#KarnatakaPolitics Archives - Samyukta Karnataka

ಮಾಜಿ ಸಿಎಂ ಸಿದ್ದು ಎದರು ಶಾಸಕ ಪ್ರದೀಪ್‌ ಈಶ್ವರ್‌ ಕಣ್ಣಿರು: ಚಪ್ಪಲಿ ಎಸೆತ ಪ್ರಕರಣ; ತನಿಖೆಗೆ ಆದೇಶ
ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಮಾಜಿ ಸಿಎಂ ಎದುರು ಕಣ್ಣೀರು ಹಾಕಿದ ಘಟನೆ ನಡೆದಿದೆ. ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮಗೆ ಮತ್ತು ತಮ್ಮ ಕುಟುಂಬಕ್ಕೆ ನಿಂದಿಸಿ, ಚಪ್ಪಲಿ ಎಸೆದಿರುವ ಕುರಿತು ಪ್ರದೀಪ್ ಈಶ್ವರ್ ಭಾವುಕರಾಗಿ ವಿವರಿಸಿದ್ದಾರೆ. ಈ ವೇಳೆ ಶಾಸಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, “ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡದೆ ಎದುರಿಸಬೇಕು, ನಾವು ನಿಮ್ಮೊಂದಿಗಿದ್ದೇವೆ” ಎಂದು ಸಾಂತ್ವನ ಹೇಳಿದ್ದಾರೆ.

ನಂತರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಿದ್ದರಾಮಯ್ಯ, ಗೃಹ ಸಚಿವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕರ ಮೇಲೆ ಇಂತಹ ದಾಳಿ ನಡೆದಿರುವುದಕ್ಕೆ ಬೇಸರ ವ್ಯಕ್ತಪಡಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸುವಂತೆ ಪ್ರಿಯಾಂಕ್ ಖರ್ಗೆಗೆ ಸೂಚಿಸಿದ್ದಾರೆ. ಹಾಗೇ ಕರ್ತವ್ಯ ಲೋಪ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮತ್ತೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ವಿರೋಧ ಪಕ್ಷಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ. ಯುವ ನಾಯಕನ ಜನಪ್ರಿಯತೆ ಜೀರ್ಣಿಸಿಕೊಳ್ಳಲಾಗದೆ ನಡೆಸಿರುವ ಈ ನೀಚ ಕೃತ್ಯವು ವಿಪಕ್ಷಗಳ ಹತಾಶೆ ಹಾಗೂ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಇಂತಹ ಹಿಂಸಾತ್ಮಕ ದಾಳಿಗಳಿಂದ ನಮ್ಮ ನಾಯಕರು ಧೃತಿಗೆಡುವುದಿಲ್ಲ, ಬದಲಾಗಿ ಹೋರಾಟದ ಹಾದಿ ಮತ್ತಷ್ಟು ಗಟ್ಟಿಯಾಗುತ್ತದೆ” ಎಂದು ಕಿಡಿಕಾರಿದ್ದಾರೆ.

“ಇದು ಬಸವಣ್ಣ, ಕುವೆಂಪು ಅಂತಹ ಶಾಂತಿಪ್ರಿಯ ಕರ್ನಾಟಕ. ಇಲ್ಲಿ ಇಂತಹ ವಿಕೃತ, ಹಿಂಸಾತ್ಮಕ ಪುಂಡಾಟಿಕೆಗಳಿಗೆ ಜಾಗವಿಲ್ಲ. ಸಾರ್ವಜನಿಕ ಸಭ್ಯತೆಯ ಗಡಿ ದಾಟಿದ ಪ್ರತಿಯೊಬ್ಬರ ವಿರುದ್ಧವೂ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ,” ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.

The post ಮಾಜಿ ಸಿಎಂ ಸಿದ್ದು ಎದರು ಶಾಸಕ ಪ್ರದೀಪ್‌ ಈಶ್ವರ್‌ ಕಣ್ಣಿರು: ಚಪ್ಪಲಿ ಎಸೆತ ಪ್ರಕರಣ; ತನಿಖೆಗೆ ಆದೇಶ appeared first on Samyukta Karnataka.

ಅಂಕಿ-ಅಂಶಗಳಿಲ್ಲದೆ ಬಂದ ಆಫೀಸರ್ಸ್: ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ತರಾಟೆ
ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಹಾಗೂ ಗಿಡ ನೆಡುವ ಯೋಜನೆಗಳಿಗೆ ಸಂಬಂಧಿಸಿದಂತೆ ಸೂಕ್ತ ಅಂಕಿ-ಅಂಶಗಳಿಲ್ಲದೆ ಜಿಬಿಎ (GBA) ಸಭೆಗೆ ಬಂದಿದ್ದ ಅಧಿಕಾರಿಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದರೂ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೆ ಬಂದಿದ್ದೀರಾ? ನಾನೇನು ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?” ಎಂದು ಕಿಡಿ ಕಾರಿದ್ದಾರೆ.

ಹಾಗೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನಗರದಲ್ಲಿ ಕಳೆದ 50 ವರ್ಷಗಳಿಂದ ಬೀದಿ ನಾಯಿಗಳ ಸಮಸ್ಯೆ ಇದೆ. ಬಿಬಿಎಂಪಿ ರಚನೆಯಾದ ಬಳಿಕ 8.80 ಲಕ್ಷ ಹಾಗೂ 2016 ರಿಂದ 2023ರ ಅವಧಿಯಲ್ಲಿ 3.33 ಲಕ್ಷ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ 2019ರ ಸರ್ವೆ ಪ್ರಕಾರ 3.10 ಲಕ್ಷ ಹಾಗೂ 2023ರ ಸರ್ವೆ ಪ್ರಕಾರ ನಗರದಲ್ಲಿ ಕೇವಲ 2.79 ಲಕ್ಷ ಬೀದಿ ನಾಯಿಗಳಿವೆ. ಅಧಿಕಾರಿಗಳ ಲೆಕ್ಕಾಚಾರ ನೋಡಿದರೆ ಇರುವ ನಾಯಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ನಡೆದಂತಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಇದಕ್ಕಾಗಿ 42 ಕೋಟಿ ರೂ. ಜನರ ತೆರಿಗೆ ಹಣ ಖರ್ಚಾಗಿದ್ದರೂ, ನಾಯಿಗಳ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸಂತಾನಹರಣ ಚಿಕಿತ್ಸೆಯ ಸಂಖ್ಯೆಯನ್ನು ದ್ವಿಗುಣಗೊಳಿಸಲು ಮತ್ತು ಅಗತ್ಯವಿದ್ದರೆ ಹೊರಗುತ್ತಿಗೆ ಸಿಬ್ಬಂದಿ ಬಳಸಿಕೊಳ್ಳಲು ಸೂಚಿಸಿದ್ದಾರೆ.

