Karnataka Archives - Samyukta Karnataka

ಶುಭಾಶಯ ಕೋರಿ ಕೋಟಿ ಆಸೆ ತೋರಿಸಿದರು; ನಿವೃತ್ತ ಯೋಧನಿಗೆ ಲಕ್ಷಾಂತರ ರೂಪಾಯಿ ಸೈಬರ್ ಶಾಕ್!
ತುಮಕೂರು: ದೇಶ ಕಾಯ್ದು ನಿವೃತ್ತರಾದ ಯೋಧರೊಬ್ಬರು ತಮ್ಮ ಹುಟ್ಟುಹಬ್ಬದ ದಿನವೇ ಸೈಬರ್ ಖದೀಮರ ಜಾಲಕ್ಕೆ ಸಿಲುಕಿ ಬರೋಬ್ಬರಿ 2.82 ಲಕ್ಷ ರೂಪಾಯಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ನಿವಾಸಿ, ನಿವೃತ್ತ ಯೋಧ ಶಿವಕುಮಾರ್ ವಂಚನೆಗೊಳಗಾದ ದುರ್ದೈವಿಯಾಗಿದ್ದಾರೆ.

ಶುಭಾಶಯ ಕೋರಿ ಸಂಚು ರೂಪಿಸಿದ ಖದೀಮರು: ಜೂನ್ 20ರಂದು ಶಿವಕುಮಾರ್ ಹುಟ್ಟುಹಬ್ಬವಿತ್ತು. ಇದೇ ದಿನ ಮುಂಜಾನೆ ಅಪರಿಚಿತ ವ್ಯಕ್ತಿಗಳು ಯೋಧನಿಗೆ ಕರೆ ಮಾಡಿ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಮಾತುಕತೆಯ ನಡುವೆ, “ನಿಮ್ಮ ಹುಟ್ಟುಹಬ್ಬಕ್ಕೆ ನಮ್ಮ ಕಡೆಯಿಂದ ಅಮೂಲ್ಯವಾದ ಉಡುಗೊರೆ ನೀಡುತ್ತಿದ್ದೇವೆ” ಎಂದು ನಂಬಿಸಿ, ಪಾರ್ಸೆಲ್ ಕಳುಹಿಸುವ ನೆಪದಲ್ಲಿ ಮನೆಯ ವಿಳಾಸವನ್ನು ಪಡೆದುಕೊಂಡಿದ್ದಾರೆ.

ನಂತರ ವಿಳಾಸ ಪಡೆದ ಕೆಲವೇ ಹೊತ್ತಿನಲ್ಲಿ ಮತ್ತೆ ಕರೆ ಮಾಡಿದ ವಂಚಕರು, “ನಿಮ್ಮ ಗಿಫ್ಟ್ ಸಿದ್ಧವಾಗಿದೆ. ಆದ್ರೆ ಕೊರಿಯರ್ ಮತ್ತು ಕಸ್ಟಮ್ಸ್ ಡ್ಯೂಟಿ ಚಾರ್ಜ್‌ನ್ನು ಮುಂಗಡವಾಗಿ ಪಾವತಿಸಬೇಕು. ಈ ಹಣವನ್ನು ಗಿಫ್ಟ್ ಸಿಕ್ಕ ತಕ್ಷಣ ರಿಫಂಡ್ ಮಾಡಲಾಗುವುದು” ಎಂದು ನಂಬಿಸಿ ಆನ್‌ಲೈನ್ ಲಿಂಕ್ ಕಳುಹಿಸಿದ್ದಾರೆ. ಇದನ್ನು ನಿಜವೆಂದು ನಂಬಿದ ಶಿವಕುಮಾರ್, ವಿವಿಧ ಶುಲ್ಕಗಳ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 2.82 ಲಕ್ಷ ರೂಪಾಯಿಗಳನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ.

ಅಷ್ಟೇ ಅಲ್ಲದೇ ಹಣ ವರ್ಗಾವಣೆಯಾಗುತ್ತಿದ್ದಂತೆ ವಂಚಕರು ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ತಡವಾಗಿ ತಾನು ಸೈಬರ್ ಜಾಲದ ಬಲೆಗೆ ಬಿದ್ದು ವಂಚನೆಗೊಳಗಾಗಿರುವುದು ಯೋಧನಿಗೆ ಅರಿವಾಗಿದೆ. ಸದ್ಯ ಶಿವಕುಮಾರ್ ತುಮಕೂರು ಸಿಇಎನ್ (CEN) ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

The post ಶುಭಾಶಯ ಕೋರಿ ಕೋಟಿ ಆಸೆ ತೋರಿಸಿದರು; ನಿವೃತ್ತ ಯೋಧನಿಗೆ ಲಕ್ಷಾಂತರ ರೂಪಾಯಿ ಸೈಬರ್ ಶಾಕ್! appeared first on Samyukta Karnataka.

