#KalaBhairaveshwara Archives - Samyukta Karnataka

ನರೇಂದ್ರ ಮೋದಿ ಸ್ವಾಗತಕ್ಕೆ ಸಜ್ಜಾದ ನಾಗಮಂಗಲ; ಆದಿಚುಂಚನಗಿರಿ ಮಠದಲ್ಲಿ ಪ್ರಧಾನಿ ಕಾರ್ಯಕ್ರಮಗಳೇನು?
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಹಬ್ಬದ ಸಡಗರ ಮನೆಮಾಡಿದೆ. ನಾಳೆ, ಅಂದರೆ ಏಪ್ರಿಲ್ 15ರ ಬುಧವಾರದಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶ್ರೀಕ್ಷೇತ್ರಕ್ಕೆ ಆಗಮಿಸಿ, ದಿವಂಗತ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಿಸಲಾಗಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಮಹತ್ವದ ಕಾರ್ಯಕ್ರಮದ ಕುರಿತು ನಾಗಮಂಗಲದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಈಗಾಗಲೇ ಮಂದಿರದ ಪ್ರಾಣಪ್ರತಿಷ್ಠಾಪನೆ ಹಾಗೂ ಪೂಜಾ ವಿಧಿವಿಧಾನಗಳು ಯಶಸ್ವಿಯಾಗಿ ನೆರವೇರಿವೆ ಎಂದು ತಿಳಿಸಿದರು.

ಪ್ರಧಾನಿಯವರ ಭೇಟಿಯ ಕಾರ್ಯಸೂಚಿಯಂತೆ, ಬುಧವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಅವರು, ಆದಿಚುಂಚನಗಿರಿಯ ತಪೋವನದಲ್ಲಿ ವಿಶೇಷವಾಗಿ ನಿರ್ಮಿಸಲಾದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ನೇರವಾಗಿ ಗುರು ಗೋರಖನಾಥರು ತಪಸ್ಸು ಮಾಡಿದ್ದ ಪವಿತ್ರ ಜ್ವಾಲಾಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ತದನಂತರ ಶ್ರೀ ಕಾಲಭೈರವೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅಂತಿಮವಾಗಿ ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವ ಕುರಿತು ಪ್ರಧಾನಿಯವರೊಡನೆ ಚರ್ಚೆ ನಡೆಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ಇದೊಂದು ಸಂಪೂರ್ಣ ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾಗಿರುವುದರಿಂದ ಯಾವುದೇ ರೀತಿಯ ಬೇಡಿಕೆಗಳನ್ನು ಪ್ರಧಾನಿಗಳ ಮುಂದೆ ಇಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಪ್ರಧಾನಿಯವರ ಭದ್ರತೆಯ ದೃಷ್ಟಿಯಿಂದ ಬುಧವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ಮಠದ ಆವರಣ ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ. ಪ್ರಧಾನಿಯವರು ಕಾರ್ಯಕ್ರಮ ಮುಗಿಸಿ ನಿರ್ಗಮಿಸಿದ ನಂತರ, ಮಧ್ಯಾಹ್ನ 1 ಗಂಟೆಯ ಬಳಿಕ ಎಂದಿನಂತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.

The post ನರೇಂದ್ರ ಮೋದಿ ಸ್ವಾಗತಕ್ಕೆ ಸಜ್ಜಾದ ನಾಗಮಂಗಲ; ಆದಿಚುಂಚನಗಿರಿ ಮಠದಲ್ಲಿ ಪ್ರಧಾನಿ ಕಾರ್ಯಕ್ರಮಗಳೇನು? appeared first on Samyukta Karnataka.