ನಂತರ ಇದೇ ವೇಳೆ ಗಿಡ ನೆಡುವ ಯೋಜನೆಯಲ್ಲೂ ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. 2008ರಿಂದ 20 ಲಕ್ಷ ಗಿಡ ನೆಟ್ಟಿರುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ, ಆದ್ರೆ ಮರಗಣತಿ ಪ್ರಕಾರ ನಗರದಲ್ಲಿ ಇರುವುದು ಕೇವಲ 9 ಲಕ್ಷ ಮರಗಳು ಮಾತ್ರ. ಹಾಗಾದರೆ ಉಳಿದ ಗಿಡಗಳು ಎಲ್ಲಿ ಹೋದವು ಎಂದು ಸಚಿವರು ಪ್ರಶ್ನಿಸಿದರು. ಒಂದು ಗಿಡ ನೆಟ್ಟು 3 ವರ್ಷ ನಿರ್ವಹಣೆ ಮಾಡಲು 2,300 ರೂ. ನಿಂದ 3,300 ರೂ. ವೆಚ್ಚ ಮಾಡಲಾಗುತ್ತದೆ. ನಿಯಮದ ಪ್ರಕಾರ ಗುಂಡಿ ತೋಡಿ ಗಿಡ ನೆಡಬೇಕು, ಆದರೆ ನನ್ನ ಸ್ವಂತ ಕ್ಷೇತ್ರದಲ್ಲೇ ಇಂತಹ ಕಾಮಗಾರಿ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳುವ ಮೂಲಕ ವ್ಯವಸ್ಥೆಯನ್ನು ಸಂಪೂರ್ಣ ಸರಿಪಡಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

The post ಅಂಕಿ-ಅಂಶಗಳಿಲ್ಲದೆ ಬಂದ ಆಫೀಸರ್ಸ್: ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ತರಾಟೆ appeared first on Samyukta Karnataka.

ವಿಜಯೇಂದ್ರರನ್ನು ಕಿಕ್ ಔಟ್ ಮಾಡಿ: ವೈರಲ್‌ Audio ಸೃಷ್ಟಿಸಿದ ತಲ್ಲಣ
ವಿಜಯೇಂದ್ರ ನಾಯಕತ್ವದ ಬಗ್ಗೆ ಆಡಿಯೋ ಬಾಂಬ್; ಕೇಸರಿ ಪಾಳಯದಲ್ಲಿ ತಲ್ಲಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಕುರಿತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಧ್ವನಿಯನ್ನೇ ಹೋಲುವ ವೈರಲ್ ಆಡಿಯೋ ರಾಜ್ಯ ಬಿಜೆಪಿ ಪಾಳಯದಲ್ಲಿ ಹೊಸ ಚರ್ಚೆ ಮತ್ತು ತಲ್ಲಣಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಆಡಿಯೋದಲ್ಲಿ, ವಿಜಯೇಂದ್ರ ಅವರನ್ನು ತಕ್ಷಣವೇ ಹುದ್ದೆಯಿಂದ ತೆಗೆದುಹಾಕುವ ಬದಲು ಅವರ ಅವಧಿ ಪೂರ್ಣಗೊಳ್ಳುವವರೆಗೆ ಮುಂದುವರಿಯಲು ಅವಕಾಶ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿರುವುದು ಕೇಳಿಬಂದಿದೆ.

ಇದನ್ನೂ ಓದಿ: SIR ಆತಂಕವೇ: ಜೂನ್‌ 30ರಂದು ಜನರ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಉತ್ತರ

ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯ ಧ್ವನಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಧ್ವನಿಯನ್ನು ಹೋಲುತ್ತದೆ. ಇಂಗ್ಲಿಷ್ ಭಾಷೆಯಲ್ಲಿ ನಡೆದಿರುವ ಸಂಭಾಷಣೆಯಲ್ಲಿ, “ವಿಜಯೇಂದ್ರ ಅವರ ಅವಧಿ ನವೆಂಬರ್‌ನಲ್ಲಿ ಮುಕ್ತಾಯವಾಗಲಿದ್ದು, ಈಗ ಅವರನ್ನು ಹುದ್ದೆಯಿಂದ ತೆಗೆದುಹಾಕಿದರೆ ಅನಗತ್ಯ ಗೊಂದಲ ಉಂಟಾಗಬಹುದು. ಅವರ ಅವಧಿ ಪೂರ್ಣಗೊಂಡ ಬಳಿಕ ಬದಲಾವಣೆ ಮಾಡಿದರೆ ಪಕ್ಷದೊಳಗೆ ಗೊಂದಲ ಸೃಷ್ಟಿಯಾಗುವುದಿಲ್ಲ” ಎಂಬ ಅಭಿಪ್ರಾಯ ವ್ಯಕ್ತವಾಗಿರುವುದು ಕೇಳಿಬಂದಿದೆ.

ಇದೇ ವೇಳೆ, “ಅಕ್ಟೋಬರ್ ವೇಳೆಗೆ ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸಬಹುದು. ಈಗಲೇ ಯಾವುದೇ ಕ್ರಮ ಕೈಗೊಂಡರೆ ಅವರ ಬೆಂಬಲಿಗರು ಎಚ್ಚೆತ್ತುಕೊಳ್ಳಬಹುದು. ಆದ್ದರಿಂದ ಅವಧಿ ಪೂರ್ಣಗೊಂಡ ಬಳಿಕ ಬದಲಾವಣೆ ಮಾಡುವುದು ಸೂಕ್ತ” ಎಂಬ ಮಾತುಗಳೂ ಆಡಿಯೋದಲ್ಲಿ ಕೇಳಿಬಂದಿವೆ.

ಇದನ್ನೂ ಓದಿ: ಭೂಕುಸಿತದಲ್ಲಿ ಸಿಲುಕಿ ಪಾರಾದ ಬೈಕ್ ಸವಾರ: Video ವೈರಲ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ಇನ್ನೂ ಕೆಲವೇ ತಿಂಗಳಲ್ಲಿ ಮೂರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ. ರಾಜ್ಯಾಧ್ಯಕ್ಷರ ಹುದ್ದೆಯ ಅವಧಿ ಮೂರು ವರ್ಷಗಳಿರುವ ಹಿನ್ನೆಲೆಯಲ್ಲಿ ಈ ವೈರಲ್ ಆಡಿಯೋ ಪಕ್ಷದೊಳಗೆ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಆದರೆ, ವೈರಲ್ ಆಗಿರುವ ಆಡಿಯೋ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು, “ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದು ನನ್ನ ಆಡಿಯೋ ಅಲ್ಲ, ನನ್ನದಲ್ಲದ ವಿಡಿಯೋ ಅಥವಾ ಆಡಿಯೋ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇದರ ಸತ್ಯಾಸತ್ಯತೆಯನ್ನು ನೀವೇ ಕಂಡುಹಿಡಿಯಿರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮತ್ತೆ ಖರ್ಗೆ ಪಯಣ: ಪ್ರಮಾಣ ವಚನ ಸ್ವೀಕಾರ

