Kalyana Karnataka Archives - Samyukta Karnataka

KEA ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಕಲ್ಯಾಣ ಕರ್ನಾಟಕ ವೃಂದದ ವಿವಿಧ ನಿಗಮ/ಮಂಡಳಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ ನೀಡಿದ್ದು, ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಬೆಂಗಳೂರು ಜಲಮಂಡಳಿ (BWSSB), ಕರ್ನಾಟಕ ರಾಜ್ಯ ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಕಾರ್ಪೊರೇಷನ್ (KSSIDC), ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಸೇರಿದಂತೆ ವಿವಿಧ ಸಂಸ್ಥೆಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ.

ಏಪ್ರಿಲ್ 26ಕ್ಕೆ ಮೊದಲ ಹಂತದ ಪರೀಕ್ಷೆ: KEA ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, KSSIDC ಮತ್ತು BWSSB ಸಂಸ್ಥೆಗಳಲ್ಲಿನ ವ್ಯವಸ್ಥಾಪಕರು (Managers), ಸಹಾಯಕ ವ್ಯವಸ್ಥಾಪಕರು (Assistant Managers) ಸಹಾಯಕ ಎಂಜಿನಿಯರ್ (Electrical), ಹುದ್ದೆಗಳಿಗೆ ಏಪ್ರಿಲ್ 26ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಮೇ 10ರಂದು ಎರಡನೇ ಹಂತದ ಪರೀಕ್ಷೆ: ಮುಂದಿನ ಹಂತದಲ್ಲಿ, RGUHS, KSSIDC, BWSSB, ಹಾಗೂ ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಸಾಮಾನ್ಯ ಜ್ಞಾನ (General Knowledge) ಮತ್ತು ನಿರ್ದಿಷ್ಟ ವಿಷಯಗಳ ಪ್ರಶ್ನಾಪತ್ರಿಕೆಗಳೊಂದಿಗೆ ಮೇ 10ರಂದು ಪರೀಕ್ಷೆ ನಡೆಸಲಾಗುತ್ತದೆ.

ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು: KEA ಕಾರ್ಯನಿರ್ವಾಹಕ ನಿರ್ದೇಶಕ ಹೆ. ಪ್ರಸನ್ನ ನೀಡಿರುವ ಸೂಚನೆಗಳ ಪ್ರಕಾರ ಪರೀಕ್ಷಾ ಕೇಂದ್ರಗಳಲ್ಲಿ ಮುಖ ಚಹರೆ ಗುರುತಿಸುವ ತಂತ್ರಜ್ಞಾನ (Face Recognition) ಬಳಸಿ ಪರಿಶೀಲನೆ ನಡೆಯಲಿದೆ. ಆದ್ದರಿಂದ ಅಭ್ಯರ್ಥಿಗಳು ಕನಿಷ್ಠ 2 ಗಂಟೆಗಳ ಮೊದಲು ಕೇಂದ್ರಕ್ಕೆ ಹಾಜರಾಗಬೇಕು. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative Marking) ಇರುತ್ತದೆ. ಉತ್ತರಿಸದೇ ಇರುವ ಪ್ರಶ್ನೆಗಳಿಗೆ ಕೊನೆಯ ಬೆಲ್ ನಂತರ ಹೆಚ್ಚುವರಿ 5 ನಿಮಿಷ ನೀಡಲಾಗುತ್ತದೆ. ಯಾವುದೇ ಆಯ್ಕೆಯನ್ನು ಗುರುತಿಸದಿದ್ದರೆ ಪ್ರತಿ ಪ್ರಶ್ನೆಗೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು KEA ಸ್ಪಷ್ಟಪಡಿಸಿದೆ.

ಈ ವೇಳಾಪಟ್ಟಿ ಪ್ರಕಟವಾದ ಹಿನ್ನೆಲೆಯಲ್ಲಿ, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳು ಈ ನೇಮಕಾತಿಯನ್ನು ಮಹತ್ವದ ಅವಕಾಶವಾಗಿ ಪರಿಗಣಿಸಿದ್ದಾರೆ.

KEA ಪ್ರಕಟಿಸಿರುವ ಹೊಸ ನಿಯಮಗಳು ಮತ್ತು ತಾಂತ್ರಿಕ ಕ್ರಮಗಳು ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಕಟ್ಟುನಿಟ್ಟಾಗಿಸಲು ಸಹಾಯ ಮಾಡಲಿವೆ.

ಬಾಗಲಕೋಟೆ ಉಪಚುನಾವಣೆ LIVE: ಕ್ಷಣಕ್ಷಣದ ಅಪ್‌ಡೇಟ್

The post KEA ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ appeared first on Samyukta Karnataka.

ಮುಂದಿನ ಹತ್ತು ವರ್ಷದ ಒಳಗೆ ಕಲ್ಯಾಣನಾಡಲ್ಲಿ ಪ್ರಾದೇಶಿಕ ಸಮಾನತೆ
ಅಭಿವೃದ್ಧಿ ಕೇವಲ ಘೋಷಣೆಗೆ ಸೀಮಿತವಾಗದೆ, ಜನರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಫಲಿತಾಂಶ ನೀಡಬೇಕು

ಸಂ.ಕ. ಸಮಾಚಾರ ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಪ್ರಾದೇಶಿಕ ಅಸಮಾನತೆಯನ್ನು ಸಂಪೂರ್ಣವಾಗಿ ನಿವಾರಿಸಿ, ಮುಂದಿನ ಹತ್ತು ವರ್ಷಗಳಲ್ಲಿ ಸಮಾನ ಅಭಿವೃದ್ಧಿಯನ್ನು ಸಾಧಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದ ಯಡ್ರಾಮಿ ಪಟ್ಟಣದಲ್ಲಿ ಸೋಮವಾರ 17 ಪ್ರಜಾಸೌಧಗಳ ಹಾಗೂ ಸುಮಾರು 300 ಕೆಪಿಎಸ್ ಶಾಲೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇದನ್ನೂ ಓದಿ:  VB-G RAM G ಕಾಯ್ದೆ ಹಿಂಪಡೆಯಲು ಪ್ರಧಾನಿ‌ ಮೋದಿಗೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರೊ. ಗೋವಿಂದರಾವ್ ಅವರ ನೇತೃತ್ವದ ಸಮಿತಿ ಸಿದ್ಧಪಡಿಸಿರುವ ವರದಿ ಈ ತಿಂಗಳಲ್ಲೇ ಅಥವಾ ಮುಂದಿನ ತಿಂಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ. ವರದಿ ಬಂದ ತಕ್ಷಣ ಅದರ ಶಿಫಾರಸುಗಳನ್ನು ಪರಿಶೀಲಿಸಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಪ್ರಾದೇಶಿಕ ಅಸಮಾನತೆಯನ್ನು ಕ್ರಮೇಣ ನಿವಾರಿಸಿ, ಮುಂದಿನ ಹತ್ತು ವರ್ಷಗಳಲ್ಲಿ ಸಮಾನ ಅಭಿವೃದ್ಧಿ ಸಾಧಿಸುವುದು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ದಿಕ್ಕಿನಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳದೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಇದನ್ನೂ ಓದಿ:  ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಐದು ನಗರ ಪಾಲಿಕೆಗಳ ಚುನಾವಣೆಗೆ ದಿನಾಂಕ ಫಿಕ್ಸ್‌

KKRDB ಅನುದಾನ ಪರಿಣಾಮಕಾರಿಯಾಗಿ ಬಳಕೆ ಅಗತ್ಯ: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ, ಕೆ ಕೆ ಆರ್ ಡಿ ಬಿ (ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ) ಅಸ್ತಿತ್ವಕ್ಕೆ ಬಂದ ಬಳಿಕ ನಮ್ಮ ಸರ್ಕಾರವೇ ನಿರಂತರವಾಗಿ ಅನುದಾನ ಒದಗಿಸಿದೆ ಎಂದು ಹೇಳಿದರು.

2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 13,000 ಕೋಟಿ ರೂಪಾಯಿ ಅನುದಾನವನ್ನು ಕೆಕೆಆರ್ ಡಿಬಿಗೆ ನೀಡಲಾಗಿದೆ. ಈ ಹಣವನ್ನು ಸಮರ್ಪಕವಾಗಿ ಮತ್ತು ಸಂಪೂರ್ಣವಾಗಿ ಅಭಿವೃದ್ಧಿ ಕಾರ್ಯಗಳಿಗೆ ಬಳಸಬೇಕು ಎಂದು ಸೂಚಿಸಿದರು. ಈ ವರ್ಷವೇ ಕನಿಷ್ಠ 4,000 ಕೋಟಿ ರೂಪಾಯಿ ಅನುದಾನವನ್ನು ಪರಿಣಾಮಕಾರಿಯಾಗಿ ಖರ್ಚು ಮಾಡಿದಲ್ಲಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ:  2020–21ರ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಪ್ರಕಟ

ಅಭಿವೃದ್ಧಿ ಕೇವಲ ಘೋಷಣೆಗೆ ಸೀಮಿತವಾಗದೆ, ಜನರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ನೆಲಮಟ್ಟದಲ್ಲಿ ಫಲಿತಾಂಶ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

The post ಮುಂದಿನ ಹತ್ತು ವರ್ಷದ ಒಳಗೆ ಕಲ್ಯಾಣನಾಡಲ್ಲಿ ಪ್ರಾದೇಶಿಕ ಸಮಾನತೆ appeared first on Samyukta Karnataka.

ರಾಮ್ ಜಿ ಯೋಜನೆ ತಂದು ಬಡ ಜನರನ್ನು ಗುಲಾಮಗಿರಿಗೆ ತಳ್ಳುವುದು ಮೋದಿ ಹುನ್ನಾರ : ಖರ್ಗೆ ಆರೋಪ
ಸಂ.ಕ.ಸಮಾಚಾರ ಕಲಬುರಗಿ‌ : ಮೋದಿ ಸರ್ಕಾರ ಮನ್‌ರೇಗಾ ಯೋಜನೆಯನ್ನು ರದ್ದುಗೊಳಿಸಿ ಸದ್ಯ ಜಿ ರಾಮ್ ಜಿ ಯೋಜನೆ ತಂದು ಬಡ ಜನರನ್ನು ಗುಲಾಮಗಿರಿಗೆ ತಳ್ಳುತ್ತಿದ್ದಾರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸತ್ ಅದಿವೇಶನದಲ್ಲಿ ಅನೇಕ ವಿಷಯಗಳ ಕುರಿತು ಚರ್ಚೆ ಮಾಡಲಾಯಿತು, ಅನೇಕ ಬೀಲ್‌ಗಳನ್ನು ಪಾಸ್ ಮಾಡಲಾಯಿತು. ಆದರೆ, ಮನ್‌ರೇಗಾ ಬಿಲ್ ಬಗ್ಗೆ ಇನ್ನು ಬಹಳ ಚರ್ಚೆಯಾಗಬೇಕಿತ್ತು. ಆದರೆ, ನಮಗೆ ಅವರು ಅವಕಾಶ ನೀಡಿಲ್ಲವೆಂದು ಅಸಮಾಧಾನ ಹೊರ ಹಾಕಿದರು.