PM ಮೋದಿ ಭೇಟಿ ಮಾಡಿದ CM ಡಿ.ಕೆ. ಶಿವಕುಮಾರ್: ಅಭಿವೃದ್ಧಿ ಅಜೆಂಡಾ ಕುರಿತು ಮಾತುಕತೆ
PM – CM ಭೇಟಿ: ಬಲಿಷ್ಠ ಕರ್ನಾಟಕ, ಬಲಿಷ್ಠ ಭಾರತ ನಿರ್ಮಾಣಕ್ಕೆ ಒಗ್ಗಟ್ಟಿನ ಸಂದೇಶ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಮಹತ್ವದ ಮಾತುಕತೆ ನಡೆಸಿದರು. ಈ ಭೇಟಿ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ.

ಪ್ರಧಾನಿ ನಿವಾಸದಲ್ಲಿ ನಡೆದ ಈ ಭೇಟಿಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ರಚನಾತ್ಮಕ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:  ಕರ್ನಾಟಕ ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ಗೆ 3, ಬಿಜೆಪಿಗೆ 1 ಸ್ಥಾನ

ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ : ಭೇಟಿಯ ವೇಳೆ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ, ಹೊಸ ಹೂಡಿಕೆಗಳ ಆಕರ್ಷಣೆ, ನಗರ ಸಾರಿಗೆ ವ್ಯವಸ್ಥೆಯ ಸುಧಾರಣೆ, ನೀರಾವರಿ ಯೋಜನೆಗಳು, ನವೀನ ತಂತ್ರಜ್ಞಾನ ಆಧಾರಿತ ಅಭಿವೃದ್ಧಿ ಹಾಗೂ ಜನರ ಜೀವನಮಟ್ಟವನ್ನು ಸುಧಾರಿಸುವ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಅಗತ್ಯವಾಗಿದ್ದು, ಈ ಸಂಬಂಧ ಹಲವು ಯೋಜನೆಗಳಿಗೆ ಕೇಂದ್ರದ ಬೆಂಬಲವನ್ನು ಕೋರಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:  RTE ವಿಸ್ತರಣೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

“ಕರ್ನಾಟಕ ಭಾರತದ ಬೆಳವಣಿಗೆಯ ಪ್ರಮುಖ ಶಕ್ತಿ” : ಕರ್ನಾಟಕ ದೇಶದ ಆರ್ಥಿಕ ಹಾಗೂ ತಾಂತ್ರಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. “ಕರ್ನಾಟಕವು ಯಾವಾಗಲೂ ಭಾರತದ ಬೆಳವಣಿಗೆಯ ಕಥೆಗೆ ಪ್ರಮುಖ ಕೊಡುಗೆ ನೀಡಿದೆ. ಮುಂದಿನ ದಿನಗಳಲ್ಲಿಯೂ ಈ ಪಾತ್ರವನ್ನು ಇನ್ನಷ್ಟು ಬಲಪಡಿಸುವ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಐಟಿ, ಜೈವಿಕ ತಂತ್ರಜ್ಞಾನ, ಉತ್ಪಾದನಾ ವಲಯ, ಸ್ಟಾರ್ಟ್‌ಅಪ್ ಪರಿಸರ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸುವ ಬಗ್ಗೆ ಚರ್ಚೆ ನಡೆದಿರುವ ಸಾಧ್ಯತೆಯಿದೆ.

ಇದನ್ನೂ ಓದಿ:  ‘ಗೃಹಿಣಿ’ ಪದಕ್ಕೆ ಹೊಸ ಅರ್ಥ ನೀಡಿದ ಸುಪ್ರೀಂ ಕೋರ್ಟ್

ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಒತ್ತು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಉತ್ತಮ ಸಹಕಾರ ಅಗತ್ಯವೆಂದು ಒತ್ತಿ ಹೇಳಿರುವ ಮುಖ್ಯಮಂತ್ರಿ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಆತ್ಮದೊಂದಿಗೆ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಸಿದ್ಧವಾಗಿರುವುದಾಗಿ ತಿಳಿಸಿದ್ದಾರೆ.

ಅಭಿವೃದ್ಧಿ ಯೋಜನೆಗಳನ್ನು ವೇಗವಾಗಿ ಅನುಷ್ಠಾನಗೊಳಿಸುವುದು, ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವುದು ಹಾಗೂ ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೇಂದ್ರದೊಂದಿಗೆ ನಿರಂತರ ಸಹಯೋಗ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ವಿವಿಯಲ್ಲಿ ಮತ್ತೊಂದು ಹಗರಣದ ಆರೋಪ; ‘ಹಣ ಕೊಟ್ಟರೆ ಪಾಸ್’ ದಂಧೆ ಬಯಲು ಎಂದ ABVP

ರಾಜಕೀಯ ಮಹತ್ವವೂ ಪಡೆದ ಭೇಟಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಡಿ.ಕೆ. ಶಿವಕುಮಾರ್ ನಡೆಸಿರುವ ಈ ಮೊದಲ ಅಧಿಕೃತ ಭೇಟಿ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ. ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ನೆರವು, ಹಣಕಾಸು ಹಂಚಿಕೆ ಹಾಗೂ ಮೂಲಸೌಕರ್ಯ ವಿಸ್ತರಣೆಯಂತಹ ವಿಷಯಗಳು ಮುಂದಿನ ದಿನಗಳಲ್ಲಿ ಹೆಚ್ಚಿನ ವೇಗ ಪಡೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಭೇಟಿಯ ಅಂತ್ಯದಲ್ಲಿ “ಬಲಿಷ್ಠ ಕರ್ನಾಟಕ ನಿರ್ಮಾಣದ ಮೂಲಕ ಬಲಿಷ್ಠ ಭಾರತಕ್ಕೆ ಅರ್ಥಪೂರ್ಣ ಕೊಡುಗೆ ನೀಡಬಹುದು” ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ದೂರಿಗೆ ಸ್ಪಂದಿಸಿದ ರೈಲ್ವೆ ಸಚಿವರು: ಜುಲೈ 15ರೊಳಗೆ ಹೊಸ IRCTC ವೆಬ್‌ಸೈಟ್