ವೈರಲ್ ಆಗಿರುವ ಆಡಿಯೋದ ಸತ್ಯಾಸತ್ಯತೆ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಹೀಗಾಗಿ, ಈ ಆಡಿಯೋ ಕುರಿತು ಪಕ್ಷದ ನಾಯಕರು ಹಾಗೂ ಹೈಕಮಾಂಡ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಆಡಿಯೋದ ನೈಜತೆ ಸ್ವತಂತ್ರವಾಗಿ ದೃಢಪಟ್ಟಿಲ್ಲ. ಆದ್ದರಿಂದ ಅದರ ಸತ್ಯಾಸತ್ಯತೆ ಕುರಿತು ಅಧಿಕೃತ ಸ್ಪಷ್ಟನೆ ಬರುವವರೆಗೂ ಊಹಾಪೋಹಗಳಿಗೆ ಅವಕಾಶ ನೀಡದಂತೆ ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಗ್ರಾಮೀಣ ಸೊಗಡಿನ ‘ಗ್ರಾಮಾಯಣ’ ಬಿಡುಗಡೆ ದಿನಾಂಕ ಘೋಷಣೆ

The post ವಿಜಯೇಂದ್ರರನ್ನು ಕಿಕ್ ಔಟ್ ಮಾಡಿ: ವೈರಲ್‌ Audio ಸೃಷ್ಟಿಸಿದ ತಲ್ಲಣ appeared first on Samyukta Karnataka.

ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ: ಯಾವ ಸಚಿವರಿಗೆ ಯಾವ ಜಿಲ್ಲೆ? ಇಲ್ಲಿದೆ ಸಂಪೂರ್ಣ ಪಟ್ಟಿ
ಕರ್ನಾಟಕ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದು, ಪ್ರಕೃತಿ ವಿಕೋಪ ಪರಿಸ್ಥಿತಿ ನಿರ್ವಹಣೆಗೆ ಅವರು ನಿಯೋಜಿತಗೊಂಡಿದ್ದಾರೆ. 13 ಸಚಿವರಿಗೆ ವಿವಿಧ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ. ಡಾ.ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಸಚಿವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಒಟ್ಟು 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಪ್ರಕೃತಿ ವಿಕೋಪ ಪರಿಸ್ಥಿತಿ ನಿರ್ವಹಣೆಗೆ ಅವರು ನಿಯೋಜಿತಗೊಂಡಿದ್ದಾರೆ. ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಆದೇಶದ ಪ್ರಕಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

ಇದನ್ನೂ ಓದಿ: 3 ರಾಜ್ಯಗಳು ಒಟ್ಟಾಗಿ ನೀರಾವರಿ ಸಮಸ್ಯೆ ಬಗೆಹರಿಸೋಣ: ಡಿಕೆ

ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಇನ್ನು ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ: ಮುನಿರಾಬಾದ್‌: ಕನ್ನಡದಲ್ಲೇ ಭಾಷಣ – ರೈತರ ಮನಗೆದ್ದ CM ನಾಯ್ಡು

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು, ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.

ಇದನ್ನೂ ಓದಿ: ಮುನಿರಾಬಾದ್: ರೈತರ ಹಿತಕ್ಕೆ 3 ರಾಜ್ಯಗಳ ಒಗ್ಗಟ್ಟು – ಸಿಎಂ ರೆಡ್ಡಿ

ರಾಜ್ಯ ಸರ್ಕಾರದ ಈ ನಿರ್ಧಾರವು ಜಿಲ್ಲಾಮಟ್ಟದ ಆಡಳಿತ ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆಗೆ ನೆರವಾಗಲಿದ್ದು, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ಸಹಕಾರಿಯಾಗಲಿದೆ.

ಕನ್ನಡ ಪಠ್ಯಪುಸ್ತಕ ವಿವಾದ: ‘ಕೃಷ್ಣ’ ಹೆಸರಿನ ಬಗ್ಗೆ NCERT ಸ್ಪಷ್ಟನೆ

The post ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ: ಯಾವ ಸಚಿವರಿಗೆ ಯಾವ ಜಿಲ್ಲೆ? ಇಲ್ಲಿದೆ ಸಂಪೂರ್ಣ ಪಟ್ಟಿ appeared first on Samyukta Karnataka.

ಬಿಡದಿ ಸ್ಮಾರ್ಟ್ ಸಿಟಿ ರಾಜಕೀಯ: ರೈತರ ಭೂಮಿ ವಿಚಾರವಾಗಿ ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರುವಂತೆ ನೇರ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಭೂಸ್ವಾಧೀನ ನೀತಿ ಹಾಗೂ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರೈತರ ಸಮ್ಮತಿ ಪ್ರಶ್ನಿಸಿದ ಹೆಚ್‌ಡಿಕೆ: “ಮುಖ್ಯಮಂತ್ರಿಗಳಿಗೆ ಧೈರ್ಯವಿದ್ದರೆ ಬೈರಮಂಗಲಕ್ಕೆ ಬರಲಿ, ಅಲ್ಲಿಯೇ ಬಹಿರಂಗ ಚರ್ಚೆ ಮಾಡೋಣ” ಎಂದು ಕುಮಾರಸ್ವಾಮಿ ಆಗ್ರಹಿಸಿದರು. ಟೌನ್‌ಶಿಪ್ ನಿರ್ಮಾಣಕ್ಕಾಗಿ ಅಲ್ಲಿನ ರೈತರು ತಮ್ಮ ಫಲವತ್ತಾದ ಭೂಮಿಯನ್ನು ನೀಡಲು ನಿಜವಾಗಿಯೂ ಒಪ್ಪಿದ್ದಾರೆಯೇ ಎಂಬುದನ್ನು ನೇರವಾಗಿ ರೈತರ ಸಮ್ಮುಖದಲ್ಲೇ ಕೇಳಿ ತಿಳಿದುಕೊಳ್ಳೋಣ ಎಂದು ಸರ್ಕಾರವನ್ನು ಒತ್ತಾಯಿಸಿದರು. ರೈತರ ಹಿತರಕ್ಷಣೆಯ ಹೆಸರಿನಲ್ಲಿ ಭೂಮಿ ಕಬಳಿಸುವ ಯತ್ನ ನಡೆಯುತ್ತಿದೆ ಎಂದು ಹೆಚ್‌ಡಿಕೆ ಆರೋಪಿಸಿದರು.