ಇದನ್ನೂ ಓದಿ: ಇಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೊ ಅಭಿಯಾನ: 62.40 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಮನ್‌ರೇಗಾ ಯೋಜನೆ ತೆಗೆದು ಬೇರೆ ಹೆಸರಿನಲ್ಲಿ ಯೋಜನೆ ತರುತ್ತಿದ್ದಾರೆ. ಜಿ ರಾಮ್‌ಜಿ ಬಿಲ್ ತರಾತುರಿಯಲ್ಲಿ ತಂದಿದ್ದಾರೆ. ಇದರಿಂದ ದೇಶದ ಬಡ ಜನರಿಗೆ ತೊಂದರೆಯಾಗುತ್ತಿದೆ. ಮೊದಲು ಎಲ್ಲಾ ಸಮಯದಲ್ಲಿ ಕೂಲಿ ಸಿಗುತ್ತಿತ್ತು. ಆದರೆ ಆ ಅವಕಾಶವನ್ನು ಇವಾಗ ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಮೋದಿಯವರು ರೈಟ್ ಟು ವಕ್೯ ತೆಗೆದಿದ್ದಾರೆ. ಇದರ ವಿರುದ್ಧ ನಾವು ದೇಶಾದ್ಯಂತ ಹೋರಾಟ ಮಾಡುತ್ತೇವೆ ಎಂದರು.

ಬಡಜನರಿಗೆ ಇದೀಗ 60 ದಿನ ಕೂಲಿ ಕೆಲಸ ಇಲ್ಲ ಎಂದಿದ್ದಾರೆ. ಆ ದಿನಗಳಲ್ಲಿ ಬಡ ಜನ ಏನು ಮಾಡಬೇಕು. ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಆಗುತ್ತಿದೆ. ನರೇಗಾ ಇದ್ದಿದ್ದಕ್ಕೆ ಕರೋನಾ ಕಾಲದಲ್ಲಿ ಬಡ ಜನರ ಬದುಕಿದ್ದರು. ನಾವು ಬಡ ಜನರಿಗೆ ಕೊಟ್ಟ ಗ್ಯಾರೆಂಟಿ ಯೋಜನೆಗಳನ್ನು ತೆಗೆಯುತ್ತಿದ್ದಾರೆ. ಮನ್ ರೇಗಾ ಯೋಜನೆಗೆ ಮಹಾತ್ಮಗಾಂದಿ ಹೆಸರಿತ್ತು. ಮಹಾತ್ಮಾಗಾಂದಿ ಫೋಟೋ ಇಟ್ಟು ಪೂಜೆ ಮಾಡುತ್ತಾರೆ ಅವರ ಹೆಸರಿದೆ ಎಂಬ ಕಾರಣಕ್ಕೆ ಅವರಿಗೆ ಅದರಿಂದ ಏನ್ ತೊಂದರೆಯಾಗಿತ್ತಿತ್ತು ಗೊತ್ತಿಲ್ಲ ಜಿ ರಾಮ್ ಜಿ ಇಟ್ಟು ಏನ್ ಸಾಧನೆ ಮಾಡುತ್ತಿದ್ದಾರೆ. ಮೋದಿಯವರು ಕ್ಷುಲಕ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್ ಕ್ರಾಂತಿಯ ಆರಂಭ: ನಿಮ್ಮೂರಲ್ಲೇ ಕನಸು ನನಸಾಗಿಸಿಕೊಳ್ಳಿ

ಮೋದಿ ಸರ್ಕಾರ ಮೊದಲು ಯುಪಿಎ ಸರ್ಕಾರದ ಯೋಜನೆಗಳನ್ನು ವಿರೋಧ ಮಾಡುತ್ತದೆ. ಮತ್ತೆ ಅದೇ ಯೋಜನೆಗಳನ್ನು ಹೆಸರು ಬದಲು ಮಾಡಿ ಜಾರಿಗೆ ತರುತ್ತದೆ. ಕೇಂದ್ರ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ. ಕೇಂದ್ರ ಸರ್ಕಾರ ಸಂವಿಧಾನ ವಿರೋದಿ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟ್ರಂಪ್‌ಗೆ ಹೆದರಿ ಅಟಾಮಿಕ್ ಎನರ್ಜಿ ಬಿಲ್ ತಂದಿದ್ದಾರೆ. ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದ್ದಾರೆ ಖರ್ಗೆ ಅವರು, ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.

ರಾಜ್ಯ ನಾಯಕರೇ ಬಗೆ ಹರಿಸಿಕೊಳ್ಳುತ್ತಾರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗೊಂದಲ ಸೃಷ್ಟಿ ಹೈಕಮಾಂಡ್ ಮಾಡಿಲ್ಲ. ರಾಜ್ಯದ ನಾಯಕರು ಈ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅವರೇ ಬಗೆಹರಿಸಿಕೊಳ್ಳುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇದನ್ನೂ ಓದಿ: “ಯುದ್ಧಕ್ಕೆ ನಾವು ಸಿದ್ಧ” – ಹುಬ್ಬಳ್ಳಿ ವೇದಿಕೆಯಿಂದ ವಿರೋಧಿಗಳಿಗೆ ಕಿಚ್ಚ ಸುದೀಪ್ ಎಚ್ಚರಿಕೆ

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳಿದಿದ್ದಲ್ಲ ಎಂದು ಮಾರ್ಮಿಕವಾಗಿ ಹೇಳಿದ ಅವರು, ಯಾರು ನನ್ನಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಹೇಳುವುದು ಮತ್ತು ನಾನೇ ಪಕ್ಷ ಕಟ್ಟಿದ್ದೆನೆಂದು ಹೇಳಬಾರದು ಎಂದು ಕಿವಿಮಾತು ಹೇಳಿದ ಅವರು, ಕಾರ್ಯಕರ್ತರೇ ಪಕ್ಷವನ್ನು ಕಟ್ಟಿದ್ದಾರೆ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತದೆ ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದರು.

ರಾಜ್ಯದಲ್ಲಿನ ನಾಯಕತ್ವದ ಬದಲಾವಣೆಯ ಗೊಂದಲ ವಿಚಾರವಾಗಿ ಚಾಟಿ ಬೀಸಿದ ಮಲ್ಲಿಕಾರ್ಜುನ ಖರ್ಗೆ ಅವರು ಡಿಸಿಎಂ ಡಿ.ಕೆ. ಶಿವುಕುಮಾರ ಅವರು 23ರಂದು ದೆಹಲಿ ಭೇಟಿ ನೀಡಲಿದ್ದಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಂಗೆ ಅದರ ಬಗ್ಗೆ ಗೊತ್ತಿಲ್ಲ ಎಂದು ಖಾರವಾಗಿ ಹೇಳಿದರು.

ಇನ್ನು ರಾಜ್ಯ ಕಾಂಗ್ರೆಸ್ ಗೊಂದಲ ಬಗೆಹರಿಸುವಂತೆ ಸುದರ್ಶನ ಅವರು ಬರೆದ ಪತ್ರದ ವಿಚಾರವಾಗಿ ಮಾತನಾಡಿದ ಖರ್ಗೆ ಅವರು, ನನ್ನ ಬಳಿ ಯಾವ ಪತ್ರವೂ ಬಂದಿಲ್ಲ. ಪತ್ರ ಕೈ ಸೇರಿದ ಮೇಲೆ ನೋಡುತ್ತೇನೆ, ಅವರು ಯಾವ ಉದ್ದೇಶದಿಂದ ಪತ್ರ ಬರೆದಿದ್ದಾರೆ, ಯಾವ ಸಲಹೆ ನೀಡಿದ್ದಾರೆಂದು ನೋಡುತ್ತೇನೆಂದು ಹೇಳಿದರು.

The post ರಾಮ್ ಜಿ ಯೋಜನೆ ತಂದು ಬಡ ಜನರನ್ನು ಗುಲಾಮಗಿರಿಗೆ ತಳ್ಳುವುದು ಮೋದಿ ಹುನ್ನಾರ : ಖರ್ಗೆ ಆರೋಪ appeared first on Samyukta Karnataka.

ಬಸ್-ಜೀಪ್ ಮಧ್ಯೆ ಅಪಘಾತ: ಪತಿ-ಪತ್ನಿ ಸೇರಿ ಮೂವರು ಸಾವು
ಕಲಬುರಗಿ: ಕೆಕೆಆರ್‌ಟಿಸಿ ಬಸ್ ಮತ್ತು ಕಮಾಂಡರ್ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಜೀಪ್‌ನಲ್ಲಿದ್ದ ಪತಿ-ಪತ್ನಿ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಹಾರುತಿ ಹಡಗಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಅಪಘಾತದಲ್ಲಿ ಅಫಜಲಪುರ ತಾಲೂಕಿನ ತೆಲ್ಲೋಣಿ ಗ್ರಾಮ ಮೂಲದ ನಗರದ ಬಿದ್ದಾಪುರ ಕಾಲೋನಿ ನಿವಾಸಿಗಳಾದ ಚಂದ್ರಕಾಂತ ಚಿತ್ತಾಪುರ (82) ಮತ್ತು ಸುಲೋಚನಾ ಚಿತ್ತಾಪುರ (73) ಹಾಗೂ ಚಾಲಕ ಮಿಟ್ಟೆಸಾಬ್ ರಸೂಲ್ ಪಟೇಲ್ (35) ಮೃತಪಟ್ಟಿದ್ದು, ಬಸ್‌ನಲ್ಲಿದ್ದ ಮೂವರಿಗೆ ಗಾಯಗಳಾಗಿವೆ.

ಚಂದ್ರಕಾಂತ ಅವರು ತೆಲ್ಲೋಣಿ ಗ್ರಾಮ ಮೂಲದವರಾಗಿದ್ದು, ಸದ್ಯ ಬಿದ್ದಾಪುರ ಕಾಲೋನಿಯಲ್ಲಿ ವಾಸವಾಗಿದ್ದಾರೆ. ತಮ್ಮ ಊರಿಂದ ಪತ್ನಿಯೊಂದಿಗೆ ಖಾಸಗಿ ಜೀಪ್‌ನಲ್ಲಿ ಕಲಬುರಗಿಗೆ ಬರುತ್ತಿದ್ದಾಗ ಕಲಬುರಗಿಯಿಂದ ಅಫಜಲಪುರಕ್ಕೆ ಹೋಗುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಚಾಲಕ ಸೇರಿ ಪತಿ-ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಸ್‌ನಲ್ಲಿದ್ದ ಗುರುದೇವಿ, ವಿಜಯಲಕ್ಷ್ಮೀ ಮತ್ತು ಚಂಚಲಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಮಾಂಡರ್ ಜೀಪ್ ಚಾಲಕನ ನಿರ್ಲಕ್ಷ್ಮವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಬಸ್-ಜೀಪ್ ಮಧ್ಯೆ ಅಪಘಾತ: ಪತಿ-ಪತ್ನಿ ಸೇರಿ ಮೂವರು ಸಾವು appeared first on Samyukta Karnataka.

ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ಧ: ಸಚಿವ ಖರ್ಗೆ
ಸಂ.ಕ. ಸಮಾಚಾರ ಕಲಬುರಗಿ: ಜಿಲ್ಲೆಯನ್ನು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ ( Local Economy Accelerator Programme – LEAP) ಅಡಿಯಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ತಂತ್ರಜ್ಞಾನ, ಎಲೆಕ್ಟ್ರಾನಿಕ್, ಉದ್ಯಮಶೀಲತೆ ಕ್ಷೇತ್ರಗಳ ಅಭಿವೃದ್ದಿ ಪಡಿಸುವ ಮೂಲಕ ರಾಜ್ಯದ ಜಿಡಿಪಿಗೆ ಹೆಚ್ಚಿನ‌ ಕೊಡುಗೆ ನೀಡಲು ಪ್ರಯತ್ನಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದ ಜಿಡಿಪಿಗೆ ಬೆಂಗಳೂರು 40% ಕೊಡುಗೆ ನೀಡಿದ್ದರೆ, ದಕ್ಷಿಣ‌ಕನ್ನಡ- 4.5%, ಬೆಂಗಳೂರು ಗ್ರಾಮೀಣ- 1% ಹಾಗೂ ಕಲಬುರಗಿ 1.9% ಕೊಡುಗೆ ನೀಡುತ್ತಿವೆ. ನವೋದ್ಯಮ ಸ್ಥಾಪನೆ, ಕೈಗಾರಿಕೆಗಳ ಅಭಿವೃದ್ದಿ, ಉದ್ಯೋಗ ಸೃಷ್ಟಿ,‌ ಮಾನವ ಸಂಪನ್ಮೂನ ಬೆಳವಣಿಗೆ, ಕೌಶಲ್ಯ ಅಭಿವೃದ್ದಿ, ಆವಿಷ್ಕಾರ ಕೇಂದ್ರ, ಕೃಷಿ ವಲಯದ‌ ಸ್ಥಿರತೆ, ಪ್ರವಾಸೋದ್ಯಮದ ಬಲಪಡಿಸುವ ಗುರಿಯೊಂದಿಗೆ ನವಕಲಬುರಗಿಯನ್ನು ಅಭಿವೃದ್ದಿಪಡಿಸಲಾಗುವುದು.‌ ಈ ಹಿನ್ನೆಲೆಯಲ್ಲಿ ನೀಲಿ ನಕ್ಷೆಯನ್ನು ತಯಾರಿಸಲಾಗಿದ್ದು ಮುಂದಿನ ಎರಡು ವಾರದಲ್ಲಿ ಸಾರ್ವಜನಿಕರೊಂದಿಗೆ ವಿವರಗಳನ್ನು ಹಂಚಿಕೊಳ್ಳಲಾಗುವುದು. ಮುಂದಿನ ಒಂದು ವರ್ಷದೊಳಗೆ ಈ ಎಲ್ಲಾ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಕಲಬುರಗಿ ಯ ಜಿಡಿಪಿಯನ್ನು 1.9% ನಿಂದ 2.15% ಗೆ ಎತ್ತರಿಸಲು ಪ್ರಯತ್ನಿಸಲಾಗುವುದು ಎಂದರು.

” ಬಿಯಾಂಡ್ ಬೆಂಗಳೂರು” ಕಾರ್ಯಕ್ರಮ ಅಡಿಯಲ್ಲಿ ಬೆಂಗಳೂರು ಹೊರತುಪಡಿಸಿ ಕಲಬುರಗಿಯಲ್ಲಿ ನವೋದ್ಯಮದ‌ ಉತ್ತೇಜನಕ್ಕೆ ಕ್ರಮವಹಿಸಲಾಗುತ್ತಿದೆ.

ಯುವ ಸಬಲೀಕರಣಕ್ಕಾಗಿ ಕೇವಲ ಉದ್ದೋಗ ಹಾಗೂ ಶಿಕ್ಷಣ ಕೊಡುವುದು ಅಷ್ಟೇ ಅಲ್ಲದೇ ಬೃಹತ್ ಸ್ಪೋರ್ಟ್ಸ್ ಸಿಟಿ ಸ್ಥಾಪನೆಗೆ ಅಡಿಗಲ್ಲು ನೆರವೇರಿಸಲಾಗುವುದು. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು‌ ಕಲಬುರಗಿ ಯನ್ನು ಸ್ಮಾರ್ಟ್ ಸಿಟಿಯ ಮಾದರಿಯಲ್ಲಿ ಅಭಿವೃದ್ದಿ ಪಡಿಸಲಾಗುವುದು.

ಸ್ಥಳೀಯ ಆರ್ಥಿಕ ವೇಗವರ್ಧಕ‌ ಕಾರ್ಯಕ್ರಮ ( Local Economy Accelerator Programme) ಅಡಿಯಲ್ಲಿ ರೂ 1000 ಕೋಟಿ ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನ‌ ಸಮೂಹಗಳಲ್ಲಿ ನಾವಿನ್ಯತೆ, ಉದ್ಯಮಶೀಲತೆ ಮತ್ತು ಉದ್ಯೋಗ ಸೃಷ್ಠಿಸುವ 5 ವರ್ಷಗಳ ಪರಿವರ್ತಕ, ಮೂಲ ಸೌಕರ್ಯ ಅಂತರ ಹಣಕಾಸಿನ ಪ್ರವೇಶ ಮತ್ತು ಪರಿಸರ ವ್ಯವಸ್ಥೆಯ ಅಭಿವೃದ್ದಿಯನ್ನು ಪಸರಿಸುವ ಮೂಲಕ ಲೀಪ್ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಹಾಗೂ ಬೆಂಗಳೂರು ಆಚೆಗೆ ವೈವಿಧ್ಯಮಯ ತಾಂತ್ರಿಕ ಬೆಳವಣಿಗೆ ಯಲ್ಲಿ ಕರ್ನಾಟಕವನ್ನು ಮುಂದೆ ತರಲು ಪ್ರಯತ್ನಿಸಲಾಗುತ್ತಿದೆ.

ನಾಗಾವಿ ಇನ್ಸಟ್ಯೂಟ್ ಆಫ್ ಕಾಂಪಿಟೇಟಿವ್ ಎಕ್ಸಾಮಿನೆಷನ್ ( NICE) ಅಡಿಯಲ್ಲಿ ಕಲಬುರಗಿ ಯಲ್ಲಿ ತರಬೇತಿ‌ ಕೇಂದ್ರ ಸ್ಥಾಪಿಸಲಾಗುತ್ತಿದ್ದು ಸುಮಾರು 2000 ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.

ಐತಿಹಾಸಿಕ ಮತ್ತು ಪ್ರಾಚೀನ ಸ್ಮಾರಕಗಳನ್ನು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಸಂರಕ್ಷಣೆಗೆ ರೂ 313.17 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

ಕನ್ನಡದ ಪ್ರಾಚೀನ ವಿಶ್ವವಿದ್ಯಾನಿಲಯವೆಂದು ಪ್ರಖ್ಯಾತಿಯನ್ನು ಹೊಂದಿರುವ ಚಿತ್ತಾಪುರ ತಾಲೂಕಿನ ನಾಗಾವಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳನ್ನು ರೂ 68 ಕೋಟಿ ರೂ. ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಸೇಡಂ ತಾಲೂಕಿನ ಮಳಖೇಡ್ ಕೋಟೆಯನ್ನು ರೂ 6 ಕೋಟಿ ವೆಚ್ಚದಲ್ಲಿ ಮತ್ತು ಕಾಳಗಿಯ ಕಾಳಗಿಯ ಶ್ರೀ ಸೂರ್ಯನಾರಾಯಣ ದೇವಾಲಯ 4.17 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುವುದು.

ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಐತಿಹಾಸಿಕ ಬೌದ್ದ ನೆಲೆ ಮತ್ತು ಪ್ರಾಚ್ಯ ಕುರುಹುಗಳ ಸಂರಕ್ಷಣೆ ಜೊತೆಗೆ ಪ್ರವಾಸಿಗರಿಗೆ ಮಾಹಿತಿ ಒದಗಿಸುವ 2 ಕೋಟಿ ರೂ. ವೆಚ್ಚದ ಮಾಹಿತಿ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ.

ಸರ್ಕಾರದ ‘ಬಿಯಾಂಡ್ ಬೆಂಗಳೂರು’ ದರ್ಶನಾತ್ಮಕ ಮಿಷನ್ ಅಡಿಯಲ್ಲಿ ಕಲಬುರಗಿ ನಗರದಲ್ಲಿ ಅತ್ಯುತ್ತಮ ಗುಣಮಟ್ಟದ ಇನ್ನೊವೇಷನ್ ಸೆಂಟರ್ ಸ್ಥಾಪಿಸಲಾಗುತ್ತಿದೆ.

ಕಲಬುರಗಿ ಇನ್‌ಕ್ಯುಬೇಷನ್ ಕೇಂದ್ರವು ನಾವೀನ್ಯತೆ ಮತ್ತು ಉದ್ಯಮಶೀಲತೆಯ ದಾರಿದೀಪವಾಗಿದ್ದು, ಅತ್ಯಾಧುನಿಕ ಮೂಲಸೌಕರ್ಯ ಮತ್ತು ಉದ್ಯಮ-ಸಮನ್ವಯ ಮಾರ್ಗದರ್ಶನವನ್ನು ನೀಡುತ್ತದೆ. 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್ ಅಪ್‌ ಗಳನ್ನು ಪೋಷಿಸುವುದು, ಕನಿಷ್ಠ 1,000 ನೇರ ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು ಕಲ್ಯಾಣ ಕರ್ನಾಟಕವನ್ನು ಡಿಜಿಟಲ್ ತಂತ್ರಜ್ಞಾನ, ಕೃಷಿ ತಂತ್ರಜ್ಞಾನ, ಗ್ರಾಮೀಣ ನಾವೀನ್ಯತೆ ಮತ್ತು ಸುಸ್ಥಿರತೆಗೆ ಪ್ರಮುಖ ಕೇಂದ್ರವಾಗಿ ಇರಿಸುವ ಗುರಿ ಹೊಂದಲಾಗಿದೆ.

ಕಲಬುರಗಿಯ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶ 2ನೇ ಹಂತದಲ್ಲಿ Trade Infrastructure For Export Scheme (TIES) ಯಡಿ ರೂ 16.80 ಕೋಟಿ ವೆಚ್ಚದಲ್ಲಿ ಪ್ಲಗ್ ಮತ್ತು ಪ್ಲೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಉದ್ಯಮವನ್ನು ಶೀಘ್ರವಾಗಿ ಸ್ಥಾಪಿಸಲು ಉದ್ದೇಶಿಸಿರುವ ಉದ್ಯಮಿದಾರರಿಗೆ ಸಿದ್ದವಿರುವ ಮೂಲಸೌಕರ್ಯ ಅವರಿಗೆ ಸಿಗಲಿದೆ

ಕಲಬುರಗಿಯಲ್ಲಿ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶದ 3ನೇ ಹಂತದ ಒಟ್ಟು 595.6 ಎಕರೆ ವಿಸ್ತೀರ್ಣ ಪೈಕಿ 36.89 ಎಕರೆಯಲ್ಲಿ ವಿದ್ಯುನ್ಮಾನ ಉತ್ಪನ್ನಗಳ ತಯಾರಿಕಾ ಕೈಗಾರಿಕೆಗಳು (Electronic Manufacturing Industries), 48.80 ಎಕರೆಯಲ್ಲಿ ರಸಾಯನಿಕ ಮತ್ತು ಅನೀಲ ಕೈಗಾರಿಕೆಗಳು (Chemical & Gas Industries), 6.50 (Plug & Play Building), 5.51 ಎಕರೆಯಲ್ಲಿ ಆಹಾರ ಉದ್ಯಾನ (Food Park), 5.24 ಎಕರೆಯಲ್ಲಿ ಸುಸ್ಥಿರ ವಿದ್ಯುನ್ಮಾನ ಉದ್ಯಾನ (Sustainable Electronic Park) ವನ್ನು ಸ್ಥಾಪಿಸಲಾಗುತ್ತಿದೆ.