The post PM ಮೋದಿ ಭೇಟಿ ಮಾಡಿದ CM ಡಿ.ಕೆ. ಶಿವಕುಮಾರ್: ಅಭಿವೃದ್ಧಿ ಅಜೆಂಡಾ ಕುರಿತು ಮಾತುಕತೆ appeared first on Samyukta Karnataka.

DK ಸರ್ಕಾರದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್‌ಗೆ ಹೊಸ ಸವಾಲು
ರಾಮಲಿಂಗಾ ರೆಡ್ಡಿ ಬಳಿಕ ಮುನಿಯಪ್ಪ ಅಸಮಾಧಾನ: ಡಿಕೆಶಿ ಸಂಪುಟದಲ್ಲಿ ಭಿನ್ನಮತ ತೀವ್ರ?

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಪೂರ್ಣಗೊಂಡ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತದ ಧ್ವನಿಗಳು ಕೇಳಿಬರುತ್ತಿವೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಖಾತೆ ಹಂಚಿಕೆ ಕುರಿತು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಮತ್ತು ಪಕ್ಷದ ಹೈಕಮಾಂಡ್‌ಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವೇಳೆ ಹಿರಿಯ ನಾಯಕರ ಅನುಭವ ಮತ್ತು ಹಿರಿತನಕ್ಕೆ ಸಮರ್ಪಕ ಗೌರವ ನೀಡಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ರಾಮಲಿಂಗಾ ರೆಡ್ಡಿ

‘ಹಿರಿಯ ನಾಯಕರನ್ನು ಸಮಾನವಾಗಿ ನೋಡಬೇಕು’ : ತಮ್ಮ ರಾಜಕೀಯ ಅನುಭವವನ್ನು ಉಲ್ಲೇಖಿಸಿದ ಮುನಿಯಪ್ಪ, ತಾವು ಎಂಟು ಬಾರಿ ಚುನಾವಣೆ ಗೆದ್ದಿರುವ ಹಿರಿಯ ನಾಯಕನಾಗಿದ್ದರೂ ಖಾತೆ ಹಂಚಿಕೆಯಲ್ಲಿ ಆ ಅಂಶವನ್ನು ಪರಿಗಣಿಸಿಲ್ಲ ಎಂದು ಹೇಳಿದರು. “ಪಕ್ಷದಲ್ಲಿ ಎಲ್ಲ ನಾಯಕರನ್ನೂ ಸಮಾನ ದೃಷ್ಟಿಯಿಂದ ನೋಡಬೇಕು. ಹಿರಿಯರು ಮತ್ತು ಕಿರಿಯರು ಎಂಬ ಭೇದವಿಲ್ಲದೆ ಸಮತೋಲನ ಕಾಪಾಡುವುದು ನಾಯಕತ್ವದ ಜವಾಬ್ದಾರಿ. ಈ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರನ್ನು ಒಂದೇ ರೀತಿಯಲ್ಲಿ ಪರಿಗಣಿಸಬೇಕು” ಎಂದು ಅವರು ಅಭಿಪ್ರಾಯಪಟ್ಟರು.

ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.https://t.co/XmnkWabQIa pic.twitter.com/naXLjtCl03
— Samyukta Karnataka (@SamyuktaKarnatk) June 5, 2026

ಖಾತೆ ಬದಲಾವಣೆಗೆ ಮನವಿ : ತಾವು ಈಗಾಗಲೇ ಹಲವು ವರ್ಷಗಳ ಕಾಲ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ನಿರ್ವಹಿಸಿರುವುದರಿಂದ, ಈ ಬಾರಿ ಜನರೊಂದಿಗೆ ನೇರ ಸಂಪರ್ಕ ಹೊಂದಿರುವ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದಾಗಿ ಮುನಿಯಪ್ಪ ತಿಳಿಸಿದರು.

ಇದನ್ನೂ ಓದಿ: BJP ನಾಯಕ ಅಣ್ಣಾಮಲೈ ರಾಜೀನಾಮೆ ಅಂಗೀಕಾರ

ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯವನ್ನು ವಿವರಿಸಿದ್ದಾಗಿ ಅವರು ಹೇಳಿದರು. “ನನ್ನ ಅನುಭವಕ್ಕೆ ತಕ್ಕ ಇಲಾಖೆ ನೀಡುವಂತೆ ಮನವಿ ಮಾಡಿದ್ದೇನೆ. ನನ್ನ ಬೇಡಿಕೆಯನ್ನು ನಾಯಕತ್ವ ಸಕಾರಾತ್ಮಕವಾಗಿ ಪರಿಗಣಿಸುತ್ತದೆ ಎಂಬ ವಿಶ್ವಾಸವಿದೆ. ಖಾತೆ ಬದಲಾವಣೆ ಬಗ್ಗೆ ಶೀಘ್ರದಲ್ಲೇ ಸೂಕ್ತ ನಿರ್ಧಾರ ಹೊರಬೀಳಬಹುದು” ಎಂದು ಹೇಳಿದರು.