ಖಾರವಾದ ರಾಜಕೀಯ ಟೀಕೆ: ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಭ್ರಷ್ಟಾಚಾರದ ಆರೋಪ ಮಾಡಿ, “ಇಲ್ಲಿ ಲೂಟಿ ಮಾಡಿ ಈಗಾಗಲೇ ಚುನಾವಣೆಗಳನ್ನು ಎದುರಿಸಿದ್ದಾಯಿತು. ಈಗ ಇಡೀ ದೇಶದಾದ್ಯಂತ ಚುನಾವಣೆಗಳನ್ನು ನಡೆಸಲು ಹಣದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಲೇವಡಿ ಮಾಡಿದರು. ಅಷ್ಟೇ ಅಲ್ಲದೆ.. ಸಚಿವ ಸಂಪುಟ ಸೇರ್ಪಡೆ ಹಾಗೂ ಸ್ಥಾನಮಾನಗಳ ಹಂಚಿಕೆಗಾಗಿ ‘ಖೋಟಾ’ (ದಂಧೆ) ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಗಂಭೀರವಾಗಿ ಟೀಕಿಸಿದರು.

ಸದ್ಯ ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಹೆಚ್‌ಡಿಕೆ ಈ ಸವಾಲು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

The post ಬಿಡದಿ ಸ್ಮಾರ್ಟ್ ಸಿಟಿ ರಾಜಕೀಯ: ರೈತರ ಭೂಮಿ ವಿಚಾರವಾಗಿ ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ appeared first on Samyukta Karnataka.

CM, 13ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾ: ಅರ್ಜಿದಾರರಿಗೆ ದಂಡ
ಮುಖ್ಯಮಂತ್ರಿ ಹಾಗೂ 13 ಸಚಿವರ ಪದಗ್ರಹಣ ಪ್ರಶ್ನಿಸಿದ್ದ ಪಿಐಎಲ್ ವಜಾ; ಅರ್ಜಿದಾರರಿಗೆ ₹50 ಸಾವಿರ ದಂಡ

ಬೆಂಗಳೂರು: ಮುಖ್ಯಮಂತ್ರಿ ಹಾಗೂ 13 ಸಚಿವರ ಪದಗ್ರಹಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಅರ್ಜಿದಾರರಿಗೆ ₹50 ಸಾವಿರ ದಂಡ ವಿಧಿಸಿದೆ.

ಧಾರವಾಡದ ಮಂಗಳಪ್ಪ ಎಂಬುವರು ಸಲ್ಲಿಸಿದ್ದ ಅರ್ಜಿಯಲ್ಲಿ ಮುಖ್ಯಮಂತ್ರಿ ಹಾಗೂ 13 ಸಚಿವರ ಪದಗ್ರಹಣ ಸಂವಿಧಾನಬಾಹಿರವಾಗಿದೆ ಎಂದು ವಾದಿಸಿದ್ದರು. ಸಚಿವ ಸಂಪುಟದ ರಚನೆಗೆ ಸಂಬಂಧಿಸಿದ ಸಂವಿಧಾನದ ವಿಧಿ 164(1A) ಅನ್ನು ಉಲ್ಲೇಖಿಸಿ, ಸದನದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ನಿರ್ದಿಷ್ಟ ಪ್ರಮಾಣದ ಸಚಿವರನ್ನು ನೇಮಕ ಮಾಡದಿರುವುದರಿಂದ ಪದಗ್ರಹಣ ಕಾನೂನುಬಾಹಿರವಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿತ್ತು.

ಇದನ್ನೂ ಓದಿ: ಕೆಮ್ಮಿನ ಸಿರಪ್ ಮೇಲೆ ಕೇಂದ್ರದ ಕಟ್ಟುನಿಟ್ಟಿನ ಕ್ರಮ: ಸಾರ್ವಜನಿಕರಿಗೆ ಏನು ಬದಲಾವಣೆ?

ಆದರೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರರು ಸಂವಿಧಾನದ ವಿಧಿ 164(1A) ಅನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಅಭಿಪ್ರಾಯಪಟ್ಟಿತು. ಈ ವಿಧಿಯ ಪ್ರಕಾರ, ರಾಜ್ಯ ಸಚಿವ ಸಂಪುಟದಲ್ಲಿನ ಸಚಿವರ ಒಟ್ಟು ಸಂಖ್ಯೆ ವಿಧಾನಸಭೆಯ ಸದಸ್ಯರ ಒಟ್ಟು ಸಂಖ್ಯೆಯ ಶೇ.15ಕ್ಕಿಂತ ಹೆಚ್ಚಿರಬಾರದು ಎಂಬ ಮಿತಿಯನ್ನು ಮಾತ್ರ ನಿಗದಿಪಡಿಸಲಾಗಿದೆ. ಆದರೆ ಕನಿಷ್ಠ ಶೇ.15 ಸಚಿವರನ್ನು ನೇಮಕ ಮಾಡಲೇಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಅರ್ಜಿದಾರರು ಶೇ.12ರಷ್ಟು ಸಚಿವರ ನೇಮಕವಾಗಿಲ್ಲದಿರುವುದರಿಂದ ಸಚಿವರ ಪದಗ್ರಹಣ ಅಮಾನ್ಯವಾಗುತ್ತದೆ ಎಂದು ವಾದಿಸಿದ್ದರು. ಆದರೆ ಈ ವ್ಯಾಖ್ಯಾನವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: NTA ಶಿಫಾರಸಿನ ಮೇರೆಗೆ Telegram ಸೇವೆಗೆ ತಾತ್ಕಾಲಿಕ ನಿರ್ಬಂಧ

ಅರ್ಜಿಯಲ್ಲಿನ ವಾದಗಳಿಗೆ ಯಾವುದೇ ಕಾನೂನುಬದ್ಧ ಆಧಾರವಿಲ್ಲದಿರುವುದನ್ನು ಗಮನಿಸಿದ ನ್ಯಾಯಾಲಯ, ನಿಯಮಗಳನ್ನು ತಪ್ಪಾಗಿ ವ್ಯಾಖ್ಯಾನಿಸಿ ಜನಪ್ರಚಾರ ಅಥವಾ ಪ್ರಚಾರಾತ್ಮಕ ಉದ್ದೇಶಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿದ ನ್ಯಾಯಾಲಯ, ನ್ಯಾಯಾಂಗದ ಸಮಯ ವ್ಯರ್ಥ ಮಾಡಿದ ಕಾರಣಕ್ಕೆ ಅರ್ಜಿದಾರ ಮಂಗಳಪ್ಪ ಅವರಿಗೆ ₹50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ನಿವೃತ್ತಿಯ ಬೆನ್ನಲ್ಲೇ ಲೋಕಾಯುಕ್ತ ಶಾಕ್: ಮಾಜಿ ಕಚೇರಿ ಅಧೀಕ್ಷಕ ಮನೆ ಸೇರಿ 5 ಕಡೆ ದಾಳಿ

ಹೈಕೋರ್ಟ್‌ನ ಈ ಆದೇಶವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಹೆಸರಿನಲ್ಲಿ ಕಾನೂನುಬದ್ಧ ಆಧಾರವಿಲ್ಲದೆ ಅರ್ಜಿ ಸಲ್ಲಿಸುವವರ ವಿರುದ್ಧ ನ್ಯಾಯಾಲಯಗಳು ಕಠಿಣ ನಿಲುವು ತಾಳುತ್ತಿರುವುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯನಗರದಲ್ಲಿ ಲೋಕಾಯುಕ್ತ ದಾಳಿ

The post CM, 13ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾ: ಅರ್ಜಿದಾರರಿಗೆ ದಂಡ appeared first on Samyukta Karnataka.

