mandya Archives - Samyukta Karnataka

ಕಾಂಗ್ರೆಸ್ ನಾಯಕರಿಗೆ ದೇವೇಗೌಡರ ಮೇಲೆ ಈಗ ಎಲ್ಲಿಲ್ಲದ ಅನುಕಂಪ
ಮಂಡ್ಯ: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ಮೇಲೆ ಕಾಂಗ್ರೆಸ್ ನಾಯಕರಿಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಆ ಪಕ್ಷದ ಅನುಕಂಪದ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ತಗ್ಗಹಳ್ಳಿ ಗ್ರಾಮದಲ್ಲಿ ಸಿಎಸ್ಆರ್ ನಿಧಿ ಅನುದಾನದಿಂದ ನೂತನವಾಗಿ ನಿರ್ಮಾಣಗೊಂಡಿರುವ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿದರು.

ರಾಜ್ಯಸಭೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರ ಬಗ್ಗೆ ಎಲ್ಲಿಲ್ಲದ ಅನುಕಂಪ ಬಂದಿದೆ. ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಬಿರುಕು ತರಲು ಕಾಂಗ್ರೆಸ್ ವಿಫಲ ಪ್ರಯತ್ನ ನಡೆಸುತ್ತಿದೆ. ರಾಜ್ಯಸಭೆ ಟಿಕೆಟ್‌‌ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ತನ್ನಲ್ಲಿ ಆಗುತ್ತಿರುವ ಬೆಳವಣಿಗೆಗಳು ಮತ್ತು ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಕಾಂಗ್ರೆಸ್ ಪಕ್ಷವು ದೇವೇಗೌಡರನ್ನು ನೆಪ ಮಾಡಿಕೊಂಡು ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ದೇವೇಗೌಡರದು ಹೋರಾಟದ ಬುದಕು. ಅಧಿಕಾರಕ್ಕಾಗಿ ಹಪಾಹಪಿಸಿದವರಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದರು ಅವರು. ಅದೆಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿಲ್ಲವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಕಳೆದ ಬಾರಿ ದೇವೇಗೌಡರ ಅವಿರೋಧ ಆಯ್ಕೆಗೆ ಕಾಂಗ್ರೆಸ್ ಬೆಂಬಲದ ಬಗ್ಗೆಯೂ ಮಾತನಾಡಿದ ಕುಮಾರಸ್ವಾಮಿ ಅವರು, ಆಗ ದೇವೇಗೌಡರ ವಿರುದ್ಧ ಇನ್ನೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಆ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುವಷ್ಟು ಸಂಖ್ಯಾಬಲ ಇರಲಿಲ್ಲ. ನಮ್ಮ ಪಕ್ಷಕ್ಕೆ ಸಂಖ್ಯಾಬಲ ಇತ್ತು, ಹೀಗಾಗಿ ರಾಜ್ಯಸಭೆಗೆ ದೇವೇಗೌಡರು ಆಯ್ಕೆಯಾದರು. ಅವರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಲಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಒಕ್ಕಲಿಗ ಮುಖ್ಯಮಂತ್ರಿ ಇರಬೇಕಾದರೆ ರಾಜ್ಯಸಭೆ ತಗೊಂಡು ಏನ್ಮಾಡ್ತೀರಾ? ಎರಡು ತಿಂಗಳು ಕಾದು ನೋಡೋಣ, ಅವರೇನು ಮಾಡುತ್ತಾರೆ ಎಂಬುದನ್ನು ಗಮನವಿಟ್ಟು ನೋಡೋಣ. ಡಿಕೆಶಿ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ದೇವೇಗೌಡರ ಮನೆಯಲ್ಲಿ ಸೂತಕ ಆವರಿಸಿದೆ ಎಂದಿದ್ದ ಮಾಜಿ ಮಂತ್ರಿಯೊಬ್ಬರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸ್ಪಷ್ಟವಾಗಿ ನಿರಾಕರಿಸಿದರು.

