತೀಯ ರೈಲ್ವೆ – 26, – ಇಂಡಿಯಾ ಪೋಸ್ಟ್ – 17, – ನೌಕರರ ರಾಜ್ಯ ವಿಮಾ ನಿಗಮ (ESIC) – 06, – ಬ್ಯಾಂಕ್ ಆಫ್ ಬರೋಡಾ – 37, – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – 10, – ಕೆನರಾ ಬ್ಯಾಂಕ್ – 08, – ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರ್ಗಿ- 46

ಇದನ್ನೂ ಓದಿ: SBI ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಇಲ್ಲ – ಮುಷ್ಕರ ಮುಂದೂಡಿಕೆ

ಯುವಕರ ಭವಿಷ್ಯಕ್ಕೆ ಬಲ : ಈ ಸಂದರ್ಭದಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, “ರೋಜ್‌ಗಾರ್ ಮೇಳ ಯುವ ಪೀಳಿಗೆಗೆ ವರದಾನವಾಗಿದ್ದು, ಸುಸ್ಥಿರ ಹಾಗೂ ಸದೃಢ ಭವಿಷ್ಯ ನಿರ್ಮಾಣಕ್ಕೆ ನೆರವಾಗುತ್ತಿದೆ” ಎಂದು ಹೇಳಿದರು. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ಸರ್ಕಾರಿ ಉದ್ಯೋಗಗಳ ಮೂಲಕ ದೇಶಸೇವೆಗೆ ಅವಕಾಶ ದೊರೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರೈಲ್ವೆ ಜನರಲ್ ಮ್ಯಾನೇಜರ್ ಪಿ ಅನಂತ, ಡಿವಿಜನಲ್ ರೈಲ್ವೆ ಮ್ಯಾನೇಜರ್ ಬೇಲಾ ಮೀನಾ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

Online ಬುಕಿಂಗ್: ಹೆಚ್ಚುವರಿ ರದ್ದತಿ ಶುಲ್ಕ? CCPAಗೆ ತನಿಖೆ ಆದೇಶ

The post ಯುವ ಪೀಳಿಗೆಗೆ ವರದಾನವಾಗಿರುವ ‘ರೋಜ್‌ಗಾರ್ ಮೇಳ’ appeared first on Samyukta Karnataka.

51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
18ನೇ ರೋಜ್‌ಗಾರ್ ಮೇಳ: 12 ಲಕ್ಷಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ಅವಕಾಶ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ ಉಪಕ್ರಮದಡಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವರ್ಚುವಲ್ ಮೂಲಕ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.

ಈ ಮೂಲಕ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಮತ್ತು ಯುವ ಸಬಲೀಕರಣಕ್ಕೆ ಆದ್ಯತೆ ನೀಡುವ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಪ್ರಧಾನಿ ಪುನರುಚ್ಚರಿಸಿದರು.

ಇದನ್ನೂ ಓದಿ: SBI ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಇಲ್ಲ – ಮುಷ್ಕರ ಮುಂದೂಡಿಕೆ

18 ಆವೃತ್ತಿಗಳಲ್ಲಿ 12 ಲಕ್ಷಕ್ಕೂ ಹೆಚ್ಚು ನೇಮಕಾತಿ : ಕಾರ್ಯಕ್ರಮ ಆರಂಭವಾದ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಇದುವರೆಗೆ 18 ಆವೃತ್ತಿಗಳ ರೋಜ್‌ಗಾರ್ ಮೇಳಗಳನ್ನು ಆಯೋಜಿಸಲಾಗಿದ್ದು, ಸುಮಾರು 12 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಯುವಕರು ದೇಶದ ಅಭಿವೃದ್ಧಿಯ ಪಾಲುದಾರರು” : ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸರ್ಕಾರಿ ಸೇವೆಗೆ ಸೇರುತ್ತಿರುವ ಯುವಜನತೆಗೆ ಅಭಿನಂದನೆ ಸಲ್ಲಿಸಿದರು. “ಇಂದು 51 ಸಾವಿರಕ್ಕೂ ಹೆಚ್ಚು ಯುವಕರು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ಪಡೆದಿದ್ದಾರೆ. ಅವರು ದೇಶದ ಅಭಿವೃದ್ಧಿ ಪ್ರಯಾಣದಲ್ಲಿ ಪ್ರಮುಖ ಪಾಲುದಾರರಾಗುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಶಿಕ್ಷಣ ಸಚಿವರ ರಾಜೀನಾಮೆ ಒತ್ತಾಯಿಸಿ ‘ಕಾಕ್ರೋಚ್’ Digital ಚಳವಳಿ