ಕಲಬುರಗಿಯ ಕಪನೂರ ಕೈಗಾರಿಕಾ ಪ್ರದೇಶದ 3ನೇ ಹಂತದಲ್ಲಿನ 20 ಎಕರೆ ಜಾಗದಲ್ಲಿ ಆಟೋ ಮೊಬೈಲ್ ವಾಹನಗಳ ದುರಸ್ತಿ ಮತ್ತು ಸಂಬಂಧಪಟ್ಟ ಎಲ್ಲಾ ವೃತ್ತಿಗಳ ಸುಮಾರು 400 ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಒಂದು ಸೂರಿನ ಅಡಿ ಸೂಕ್ತ ಸ್ಥಳಾವಕಾಶ ಕಲ್ಪಿಸುವ ಉದ್ದೇಶದಿಂದ “AUTO & GENERAL ENGINEERING CLUSTER” ಸ್ಥಾಪಿಸಲಾಗುತ್ತಿದೆ.

ಕೆ.ಕೆ.ಆರ್.ಡಿ.ಬಿ ಮೆಗಾ-ಮ್ಯಾಕ್ರೋ ಅನುದಾನದಡಿಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ 9 ಕೃಷಿ ಯಂತ್ರಧಾರೆ ಕೇಂದ್ರ ಸ್ಥಾಪಿಸಲಾಗಿದೆ. ಇದಲ್ಲದೆ ಕಮಲಾಪೂರ, ಸೇಡಂ, ಅಫಜಲಪೂರ ಹಾಗೂ ಚಿತ್ತಾಪೂರನಲ್ಲಿ ಡೋನ್ ಸಿಂಪಡಣೆ ಕೇಂದ್ರ ಸ್ಥಾಪಿಸಿದೆ. ಅಫಜಲಪೂರ ಮತ್ತು ಚಿತ್ತಾಪೂರ ತಾಲೂಕಿನಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಸಿರಿಧಾನ್ಯ ಸಂಸ್ಕರಣ ಕೇಂದ್ರ ಸ್ಥಾಪಿಸಲಾಗುತ್ತಿದೆ.

ಚಿತ್ತಾಪೂರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶೀಥಲೀಕರಣ ಘಟಕ ಮತ್ತು ಕಲಬುರಗಿ ಜಿಲ್ಲೆಯಾದ್ಯಂತ 7.59 ಕೋಟಿ ರೂ. ವೆಚ್ಚದಲ್ಲಿ 7 ಸೂಕ್ಷ್ಮ ಜಲಾನಯನ ಸಂಸ್ಕರಣ ಯೋಜನೆಗಳು ಅನುಷ್ಠಾನಗೊಳಿಸಲಾಗುತ್ತಿದೆ.

ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಏಕೀಕರಣದ ಅಗತ್ಯವಿರುವುದರಿಂದ ಕಲಬುರಗಿಯಲ್ಲಿ ಅಗ್ನಿ-ಟೆಕ್ ವೇಗವರ್ಧಕ (Agri-Tech Accelerator) ವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

Local Economy Accelerator Programme ಈಗಾಗಲೇ ಮೈಸೂರು ಹಾಗೂ ಮಂಗಳೂರಿನಲ್ಲಿ ಘೋಷಣೆ ಮಾಡಲಾಗಿದೆ. ಈಗ ಕಲಬುರಗಿಯಲ್ಲಿ ಘೋಷಣೆ ಮಾಡಲಾಗಿದೆ. ಉದ್ಯಮಶೀಲತೆ ಅಭಿವೃದ್ದಿ, ಉದ್ಯೋಗ ಸೃಷ್ಠಿ, ಮೂಲ ಉದ್ದೇಶ ಹೊಂದಿರುವ ಹಿನ್ನೆಲೆಯಲ್ಲಿ ಕಲಬುರಗಿ ಯನ್ನು ಅಭಿವೃದ್ದಿಪಡಿಸಲಾಗುವುದು.

ಉದ್ಯಮಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಕರು ವ್ಯಕ್ತಿ ತ್ವ ವಿಕಸನಕ್ಕಾಗಿ ಭಾಷ ಲ್ಯಾಬ್ ಸ್ಥಾಪನೆ ಮಾಡಲಾಗುವುದು. ಇದಕ್ಕೆ‌ ಕಲಬುರಗಿ ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರ ಮುಂದಾಳತ್ವದಲ್ಲಿ ನಡೆಯಲಿದೆ ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 3, 24, 777 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾಳಾಗಿದ್ದು ಇದುವರೆಗೆ ಒಟ್ಟು 4,17,596 ರೈತರು ತಮ್ಮ ಹೆಸರುಗಳು ಡಾಟಾ‌ದಲ್ಲಿ ಎಂಟ್ರಿಯಾಗಿದೆ. ಇದರಲ್ಲಿ 4,15,996 ರೈತರು ವಿವರಗಳು ಸ್ವೀಕೃತಗೊಂಡಿದ್ದು, 1,148 ತಿರಸ್ಕಾರಗೊಂಡಿವೆ. ಉಳಿದಂತೆ 1,600 ರೈತರ ವಿವರಗಳು ಡಾಟಾದಲ್ಲಿ ಎಂಟ್ರಿಯಾಗಬೇಕಿದೆ. NDRF ಹಾಗೂ SDRF ನಿಯಮಗಳ ಅಡಿಯಲ್ಲಿ ಮೊದಲ ಕಂತಿನ ಬೆಳಹಾನಿ ಪರಿಹಾರ ಮುಂದಿನ ವಾರದಲ್ಲಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಲಿದೆ ಎಂದು ವಿವರಿಸಿದರು.

ಕನ್ನಡ ನಾಡಿಗೆ, ಭಾಷೆಗೆ ತಮ್ಮ ಕೊಡುಗೆ ನೀಡಿದ ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳ ಹಾಗೂ ಭಾರತ ರತ್ನ ಪಡೆದ ಮೂವರು ಮಹನೀಯರ ಹುಟ್ಟೂರಿನ‌ ಅಭಿವೃದ್ದಿಗಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯವತಿಯಿಂದ ತಲಾ‌ ಒಂದು ಕೋಟಿ ಅನುದಾನ ಬಿಡಗಡೆ ಮಾಡಲಾಗುವುದು. ಕರ್ನಾಟಕ ರಾಜ್ಯೋತ್ಸವದ ದಿನದಂದು ಕನ್ನಡಕ್ಕಾಗಿ ಶ್ರಮಿಸಿದ ಈ ಮಹಿನೀಯರ ಹುಟ್ಟೂರಿನ ಅಭಿವೃದ್ದಿಗೆ ಇಲಾಖೆ ಶ್ರಮಿಸಲಿದೆ ಎಂದು ಘೋಷಿಸಲು ಹರ್ಷವಾಗುತ್ತಿದೆ ಎಂದರು.

ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತೀಮಾ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಜಗದೇವ್ ಗುತ್ತೇದಾರಗ, ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಹರವಾಳ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಶರಣಪ್ಪ ಢಗೆ, ಸಿಇಓ ಭಂವರ್ ಸಿಂಗ್ ಮೀನಾ, ಕಾರ್ಪೋರೇಷನ್ ಕಮೀಷನರ್ ಅವಿನಾಶ್ ಶಿಂಧೆ ಸೇರಿದಂತೆ ಹಲವರಿದ್ದರು.

The post ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ಧ: ಸಚಿವ ಖರ್ಗೆ appeared first on Samyukta Karnataka.

ಕಲಬುರಗಿ: ಕೃಷಿ ಸಚಿವರಿಂದ ಬೆಳೆ ಹಾನಿ ಪರಿಶೀಲನೆ
ಕಲಬುರಗಿ: ಕೃಷಿ‌ ಸಚಿವ‌ ಎನ್.ಚೆಲುವರಾಯಸ್ವಾಮಿ ಮಂಗಳವಾರ  ತಾಲೂಕಿನ ಸಾವಳಗಿ ಕ್ರಾಸ್ ಹಾಗೂ ಆಳಂದ ತಾಲೂಕಿನ ಕಡಗಂಚಿ ಬಳಿ ಇತ್ತೀಚಿನ‌ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಬೆಳೆ ಹಾನಿ ಪ್ರದೇಶ ವೀಕ್ಷಿಸಿದರು.

ಸಾವಳಗಿ ಕ್ರಾಸ್ ಬಳಿ ಸರ್ವೇ ನಂ.92/1 ರಲ್ಲಿನ ನಾಲ್ಕು ಎಕರೆಯಲ್ಲಿ ಸೋಮಶೇಖರ ಹಣಮಂತರಾವ ಬೆಳೆದ ತೊಗರಿ ಬೆಳೆ ಹಾನಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎನ್.ಚೆಲುವರಾಯಸ್ವಾಮಿ, ಕಳೆದ ಬಾರಿ ಸಹ ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ಕಾರಣಕ್ಕೆ ಸುಮಾರು 650 ಕೋಟಿ ರೂ. ಪರಿಹಾರ ಘೋಷಿಸಲಾಗಿತ್ತು. ಈ ವರ್ಷ ಸಹ ಮತ್ತೆ ಮಳೆಯಿಂದ ಬೆಳೆ ಹಾನಿಯಾಗಿದ್ದು, ಬೆಳೆ‌ ವಿಮೆ‌ ಪರಿಹಾರದ ಜೊತೆಗೆ ಸರ್ಕಾರದಿಂದ ಪರಿಹಾರ ಬಿಡುಗಡೆ ಕುರಿತು ಸಿ.ಎಂ.‌ಘೋಷಣೆ‌ ಮಾಡಲಿದ್ದಾರೆ ಎಂದರು.

ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ವಿಜಯಪುರ ಜಿಲ್ಲೆಯಲ್ಲಿನ ಹೆಚ್ಚು ಬೆಳೆ ಹಾನಿಯಾಗಿದೆ. ಇದಲ್ಲದೆ  ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಯಲ್ಲೂ ಸಹ ಬೆಳೆ ಹಾನಿಯಾಗಿದ್ದು, ಮುಖ್ಯಮಂತ್ರಿ ಇಂದು ವೈಮಾನಿ‌ಕ ಸಮೀಕ್ಷೆ ನಡೆಸುತ್ತಿದ್ದಾರೆ. ಬಳಿಕ ತೀವ್ರ ಹಾನಿಗೊಳಗಾದ ನಾಲ್ಕು ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಬೆಳೆ ಹಾನಿ ಕುರಿತು ಸಭೆ ನಡೆಸಿ ಸೂಕ್ತ ಘೋಷಣೆ ಜೊತೆಗೆ ಎನ್.ಡಿ.ಆರ್.ಎಫ್ ನಲ್ಲಿಯೂ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ ಎಂದು ಸಚಿವ‌ ಎನ್. ಚೆಲುವರಾಯಸ್ವಾಮಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷೆ ಸಿದ್ರಾಮಪ್ಪ ಧಂಗಾಪೂರ ರೈತರ ವಿವಿಧ ಬೇಡಿಕೆಯ ಕುರಿತು ಸಚಿವರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರ ಈಗಾಗಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ರೈತರ ಕಲ್ಯಾಣಕ್ಕಾಗಿ ಬೆಳೆ ಸಾಲ ಮನ್ನಾ ಮಾಡುವ ಆರನೇ ಗ್ಯಾರಂಟಿ ಘೋಷಿಸಬೇಕು ಎಂದು ಮನವಿ ಮಾಡಿದರು.

ಬಳಿಕ ಸಚಿವರು ಕಡಗಂಚಿಯಲ್ಲಿ ಸರ್ವೆ ನಂ.135/2 ರಲ್ಲಿ ರೈತ ಶಿವರಾಜ ಕುಡಕಿ  ನಾಲ್ಕು ಎಕರೆಯಲ್ಲಿ ಬೆಳೆದ ತೊಗರಿ ಬೆಳೆ  ಸಂಪೂರ್ಣ ಹಾನಿಯಸಗಿ ಹೊಲದಲ್ಲಿ ನೀರು ನಿಂತಿರುವುದನ್ನು ವೀಕ್ಷಿಸಿದರು.