ಜಮೀರ್ ನನ್ನ ಸಂಪರ್ಕದಲ್ಲಿ ಇಲ್ಲ: ಹಾಗೆಯೇ ಮಾಜಿ ಸಚಿವ ಜಮೀರ್ ಅಹಮದ್ ಅವರು ತಮ್ಮ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ವದಂತಿಗಳನ್ನು ಕೂಡ ಸಚಿವ ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ತಳ್ಳಿ ಹಾಕಿದರಲ್ಲದೆ, ಕಾಂಗ್ರೆಸ್‌ನ ಯಾವ ನಾಯಕರನ್ನು ನಾನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲಾ ದೇಶಗಳಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ: ಯುದ್ಧದ ಹಿನ್ನೆಲೆಯಲ್ಲಿ ಬೆಲೆ ಏರಿಕೆಯಾಗಿದೆ. ಇದು ಭಾರತದಲ್ಲಿ ಮಾತ್ರ ಆಗಿರುವುದಲ್ಲ. ಜಗತ್ತಿನ ಎಲ್ಲಾ ದೇಶಗಳಿಗೂ ಈ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್‌ನವರು ಎಲ್ಲದಕ್ಕೂ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲೇ ನೋಡುವುದಾದರೆ ಇಲ್ಲಿನ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಕಳೆದ ಮೂರೂವರೆ ವರ್ಷದಿಂದ ಬೆಲೆ ಏರಿಸುತ್ತಾ ಬಂದಿದ್ದಾರೆ. ಅದಕ್ಕೆ ಏನೆಂದು ಹೇಳುವುದು? ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

‘ಶ್ರೀರಾಮ ದಶರಥನ ಮಗ ಅಲ್ಲ’: ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ

The post ಕಾಂಗ್ರೆಸ್ ನಾಯಕರಿಗೆ ದೇವೇಗೌಡರ ಮೇಲೆ ಈಗ ಎಲ್ಲಿಲ್ಲದ ಅನುಕಂಪ appeared first on Samyukta Karnataka.

ಪತ್ನಿ, ಮಗನ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿ
ಮಂಡ್ಯ: ಆರ್ಥಿಕ ಸಂಕಷ್ಟ ಹಾಗೂ ಸಾಲ ಬಾಧೆಯಿಂದ ಮನನೊಂದ ವ್ಯಕ್ತಿಯೊಬ್ಬ ಪತ್ನಿ ಹಾಗೂ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ.

ಬಟ್ಟೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ಪ್ರಭಾಕರ್ (65) ಎಂಬಾತ ಪತ್ನಿ ಜ್ಯೋತಿ (55), ಮಗ ಸಂತೋಷ್ (30)ನನ್ನು ತಡರಾತ್ರಿ 3.30ರ ಸಮಯದಲ್ಲಿ ಕೊಲೆಗೈದು ತಾನೂ ಕೂಡ ಬಟ್ಟೆ ಅಂಗಡಿಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ಪತ್ನಿ ಜ್ಯೋತಿಯನ್ನು ವೇಲ್‌ನಿಂದ ಉಸಿರುಗಟ್ಟಿಸಿ ಸಾಯಿಸಿದ್ದ ಪ್ರಭಾಕರ್, ಈ ವೇಳೆ ಬಂದ ಮಗ ಸಂತೋಷ್‌ನನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸಂತೋಷ್ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ.

ಬೆಳಗಿನ ಜಾವ ಈ ಘಟನೆ ಜರುಗಿದ್ದರೂ ತಿಳಿಯದ ಸೊಸೆ ಬೆಳಿಗ್ಗೆ ತಿಂಡಿ ರೆಡಿ ಮಾಡಿ, ಅತ್ತೆಯನ್ನು ಎಬ್ಬಿಸಲು ರೂಂಗೆ ತೆರಳಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