ಹಲವು ಇಲಾಖೆಗಳಲ್ಲಿನ ನೇಮಕಾತಿ : ಈ ನೇಮಕಾತಿಯಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ರೈಲ್ವೆ, ಬ್ಯಾಂಕಿಂಗ್, ರಕ್ಷಣಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು ಸೇವೆಗಳು, ಗೃಹ ವ್ಯವಹಾರಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಗಳಂತಹ ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಭಾರತದ ದೀರ್ಘಕಾಲೀನ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ಇವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಪ್ರಧಾನಿ ಹೇಳಿದರು.

‘ವಿಕಸಿತ ಭಾರತ’ ಗುರಿಗೆ ಯುವ ಶಕ್ತಿ : “ಮುಂಬರುವ ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ಪ್ರಮುಖ ಪಾತ್ರ ವಹಿಸಲಿದ್ದೀರಿ” ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಭಾರತದ ಯುವಜನತೆ ಮತ್ತು ತಾಂತ್ರಿಕ ಸಾಮರ್ಥ್ಯಕ್ಕೆ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಹೆಚ್ಚುತ್ತಿದೆ ಎಂದು ಅವರು ಹೇಳಿದರು. “ಇಂದು ಜಗತ್ತು ಭಾರತದ ಬೆಳವಣಿಗೆಯ ಕಥೆಯಲ್ಲಿ ಭಾಗವಹಿಸಲು ಉತ್ಸುಕವಾಗಿದೆ” ಎಂದು ಪ್ರಧಾನಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: KEA ಮಹತ್ವದ ಸೂಚನೆ: CBSE, CISCE ವಿದ್ಯಾರ್ಥಿಗಳಿಗೆ ಅಂಕ ದೃಢೀಕರಣ ಅವಕಾಶ

ದೇಶಾದ್ಯಂತ 47 ಕೇಂದ್ರಗಳಲ್ಲಿ ಕಾರ್ಯಕ್ರಮ : ಈ ನೇಮಕಾತಿ ಅಭಿಯಾನವನ್ನು ಭಾರತದೆಲ್ಲೆಡೆ 47 ಸ್ಥಳಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾಗಿತ್ತು. ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಡಿಜಿಟಲ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ರೋಜ್‌ಗಾರ್ ಮೇಳವು ದೇಶದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಪ್ರಮುಖ ಉಪಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ರಾಜ್ಯದ ಹಸಿರು ಸಂರಕ್ಷಣೆಗೆ ಹೊಸ ಸಂಕಲ್ಪ ಘೋಷಿಸಿದ ಸರ್ಕಾರ

The post 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ appeared first on Samyukta Karnataka.

IIT ಧಾರವಾಡದಲ್ಲಿ ಇಂಟರ್ನ್‌ಶಿಪ್ ಅವಕಾಶ
ಧಾರವಾಡ: ಭಾರತೀಯ ತಂತ್ರಜ್ಞಾನ ಸಂಸ್ಥೆ (IIT ಧಾರವಾಡ) ತನ್ನ ವೃತ್ತಿ ಅಭಿವೃದ್ಧಿ ಕೋಶದಲ್ಲಿ (Career Development Cell) ಇಂಟರ್ನ್‌ಶಿಪ್ ಅವಕಾಶಗಳನ್ನು ಘೋಷಿಸಿದೆ. ವೃತ್ತಿ ಮಾರ್ಗದರ್ಶನ, ಸಂಸ್ಥಾ ಕಾರ್ಯಾಚರಣೆ ಮತ್ತು ಪ್ಲೇಸ್ಮೆಂಟ್ ಚಟುವಟಿಕೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಬಿ.ಎಸ್‌ಸಿ, ಬಿಸಿಎ, ಬಿ.ಟೆಕ್, ಎಂಸಿಎ, ಎಂ.ಎಸ್‌ಸಿ ಅಥವಾ ಸಂಬಂಧಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹20,000 ಗೌರವಧನ ನೀಡಲಾಗುತ್ತದೆ.