ಕಾಂಗ್ರೆಸ್‌ಗೆ ಹೆಚ್ಚುತ್ತಿರುವ ಸವಾಲು : ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಸಚಿವರ ಅಸಮಾಧಾನ ಬಹಿರಂಗವಾಗಿರುವುದು ಕಾಂಗ್ರೆಸ್‌ಗೆ ಮುಜುಗರ ಉಂಟುಮಾಡಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆಳವಣಿಗೆ ಇನ್ನೂ ಚರ್ಚೆಯಲ್ಲಿರುವಾಗಲೇ, ಮುನಿಯಪ್ಪ ಅವರ ಹೇಳಿಕೆ ಸರ್ಕಾರದ ಒಳಗಿನ ಅಸಮಾಧಾನವನ್ನು ಮತ್ತಷ್ಟು ಬಹಿರಂಗಗೊಳಿಸಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಶೈಕ್ಷಣೀಕ ಪ್ರಗತಿಗೆ ʼಜಾಣರ ಗುರುʼ ಪತ್ರಿಕೆ ನೆರವು

2028 ಚುನಾವಣೆಯ ಎಚ್ಚರಿಕೆ : ಪಕ್ಷದ ಒಳಗಿನ ಗೊಂದಲಗಳನ್ನು ಶೀಘ್ರ ಪರಿಹರಿಸದಿದ್ದರೆ ಅದರ ಪರಿಣಾಮ ಮುಂದಿನ ವಿಧಾನಸಭಾ ಚುನಾವಣೆಯ ಮೇಲೆ ಬೀಳಬಹುದು ಎಂದು ಮುನಿಯಪ್ಪ ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ. ನಾಯಕತ್ವವು ಹಿರಿಯ ನಾಯಕರ ಭಾವನೆಗಳಿಗೆ ಸ್ಪಂದಿಸಿ, ಸಮನ್ವಯ ಸಾಧಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ಆರಂಭಿಸುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಖಾತೆ ಪುನರ್‌ಹಂಚಿಕೆ ಅಥವಾ ಸಂಪುಟ ವಿಸ್ತರಣೆಯ ಕುರಿತು ಚರ್ಚೆಗಳು ಮತ್ತಷ್ಟು ವೇಗ ಪಡೆಯುವ ನಿರೀಕ್ಷೆಯಿದೆ.

ಡಿಕೆಶಿ ಸಮಗ್ರ ಕರ್ನಾಟಕದ ಮುಖ್ಯಮಂತ್ರಿ ಆದಾರ?

The post DK ಸರ್ಕಾರದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್‌ಗೆ ಹೊಸ ಸವಾಲು appeared first on Samyukta Karnataka.

ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಆಗಲಿದ್ದಾರೆ ಡಿ.ಕೆ. ಶಿವಕುಮಾರ್!
ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದು, ಮುಖ್ಯಮಂತ್ರಿಗಳ ಪೈಕಿ ಅಗ್ರಸ್ಥಾನದಲ್ಲಿ ಇರಲಿದ್ದಾರೆ. ಅವರ ಆಸ್ತಿ ಮೌಲ್ಯ ಸುಮಾರು ₹1,413 ಕೋಟಿ ಎಂದು ವರದಿಯಾಗಿದೆ.

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು. ಅವರ ಘೋಷಿತ ಆಸ್ತಿ ಮೌಲ್ಯ ₹931 ಕೋಟಿ ಎಂದು ಹೇಳಲಾಗಿದೆ.

ಮೂರನೇ ಸ್ಥಾನದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಇದ್ದು, ಅವರ ಆಸ್ತಿ ಮೌಲ್ಯ ಸುಮಾರು ₹648 ಕೋಟಿ ಎಂದು ವರದಿಯಾಗಿದೆ. ನಾಲ್ಕನೇ ಸ್ಥಾನದಲ್ಲಿ ಅರುಣಾಚಲ ಪ್ರದೇಶದ ಪೇಮಾ ಖಂಡು ₹332 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಕರ್ನಾಟಕದ ಸಿದ್ದರಾಮಯ್ಯ ಪಡೆದಿದ್ದು, ಅವರ ಘೋಷಿತ ಆಸ್ತಿ ಮೌಲ್ಯ ₹ 51 ಕೋಟಿ ಎಂದು ಹೇಳಲಾಗಿದೆ.

ಈ ಮೂಲಕ ದೇಶದ ಮೂವರು ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ನಾಯಕರು ಸ್ಥಾನ ಪಡೆದಿರುವುದು ವಿಶೇಷವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಪ್ರಭಾವದ ಜೊತೆಗೆ ಆಸ್ತಿ ಸಂಪತ್ತಿನ ವಿಚಾರದಲ್ಲಿಯೂ ಡಿ.ಕೆ. ಶಿವಕುಮಾರ್ ಗಮನ ಸೆಳೆದಿದ್ದಾರೆ.