ಡೆತ್‌ನೋಟ್‌ನಲ್ಲಿ ಫ್ರೀ ಬಸ್ ಬಗ್ಗೆ ದೂರು: ಸಾಲದ ಒತ್ತಡಕ್ಕೆ ಸಿಲುಕಿ ಪತ್ನಿ, ಮಗನನ್ನು ಹತ್ಯೆಗೈದಿರುವುದಾಗಿ ಪ್ರಭಾಕರ್ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ. ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು, ಸರ್ಕಾರ ಫ್ರೀ ಬಸ್ ಬಿಟ್ಟಿರುವುದು ವ್ಯಾಪಾರ ಕಮ್ಮಿಯಾಗಿತ್ತೆಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ. ಇದರಿಂದ ಸಾಲ ತೀರಿಸಲಾಗಿಲ್ಲ. ಖಾಸಗಿ ಫೈನಾನ್ಸ್‌ಗಳು ಸಾಲ ಕಟ್ಟಿಲ್ಲ ಅಂದರೆ ಮನೆ ಬಳಿ ಬರುತ್ತಾರೆ ಎಂದು ಕಿರುಕುಳದಿಂದ ಮನನೊಂದಿರುವುದಾಗಿ ತಿಳಿಸಿದ್ದಾರೆ.

The post ಪತ್ನಿ, ಮಗನ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿ appeared first on Samyukta Karnataka.

KRS ಹಿನ್ನೀರಿನಲ್ಲಿ ಬೋಟ್ ಪಲ್ಟಿ : ದಂಪತಿ ದುರ್ಮರಣ
ಮಂಡ್ಯ: ಪಾಂಡವಪುರ ತಾಲೂಕಿನ ಕೆಆರ್‌ಎಸ್ ಹಿನ್ನೀರಿನ ಗಿರಿಯಾರಹಳ್ಳಿ ಬ್ಯಾಕ್‌ವಾಟರ್ ಪ್ರದೇಶದಲ್ಲಿ ಖಾಸಗಿ ರೆಸಾರ್ಟ್ ಮೂಲಕ ಬೋಟಿಂಗ್‌ಗೆ ತೆರಳಿದ್ದ ಕುಟುಂಬದ ಮೇಲೆ ಭಾರೀ ದುರಂತ ಸಂಭವಿಸಿದೆ. ಬಿರುಗಾಳಿಗೆ ಸಿಲುಕಿದ ಬೋಟ್ ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಗಳು, ಅಳಿಯ ಹಾಗೂ ಮೊಮ್ಮಗು ಸೇರಿ ಮೂವರು ಪಾರಾಗಿದ್ದಾರೆ.

ಮೃತರನ್ನು ವಿ. ಮಂಜುನಾಥ (72) ಮತ್ತು ಅವರ ಪತ್ನಿ ಜಸ್ವಿ (70) ಎಂದು ಗುರುತಿಸಲಾಗಿದೆ. ಕೊಚ್ಚಿ ಮೂಲದ ಈ ಕುಟುಂಬಸ್ಥರು ಖಾಸಗಿ ರೆಸಾರ್ಟ್‌ನಿಂದ ಬೋಟ್ ಮೂಲಕ ಹಿನ್ನೀರಿನಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಾಳಿ ಹೆಚ್ಚಾಗಿ ಬೋಟ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ದಂಪತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ತಿಳಿದ ಕೂಡಲೇ ರೆಸಾರ್ಟ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮಗಳು ಶ್ವೇತಾ, ಅಳಿಯ ಜಸ್ವಿನ್ ಹಾಗೂ ಮೊಮ್ಮಗು ಅಯ್ಯನ್ (8)ರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಮೃತದೇಹಗಳನ್ನು ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇದೇ ವೇಳೆ ಗಿರಿಯಾರಹಳ್ಳಿ ಪ್ರದೇಶದಲ್ಲೇ ಮೀನಿಗೆ ಆಹಾರ ಹಾಕಲು ತೆರಳಿದ್ದ ಮಧು (28), ಈಶ್ವರ್-ಪಾರ್ವತಮ್ಮ ಪುತ್ರ, ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು, ಹುಡುಕಾಟ ಕಾರ್ಯ ಮುಂದುವರಿದಿದೆ.