ಇಂಟರ್ನ್‌ಶಿಪ್ ಅವಧಿ 6 ತಿಂಗಳಾಗಿದ್ದು, ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಣೆ ಸಾಧ್ಯತೆ ಇದೆ. ಆಯ್ಕೆ ಪ್ರಕ್ರಿಯೆ ನೇರ ಸಂದರ್ಶನದ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳ ಸಂವಹನ ಕೌಶಲ್ಯ, ಸಂಘಟನಾ ಸಾಮರ್ಥ್ಯ ಮತ್ತು ವೃತ್ತಿ ಸೇವೆಗಳ ಮೇಲಿನ ಆಸಕ್ತಿಯನ್ನು ಪರಿಗಣಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಐಐಟಿ ಧಾರವಾಡದ ಅಧಿಕೃತ ವೆಬ್‌ಸೈಟ್ ಅಥವಾ ಪ್ರಕಟಣೆಯಲ್ಲಿ ನೀಡಿದ್ದು ಐಐಟಿ ಧಾರವಾಡದ Career Development Cell (CDC) ಅಧಿಕೃತ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15, 2026 ಆಗಿದೆ.

ಈ ಇಂಟರ್ನ್‌ಶಿಪ್ ಮೂಲಕ ವಿದ್ಯಾರ್ಥಿಗಳು ಹಾಗೂ ಹೊಸ ಪದವೀಧರರು ಉನ್ನತ ಶಿಕ್ಷಣ ಸಂಸ್ಥೆಯ ಒಳಾಂಗಣ ಕಾರ್ಯವೈಖರಿ, ಪ್ಲೇಸ್ಮೆಂಟ್ ಪ್ರಕ್ರಿಯೆಗಳು ಮತ್ತು ವಿದ್ಯಾರ್ಥಿ ಸೇವೆಗಳ ಕುರಿತು ನೈಜ ಅನುಭವ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಭವಿಷ್ಯದ ಉದ್ಯೋಗಾವಕಾಶಗಳಿಗೆ ಉತ್ತಮ ವೇದಿಕೆ ಸಿಗಲಿದೆ.

ಅಭ್ಯರ್ಥಿಗಳಿಗೆ ಗೊಂದಲ: KEA ಕೆಲವು ಪರೀಕ್ಷೆ ರದ್ದು, ಕೆಲವು ಮುಂದುವರಿಕೆ

The post IIT ಧಾರವಾಡದಲ್ಲಿ ಇಂಟರ್ನ್‌ಶಿಪ್ ಅವಕಾಶ appeared first on Samyukta Karnataka.

ಅಭ್ಯರ್ಥಿಗಳಿಗೆ ಗೊಂದಲ: KEA ಕೆಲವು ಪರೀಕ್ಷೆ ರದ್ದು, ಕೆಲವು ಮುಂದುವರಿಕೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿವಿಧ ಇಲಾಖೆಗಳ ನೇಮಕಾತಿಗಾಗಿ ಮೇ 9 ಮತ್ತು 10 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಗಳನ್ನು ರದ್ದುಪಡಿಸಿದೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ (ಐಎಎಸ್) ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಈ ಪರೀಕ್ಷೆಗಳು ಆರ್ ಜಿ ಯು ಹೆಚ್ ಎಸ್, ಬೆಂಗಳೂರು ಜಲಮಂಡಲಿ, ಕೃಷಿ ಮಾರಾಟ ಇಲಾಖೆ ಹಾಗೂ ಕೆಎಸ್ಎಸ್ಐಡಿಸಿ ಸೇರಿದಂತೆ ವಿವಿಧ ಸಂಸ್ಥೆಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ್ದಾಗಿತ್ತು.

ಪರೀಕ್ಷೆ ರದ್ದುಗೊಳಿಸಲು ಕಾರಣವಾಗಿ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (Internal Reservation) ಅಳವಡಿಕೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಅಧಿಸೂಚನೆ ಹೊರಡಿಸಲು ಸರ್ಕಾರ ಮುಂದಾಗಿದ್ದು, ಹಳೆಯ ಪರೀಕ್ಷಾ ವೇಳಾಪಟ್ಟಿಯನ್ನು ರದ್ದುಪಡಿಸಲಾಗಿದೆ.