ಸರಡಗಿ ಬಿ.ಯಲ್ಲಿಯೂ‌ ವೀಕ್ಷಣೆ: ಸರಡಗಿ ಬ್ಯಾರೇಜ್ ಹಿನ್ನೀರಿನಿಂದ ತೀವ್ರ ಹೊಡೆತಕ್ಕೆ ಒಳಗಾದ ಸರಡಗಿ‌‌ ಬಿ. ಗ್ರಾಮದ ಸರ್ವೇ ನಂ.139/7 ಮತ್ತು 139/9 ರಲ್ಲಿ  ಪ್ರಜ್ವಲ ರವೀಂದ್ರರ 3.26 ಎಕರೆ, ಸರ್ವೆ ನಂ.139/6 ರಲ್ಲಿ ಅಬ್ಬಾಸಲಿ ಲಾಲ್ ಅಹ್ಮದರ ನಾಲ್ಕು ಎಕರೆ ಹಾಗೂ ಸರ್ವೆ ನಂ. 139/5 ರಲ್ಲಿ ಯೂನುಸ್ ಹಸನ್ ಸಾಬ್ 2 ಎಕರೆಯಲ್ಲಿ ಬೆಳೆದ  ತೊಗರಿ, ಸರ್ವೆ ನಂ.140/5 ಮತ್ತು 140/2 ರಲ್ಲಿ ರೈತ ಮಹಿಳೆ ಮಹಾದೆವಿ ಸಾಯಬಣ್ಣಗೆ ಸೇರಿದ 3.37 ಎಕರೆಯಲ್ಲಿ ಬೆಳೆದ ಹತ್ತಿ ಬೆಳೆ ಹಾನಿಯನ್ನು ಸಚಿವ ಎನ್.ಚೆಲುವರಾಯಸ್ವಾಮಿ ವೀಕ್ಷಿಸಿದರು.

ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್, ಉಪನಿರ್ದೇಶಕ ಸೋಮಶೇಖರ ಬಿರಾದರ, ಆಳಂದ ತಹಶೀಲ್ದಾರ ಅಣ್ಣಾರಾಯ ಪಾಟಿಲ, ಕೃಷಿ ಸಹಾಯಕ ನಿರ್ದೇಶಕ ಡಾ.ಅರುಣ ಮೂಲಿಮನಿ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಚ ಸಿದ್ರಾಮಪ್ಪ ಪಾಟೀಲ್‌ ಮೊದಲಾದವರು ಇದ್ದರು.

The post ಕಲಬುರಗಿ: ಕೃಷಿ ಸಚಿವರಿಂದ ಬೆಳೆ ಹಾನಿ ಪರಿಶೀಲನೆ appeared first on Samyukta Karnataka.

ಕಲಬುರಗಿಯಲ್ಲಿ ಸಿಎಂ ವೈಮಾನಿಕ ಸಮೀಕ್ಷೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ,  ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ  ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಇಂದು (ಮಂಗಳವಾರ) ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಳ್ಳಲಿದ್ದಾರೆ.

The post ಕಲಬುರಗಿಯಲ್ಲಿ ಸಿಎಂ ವೈಮಾನಿಕ ಸಮೀಕ್ಷೆ appeared first on Samyukta Karnataka.

ಕಲಬುರಗಿ: ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತ
ಕಲಬುರಗಿ: ಕಳೆದ ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಕಲ್ಯಾಣ ನಾಡಿನ ರೈತರು ಕಂಗಾಲಾಗಿದ್ದಾರೆ.

ಕಳೆದ ಬುಧವಾರ ರಾತ್ರಿಯಿಂದ ನಿರಂತರವಾಗಿ ಬೀಳುತ್ತಿರುವ ಮಳೆ ಜಿಲ್ಲೆಯಾದ್ಯಂತ ಅವಾಂತರ ಸೃಷ್ಟಿಸಿದೆ. ಸದಾ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಜನರು ಮನೆಯಿಂದ ಹೊರಗೆ ಬಾರದಂತೆ ದಿಗ್ಬಂಧನ ಹೇರಿದಂತಾಗಿದೆ. ಕೃಷಿಕಾರ್ಯವಂತೂ ಸಂಪೂರ್ಣ ಸ್ಥಗಿತಗೊಂಡಿದೆ. ದೈನಂದಿನ ಕೆಲಸಗಳಿಗೂ ಮಳೆ ಕಿರಿಕಿರಿಉಂಟು ಮಾಡುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟ ಕಾರಣ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಜಿಲ್ಲೆಯ ದೇವಲ ಗಾಣಗಾಪುರ-ಇಟಗಾ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸಂಗಮಕ್ಕೆ ತೆರಳುವ ಸಂಪರ್ಕ ಕಡಿತವಾಗಿದೆ. ಹಲವಾರು ದೇವಸ್ಥಾನಗಳು ಮತ್ತು ಮಠಗಳು ಮುಳುಗಡೆಯಾಗಿವೆ ಮತ್ತು ಅಪಾರ ಪ್ರಮಾಣದಲ್ಲಿ ಜಮೀನುಗಳಿಗೆ ನೀರು ನುಗ್ಗಿದೆ.

ಜಿಲ್ಲೆಯಲ್ಲಿ ಸತತ ಮಳೆಯಿದ್ದು ಹವಾಮಾನ ಇಲಾಖೆಯು ಮುಂದಿನ ಎರಡ್ಮೂರು ದಿನ ಇಲ್ಲಿ ಆರೆಂಜ್ ಅಲರ್ಟ್ ಮತ್ತು ಮಹಾರಾಷ್ಟ್ರದ ಭೀಮಾ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಇನ್ನು ಹೆಚ್ಚಿನ ಪ್ರಮಾಣದ ನೀರು ಭೀಮೆಗೆ ಬರುವ ಸಾಧ್ಯತೆ ಇದೆ.

ಮಹಾರಾಷ್ಟ್ರದ ಜಲಾಶಯದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟ ಪರಿಣಾಮ ಇಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಇದನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳದಲ್ಲಿ ಠಿಕಾಣಿ ಹೂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡ ಸಹ ನಿಯೋಜಿಸಲಾಗಿದೆ.

The post ಕಲಬುರಗಿ: ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತ appeared first on Samyukta Karnataka.

ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ
ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆ ಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರ ವಿತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ. 4ರಷ್ಟು ಮಳೆ ಜಾಸ್ತಿಯಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬೆಳೆ ಹಾನಿ ಹೆಚ್ಚು ಸಂಭವಿಸಿದ್ದು, ಬೆಳೆ ಪರಿಹಾರ ವಿತರಿಸಲಾಗುವುದು. 2024-25ನೇ ಸಾಲಿನಲ್ಲಿ 656 ಕೋಟಿ ರೂ. ಬೆಳೆವಿಮೆ ಪಾವತಿಯಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಹಾಗೂ ರೈತರ ಬೇಡಿಕೆಯಂತೆ ಸಾಲಮನ್ನಾ ಮಾಡುವ ಬಗ್ಗೆ ಪರೀಶೀಲಿಸಲಾಗುವುದು ಎಂದರು.

ಬ್ಯಾಂಕ್ ದರೋಡೆ-ಮುಂಜಾಗ್ರತಾ ಕ್ರಮಕ್ಕಾಗಿ ಪೊಲೀಸರಿಗೆ ಸೂಚನೆ: ವಿಜಯಪುರದಲ್ಲಿ ಎಸ್.ಬಿ.ಐ ಬ್ಯಾಂಕ್ ದರೋಡೆಯಾಗಿರುವ ಬಗ್ಗೆ ಹಾಗೂ ಬ್ಯಾಂಕ್‌ನ ಸುರಕ್ಷತೆ ಬಗ್ಗೆ ಪ್ರತಿಕ್ರಿಯೆ ನೀಡಿ, ಘಟನೆಗೆ ಬಳಸಿದ ಕಾರು ಪತ್ತೆಯಾಗಿದ್ದು, ಕಳ್ಳತನದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪತ್ತೆಹಚ್ಚುವಂತೆ ಜಿಲ್ಲಾ ಎಸ್‌ಪಿಗೆ ಸೂಚಿಸಲಾಗಿದೆ ಹಾಗೂ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಜಾಗೃತರಾಗಿರುವಂತೆ ತಿಳಿಸಲು ಸೂಚಿಸಲಾಗಿದೆ. ಬ್ಯಾಂಕಿಗೆ ಸುರಕ್ಷತಾ ಸಿಬ್ಬಂದಿ ನೇಮಿಸಿಕೊಳ್ಳುವುದು ಆಯಾ ಬ್ಯಾಂಕಿನ ಜವಾಬ್ದಾರಿಯಾಗಿರುತ್ತದೆ. ಪೊಲೀಸರು ಬ್ಯಾಂಕಿಗೆ ಸುರಕ್ಷತೆ ನೀಡುತ್ತಾರೆ. ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರವಾಹಕ್ಕೆ ಪರಿಹಾರ: ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ತಡವಾಗಿ ವರದಿ ನೀಡಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರವಾಹಪರಿಸ್ಥಿತಿಯ ವರದಿಯನ್ನು ಕೇಂದ್ರಕ್ಕೆ ಸಕಾಲದಲ್ಲಿಯೇ ನೀಡಲಾಗಿತ್ತು. ಆದರೆ ಕೇಂದ್ರಸರ್ಕಾರವೇ ಈ ಬಗ್ಗೆ ನಿಧಾನ ನಿಲುವು ತಾಳಿದ್ದರಿಂದ, ರಾಜ್ಯ ಸರ್ಕಾರ, ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿ, ಪರಿಹಾರವನ್ನು ಪಡೆದ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು.

ಬಿಪಿಎಲ್ ಕಾರ್ಡ್-ಅನರ್ಹರನ್ನು ತೆಗೆದು ಅರ್ಹರನ್ನು ಸೇರಿಸಲು ಸೂಚನೆ: ಅನರ್ಹರ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಪಿಎಲ್ ಕಾರ್ಡ್ ಇರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅನರ್ಹರನ್ನು ಬಿಪಿಎಲ್ ಕಾರ್ಡ್ ನ ಸೌಲಭ್ಯದಿಂದ ತೆಗೆದುಹಾಕುವಂತೆ ಹಾಗೂ ಅರ್ಹರಿಗೆ ಈ ಸೌಲಭ್ಯವನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ: ರಾಜ್ಯಕ್ಕೆ ನೀಡಲಾಗುವ ಎನ್‌ಡಿಆರ್‌ಎಫ್‌ ಪರಿಹಾರವನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಹಲವು ಬಾರಿ ಕೋರಲಾಗಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಹಾಗೂ ಕೇಂದ್ರ ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲಾಗಿದ್ದರೂ, ಇದುವರೆಗೂ ಸರ್ಕಾರದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದರು.

ಸಿಐಡಿ ತನಿಖೆ ನಡೆಸಲು ಸೂಚನೆ: ಅನ್ನಭಾಗ್ಯದ ಅಕ್ಕಿ ಹೊರದೇಶಕ್ಕೆ ರಫ್ತಾಗುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.