ಪಂಚ ಗ್ಯಾರಂಟಿ ನಿಲ್ಲಲ್ಲ: ವಿಪಕ್ಷಗಳ ಆರೋಪಕ್ಕೆ ಮಾಜಿ CM ತಿರುಗೇಟು
ಮುಂದಿನ ಸರ್ಕಾರದಲ್ಲೂ ಗ್ಯಾರಂಟಿ ಯೋಜನೆಗಳು ಜಾರಿಯಲ್ಲೇ ಇರುತ್ತವೆ: ಬಿಜೆಪಿ ಅಪಪ್ರಚಾರ ಮಾಡುತ್ತಿದೆ, ಗ್ಯಾರಂಟಿ ಮುಂದುವರಿಯಲಿದೆ – ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ವಿಪಕ್ಷಗಳ ಆರೋಪ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಮುಂದಿನ ಎರಡು ವರ್ಷಗಳಷ್ಟೇ ಅಲ್ಲ, ಮುಂದಿನ ಚುನಾವಣೆಯ ನಂತರವೂ ಈ ಯೋಜನೆಗಳು ಮುಂದುವರಿಯಲಿವೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ದೋಷಗಳನ್ನು ಆರಂಭದಿಂದಲೇ ಸರಿಪಡಿಸಲಾಗುತ್ತಿದೆ ಹಾಗೂ ಈ ಪ್ರಕ್ರಿಯೆ ಈಗಲೂ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಫಲಾನುಭವಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾಹಿತ್ಯ ಪರಂಪರೆಯ ಮೌನ ಶಕ್ತಿ ಇಂದಿರಾ ಲಂಕೇಶ್ ಇನ್ನಿಲ್ಲ

BJP ವಿರುದ್ಧ ವಾಗ್ದಾಳಿ: ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಆರಂಭದಲ್ಲಿ ಈ ಯೋಜನೆಗಳ ಜಾರಿ ಅಸಾಧ್ಯ ಎಂದು ಹೇಳಿದ್ದ ಬಿಜೆಪಿ, ನಂತರ ರಾಜ್ಯ ಸರ್ಕಾರ ಹಣಕಾಸಿನ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಟೀಕಿಸಿತ್ತು. ಇದೀಗ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ವದಂತಿಗಳನ್ನು ಹಬ್ಬಿಸುತ್ತಿರುವುದು ಅವರ ರಾಜಕೀಯ ಹತಾಶೆಯ ಸಂಕೇತ ಎಂದು ಅವರು ಟೀಕಿಸಿದ್ದಾರೆ.

ರಾಜ್ಯದ ಆರ್ಥಿಕತೆ ಬಲವಾಗಿದೆ : ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇನೆ ಎಂದು ಹೇಳಿರುವ ಸಿದ್ದರಾಮಯ್ಯ, ಈ ಯೋಜನೆಗಳಿಂದ ರಾಜ್ಯದ ಆರ್ಥಿಕತೆಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಇಂದು ಕರ್ನಾಟಕವು ತಲಾ ಆದಾಯದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದು, ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ಎರಡನೇ ಸ್ಥಾನದಲ್ಲಿದೆ. ಸರ್ಕಾರದ ಖಜಾನೆ ಖಾಲಿಯಾಗಿದ್ದರೆ ಅಥವಾ ಸರ್ಕಾರ ದಿವಾಳಿ ಸ್ಥಿತಿಯಲ್ಲಿದ್ದರೆ ಇಂತಹ ಸಾಧನೆ ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ನಕಲು ಮಾಡಿದೆ ಎಂದು ಆರೋಪ : ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದ ಬಿಜೆಪಿ, ಇದೇ ಮಾದರಿಯ ಯೋಜನೆಗಳನ್ನು ಮಧ್ಯಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅನುಸರಿಸಿ ಚುನಾವಣಾ ಲಾಭ ಪಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ಶಾಕ್: ಹಲ್ಲಿ ಬಿದ್ದ ನೀರು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ ಎಂದು ಹೇಳಿರುವ ಅವರು, ಕೆಲವು ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಟೀಕಿಸಿದ್ದಾರೆ.

ಅನರ್ಹರಿಗೆ ಸೌಲಭ್ಯ ತಡೆಯುವುದು ಸರ್ಕಾರದ ಕರ್ತವ್ಯ : ಗ್ಯಾರಂಟಿ ಯೋಜನೆಗಳು ನಿಜವಾದ ಅರ್ಹರಿಗೆ ತಲುಪಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅನರ್ಹರು ಸೌಲಭ್ಯ ಪಡೆಯುತ್ತಿರುವುದು ಕಂಡುಬಂದರೆ ಅದನ್ನು ತಡೆಗಟ್ಟುವುದು ಚುನಾಯಿತ ಸರ್ಕಾರದ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: BTDA ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಧರಣಿ: ಸೇವೆ ಸ್ಥಗಿತಗೊಳಿಸಿದ ನೌಕರರು

ದುರಾಸೆಗೆ ಬಲಿಯಾಗಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವುದು ಕೇವಲ ಕಾನೂನು ಉಲ್ಲಂಘನೆಯಷ್ಟೇ ಅಲ್ಲ, ರಾಜ್ಯದ ಜನತೆಗೆ ಮಾಡುವ ದ್ರೋಹವೂ ಆಗಿದೆ ಎಂದು ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಅಪಪ್ರಚಾರ ನಡೆಸುವ ಬದಲು ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪುವಂತೆ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ವಿರೋಧ ಪಕ್ಷಗಳಿಗೆ ಸಲಹೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಭವಿಷ್ಯದ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಮತ್ತಷ್ಟು ವೇಗ ನೀಡಿದ್ದು, ಮುಂದಿನ ದಿನಗಳಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಈ ವಿಷಯ ಪ್ರಮುಖ ರಾಜಕೀಯ ಅಸ್ತ್ರವಾಗುವ ಸಾಧ್ಯತೆ ಇದೆ.

ಮದುವೆ ಹೆಸರಿನಲ್ಲಿ ವಂಚನೆ? ಕಾಂಗ್ರೆಸ್ ನಾಯಕಿ ವಿರುದ್ಧ ಆರೋಪ

The post ಪಂಚ ಗ್ಯಾರಂಟಿ ನಿಲ್ಲಲ್ಲ: ವಿಪಕ್ಷಗಳ ಆರೋಪಕ್ಕೆ ಮಾಜಿ CM ತಿರುಗೇಟು appeared first on Samyukta Karnataka.