ಎಲ್ಲಾ ಪರೀಕ್ಷೆಗಳು ರದ್ದಾಗಿಲ್ಲ: ಆದರೆ, ಎಲ್ಲಾ ಪರೀಕ್ಷೆಗಳು ರದ್ದಾಗಿಲ್ಲ. ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು ಹಾಗೂ ಸಹಾಯಕ ಎಂಜಿನಿಯರ್ (ವಿದ್ಯುತ್) ಹುದ್ದೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ಈಗಾಗಲೇ ಏಪ್ರಿಲ್ 26 ಮತ್ತು 27ರಂದು ಪತ್ರಿಕೆ-2 (ನಿರ್ದಿಷ್ಟ ವಿಷಯ) ಪರೀಕ್ಷೆ ನಡೆಸಲಾಗಿದೆ. ಅಂತಹ ಅಭ್ಯರ್ಥಿಗಳಿಗೆ ಮೇ 9 ಮತ್ತು 10 ರಂದು ಸಾಮಾನ್ಯ ಜ್ಞಾನ (ಪತ್ರಿಕೆ-1) ಪರೀಕ್ಷೆ ನಡೆಯಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ನಿಂದ ಪ್ರವೇಶ ಪತ್ರ (Hall Ticket) ಡೌನ್‌ಲೋಡ್ ಮಾಡಿಕೊಳ್ಳಬೇಕಾಗಿದೆ. ಪರೀಕ್ಷಾ ಕೇಂದ್ರಗಳು ಮತ್ತು ಸಮಯದ ವಿವರಗಳನ್ನು ಸಹ ವೆಬ್‌ಸೈಟ್‌ನಲ್ಲಿ ನೀಡಲಾಗುತ್ತದೆ.

ಈ ಬೆಳವಣಿಗೆಗಳಿಂದಾಗಿ ಹಲವು ಅಭ್ಯರ್ಥಿಗಳಿಗೆ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ, ಕೆಇಎ ಸ್ಪಷ್ಟನೆ ನೀಡಿದ್ದು, ಸಂಬಂಧಿತ ಹುದ್ದೆಗಳಿಗಾಗಿ ಶೀಘ್ರದಲ್ಲೇ ಹೊಸ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

₹23,437 ಕೋಟಿ ರೈಲು ಯೋಜನೆಗಳಿಗೆ ಕೇಂದ್ರ ಅನುಮೋದನೆ: ಕರ್ನಾಟಕಕ್ಕೂ ಲಾಭ

The post ಅಭ್ಯರ್ಥಿಗಳಿಗೆ ಗೊಂದಲ: KEA ಕೆಲವು ಪರೀಕ್ಷೆ ರದ್ದು, ಕೆಲವು ಮುಂದುವರಿಕೆ appeared first on Samyukta Karnataka.

SSC ಉದ್ಯೋಗಾವಕಾಶ: ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC ಹೊಸ ನೇಮಕಾತಿ ಪ್ರಕಟಣೆ: ಅನುವಾದಕರಿಗೆ ಭರ್ಜರಿ ಅವಕಾಶ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಖಾಲಿ ಇರುವ ಗ್ರೂಪ್ ‘ಬಿ’ ಗೆಜೆಟೆಡ್ ಅಲ್ಲದ ಹುದ್ದೆಗಳ ಭರ್ತಿಗೆ ಸಿಬ್ಬಂದಿ ನೇಮಕಾತಿ ಆಯೋಗ Staff Selection Commission (SSC) ‘ಕಂಬೈನ್ಡ್ ಹಿಂದಿ ಟ್ರಾನ್ಸ್ಲೇಟರ್ ಪರೀಕ್ಷೆ–2026’ಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ–ಕೇರಳ ವಲಯದ ಬೆಂಗಳೂರು ಪ್ರಾದೇಶಿಕ ಕಚೇರಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಸ್ತುತ ಒಟ್ಟು 84 ತಾತ್ಕಾಲಿಕ ಹುದ್ದೆಗಳು ಲಭ್ಯವಿವೆ.