ಜಾತಿ ಸಮೀಕ್ಷೆ-ಬಿಜೆಪಿ ರಾಜಕಾರಣ ಮಾಡುತ್ತಿದೆ: ಜಾತಿ ಸಮೀಕ್ಷೆ ನಮೂನೆಯಲ್ಲಿ ‘ನಾಸ್ತಿಕ’ ಕಾಲಂವನ್ನು ಸೇರಿಸಿರುವ ಬಗ್ಗೆ ಬಿಜೆಪಿಯವರು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದು, ರಾಜ್ಯದ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿಯ ಬಗ್ಗೆ ಸರ್ಕಾರ ತಿಳಿಯಬೇಕಾಗಿದೆ. ಸಮೀಕ್ಷೆ ವರದಿ ಬಂದ ನಂತರ, ಅದರಂತೆ ಸರ್ಕಾರದ ಯೋಜನೆಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುತ್ತದೆಂಬ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಸಮೀಕ್ಷೆ: ಜಾತಿ ಸಮೀಕ್ಷೆಯಲ್ಲಿ ಹಿಂದೂ ಜಾತಿಗಳಲ್ಲಿ ಕ್ರಿಶ್ಚಿಯನ್‌ನ್ನು ಸೇರಿಸಿರುವುದನ್ನು ವಿರೋಧಿಸಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಶ್ಚಿಯನ್ನರು ಹಾಗೂ ಮುಸಲ್ಮಾನರನ್ನು ಸೇರಿಸಿದಂತೆ ಅಲ್ಪಸಂಖ್ಯಾತರು ಭಾರತದ ಪ್ರಜೆಗಳೇ. ಸಮೀಕ್ಷೆಗೆ 1.75 ಲಕ್ಷ ಶಿಕ್ಷಕರನ್ನು ನಿಯೋಜಿಸಿದ್ದು, ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಅವರು ರಾಜ್ಯದ ಪ್ರತಿ ಮನೆಗೂ ತೆರಳಿ ಮಾಹಿತಿಗಳನ್ನು ಕಲೆಹಾಕಲಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ಕಳೆದ ಬಾರಿಗಿಂತ 40 ಸಾವಿರ ಶಿಕ್ಷಕರನ್ನು ಹೆಚ್ಚಾಗಿ ನಿಯೋಜಿಸಲಾಗಿದೆ ಎಂದರು.

ಅಂತಿಮ ನಿರ್ಧಾರ ಕೇಂದ್ರ ಸರ್ಕಾರದ್ದು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಅಂತಿಮ ತೀರ್ಮಾನ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕೇವಲ ಶಿಫಾರಸ್ಸು ಮಾಡಬಹುದಾಗಿರುತ್ತದೆ. ಈ ಬಗ್ಗೆ ಯಾರೂ ಸಹ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಅಧಿಕಾರಿಗಳನ್ನು ಸದ್ಯದಲ್ಲಿಯೇ ನೇಮಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹೊಸ ವೇಗ ದೊರೆಯಲಿದೆ ಎಂದರು.

The post ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ appeared first on Samyukta Karnataka.

ಅಭಿವೃದ್ಧಿಗಾಗಿ ಕಾಯುತ್ತಿರುವ ಕಲ್ಯಾಣ ಕರ್ನಾಟಕ
ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ. ಈ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಡಾ.ಗುರುಪ್ರಸಾದ ರಾವ್ ಹವಲ್ದಾರ್ ಬರೆದಿರುವ ವಿಶೇಷ ಲೇಖನ.

1947ರ ಆಗಸ್ಟ್ 15ರಂದು ಇಡೀ ದೇಶವೇ ಸ್ವಾತಂತ್ರ್ಯದ ಸಂಭ್ರಮದಲ್ಲಿದ್ದರೆ ಕಲ್ಯಾಣ ಕರ್ನಾಟಕ ಪ್ರದೇಶ ಮಾತ್ರ ಇನ್ನೂ ಗುಲಾಮಗಿರಿ ಎಂಬ ನರಕದಲ್ಲಿ ಇತ್ತು. ಹೈದರಾಬಾದ್‌ ನಿಜಾಮನ ಆಳ್ವಿಕೆ ಈ ಜನರ ಬದುಕನ್ನು ದುರ್ಭರವಾಗಿಳಿಸಿತ್ತು. ವಂದೇ ಮಾತರಂ ಹೇಳುವುದು, ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಾಗಿತ್ತು. ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಚಳವಳಿ ನಿಜಾಮನ ನಿರಂಕುಶ ಪ್ರಭುತ್ವ ಹಾಗೂ ಸ್ವಾತಂತ್ರ್ಯ ದ ಹೋರಾಟವಾಗಿತ್ತು.

1948ರ ಸೆಪ್ಟೆಂಬರ್ 17ರಂದು ಭಾರತದ ಒಕ್ಕೂಟಕ್ಕೆ ಸೇರಿದಕ್ಕೆ ಇಂದು 77 ವರ್ಷ ತುಂಬುತ್ತದೆ. ಇದರ ಹಿಂದೆ ಸಾವಿರಾರು ದೇಶಭಕ್ತರು ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಹೋರಾಟದ ಶ್ರಮವಿದೆ. ಸ್ವಾತಂತ್ರ್ಯ ಲಭಿಸಿ 78ವರ್ಷ ಕಳೆದರೂ ಕರ್ನಾಟಕದ ಬೇರೆ ಭಾಗಗಳಿಗೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ತುಂಬಾ ಹಿಂದಿದೆ. ಈ ಭಾಗದ ಅನೇಕ ನೀರಾವರಿ ಯೋಜನೆಗಳಿಗೆ ಸಮಯೋಚಿತ ಹಣ ಮಂಜೂರಾಗದೆ ಬಹಳಷ್ಟು ಅಪೂರ್ಣವಾಗಿಯೇ ಉಳಿದಿವೆ. ಈ ಕಾರಣಕ್ಕಾಗಿಯೇ ನೀರಾವರಿಯಿಂದ ಈ ಪ್ರದೇಶ ವಂಚಿತಗೊಂಡು, ಬರದ ನಾಡಾಗಿ ಉಳಿದಿದೆ.

ಆಗ ನಿಜಾಮನ ವಿರುದ್ಧ ಹೋರಾಟವಾದರೆ ಈಗ ಬದುಕಿಗಾಗಿ ಆಗಿದೆ .ಸ್ವತಂತ್ರ ಪೂರ್ವ ದಲ್ಲಿ ಮೈಸೂರು ಪ್ರಾಂತಕ್ಕೆ ಹೋಲಿಸಿದರೆ ನಿಜಾಮ ಆಡಳಿತ ಪ್ರಗತಿಗೆ ಪೂರಕ ಮತ್ತು ಜನಾನುರಾಗಿ ಆಗಿರಲಿಲ್ಲ. ಮೈಸೂರು ಮಹಾರಾಜರು ಶಿಕ್ಷಣ, ನೀರಾವರಿ, ರಸ್ತೆ ಸೇರಿದಂತೆ ಕಲ್ಯಾಣ ರಾಜ್ಯಕ್ಕೆ ಹೆಚ್ಚು ಒತ್ತು ಕೊಟ್ಟರು. ಆದರೆ, ಹೈದರಾಬಾದ್ ನಿಜಾಮನ ಆಡಳಿತ ಅಭಿವೃದ್ಧಿ ಕೇಂದ್ರಿತವಾಗಿರಲಿಲ್ಲ. ಮೈಸೂರು ಸಂಸ್ಥಾನಕ್ಕಿಂತಲೂ ಹೈದರಾಬಾದ್ ಸಂಸ್ಥಾನ ಹೆಚ್ಚು ಶ್ರೀಮಂತ ಇದ್ದರೂ, ಜನಕಲ್ಯಾಣ ಯೋಜನೆ ಜಾರಿಯಾಗಲಿಲ್ಲ.ಮೈಸೂರು ಸೀಮೆ ಅರಸರಂಥ ದೂರದೃಷ್ಟಿಯ ದೊರೆಗಳನ್ನೂ ದಿವಾನರನ್ನೂ ಪಡೆದು ಯೋಜನೆಗಳಿಂದ ಪರಿಪುಷ್ಟವಾಗಿ ಶ್ರೀಮಂತವಾದಂತೆ, ಈ ಭಾಗ ಆಗಲಿಲ್ಲ.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ವಿಜಯನಗರ ಸೇರಿ ಏಳು ಜಿಲ್ಲೆಗಳಲ್ಲಿರುವ ಜನಸಂಖ್ಯೆ ಒಟ್ಟು 1.3 ಕೋಟಿ ಯಷ್ಟು, ಈ ಏಳು ಜಿಲ್ಲೆಗಳಲ್ಲಿ ಸಾಕ್ಷರತೆ ಪ್ರಮಾಣ, ಉನ್ನತ ಶಿಕ್ಷಣಕ್ಕೆ ದಾಖಲಾಗುವವರ ಪ್ರಮಾಣ ನಿರಾಶಾದಾಯಕವಾಗಿಯೇ ಮುಂದುವರಿದಿವೆ. ಅತ್ಯಂತ ಕಷ್ಟಪಟ್ಟು ಪಡೆದ 371(ಜೆ) ಕಲಂ ತಿದ್ದುಪಡಿಯಿಂದ ಪ್ರದೇಶಕ್ಕೆ ಆಗಿರುವ ಪ್ರಯೋಜನಗಳ ಅಷ್ಟಕಷ್ಟೇ.

ಈಗಲೂ ಕೆಲಸ ಹುಡುಕಿಕೊಂಡು ಜನರು ಗುಳೆ ಹೋಗುವ ಕಷ್ಟ ತಪ್ಪಿಲ್ಲ. ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಡಾ. ಡಿ.ಎಂ.ನಂಜುಂಡಪ್ಪ ನೇತೃತ್ವದ ಸಮಿತಿ ರಚನೆಗೊಂಡು ಎರಡು ದಶಕ ಪೂರೈಸುವ ಹೊಸ್ತಿಲಲ್ಲಿದ್ದರೂ, ಅದು ನೀಡಿದ ಶಿಫಾರಸುಗಳ ಅನುಷ್ಠಾನ ಇನ್ನೂ ಪರಿಪೂರ್ಣವಾಗಿ ಆರೂ ಜಿಲ್ಲೆಗಳಲ್ಲಿ ಆಗಿಲ್ಲ. ಸಮಿತಿಯ ಶಿಫಾರಸಿನಂತೆ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಬಿಡುಗಡೆಯಾದ ಕೋಟ್ಯಂತರ ರೂಪಾಯಿ ಅನುದಾನದ ಸಮರ್ಪಕ ಬಳಕೆಯಾಗುತ್ತಿಲ್ಲ. ಜನತೆಗೆ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳು, ವಿಶೇಷ ಅನುದಾನಗಳನ್ನು ರಾಜ್ಯ ,ಕೇಂದ್ರ ಸರ್ಕಾರಗಳು ನೀಡುತ್ತಿವೆ,ಅಲ್ಲದೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ ಬಂದು ಹನ್ನೊಂದು ವರ್ಷಗಳು ಕಳೆದಿವೆ. ಅಭಿವೃದ್ಧಿ ಮಂಡಳಿ ಮೂಲಕ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಲಾಗಿದೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾದಾಗಿನಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತೀ ವರ್ಷಕ್ಕೆ ಐದು ಸಾವಿರ ಕೋಟಿ ಅನುದಾನ ನೀಡುತ್ತಿದ್ದಾರೆ. ಇಷ್ಟೆಲ್ಲ ಹಣ ಖರ್ಚಾಗಿಯೂ ಕಲ್ಯಾಣ ಕರ್ನಾಟಕದ ಏಳೂ ಜಿಲ್ಲೆಗಳು ರಾಜ್ಯದ ಅಭಿವೃದ್ಧಿ ಹೊಂದಿದ ಜಿಲ್ಲೆಗಳಿಗೆ ಹೋಲಿಸಿದರೆ ಇನ್ನೂ ಹಿಂದುಳಿದಿವೆ. ಸೂಕ್ತ ಅನುದಾನ ನೀಡುತ್ತಿದ್ದರೂ ಮೂಲಸೌಕರ್ಯ ವಿಸ್ತರಣೆ ವಿಷಯದಲ್ಲಿ ಹೆಚ್ಚೇನು ಸುಧಾರಣೆಯಾಗಿಲ್ಲ. 2013-14ರಿಂದ 2023-24ರವರೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 14,878 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, 13000 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