ಗಾಂಧಿ ಕುಟುಂಬಕ್ಕೆ ಧನ್ಯವಾದ ಅರ್ಪಿಸಿದ ನಿಯೋಜಿತ ಸಿಎಂ ಡಿಕೆಶಿ

The post ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಆಗಲಿದ್ದಾರೆ ಡಿ.ಕೆ. ಶಿವಕುಮಾರ್! appeared first on Samyukta Karnataka.

ಸಿದ್ದರಾಮಯ್ಯನವರಿಗೆ ರಾಷ್ಟ್ರ ಮಟ್ಟದ ಜವಾಬ್ದಾರಿ ನೀಡಿ ಆದೇಶ
ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರ ಮಟ್ಟದ ಜವಾಬ್ದಾರಿಯನ್ನು ನೀಡಿದೆ.

ಸಿದ್ದರಾಮಯ್ಯನವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ಸಿದ್ದರಾಮಯ್ಯ ಅವರನ್ನು ನೇಮಕ‌ ಮಾಡಲಾಗಿದ್ದು, ಸದ್ಯ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಕಸರತ್ತಿನ ನಡುವೆ ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಹೊಸ ಸಿಎಂ ಬಂದ ಮೇಲೆ ಕಮಿಷನ್ ಪ್ರಮಾಣ ಶೇ. 70ಕ್ಕೆ ಹೆಚ್ಚಳ

The post ಸಿದ್ದರಾಮಯ್ಯನವರಿಗೆ ರಾಷ್ಟ್ರ ಮಟ್ಟದ ಜವಾಬ್ದಾರಿ ನೀಡಿ ಆದೇಶ appeared first on Samyukta Karnataka.

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಫಿಕ್ಸ್?; 2 ದಿನದಲ್ಲೇ ಪದತ್ಯಾಗ ಮಾಡಲು ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಗಡುವು!
ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಹುದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಈಗ ಅಂತಿಮ ಘಟ್ಟ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನರ್‌ ರಚನೆಯ ಆಶಯದೊಂದಿಗೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದುಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. “ನಾವು ನಾಯಕತ್ವ ಬದಲಾವಣೆಗೆ ತೀರ್ಮಾನಿಸಿದ್ದೇವೆ, ನೀವು ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಜಾತಿ ಸಮೀಕ್ಷೆಯ ವರದಿ ಸ್ವೀಕರಿಸಲು ಕನಿಷ್ಠ 15 ದಿನಗಳ ಕಾಲಾವಕಾಶ ನೀಡಬೇಕು ಎಂಬ ಸಿದ್ದರಾಮಯ್ಯ ಕೊಟ್ಟ ಮನವಿಯನ್ನು ರಾಹುಲ್ ಗಾಂಧಿ ತಳ್ಳಿಹಾಕಿದ್ದಾರೆ. ಮೂರು ವರ್ಷಗಳ ಹಿಂದಿನ ಅಧಿಕಾರ ಹಸ್ತಾಂತರದ ಒಪ್ಪಂದವನ್ನು ನೆನಪಿಸಿ, “ವರದಿ ಸ್ವೀಕಾರ ಸೇರಿದಂತೆ ಎಲ್ಲಾ ಬಾಕಿ ಕೆಲಸಗಳನ್ನು ಎರಡು ದಿನಗಳ ಒಳಗಾಗಿ ಮುಗಿಸಿ ಪದತ್ಯಾಗ ಮಾಡಿ” ಎಂದು ಸೂಚಿಸಿದ್ದಾರೆ. ಪಕ್ಷದ ವಿಶ್ವಾಸಾರ್ಹತೆ ಉಳಿಸಿಕೊಳ್ಳಲು ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಸಹ ನಾಯಕತ್ವ ಬದಲಾವಣೆಗೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ಹಾಗೂ ಉಳಿದ ಅವಧಿಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂಬ ಒಪ್ಪಂದಕ್ಕೆ ಹೈಕಮಾಂಡ್ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕಳೆದ ಆರು ತಿಂಗಳಲ್ಲಿ 17 ಬಾರಿ ದೆಹಲಿ ಯಾತ್ರೆ ಮಾಡಿದ್ದ ಶಿವಕುಮಾರ್ ಒತ್ತಡಕ್ಕೆ ಕೊನೆಗೂ ಮಣಿದಿರುವ ಹೈಕಮಾಂಡ್, ಸೂಕ್ತ ಕಾಲದಲ್ಲಿ ಕಠಿಣ ತೀರ್ಮಾನ ತೆಗೆದುಕೊಳ್ಳುವ ಸಂದೇಶ ರವಾನಿಸಿದೆ.