ಈ ನೇಮಕಾತಿ ಪ್ರಕ್ರಿಯೆಯಡಿ ಜೂನಿಯರ್ ಹಿಂದಿ ಅನುವಾದಕ, ಕಿರಿಯ ಅನುವಾದಕ ಅಧಿಕಾರಿ, ಹಿರಿಯ ಹಿಂದಿ ಅನುವಾದಕ ಹಾಗೂ ಸಬ್ ಇನ್ಸ್‌ಪೆಕ್ಟರ್ (ಹಿಂದಿ ಅನುವಾದಕ) ಹುದ್ದೆಗಳು ಭರ್ತಿಯಾಗಲಿವೆ. ಆಸಕ್ತ ಅಭ್ಯರ್ಥಿಗಳು Staff Selection Commission ಅಧಿಕೃತ ವೆಬ್‌ಸೈಟ್ (ssc.gov.in) ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 14, 2026 (ರಾತ್ರಿ 11:00 ಗಂಟೆಯವರೆಗೆ) ಆಗಿದ್ದು, ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಮೇ 19 ಮತ್ತು 20 ರಂದು ಅವಕಾಶ ನೀಡಲಾಗಿದೆ. ಪರೀಕ್ಷೆಯು ಆಗಸ್ಟ್ ಅಥವಾ ಸೆಪ್ಟೆಂಬರ್ 2026ರಲ್ಲಿ ಕಂಪ್ಯೂಟರ್ ಆಧಾರಿತವಾಗಿ ನಡೆಯುವ ನಿರೀಕ್ಷೆಯಿದೆ.

ಆಯ್ಕೆ ಪ್ರಕ್ರಿಯೆ ಹೇಗೆ? : ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದೆ. ಪೇಪರ್-1: ಜನರಲ್ ಹಿಂದಿ ಮತ್ತು ಜನರಲ್ ಇಂಗ್ಲಿಷ್ ವಿಷಯಗಳ ಮೇಲೆ ತಲಾ 100 ಅಂಕಗಳ ವಸ್ತುನಿಷ್ಠ ಪ್ರಶ್ನೆಗಳು ಹಾಗೂ ಪೇಪರ್-2: ಅನುವಾದ ಮತ್ತು ಪ್ರಬಂಧ ಬರವಣಿಗೆಯ ವಿವರಣಾತ್ಮಕ ಪರೀಕ್ಷೆ (200 ಅಂಕಗಳು)

ಅಭ್ಯರ್ಥಿಗಳ ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆಯನ್ನು ಆಗಸ್ಟ್ 1, 2026ರ ಅನ್ವಯ ಪರಿಗಣಿಸಲಾಗುತ್ತದೆ.

ಅರ್ಜಿ ಶುಲ್ಕ ಮತ್ತು ವಿನಾಯಿತಿಗಳು : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಮಹಿಳೆಯರು, ಪ.ಜಾ/ಪ.ಪಂ, ಅಂಗವಿಕಲರು ಹಾಗೂ ಮಾಜಿ ಸೈನಿಕರಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ವೇತನ ಮತ್ತು ಸೌಲಭ್ಯಗಳು : ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಯ ಮಟ್ಟದ ಅನುಗುಣವಾಗಿ ಮಾಸಿಕ ವೇತನವು ಸುಮಾರು ₹35,393 (ಪೇ ಲೆವೆಲ್-1) ರಿಂದ ₹88,645 (ಪೇ ಲೆವೆಲ್-7) ವರೆಗೆ ಇರಲಿದೆ. ಜೊತೆಗೆ ಕೇಂದ್ರ ಸರ್ಕಾರದ ಇತರೆ ಭತ್ಯೆಗಳು ಮತ್ತು ಸೌಲಭ್ಯಗಳೂ ಲಭ್ಯವಾಗುತ್ತವೆ.

ಹೆಚ್ಚಿನ ಮಾಹಿತಿ: ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು Staff Selection Commission ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಬೆಂಗಳೂರು ಪ್ರಾದೇಶಿಕ ಕಚೇರಿಯ ಸಹಾಯವಾಣಿ ಸಂಖ್ಯೆ 080-25502520 ಅನ್ನು ಸಂಪರ್ಕಿಸಬಹುದು.

ಹೊಸ CM ಯಾರು? ಮೇ 9ಕ್ಕೆ ಪ್ರಮಾಣ ವಚನ ಕುತೂಹಲ

The post SSC ಉದ್ಯೋಗಾವಕಾಶ: ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ appeared first on Samyukta Karnataka.