ಬೋಟಿಂಗ್ ವೇಳೆ ಸುರಕ್ಷತಾ ಕ್ರಮಗಳ ಕೊರತೆ, ಹವಾಮಾನ ಎಚ್ಚರಿಕೆಗಳ ನಿರ್ಲಕ್ಷ್ಯ ಹಾಗೂ ಜೀವ ರಕ್ಷಕ ಸಾಧನಗಳ ಲಭ್ಯತೆ ಇಲ್ಲದಿರುವುದು ಪ್ರಶ್ನಾರ್ಥಕವಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಕುರಿತು ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಲಡಾಖ್‌ನಲ್ಲಿ ಬೌದ್ಧ ಪರಂಪರೆಯ ವೈಭವ: ಮೇ 14ರವರೆಗೆ ದರ್ಶನ

The post KRS ಹಿನ್ನೀರಿನಲ್ಲಿ ಬೋಟ್ ಪಲ್ಟಿ : ದಂಪತಿ ದುರ್ಮರಣ appeared first on Samyukta Karnataka.

ಬಿಸಿಲಿನ ತಾಪಕ್ಕೆ ಪರಿಹಾರ: ಪ್ರಾಣಿ-ಪಕ್ಷಿಗಳಿಗೆ ನೀರಿನ ಹೊಂಡ ವ್ಯವಸ್ಥೆ
ಮಂಡ್ಯ: ರಾಜ್ಯಾದ್ಯಂತ ತಾಪಮಾನ ಏರಿಕೆಯಿಂದ ಮಾನವರಷ್ಟೇ ಅಲ್ಲ, ಮೂಕ ಪ್ರಾಣಿ-ಪಕ್ಷಿಗಳೂ ತತ್ತರಿಸುತ್ತಿರುವ ಹಿನ್ನೆಲೆ, ಜೈ ಕರ್ನಾಟಕ ಪರಿಷತ್ತು ವತಿಯಿಂದ ಮಾನವೀಯ ಸೇವಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಗರದ ವಿವಿಧ ಉದ್ಯಾನವನಗಳಲ್ಲಿ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ಹೊಂಡಗಳನ್ನು ಇಡುವ ಮೂಲಕ ಬಿರುಬೇಸಿಗೆಯಲ್ಲಿ ಜೀವಜಗತ್ತಿಗೆ ನೆರವಾಗುವ ಅಭಿಯಾನ ಆರಂಭಿಸಲಾಗಿದೆ.

ನಗರದ ಪರಮ ಪೂಜ್ಯ ಶಿವಕುಮಾರ ಮಹಾ ಸ್ವಾಮೀಜಿ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಉದ್ಯಾನವನದ ವಿವಿಧ ಸ್ಥಳಗಳಲ್ಲಿ ನೀರಿನ ಪಾತ್ರೆಗಳನ್ನು ಇರಿಸಿ, ಪಕ್ಷಿಗಳು ಹಾಗೂ ಸಣ್ಣ ಪ್ರಾಣಿಗಳಿಗೆ ಸುಲಭವಾಗಿ ನೀರು ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ.

ಮಾನವೀಯತೆಯ ಸಂದೇಶ : ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಬೇಸಿಗೆಯ ಈ ಕಠಿಣ ಸಂದರ್ಭದಲ್ಲಿ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಪರಿಸರ ಮತ್ತು ಜೀವಜಗತ್ತಿನ ಸಮತೋಲನ ಕಾಪಾಡಲು ಇಂತಹ ಕಾರ್ಯಗಳು ಅಗತ್ಯವೆಂದರು.

ಸೇವೆಗೆ ಶ್ಲಾಘನೆ : ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ. ಶಿವಕುಮಾರ್ ಅವರು, ಜೈ ಕರ್ನಾಟಕ ಪರಿಷತ್ತಿನ ಈ ಸೇವೆಯನ್ನು ಶ್ಲಾಘಿಸಿ, ಬಿರುಬೇಸಿಗೆಯಲ್ಲಿ ಪ್ರಾಣಿ-ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಮಾನವೀಯತೆಯ ಪ್ರತೀಕ ಎಂದು ಹೇಳಿದರು.