ಅಲ್ಲದೇ.. ಹೈಕಮಾಂಡ್ ನಿರ್ಧಾರದ ಬೆನ್ನಲ್ಲೇ ಸಿದ್ದರಾಮಯ್ಯ, ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಶಾಸಕರ ಸಹಿ ಸಂಗ್ರಹಿಸಿ ಒತ್ತಡ ಹೇರುವ ಆಪ್ತರ ಸಲಹೆಯನ್ನು ನಿರಾಕರಿಸಿರುವ ಸಿಎಂ, ರಾಹುಲ್ ಗಾಂಧಿ ಸೂಚನೆಯಂತೆ ಮುನ್ನಡೆಯಲು ನಿರ್ಧರಿಸಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್ ಬೆಂಬಲಿಗರು ಭರ್ಜರಿ ಸ್ವಾಗತಕ್ಕೆ ಸಜ್ಜಾಗುತ್ತಿದ್ದು, ಪರಿಸ್ಥಿತಿ ತಿಳಿಯಾಗುವವರೆಗೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡದಂತೆ ಹೈಕಮಾಂಡ್ ಉಭಯ ನಾಯಕರಿಗೂ ಕಠಿಣ ತಾಕೀತು ಮಾಡಿದೆ.

The post ಕರ್ನಾಟಕದಲ್ಲಿ ಸಿಎಂ ಬದಲಾವಣೆ ಫಿಕ್ಸ್?; 2 ದಿನದಲ್ಲೇ ಪದತ್ಯಾಗ ಮಾಡಲು ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಗಡುವು! appeared first on Samyukta Karnataka.

ತ್ಯಾಗ ಬಲಿದಾನದ ಸಂಕೇತ ಈದ್-ಉಲ್-ಅಧಾ
ಬಕ್ರೀದ್ ಇಸ್ಲಾಂ ಧರ್ಮದ ಅತ್ಯಂತ ಪವಿತ್ರವಾದ ತ್ಯಾಗ ಮತ್ತು ಬಲಿದಾನದ ಹಬ್ಬ. ಪ್ರತಿ ವರ್ಷ ಇಸ್ಲಾಮಿಕ್ ಕ್ಯಾಲೆಂಡರನ್ನ ಕೊನೆಯ ತಿಂಗಳ ಜು-ಅಲ್-ಹಿಜ್ನಲ್ಲಿ ಆಚರಿಸಲಾಗುತ್ತದೆ. ಇದನ್ನು ಈದ್-ಉಲ್-ಅಧಾ ಹಾಗೂ ಬಕ್ರೀದ್ ಎಂದೂ ಕರೆಯುತ್ತಾರೆ. ಬಕ್ರೀದ್ ಹಬ್ಬವು ತ್ಯಾಗದ ಸಂದೇಶವನ್ನು ನೀಡುತ್ತದೆ. ಅಂದರೆ ದೇವರು ತೋರಿಸಿದ ದಾರಿಯಲ್ಲಿ ನಡೆಯಬೇಕು ಎಂಬುದನ್ನು ಸೂಚಿಸುತ್ತದೆ. ಬಕ್ರೀದ್ ಹಬ್ಬದ ಆಚರಣೆಯನ್ನು ಚಂದ್ರನ ದರ್ಶನದಿಂದ ನಿರ್ಧರಿಸಲಾಗುತ್ತದೆ.

ಹಜರತ್ ಇಬ್ರಾಹಿಂ ದೇವರ ಸೇವಕರಾಗಿದ್ದರು, ಅವರು ದೇವರಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದರು. ಒಮ್ಮೆ ಹಜರತ್ ಇಬ್ರಾಹಿಂ ತನ್ನ ಪ್ರಾಣಕ್ಕಿಂತ ಪ್ರೀತಿಯ ಒಬ್ಬನೇ ಮಗನನ್ನು ತ್ಯಾಗ ಮಾಡುವ ಕನಸು ಕಂಡರು. ಹಜರತ್ ಇಬ್ರಾಹಿಂ ಈ ಕನಸನ್ನು ದೇವರ ಸಂದೇಶವೆಂದು ಪರಿಗಣಿಸಿ, ಈ ಕನಸನ್ನು ಅಲ್ಲಾಹನ ಇಚ್ಛೆಯಂತೆ ಸ್ವೀಕರಿಸಿ, ದೇವರ ಮಾರ್ಗದಲ್ಲಿ ತನ್ನ 10 ವರ್ಷದ ಮಗನನ್ನು ಬಲಿಕೊಡಲು ನಿರ್ಧರಿಸಿದನು. ಅವರ ದೇವನಿಷ್ಠೆಯನ್ನು ಮೆಚ್ಚಿದ ದೇವರು ಆ ಬಲಿಯನ್ನು ತಡೆದು, ಆ ಜಾಗದಲ್ಲಿ ಕುರಿಯೊಂದನ್ನು ಬಲಿ ಕೊಡುವಂತೆ ತಿಳಿಸುತ್ತಾನೆ. ಈ ಘಟನೆಯ ಸ್ಮರಣಾರ್ಥವಾಗಿ ಪ್ರತಿ ವರ್ಷ ಬಕ್ರೀದ್ ಆಚರಿಸಲಾಗುತ್ತದೆ. ಹಬ್ಬದ ದಿನ ಮುಂಜಾನೆ ಮುಸ್ಲಿಮರು ಹೊಸ ಬಟ್ಟೆಗಳನ್ನು ಧರಿಸಿ, ಮಸೀದಿ ಅಥವಾ ಈದ್ಗಾಗಳಿಗೆ ತೆರಳಿ ವಿಶೇಷ ಪ್ರಾರ್ಥನೆ (ನಮಾಜ್) ಸಲ್ಲಿಸುತ್ತಾರೆ. ಪ್ರಾರ್ಥನೆಯ ನಂತರ, ಆರ್ಥಿಕವಾಗಿ ಶಕ್ತರಾದವರು ಕುರಿ, ಮೇಕೆ ಅಥವಾ ಒಂಟೆಯನ್ನು ಬಲಿ (ಕುರ್ಬಾನಿ) ನೀಡುತ್ತಾರೆ.