2023–24ನೇ ಸಾಲಿನಲ್ಲಿ ಕೆಕೆಆರ್‌ಡಿಬಿಗೆ ರಾಜ್ಯ ಸರ್ಕಾರ ₹3 ಸಾವಿರ ಕೋಟಿ ಹಂಚಿಕೆ ಮಾಡಿತ್ತು. ಮಂಡಳಿಯು ₹2,969.20 ಕೋಟಿಯ ಕ್ರಿಯಾಯೋಜನೆಗೆ ಅನುಮೋದನೆ ನೀಡಿತ್ತು. ಅದರಲ್ಲಿ ₹1,459.37 ಕೋಟಿಯಷ್ಟೆ (ಶೇ 49) ವೆಚ್ಚವಾಗಿದೆ. ಒಟ್ಟು 6,182 ಕಾಮಗಾರಿಗಳಲ್ಲಿ ಕೇವಲ 1,940 ಕಾಮಗಾರಿಗಳು ಪೂರ್ಣಗೊಂಡಿದ್ದು, 3,870 ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿವೆ. 372 ಕಾಮಗಾರಿಗಳು ಆರಂಭವೇ ಆಗಿಲ್ಲ‌ ಎಂದು ಕೆಕೆಆರ್‌ಡಿಬಿ ಮೂಲಗಳು ತಿಳಿಸಿವೆ. ಪ್ರಸಕ್ತ 2025-26ನೇ ಸಾಲಿಗೆ ₹5,000 ಕೋಟಿ ಅನುದಾನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿದ್ದು, ಅಷ್ಟು ಹಣ ಖರ್ಚು ಮಾಡಿ ಅಭಿವೃದ್ಧಿ ಮಾಡಬೇಕಿದೆ .

ಸಚಿವ ಸಂಪುಟ ಸಭೆ: ಕಳೆದ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ₹857 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಯೋಜನೆಗಳಿಗೆ ಅನುಮೋದನೆ ನೀಡಿದ್ದರಿಂದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಟ್ಟಾರೆ ₹411.88 ಕೋಟಿ ವೆಚ್ಚದಲ್ಲಿ ಹೊಸದಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 2 ತಾಲೂಕು ಆಸ್ಪತ್ರೆಗಳ ನಿರ್ಮಾಣಕ್ಕೆ, 6 ಪ್ರಾಥಮಿಕ ಅರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರಕ್ಕೆ, 30 ಹಾಸಿಗೆಗಳಿಂದ 50 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವ 16 ಸಮುದಾಯ ಆರೋಗ್ಯ ಕೇಂದ್ರಗಳು, 1 ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 100 ಹಾಸಿಗೆಯ ತಾಲೂಕಾ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವುದು, 100 ಹಾಸಿಗೆ ಸಾಮರ್ಥ್ಯದ 3 ತಾಲೂಕು ಆಸ್ಪತ್ರೆ 150 ಹಾಸಿಗೆಗೆ ಮೇಲ್ದರ್ಜೆಗೇರಿಸುವ ಯೋಜನೆಗೆ ಇಂದಿಲ್ಲಿ ಚಾಲನೆ ದೊರೆತಿದೆ. ಒಟ್ಟಾರೆಯಾಗಿ 41 ಕಾಮಗಾರಿಗಳಿಗೆ ₹411.88 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದರಲ್ಲಿ ಕೆ.ಕೆ.ಆರ್.ಡಿ.ಬಿ ಮಂಡಳಿ ₹208.94 ಕೋಟಿ ಅನುದಾನ ನೀಡುವ ಮೂಲಕ ಪ್ರದೇಶದ ಅಭಿವೃದ್ಧಿಗೆ ಮುಂದಾಗಿದೆ.

ಬಂಡವಾಳ ಹೂಡಿಕೆ, ಕೈಗಾರಿಕೆಗಳ ಸ್ಥಾಪನೆ, ಉದ್ಯೋಗಸೃಷ್ಟಿ ಕಡತಗಳಿಗೆ ಸೀಮಿತಗೊಂಡಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ. ಸರ್ಕಾರಿ ಹುದ್ದೆಗಳು ಭರ್ತಿಯಾಗದೆ ಆಡಳಿತಯಂತ್ರ ಕುಂಟುತ್ತ ಸಾಗಿದೆ. ಈ ಜಿಲ್ಲೆಗಳಿಂದ ಆ ಅನುದಾನ ಹಲವು ಬಾರಿ ವಾಪಸು ಹೋಗಿದೆ. ಕಳೆದ ವರ್ಷ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಯ್ತಾದರೂ ಉತ್ತರ ಕರ್ನಾಟಕದಲ್ಲಿ ಬರುವ 6 ಜಿಲ್ಲೆಗಳ ವ್ಯಾಪ್ತಿಯ 1.25 ಕೋಟಿ ಜನ ವಸತಿ ಹೊಂದಿರುವ ಕಲ್ಯಾಣ ಕರ್ನಾಟಕವನ್ನೇ ಈ ಸಮಾವೇಶದಲ್ಲಿ ಅಲಕ್ಷಸಿದ್ದು ಯಾಕೆ? ಎಂಬುದೇ ಉತ್ತರ ಸಿಗದ ಪ್ರಶ್ನೆ.

ಮೊದಲೇ ಕೈಗಾರಿಕೆ ಬರ ಕಾಡುತ್ತಿರುವ ಕಲ್ಯಾಣ ಕರ್ನಾಟಕದಲ್ಲಿ ಬಂಡವಾಳ ಹರಿದು ಬಂದರೆ ತಾನೆ ಈ ಸಮಸ್ಯೆಗೆ ಪರಿಹಾ ದೊರಕೋದು? ಬಂಡವಾಳ ಹೂಡಿಕೆದಾರರು ಈ ನೆಲದತ್ತ ಕಣ್ಣು ಹಾಯಿಸಿಲಿ ಎಂಬ ಕಾರಣಕ್ಕಾಗಿ ಕಲಬುರಗಿ ಬೀದರ್ ನಲ್ಲಿ ವಿಮಾನಯಾನ ಸೇವೆ ಶುರುವಾಗಿದೆ. ಇದಲ್ಲದೆ ಬೀದರ್ ನ ರಕ್ಷಣಾ ಉದ್ದೇಶದ ವಿಮಾನ ನಿಲ್ದಾಣ ನಾಗರಿಕ ವಿಮಾನಯಾನಕ್ಕೆ ಅನುಮತಿ ನೀಡಿದ್ದರ ಹಿಂದಿನ ಉದ್ದೇಶ ಆಗಿತ್ತು. ವಿಮಾನಯಾನ ಸೇವೆ ಆರಂಭವಾಗಿ ಸ್ಥಗಿತಗೊಂಡಿದೆ. ಇನ್ನೂ ವಿಜಯಪುರ ವಿಮಾನ ನಿಲ್ದಾಣ ಕುಂಟುತ್ತಾ ಸಾಗಿದರೆ, ರಾಯಚೂರಿನಲ್ಲಿ ವಿಮಾನ ನಿಲ್ದಾಣ ಇಲ್ಲವೇ ಇಲ್ಲ, ಇನ್ನೂ ಬಳ್ಳಾರಿ ಕೊಪ್ಪಳ ದಲ್ಲಿ ಖಾಸಗಿ ಯವರ ನಿಲ್ದಾಣ ವನ್ನು ನೆಚ್ಚಿಕೊಂಡು ಕೂತಿದೆ. ಇಲ್ಲಿನ ಕೈಗಾರಿಕೆ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗುತ್ತದೆ

ಬೇಕಿದೆ ಐಟಿ ಮತ್ತು ಬಿಟಿ ಹಬ್: ಬೆಂಗಳೂರಿನಲ್ಲಿ ಐಟಿ ಮತ್ತು ಬಿಟಿ ವಲಯಗಳು ಪ್ರಮುಖ ಮಾರುಕಟ್ಟೆ ಶಕ್ತಿಯಾಗಿ ಹೊರಹೊಮ್ಮಿವೆ. ಇವುಗಳು 30 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿವೆ. ಈ ಕ್ಷೇತ್ರವನ್ನು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಕಡೆ ವಿಸ್ತರಿಸುವ ಮೂಲಕ ಐಟಿ ಬಿಟಿ ಹಬ್ ರಾಜ್ಯಸರ್ಕಾರದಲ್ಲಿ ಈಭಾಗದವರೇ ಐಟಿಬಿಟಿ ಸಚಿವರಾಗಿದ್ದಾರೆ , ಈಕ್ಷೇತ್ರದ ಅಭಿವೃದ್ಧಿ ಶ್ರಮಿಸುತ್ತಿರುವ ಸಚಿವರಿಗೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹೂಡಿಕೆ,ಕಂಪನಿಗಳ ಸ್ಥಾಪನೆಗೆ ಪ್ರಯತ್ನಿಸಿದರೆ ಬಹುದೊಡ್ಡ ಉದ್ಯೋಗ ಸೃಷ್ಟಿಯ ಜೊತೆಗೆ ಅಭಿವೃದ್ಧಿಯಾಗುತ್ತದೆ.

ಈ ಭಾಗದಲ್ಲಿ ಐಟಿ ಹಬ್‌ಗಳನ್ನು , ಬಿಸಿನೆಸ್ ಪಾರ್ಕ್‌ಗಳನ್ನು ಸ್ಥಾಪಿಸಬೇಕು ಇದರಿಂದ ಕಂಪನಿಗಳು ತಮ್ಮ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಅನುಕೂಲವಾಗುತ್ತದೆ.ಜೊತೆಗೆ ಈಗ, ತಂತ್ರಜ್ಞಾನ ಕಂಪನಿಗಳು ಸ್ಥಳಾಂತರಿಸಲು ಬಯಸಿದರೆ, ಅವರಿಗೆ ಕಚೇರಿ ಸ್ಥಳ ಲಭ್ಯವಿಲ್ಲ. ಇದು ನಿಜಕ್ಕೂ ಒಂದು ಶೋಚನೀಯ ಪರಿಸ್ಥಿತಿ. ಇದರ ಜೊತೆಗೆ, ಸರ್ಕಾರವು AI, ರೋಬೋಟಿಕ್ಸ್, ಕ್ವಾಂಟಮ್ ಕಂಪ್ಯೂಟಿಂಗ್, ಮತ್ತು ಜೈವಿಕ ತಂತ್ರಜ್ಞಾನದಂತಹ ಹೈಟೆಕ್ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು ನಿಧಿಗಳನ್ನು ಹಂಚಬೇಕು, ಇದರಿಂದ ನಗರ ಮತ್ತು ರಾಜ್ಯ ಹೆಚ್ಚು ಸ್ಪರ್ಧಾತ್ಮಕವಾಗುತ್ತವೆ.

