karavar Archives - Samyukta Karnataka

ಕಾರವಾರ ತಾಲೂಕಿನಲ್ಲಿ ಮಳೆಯ ಅಬ್ಬರ: ಇಂದು ಶಾಲೆಗಳಿಗೆ ರಜೆ
ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಗುರುವಾರ (ಜುಲೈ 2) ಬೆಳಗ್ಗಿನಿಂದಲೇ ಕಾರವಾರ ತಾಲೂಕಿನಾದ್ಯಂತ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ತುರ್ತು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಪ್ರದತ್ತವಾದ ಅಧಿಕಾರದ ಮೇರೆಗೆ ಕಾರವಾರ ತಹಶೀಲ್ದಾರರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಪುಟ್ಟ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿರುವ ಕಾರಣ ರಸ್ತೆಗಳಲ್ಲಿ ನೀರು ನಿಲ್ಲುವಿಕೆ, ಮರಗಳು ಉರುಳುವ ಅಪಾಯ ಹಾಗೂ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯನ್ನು ಪರಿಗಣಿಸಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಇಂದು ಘೋಷಿಸಲಾದ ರಜೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ಹಿನ್ನಡೆಯಾಗದಂತೆ ನೋಡಿಕೊಳ್ಳಲು, ಮುಂದಿನ ದಿನಗಳಲ್ಲಿ ಹೆಚ್ಚುವರಿ ಶಾಲಾ ದಿನಗಳನ್ನು ನಡೆಸುವ ಮೂಲಕ ಕಲಿಕಾ ದಿನಗಳನ್ನು ಸರಿದೂಗಿಸಿಕೊಳ್ಳುವಂತೆ ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಸೂಚನೆ ನೀಡಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಪರಿಸ್ಥಿತಿಯನ್ನು ಆಧರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಕಣ ಬರಹ: ಹೇ ರಾಮ್… ಏಕೆ ಮೂಕನಾದೆ ಪ್ರಭು ಶ್ರೀರಾಮ್!

The post ಕಾರವಾರ ತಾಲೂಕಿನಲ್ಲಿ ಮಳೆಯ ಅಬ್ಬರ: ಇಂದು ಶಾಲೆಗಳಿಗೆ ರಜೆ appeared first on Samyukta Karnataka.

ಕೆಎಸ್‌ಎಂಸಿಎಯಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಲಾಭಾಂಶ
ಕಾರವಾರ: ರಾಜ್ಯ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಲಿಮಿಟೆಡ್ (KSMCA), ತನ್ನ ಯಶಸ್ವಿ ಕಾರ್ಯನಿರ್ವಹಣೆಯ ಫಲವಾಗಿ ರೂ.34.13 ಕೋಟಿಗಳ ವಿಶೇಷ ಲಾಭಾಂಶವನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ.

ವಿಧಾನಸೌಧದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ, ಸಂಸ್ಥೆಯ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಸಂಸ್ಥೆಯು ಲಾಭದ ಹಾದಿಯಲ್ಲಿ ಸಾಗುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ, ಈ ಹಿಂದೆ ಸಂಸ್ಥೆಯು ನಿರ್ವಹಿಸುತ್ತಿದ್ದ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟದ ವ್ಯವಹಾರ ಕೈತಪ್ಪಿ ಹೋಗಿದ್ದರಿಂದ ಸಂಸ್ಥೆಯ ಲಾಭದಾಯಕತೆ ಕಡಿಮೆಯಾಗಿದೆ ಎಂದು ಗಮನಸೆಳೆದರು.

ಸಂಸ್ಥೆಯ ಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡಲು ಈ ವ್ಯವಹಾರವನ್ನು ಮತ್ತೆ ಕೆಎಸ್‌ಎಂಸಿಎಗೆ ವಹಿಸಿಕೊಡುವಂತೆ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಬಳಿಕ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸತೀಶ್ ಸೈಲ್ ಅವರು, ಸಂಸ್ಥೆಗೆ ನೀಡಲಾಗಿರುವ 4ಜಿ ವಿನಾಯಿತಿಯಲ್ಲಿ ‘ಡಿಜಿಟಲೈಜೇಶನ್’ ಚಟುವಟಿಕೆಗಳನ್ನು ಹೆಚ್ಚುವರಿಯಾಗಿ ಸೇರಿಸಬೇಕು ಹಾಗೂ ಜಾಹೀರಾತು ಬಿಡುಗಡೆ ಮಾಡಿದ ಬಾಕಿ ಹಣವನ್ನು ಎಲ್ಲಾ ಇಲಾಖೆಗಳು ಸಕಾಲದಲ್ಲಿ ಪಾವತಿಸಲು ನಿರ್ದೇಶನ ನೀಡಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಅತೀಕುಲ್ಲಾ ಶರೀಫ್ ಮತ್ತು ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಸ್. ನಂದೀಶ ಸಹ ಉಪಸ್ಥಿತರಿದ್ದರು.

The post ಕೆಎಸ್‌ಎಂಸಿಎಯಿಂದ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಲಾಭಾಂಶ appeared first on Samyukta Karnataka.