ಬಲಿ ನೀಡಿದ ಮಾಂಸವನ್ನು ಮೂರು ಸಮಾನ ಭಾಗಗಳಾಗಿ ವಿಂಗಡಿಸಲಾಗುತ್ತದೆ. ಒಂದು ಭಾಗವನ್ನು ತಮ್ಮ ಕುಟುಂಬಕ್ಕೆ, ಎರಡನೆಯ ಭಾಗವನ್ನು ಸಂಬಂಧಿಕರಿಗೆ ಮತ್ತು ಮೂರನೆಯ ಭಾಗವನ್ನು ಬಡವರು ಹಾಗೂ ನಿರ್ಗತಿಕರಿಗೆ ಹಂಚಲಾಗುತ್ತದೆ.

ಹಬ್ಬದ ಮಹತ್ವ: ಬಕ್ರೀದ್ ಕೇವಲ ಪ್ರಾಣಿ ಬಲಿ ನೀಡುವುದಕ್ಕೆ ಸೀಮಿತವಾಗಿಲ್ಲ. ಬದಲಿಗೆ, ಇದು ಸ್ವಾರ್ಥವನ್ನು ತ್ಯಜಿಸುವುದು, ದೀನ-ದಲಿತರಿಗೆ ಸಹಾಯ ಮಾಡುವುದು ಮತ್ತು ದೇವರ ಆಜ್ಞೆಗೆ ಸಂಪೂರ್ಣವಾಗಿ ಶರಣಾಗುವುದನ್ನು ಸಂಕೇತಿಸುತ್ತದೆ. ಈ ಹಬ್ಬವು ಮಾನವೀಯತೆ, ಸೌಹಾರ್ದತೆ ಮತ್ತು ಪರಸ್ಪರ ಪ್ರೀತಿಯನ್ನು ಉತ್ತೇಜಿಸುತ್ತದೆ.

The post ತ್ಯಾಗ ಬಲಿದಾನದ ಸಂಕೇತ ಈದ್-ಉಲ್-ಅಧಾ appeared first on Samyukta Karnataka.

ಸಿದ್ದರಾಮಯ್ಯ–ಡಿಕೆಶಿ ದೆಹಲಿ ಸಭೆ: ವದಂತಿಗಳಿಗೆ ಕಾಂಗ್ರೆಸ್ ತೆರೆ
ನವದೆಹಲಿ: ರಾಜಧಾನಿ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್‌ ಆಗಿರುವ ರಾಜ್ಯ ರಾಜಕಾರಣದ ಚರ್ಚೆ ನವದೆಹಲಿಯಲ್ಲಿಂದು ಇಡೀ ದಿನ ನಡೆದಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ ಸೇರಿದಂತೆ ಹಿರಿಯ ಸಚಿವರು ಆಪ್ತರು ಚರ್ಚೆ ನಡೆಸಿ ಸಂಜೆಯವರೆಗೂ ಮಾತುಕತೆ ನಡೆಸಿದ್ದಾರೆ.

ಇಡೀ ದಿನ ನಡೆದ ರಾಜಕೀಯ ಚರ್ಚೆಗಳು ಹಾಗೂ ವದಂತಿಗಳ ನಡುವೆ ಸಂಜೆ ಸುದ್ದಿಗೋಷ್ಠಿ ನಡೆಸಿ ಎಲ್ಲದಕ್ಕೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮುಂಬರುವ ವಿಧಾನ ಪರಿಷತ್‌ ಚುನಾವಣೆ ಮತ್ತು ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕಾರ್ಯತಂತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳು ಕೇವಲ ಊಹೆಯಾಗಿದೆ. ಸಭೆಯಲ್ಲಿ ಚುನಾವಣೆ ವಿಷಯ ಬಿಟ್ಟು ಬೇರೆ ಯಾವುದೇ ವಿಷಯದ ಬಗ್ಗೆ ಚರ್ಚೆ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಪ್ರಶ್ನೆಗೆ ಯಾವ ನಾಯಕರು ಉತ್ತರಿಸಿದೆ ಮೌನವಾಗಿ ತೆರಳಿದರು.

ಗಡಿಯಲ್ಲಿ ಮತ್ತೆ ಕನ್ನಡ ಕಿಡಿ; ಪಾಲಿಕೆ ಠರಾವ್‌ಗೆ ಜೂನ್ 2 ಗಡುವು

The post ಸಿದ್ದರಾಮಯ್ಯ–ಡಿಕೆಶಿ ದೆಹಲಿ ಸಭೆ: ವದಂತಿಗಳಿಗೆ ಕಾಂಗ್ರೆಸ್ ತೆರೆ appeared first on Samyukta Karnataka.