ಈ ಅಭಿಯಾನದಲ್ಲಿ ಜೈ ಕರ್ನಾಟಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಎಸ್. ನಾರಾಯಣ್, ಉಪಾಧ್ಯಕ್ಷ ಜೆ. ಬಸವರಾಜ್, ನುಡಿಭಾರತಿ ಬಸವೇಗೌಡರು, ಎಲ್ಲರೊಳಗೊಂದಾಗು ಸಂಸ್ಥೆಯ ವಿನಯ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು. ಜೊತೆಗೆ ವಿವಿಧ ಶಾಖಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಪದ್ಮ ಪ್ರಶಸ್ತಿ 2027 : ನಾಮನಿರ್ದೇಶನಕ್ಕೆ ಜುಲೈ 31 ಕಡೆಯ ದಿನ

The post ಬಿಸಿಲಿನ ತಾಪಕ್ಕೆ ಪರಿಹಾರ: ಪ್ರಾಣಿ-ಪಕ್ಷಿಗಳಿಗೆ ನೀರಿನ ಹೊಂಡ ವ್ಯವಸ್ಥೆ appeared first on Samyukta Karnataka.

ಆದಿಚುಂಚನಗಿರಿಯಲ್ಲಿ ಇತಿಹಾಸ: ‘ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು ನೂತನವಾಗಿ ನಿರ್ಮಿಸಲಾದ “ಶ್ರೀಗುರು ಭೈರವೈಕ್ಯ ಮಂದಿರ”ವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಈ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಬುಧವಾರ ಬೆಳಿಗ್ಗೆ ಪ್ರಧಾನಿಯವರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದರು.

ನಂತರ ಬೆಂಗಳೂರಿನ ಎಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಎಲ್ಲರು ಹಾಜರಿದ್ದರು. ಇದೇ ವೇಳೆ ಸಿದ್ದರಾಮಯ್ಯ ರಾಜ್ಯದ ವಿವಿಧ ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಪ್ರಧಾನಿಯವರಿಗೆ ಸಲ್ಲಿಸಿ ಚರ್ಚಿಸಿದರು.

ಇದಾದ ನಂತರ ಎಲ್ಲ ಗಣ್ಯರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿದರು. ಪ್ರಧಾನಿ ಮೋದಿ ಮೊದಲು ಜ್ವಾಲಾಪೀಠಕ್ಕೆ (ಉರಿಗದ್ದುಗೆ) ಭೇಟಿ ನೀಡಿದರು. ಇದು ಗುರು ಗೋರಖನಾಥರು ತಪಸ್ಸು ಮಾಡಿದ್ದ ಪವಿತ್ರ ಸ್ಥಳವೆಂದು ನಂಬಲಾಗಿದೆ. ಅಲ್ಲಿ ದರ್ಶನ ಪಡೆದ ನಂತರ, ಕ್ಷೇತ್ರದ ಅಧಿದೇವತೆ ಕಾಲಭೈರವನಿಗೆ ವಿಶೇಷ ಮಂಗಳಾರತಿ ಮತ್ತು ಪೂಜೆ ಸಲ್ಲಿಸಿದರು. ಬಳಿಕ ಭೈರವೈಕ್ಯ ಮೂಲಮಂದಿರದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ, ದೇವಾಲಯವನ್ನು ಸಾರ್ವಜನಿಕ ಲೋಕಾರ್ಪಣೆಗೊಳಿಸಿದರು.