ಶಿಕ್ಷಣ ಇಲಾಖೆಯೇ ಅನಾಥವಾಗಿದೆ: ಖರ್ಗೆ ವಿರುದ್ಧ R ಅಶೋಕ ಆಕ್ರೋಶ
ಶಾಲಾ ಕಟ್ಟಡಗಳ ದುಸ್ಥಿತಿಗೆ ಸರ್ಕಾರವೇ ಹೊಣೆ: ಕಲಬುರಗಿ ಮಾದರಿ ಇದೇನಾ? – ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಕಿಡಿ

ಬೆಂಗಳೂರು: ಕಲಬುರಗಿ ಜಿಲ್ಲೆಯ ಎರಡು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದೇ ವಾರದ ಅವಧಿಯಲ್ಲಿ ಮೇಲ್ಛಾವಣಿ ಕುಸಿದ ಘಟನೆಗಳನ್ನು ಉಲ್ಲೇಖಿಸಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಇಂದಿನ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ವರದಿಯನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜ್ಯದ ಸರ್ಕಾರಿ ಶಾಲೆಗಳು ಇಂದು “ಸಾವಿನ ಗೂಡು”ಗಳಾಗಿ ಪರಿವರ್ತನೆಯಾಗಿವೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಶಿಕ್ಷಣ ಇಲಾಖೆಗೆ ಪೂರ್ಣ ಪ್ರಮಾಣದ ಸಚಿವರ ಕೊರತೆ ಹಾಗೂ ಜಿಲ್ಲೆಗೆ ಉಸ್ತುವಾರಿ ವ್ಯವಸ್ಥೆಯ ನಿರ್ಲಕ್ಷ್ಯವೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಟೀಕಿಸಿದ್ದಾರೆ.

ಅಶೋಕ್ ಅವರ ಪ್ರಕಾರ, ಜೂನ್ 12ರಂದು ಕಲಬುರಗಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ತರಗತಿ ಕೊಠಡಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ಕಾಂಕ್ರೀಟ್ ಮೇಲ್ಛಾವಣಿಯ ಭಾಗ ಕುಸಿದು ಬಿದ್ದ ಪರಿಣಾಮ ಹಲವು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಕೆಲ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ಉಲ್ಲೇಖಿಸಿದ್ದಾರೆ.

ಇದೇ ರೀತಿ ಜೂನ್ 14ರಂದು ಆಳಂದ ತಾಲೂಕಿನ ಸಂಗೋಳಗಿ (ಸಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲ್ಛಾವಣಿಯ ಪ್ಲಾಸ್ಟರ್ ಕುಸಿದಿರುವ ಘಟನೆ ನಡೆದಿದ್ದು, ಭಾನುವಾರ ರಜೆ ದಿನವಾಗಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಿದ್ದಾರೆ. ಶಾಲೆಯಲ್ಲಿ ಸಾಮಾನ್ಯ ದಿನದ ತರಗತಿಗಳು ನಡೆಯುತ್ತಿದ್ದರೆ ನೂರಾರು ಮಕ್ಕಳ ಜೀವ ಅಪಾಯಕ್ಕೆ ಸಿಲುಕಬಹುದಾಗಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ : ಕಲಬುರಗಿ ಜಿಲ್ಲೆಯಲ್ಲಿಯೇ ಈ ಘಟನೆಗಳು ನಡೆದಿರುವುದನ್ನು ಉಲ್ಲೇಖಿಸಿರುವ ಅಶೋಕ್, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸಚಿವರು ಜಿಲ್ಲೆಯ ಸರ್ಕಾರಿ ಶಾಲೆಗಳ ದುಸ್ಥಿತಿಯತ್ತ ಗಮನ ಹರಿಸಿಲ್ಲ ಎಂದು ಆರೋಪಿಸಿದ್ದಾರೆ.

ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂದು ಶಿಕ್ಷಕರು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿಲ್ಲ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಶಿಕ್ಷಣ ಇಲಾಖೆಯ ಕಾರ್ಯವೈಖರಿ ಪ್ರಶ್ನೆ : ರಾಜ್ಯದ ಶಿಕ್ಷಣ ಇಲಾಖೆಯ ಆಡಳಿತ ವ್ಯವಸ್ಥೆಯನ್ನು ಪ್ರಶ್ನಿಸಿರುವ ಅಶೋಕ್, ಇಲಾಖೆಗೆ ಪೂರ್ಣ ಪ್ರಮಾಣದ ಸಚಿವರಿಲ್ಲದಿರುವುದನ್ನು ಗಂಭೀರ ವಿಷಯವಾಗಿ ಪ್ರಸ್ತಾಪಿಸಿದ್ದಾರೆ. ಬಡ ಮಕ್ಕಳ ಶಿಕ್ಷಣ ಹಾಗೂ ಸುರಕ್ಷತೆಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದ್ದಾರೆ.

ಅಲ್ಲದೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರನ್ನೂ ಟೀಕಿಸಿರುವ ಅವರು, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಆದ್ಯತೆ ನೀಡಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಸುರಕ್ಷತಾ ಆಡಿಟ್‌ಗೆ ಆಗ್ರಹ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ತಕ್ಷಣ ಸಮಗ್ರ “ಸುರಕ್ಷತಾ ಆಡಿಟ್” ನಡೆಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ. ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ಗುರುತಿಸಿ ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ಯಾವುದೇ ಸರ್ಕಾರದ ಮೊದಲ ಆದ್ಯತೆಯಾಗಿರಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

The post ಶಿಕ್ಷಣ ಇಲಾಖೆಯೇ ಅನಾಥವಾಗಿದೆ: ಖರ್ಗೆ ವಿರುದ್ಧ R ಅಶೋಕ ಆಕ್ರೋಶ appeared first on Samyukta Karnataka.

PM ಮೋದಿ ಭೇಟಿ ಮಾಡಿದ CM ಡಿ.ಕೆ. ಶಿವಕುಮಾರ್: ಅಭಿವೃದ್ಧಿ ಅಜೆಂಡಾ ಕುರಿತು ಮಾತುಕತೆ
PM – CM ಭೇಟಿ: ಬಲಿಷ್ಠ ಕರ್ನಾಟಕ, ಬಲಿಷ್ಠ ಭಾರತ ನಿರ್ಮಾಣಕ್ಕೆ ಒಗ್ಗಟ್ಟಿನ ಸಂದೇಶ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಮಹತ್ವದ ಮಾತುಕತೆ ನಡೆಸಿದರು. ಈ ಭೇಟಿ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ.