ಶತಾವಧಾನಿ ಆರ್. ಗಣೇಶ್, ಅಂಕೇಗೌಡ, ಸುಶೀಲಮ್ಮಗೆ ಪದ್ಮ ಪ್ರಶಸ್ತಿ ಪ್ರದಾನ
ಹುಬ್ಬಳ್ಳಿ: ಕರ್ನಾಟಕದ ಮೂವರು ಸೇರಿದಂತೆ ಒಟ್ಟು 66 ಜನ ಸಾಧಕರಿಗೆ ಮೊದಲ ಹಂತದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ಪದ್ಮ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು.

ಕರ್ನಾಟಕದವರಾದ ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಕಲಾ ಕ್ಷೇತ್ರದಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ಸಮಾಜ ಸೇವೆಯಲ್ಲಿ ಅಂಕೇಗೌಡ ಎಂ. ಮತ್ತು ಡಾ. ಎಸ್. ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಶತಾವಧಾನಿ ಡಾ. ಆರ್. ಗಣೇಶ್ ಅವರು, ಅವಧಾನ ಕಲೆಯ ಪಂಡಿತರು, ಭಾರತ ಮತ್ತು ವಿದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡುವ ಮೂಲಕ ಪ್ರಾಚೀನ ಸಂಸ್ಕೃತ ಕಲೆಯಾದ ಅಷ್ಟಾವಧಾನವನ್ನು ಪುನಶ್ಚೇತನಗೊಳಿಸಿದ್ದಾರೆ. ಕಲಾ ಕ್ಷೇತ್ರದ ಇವರ ಸಾಧನೆಗಾಗಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಂಕೇಗೌಡ ಎಂ. ಅವರು, ಪ್ರಸಿದ್ಧ ಪುಸ್ತಕ ಪ್ರೇಮಿ ಮತ್ತು ಜ್ಞಾನ ಪಸರಿಸುತ್ತಿರುವ ಇವರು ತಮ್ಮ ನಿವಾಸದಲ್ಲಿ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಒಳಗೊಂಡ ಬೃಹತ್ ಉಚಿತ ಸಾರ್ವಜನಿಕ ಗ್ರಂಥಾಲಯವನ್ನು ಸ್ವತಃ ನಿರ್ಮಿಸಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಾ. ಎಸ್. ಜಿ. ಸುಶೀಲಮ್ಮ ಅವರು, ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಪ್ರಸಿದ್ಧ ಸಮಾಜ ಸೇವಕಿ ಮತ್ತು ಸಂಸ್ಥಾಪಕ ಅಧ್ಯಕ್ಷರು. ಅನಾಥ ಮಕ್ಕಳು, ಸಂಕಷ್ಟದಲ್ಲಿರುವ ಮಹಿಳೆಯರು, ಬುಡಕಟ್ಟು ಸಮುದಾಯಗಳು, ಹಿರಿಯ ನಾಗರಿಕರು ಸೇರಿದಂತೆ ಮುಂತಾದವರ ಸೇವೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪತಿ ಧರ್ಮೇಂದ್ರ ಪರವಾಗಿ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

The post ಶತಾವಧಾನಿ ಆರ್. ಗಣೇಶ್, ಅಂಕೇಗೌಡ, ಸುಶೀಲಮ್ಮಗೆ ಪದ್ಮ ಪ್ರಶಸ್ತಿ ಪ್ರದಾನ appeared first on Samyukta Karnataka.

ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ
ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಅವಧಿಗೂ ಮುನ್ನ ಈ ಬಾರಿ ಮುಂಗಾರು ಆಗಮಿಸುವ ಮುನ್ಸೂಚನೆ ಇದ್ದು, ಈಗಾಗಲೇ ಅದಕ್ಕೆ ಪೂರಕವಾದ ಸನ್ನಿವೇಶಗಳು ವಾತಾವರಣದಲ್ಲಿ ಕಂಡುಬರುತ್ತಿವೆ. ಇದರಿಂದ ಪೂರ್ವ ಮುಂಗಾರು ಚೇತರಿಸಿಕೊಂಡಿದ್ದು, ರಾಜ್ಯದ ಹಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದ್ದು, ಮೇ 23ರವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ. ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಮಧ್ಯಾಹ್ನದ ಬಳಿಕ ಮತ್ತು ರಾತ್ರಿ ಸಮಯದಲ್ಲಿ ಮಳೆಯಾಗಲಿದೆ.

ಪೂರ್ವ ಮುಂಗಾರು ಮಳೆಯಾಗಿರುವ ಹಿನ್ನೆಲೆಯಲ್ಲಿ ಬಹಳಷ್ಟು ಕಡೆಗಳಲ್ಲಿ ಮಿಂಚು, ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಈ ಬಾರಿ ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಮಾರ್ಚ್ ತಿಂಗಳು ಹೊರತುಪಡಿಸಿದರೆ, ಜನವರಿಯಿಂದ ಇದುವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

1ನೇ ತರಗತಿಗೆ ವಯೋಮಿತಿ ಸಡಿಲಿಕೆ: ಹೈಕೋರ್ಟ್ ಸೂಚನೆ

The post ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ appeared first on Samyukta Karnataka.