ಕರ್ನಾಟಕದ ಬಹುತೇಕ ಕೈಗಾರಿಕೆಗಳು ಮತ್ತು ಕಂಪನಿಗಳು ದಕ್ಷಿಣ ಭಾಗದಲ್ಲಿ ಕೇಂದ್ರೀಕೃತವಾಗಿವೆ, ಇದರಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ಕಡಿಮೆ ಉದ್ಯೋಗ ಸೃಷ್ಟಿ ಮತ್ತು ಕಾರ್ಮಿಕರ ಹೆಚ್ಚಳದಿಂದ ಬಳಲುತ್ತಿದೆ. ಇದಕ್ಕೆ ಪರಿಹಾರವೆಂದರೆ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದು .ಈ ಕೈಗಾರಿಕೆಗಳು ತಮ್ಮ ನೌಕರರಿಗೆ ಇಎಸ್‌ಐ ಮತ್ತು ಪಿಎಫ್ ಅನ್ನು ಸಹ ಒದಗಿಸಬೇಕು. ಕೇಂದ್ರ ಸರ್ಕಾರವು ಇಎಸ್‌ಐ ಮತ್ತು ಪಿಎಫ್ ಹಣವನ್ನು ಮರುಪಾವತಿಸುತ್ತದೆ, ಇದು ಉತ್ತರ ಕರ್ನಾಟಕಕ್ಕೆ ಅನೇಕ ಕಾರ್ಮಿಕ-ತೀವ್ರ ಕೈಗಾರಿಕೆಗಳನ್ನು ಆಕರ್ಷಿಸಲು ಉತ್ತೇಜನ ನೀಡುತ್ತದೆ.

ರಸ್ತೆ ಅಭಿವೃದ್ಧಿ: ರಾಜ್ಯದ ಒಳಗೆ ಮತ್ತು ಸುತ್ತಮುತ್ತಲಿನ ಕಳಪೆ ರಸ್ತೆಗಳಿಂದಾಗಿ, ಪ್ರಸ್ತುತ ಹೆಚ್ಚಿನ ಸರಕುಗಳನ್ನು ಆಂದ್ರ,ತಮಿಳು ನಾಡು ಬಂದರುಗಳ ಮೂಲಕ ರಫ್ತು ಮಾಡಲಾಗುತ್ತಿದೆ. ಬೀದರ್‌ನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಆರುಪಥಗಳ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಬೇಕಿದೆ., ಇದು ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ. ಕರ್ನಾಟಕದಲ್ಲಿ ಉತ್ಪಾದಿಸಿದ ಸರಕುಗಳನ್ನು ಮಂಗಳೂರು ಬಂದರು ಮೂಲಕ ರಫ್ತು ಮಾಡಲು ಅನುಕೂಲವಾಗುವಂತೆ ಶಿರಡಿ ಘಾಟಿನಲ್ಲಿ ಸುರಂಗದ ಮೂಲಕ ಕಾರವಾರಕ್ಕೆ ಮತ್ತು ಮತ್ತೊಂದು ಮಾರ್ಗವನ್ನು ಮಂಗಳೂರಿಗೆ ಸಂಪರ್ಕಿಸಹಾಗೆ ಮಾಡಬೇಕಿದೆ.

ಕೇವಲ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಮಾತ್ರವಲ್ಲದೆ, ಇದು ಕೈಗಾರಿಕಾ ಎಸ್ಟೇಟ್‌ಗಳ ಅಭಿವೃದ್ಧಿಗೂ ಕಾರಣವಾಗಬಹುದು ಎಂದು ಪೈ ಭಾವಿಸುತ್ತಾರೆ. ಬೀದರ್, ಯಾದಗಿರಿ, ರಾಯಚೂರು, ಕಡೆಯಿಂದ ಈ ಎಕ್ಸ್‌ಪ್ರೆಸ್‌ವೇಯಲ್ಲಿ, ಜಿಲ್ಲಾ , ತಾಲ್ಲೂಕು ಕೇಂದ್ರ ದ ಹತ್ತಿರ 5,000 ಎಕರೆಗಳ ಕೈಗಾರಿಕಾ ವಲಯ ಸ್ಥಾಪಿಸಿ , ಎಲ್ಲಾ ಸೌಲಭ್ಯಗಳನ್ನು ಒದಗುವಂತೆ ಮಾಡಿದರೆ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗುತ್ತವೆ ಇದರಿಂದಾಗಿ ಯುವಕರು ಮಹಾನಗರಗಳಿಗೆ ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ಸಾಧ್ಯವಾಗುತ್ತದೆ.

ಕಲಂ 371 ಜೆ ಅನುಷ್ಠಾನಗೊಂಡು ದಶಕ ಕಳೆದಿದೆ ದಿ. ಧರಂಸಿಂಗ್, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಇನ್ನೂ ಅನೇಕ ಮಹನೀಯರ ಶ್ರಮದಿಂದ ಈ ಸಂವಿಧಾನದ ವಿಶೇಷ ಕಲಂ ನಮಗೆ ದೊರಕಿದೆ. ವೃತ್ತಿ ಶಿಕ್ಷಣ, ಉದ್ಯೋಗ, ಅಭಿವೃದ್ಧಿಗೆ ಸಾಕಷ್ಟು ಅವಕಾಶವಿದೆ. ಅದರೆ ಈ ಅವಕಾಶ ಇಲ್ಲಿನ ಜನರಿಗೆ ದೊರೆತು ಅಭಿವೃದ್ಧಿ ಹೊಂದಿದಾಗ ಮಾತ್ರ ಜನರ ಬದುಕು ಹಸನಾಗಲು ಸಾಧ್ಯ ಕೇಂದ್ರ ಸರ್ಕಾರ 371J ಎಂಬ ವಿಶೇಷ ಸ್ಥಾನಮಾನ ನೀಡಿದೆ,ಇಷ್ಟೆಲ್ಲ ಇದ್ದರೂ ಅಭಿವೃದ್ಧಿ ಎನ್ನುವುದು ಪೂರ್ಣ ಪ್ರಮಾಣದಲ್ಲಿ ಆಗದೇ ಇರುವುದು ದುರದೃಷ್ಟಕರ.

ಮತ್ತು ಸ್ವತಂತ್ರ ನಂತರದ ದಶಕಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿ ಯಾಗಲೇ ಇಲ್ಲ,ಅಭಿವೃದ್ಧಿ ಮೂಲಭೂತ ಸೌಕರ್ಯಗಳಿಗಾಗಿ ಕೂಗು ಹಲವು ದಶಕಗಳಿಂದಲೂ ಬಲಗೊಳ್ಳುತ್ತಲೇ ಇದೆ. ಈ ಹಿಂದೆ ಪ್ರತ್ಯೇಕ ರಾಜ್ಯದ ಬೇಡಿಕೆಯೂ ಬಲಗೊಂಡಿತ್ತು. ಕಲ್ಯಾಣ ಭಾಗಕ್ಕೆ ಹೆಚ್ಚುವರಿ ಅನುದಾನ ನೀಡಿ ಅಭಿವೃದ್ಧಿಪಡಿಸಿ ಪ್ರಾದೇಶಿಕ ಅಸಮತೋಲನೆ ನಿವಾರಿಸಬೇಕು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ವಿಶೇಷ ಸಂಪುಟ ಸಭೆ ಭಾಗದಲ್ಲಿ ಮಾಡಿ ಈ ಭಾಗದ ಸಮಸ್ಯೆಗಳ ಬಗ್ಗೆಯೇ ಚರ್ಚಿಸಿ ಪರಿಹಾರ ಕಲ್ಪಿಸಬೇಕು, ಕೈಗಾರಿಕೆ, ಕೃಷಿ, ನೀರಾವರಿ, ಶಿಕ್ಷಣ ಕ್ಷೇತ್ರದಲ್ಲಿ ಸಮೃದ್ಧ ಬದಲಾವಣೆಯಾಗಿ ಪ್ರಾದೇಶಿಕ ಅಸಮತೋಲನೆ ನಿವಾರಣೆಯಾಗಬೇಕು .

ಪ್ರತೀ ವರ್ಷ ಐದು ಸಾವಿರ ಕೋಟಿ ಅನುದಾನ ಸಿಗುತ್ತಿದ್ದರೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಹೊಂದುತ್ತಿಲ್ಲವೆಂದರೆ ಆ ಭಾಗದ ಜನಪ್ರತಿನಿಧಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು.ಕಲ್ಯಾಣ(ಹೈದ್ರಾಬಾದ)ಕರ್ನಾಟಕ ಪ್ರದೇಶದ ತಾಲ್ಲೂಕುಗಳ ಪೈಕಿ 22 ತಾಲ್ಲೂಕುಗಳನ್ನು ಅತ್ಯಂತ ಹಿಂದುಳಿದ,5 ತಾಲ್ಲೂಕುಗಳನ್ನು ಅತಿ ಹಿಂದುಳಿದ ಮತ್ತು 2 ತಾಲ್ಲೂಕುಗಳನ್ನು ಹಿಂದುಳಿದ ತಾಲ್ಲೂಕುಗಳೆಂಬುದಾಗಿ ವರ್ಗೀಕೃತಗೊಳಿಸಿ ಹೇಳುವ ಮಂಡಳಿ, ಸರ್ಕಾರ, ಜನಪ್ರತಿನಿಧಿಗಳು ಅಭಿವೃದ್ಧಿ ಗೊಳಿಸುವುದು ಯಾವಾಗ?

ಎಲ್ಲಿಯವರೆಗೆ ಕಲ್ಯಾಣ ಕರ್ನಾಟಕದ ಜನಪ್ರತಿನಿಧಿಗಳು, ಮಂತ್ರಿಗಳು ಹಣದ ವ್ಯಾಮೋಹ ತೊರೆದು ಅಭಿವೃದ್ಧಿ ಮಂತ್ರ ಜಪಿಸುವುದಿಲ್ಲವೋ ಅಲ್ಲಿಯವರೆಗೆ ಹಿಂದುಳಿದ ಹಣೆಪಟ್ಟಿಯಿಂದ ಬಿಡುಗಡೆಯಿಲ್ಲ. ಗುತ್ತಿಗೆದಾರರು, ಅಧಿಕಾರಿಗಳು ಅಭಿವೃದ್ಧಿ ಯೋಜನೆಗಳನ್ನು ನುಂಗಲು ಕಾಯುತ್ತಿರುವರಿಂದ ಅಭಿವೃದ್ಧಿ ಸಾಧ್ಯವೇ?. ಈ ಪ್ರದೇಶದಲ್ಲಿ ಜನರ ಜೀವನಮಟ್ಟ ಬದಲಾಗಬೇಕು. ಮೂಲಸೌಕರ್ಯಗಳ ಕೊರತೆ ನೀಗಿ ಶಿಕ್ಷಣ, ಉದ್ಯೋಗ, ಅಭಿವೃದ್ಧಿ ಪಥದಲ್ಲಿ ಅದು ರಾಜ್ಯದ ಇತರ ಪ್ರದೇಶಗಳಿಗೆ ಸರಿಸಮನಾಗಿ ನಿಲ್ಲಲು ಮಹತ್ವದ, ದೂರದೃಷ್ಟಿಯುಳ್ಳ ಕಾರ್ಯಕ್ರಮಗಳೂ ರೂಪುಗೊಳ್ಳಬೇಕು.

The post ಅಭಿವೃದ್ಧಿಗಾಗಿ ಕಾಯುತ್ತಿರುವ ಕಲ್ಯಾಣ ಕರ್ನಾಟಕ appeared first on Samyukta Karnataka.