ಪ್ರಧಾನಿ ನಿವಾಸದಲ್ಲಿ ನಡೆದ ಈ ಭೇಟಿಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ರಚನಾತ್ಮಕ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:  ಕರ್ನಾಟಕ ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ಗೆ 3, ಬಿಜೆಪಿಗೆ 1 ಸ್ಥಾನ

ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ : ಭೇಟಿಯ ವೇಳೆ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ, ಹೊಸ ಹೂಡಿಕೆಗಳ ಆಕರ್ಷಣೆ, ನಗರ ಸಾರಿಗೆ ವ್ಯವಸ್ಥೆಯ ಸುಧಾರಣೆ, ನೀರಾವರಿ ಯೋಜನೆಗಳು, ನವೀನ ತಂತ್ರಜ್ಞಾನ ಆಧಾರಿತ ಅಭಿವೃದ್ಧಿ ಹಾಗೂ ಜನರ ಜೀವನಮಟ್ಟವನ್ನು ಸುಧಾರಿಸುವ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಕಾರ ಅಗತ್ಯವಾಗಿದ್ದು, ಈ ಸಂಬಂಧ ಹಲವು ಯೋಜನೆಗಳಿಗೆ ಕೇಂದ್ರದ ಬೆಂಬಲವನ್ನು ಕೋರಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:  RTE ವಿಸ್ತರಣೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

“ಕರ್ನಾಟಕ ಭಾರತದ ಬೆಳವಣಿಗೆಯ ಪ್ರಮುಖ ಶಕ್ತಿ” : ಕರ್ನಾಟಕ ದೇಶದ ಆರ್ಥಿಕ ಹಾಗೂ ತಾಂತ್ರಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. “ಕರ್ನಾಟಕವು ಯಾವಾಗಲೂ ಭಾರತದ ಬೆಳವಣಿಗೆಯ ಕಥೆಗೆ ಪ್ರಮುಖ ಕೊಡುಗೆ ನೀಡಿದೆ. ಮುಂದಿನ ದಿನಗಳಲ್ಲಿಯೂ ಈ ಪಾತ್ರವನ್ನು ಇನ್ನಷ್ಟು ಬಲಪಡಿಸುವ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಐಟಿ, ಜೈವಿಕ ತಂತ್ರಜ್ಞಾನ, ಉತ್ಪಾದನಾ ವಲಯ, ಸ್ಟಾರ್ಟ್‌ಅಪ್ ಪರಿಸರ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಇನ್ನಷ್ಟು ವಿಸ್ತರಿಸುವ ಬಗ್ಗೆ ಚರ್ಚೆ ನಡೆದಿರುವ ಸಾಧ್ಯತೆಯಿದೆ.

ಇದನ್ನೂ ಓದಿ:  ‘ಗೃಹಿಣಿ’ ಪದಕ್ಕೆ ಹೊಸ ಅರ್ಥ ನೀಡಿದ ಸುಪ್ರೀಂ ಕೋರ್ಟ್

ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಒತ್ತು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಉತ್ತಮ ಸಹಕಾರ ಅಗತ್ಯವೆಂದು ಒತ್ತಿ ಹೇಳಿರುವ ಮುಖ್ಯಮಂತ್ರಿ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಆತ್ಮದೊಂದಿಗೆ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಸಿದ್ಧವಾಗಿರುವುದಾಗಿ ತಿಳಿಸಿದ್ದಾರೆ.

ಅಭಿವೃದ್ಧಿ ಯೋಜನೆಗಳನ್ನು ವೇಗವಾಗಿ ಅನುಷ್ಠಾನಗೊಳಿಸುವುದು, ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವುದು ಹಾಗೂ ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೇಂದ್ರದೊಂದಿಗೆ ನಿರಂತರ ಸಹಯೋಗ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ವಿವಿಯಲ್ಲಿ ಮತ್ತೊಂದು ಹಗರಣದ ಆರೋಪ; ‘ಹಣ ಕೊಟ್ಟರೆ ಪಾಸ್’ ದಂಧೆ ಬಯಲು ಎಂದ ABVP

ರಾಜಕೀಯ ಮಹತ್ವವೂ ಪಡೆದ ಭೇಟಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಡಿ.ಕೆ. ಶಿವಕುಮಾರ್ ನಡೆಸಿರುವ ಈ ಮೊದಲ ಅಧಿಕೃತ ಭೇಟಿ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ. ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ನೆರವು, ಹಣಕಾಸು ಹಂಚಿಕೆ ಹಾಗೂ ಮೂಲಸೌಕರ್ಯ ವಿಸ್ತರಣೆಯಂತಹ ವಿಷಯಗಳು ಮುಂದಿನ ದಿನಗಳಲ್ಲಿ ಹೆಚ್ಚಿನ ವೇಗ ಪಡೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಭೇಟಿಯ ಅಂತ್ಯದಲ್ಲಿ “ಬಲಿಷ್ಠ ಕರ್ನಾಟಕ ನಿರ್ಮಾಣದ ಮೂಲಕ ಬಲಿಷ್ಠ ಭಾರತಕ್ಕೆ ಅರ್ಥಪೂರ್ಣ ಕೊಡುಗೆ ನೀಡಬಹುದು” ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ದೂರಿಗೆ ಸ್ಪಂದಿಸಿದ ರೈಲ್ವೆ ಸಚಿವರು: ಜುಲೈ 15ರೊಳಗೆ ಹೊಸ IRCTC ವೆಬ್‌ಸೈಟ್

The post PM ಮೋದಿ ಭೇಟಿ ಮಾಡಿದ CM ಡಿ.ಕೆ. ಶಿವಕುಮಾರ್: ಅಭಿವೃದ್ಧಿ ಅಜೆಂಡಾ ಕುರಿತು ಮಾತುಕತೆ appeared first on Samyukta Karnataka.

ಬೆಂಗಳೂರು ಖಾತೆ ಗದ್ದಲ; ಮನವೊಲಿಸಿ.. ಇಲ್ದಿದ್ರೆ ಕಿತ್ತಾಕಿ! ಸಿಎಂ ಡಿ.ಕೆ. ಶಿವಕುಮಾರ್‌ಗೆ ರಾಗಾ ಖಡಕ್ ಸಂದೇಶ?
ರಾಜಕೀಯ ರಂಗದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಈಗ ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಈ ಬೆಳವಣಿಗೆಯೇ ಸಾಕ್ಷಿ. ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಕೈ ಪಾಳಯದಲ್ಲಿ ಈಗ ಅಸಮಾಧಾನದ ಜ್ವಾಲೆ ಎದ್ದಿದೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತಮಗೆ ‘ಬೆಂಗಳೂರು ಅಭಿವೃದ್ಧಿ’ ಖಾತೆ ಸಿಗಲಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ತೀವ್ರ ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಕೋರಮಂಗಲದ ತಮ್ಮ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ, ತಮ್ಮ ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನು ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಸದ್ಯಕ್ಕೆ ಅವರು ಯಾರ ಮನವೊಲಿಕೆಗೂ ಬಗ್ಗುವ ಲಕ್ಷಣಗಳು ಕಾಣುತ್ತಿಲ್ಲ. “ನನ್ನ ನಿರ್ಧಾರ ಅಚಲ, ಈ ವಿಷಯದಲ್ಲಿ ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಅವರು ಹಠ ಹಿಡಿದಿರುವುದು, ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ

ಇದೇ ವೇಳೆ, ರಾಜ್ಯಸಭಾ ಚುನಾವಣೆಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಎಂಟ್ರಿಯಿಂದಾಗಿ ಈ ಹೈಡ್ರಾಮಾ ಮತ್ತೊಂದು ತಿರುವು ಪಡೆದುಕೊಂಡಿದೆ. ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ರಾಮಲಿಂಗಾರೆಡ್ಡಿ ಅವರ ಅಸಮಾಧಾನದ ವಿಷಯವನ್ನು ರಾಹುಲ್ ಗಾಂಧಿ ಅವರ ಗಮನಕ್ಕೆ ತಂದು, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ಅವರು ಸಿಎಂ ಡಿಕೆಶಿಗೆ ಒನ್ ಲೈನ್ ಮೆಸೇಜ್ ಪಾಸ್‌ ಮಾಡಿದ್ದಾರೆ. “ಚರ್ಚೆ ಮಾಡಿ ಮನವೊಲಿಸಿ, ಒಂದು ವೇಳೆ ಒಪ್ಪದಿದ್ದರೆ ರಾಜೀನಾಮೆಯನ್ನೇ ಅಂಗೀಕರಿಸಿ” ಎಂದು ರಾಹುಲ್ ಗಾಂಧಿ ನೇರವಾಗಿಯೇ ಹೈಕಮಾಂಡ್ ಸಂದೇಶ ರವಾನಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಅಷ್ಟಕ್ಕೂ ಬೆಂಗಳೂರು ಅಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು ಅಭಿವೃದ್ಧಿ ಖಾತೆ ಎನ್ನುವುದು ಕೇವಲ ಒಂದು ಇಲಾಖೆಯಲ್ಲ, ಅದು ರಾಜ್ಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಆಕರ್ಷಕ ಖಾತೆ. ಈ ಒಂದೇ ಒಂದು ಖಾತೆಯ ವ್ಯಾಪ್ತಿಯಲ್ಲಿ ಬಿಬಿಎಂಪಿ (BBMP), ಬಿಎಂಆರ್‌ಸಿಎಲ್ (BMRCL), ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಹಾಗೂ ಬಿಡಿಎ (BDA) ನಂತಹ ದೈತ್ಯ ಸಂಸ್ಥೆಗಳು ಬರುತ್ತವೆ. ಬೆಂಗಳೂರಿನ ನಗರಾಭಿವೃದ್ಧಿಗೆ ಹರಿದುಬರುವ ಸರ್ಕಾರಿ ಅನುದಾನದ ಪ್ರಮಾಣ ಕೋಟ್ಯಂತರ ರೂಪಾಯಿಗಳಷ್ಟಿರುತ್ತದೆ. ಅದರಲ್ಲೂ ಮುಂಬರುವ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಬಹುಕೋಟಿ ವೆಚ್ಚದ ಟನೆಲ್ ರಸ್ತೆ ಕಾಮಗಾರಿಗಳು, ಬೃಹತ್ ಫ್ಲೈಓವರ್‌ಗಳು ಹಾಗೂ ರಸ್ತೆಗಳ ನವೀಕರಣ ಕಾರ್ಯಗಳು ನಡೆಯಬೇಕಿರುವುದರಿಂದ ಈ ಖಾತೆಗೆ ಭಾರೀ ಬೇಡಿಕೆಯಿದೆ. ಇದೇ ಕಾರಣಕ್ಕೆ ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಈ ಪ್ರಭಾವಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದರು.

ರಾಮಲಿಂಗಾರೆಡ್ಡಿ ಅವರ ವಾದವೇನು?

ರಾಮಲಿಂಗಾರೆಡ್ಡಿ ಅವರ ಅಸಮಾಧಾನಕ್ಕೆ ಬಲವಾದ ಕಾರಣಗಳೂ ಇವೆ. ಅವರ ವಾದದ ಪ್ರಕಾರ, ಅವರು ಬೆಂಗಳೂರಿನ ಅತ್ಯಂತ ಹಿರಿಯ ಶಾಸಕರಾಗಿದ್ದು, ಬರೋಬ್ಬರಿ 8 ಬಾರಿ ವಿಧಾನಸಭೆಗೆ ಆಯ್ಕೆಯಾದ ಇತಿಹಾಸ ಹೊಂದಿದ್ದಾರೆ. ಬೆಂಗಳೂರಿನ ಇಂಚಿಂಚು ಮಾಹಿತಿ ಹೊಂದಿರುವ ತಮಗೆ ನಗರದ ಅಭಿವೃದ್ಧಿಯಲ್ಲಿ ಸುದೀರ್ಘ ಅನುಭವವಿದೆ. ಕಳೆದ ಬಿಬಿಎಂಪಿ ಚುನಾವಣೆಗಳು ಹಾಗೂ ಪಕ್ಷದ ಸಂಘಟನೆಯಲ್ಲಿ ತಮ್ಮ ಕೊಡುಗೆ ಅಪಾರವಾಗಿದೆ. ಇಷ್ಟೆಲ್ಲಾ ಸೀನಿಯಾರಿಟಿ ಇದ್ದರೂ ತಮಗೆ ಬೆಂಗಳೂರು ಉಸ್ತುವಾರಿ ಅಥವಾ ನಗರಾಭಿವೃದ್ಧಿ ಖಾತೆ ನೀಡದೆ ಕಡೆಗಣಿಸಿರುವುದು ಅವರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ.

ಸದ್ಯಕ್ಕೆ ರಾಹುಲ್ ಗಾಂಧಿ ಅವರ ಖಡಕ್ ಸಂದೇಶದ ನಂತರ ಚೆಂಡು ಈಗ ಮುಖ್ಯಮಂತ್ರಿಗಳ ಅಂಗಳದಲ್ಲಿದೆ. ರಾಮಲಿಂಗಾರೆಡ್ಡಿ ಅವರ ಹಠದ ಮುಂದೆ ಸರ್ಕಾರ ಮಣಿದು ಖಾತೆ ಬದಲಾವಣೆ ಮಾಡುತ್ತಾ? ಅಥವಾ ಹೈಕಮಾಂಡ್ ಸೂಚನೆಯಂತೆ ರಾಜೀನಾಮೆಯನ್ನು ಅಂಗೀಕರಿಸಿ ಮುಂದಿನ ಹಾದಿ ನೋಡುತ್ತಾ? ಎಂಬುದನ್ನು ಕಾದು ನೋಡಬೇಕಿದೆ.

The post ಬೆಂಗಳೂರು ಖಾತೆ ಗದ್ದಲ; ಮನವೊಲಿಸಿ.. ಇಲ್ದಿದ್ರೆ ಕಿತ್ತಾಕಿ! ಸಿಎಂ ಡಿ.ಕೆ. ಶಿವಕುಮಾರ್‌ಗೆ ರಾಗಾ ಖಡಕ್ ಸಂದೇಶ? appeared first on Samyukta Karnataka.