ಈ ಭೈರವೈಕ್ಯ ಮಂದಿರವು ಆದಿಚುಂಚನಗಿರಿ ಮಠದ ಹಿಂದಿನ ಗುರುಗಳ ಸ್ಮರಣಾರ್ಥವಾಗಿ ನಿರ್ಮಿಸಲಾದ ಭವ್ಯ ಸ್ಮಾರಕವಾಗಿದೆ. ಉದ್ಘಾಟನಾ ಸಮಾರಂಭದ ನಂತರ ಆಯೋಜಿಸಲಾಗಿದ್ದ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು. ಪ್ರಧಾನಿಯವರ ಈ ಭೇಟಿಯು ಶ್ರೀ ಕ್ಷೇತ್ರದ ಭಕ್ತರಲ್ಲಿ ಹೊಸ ಸಂಚಲನ ಮೂಡಿಸಿದ್ದು, ಪ್ರಸ್ತುತ ಸ್ಥಳದಿಂದ ಸುತ್ತೂಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

The post ಆದಿಚುಂಚನಗಿರಿಯಲ್ಲಿ ಇತಿಹಾಸ: ‘ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ. appeared first on Samyukta Karnataka.

ಆದಿಚುಂಚನಗಿರಿಗೆ ಮೋದಿ ಭೇಟಿ: ಭೈರವೈಕ್ಯ ಮಂದಿರ ಉದ್ಘಾಟನೆ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಮಹತ್ವದ ಭೇಟಿ ನೀಡಲಿದ್ದು, ಇದರ ಪೂರ್ವಭಾವಿಯಾಗಿ ಭಾರೀ ಸಿದ್ಧತೆಗಳು ಜೋರಾಗಿ ಸಾಗುತ್ತಿವೆ.

ಈ ಹಿನ್ನೆಲೆದಲ್ಲಿ ಇಂದು ವಿರೋಧ ಪಕ್ಷದ ನಾಯಕ R. ಅಶೋಕ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಸಿದ್ಧತೆಗಳನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಸಾಕಷ್ಟಿದ್ದಾರೆ. 2028ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಭೇಟಿ ವೇಳೆ, ಆದಿಚುಂಚನಗಿರಿ ಮಠದ 71ನೇ ಪೀಠಾಧಿಪತಿ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆ ಇರುವ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಈ ಕುರಿತು ಸ್ವಾಮೀಜಿ ಮಾಹಿತಿ ನೀಡಿದ್ದು, ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಪೂರ್ಣಗೊಂಡಿವೆ ಎಂದರು.

ಸಾರ್ವಜನಿಕರಿಗೆ ನಿರ್ಬಂಧ: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಏಪ್ರಿಲ್ 15ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಸಾಮಾನ್ಯ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಭಕ್ತರು ಬೆಳಿಗ್ಗೆ 9 ಗಂಟೆಯೊಳಗೆ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲು ಸೂಚಿಸಲಾಗಿದೆ.

ವಿಶೇಷ ಉಡುಗೊರೆ: ಪ್ರಧಾನಿ ಮೋದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಶೈಲಿಯ ವಿಶೇಷ ಪೇಟವನ್ನು ಉಡುಗೊರೆಯಾಗಿ ನೀಡಲು ಸಿದ್ಧತೆ ನಡೆದಿದೆ. ಈ ಪೇಟವನ್ನು ಕಲಾವಿದ ನಂದನ್ ಸಿಂಗ್ ಅವರು ಮೈಸೂರು ರೇಷ್ಮೆ ಮತ್ತು ಬನಾರಸ್ ಸಿಲ್ಕ್ ಬಳಸಿ 5 ದಿನಗಳಲ್ಲಿ ತಯಾರಿಸಿದ್ದಾರೆ. ಇದರಲ್ಲಿ ಗಂಡುಬೇರುಂಡ ಚಿಹ್ನೆ ಮತ್ತು ಮುತ್ತಿನ ಅಲಂಕಾರವೂ ಇದೆ.

ಕ್ಷೇತ್ರ ಪುನರ್ವಿಂಗಡಣೆ: ಕೇಂದ್ರಕ್ಕೆ ಸ್ಟಾಲಿನ್ ಅಂತಿಮ ಎಚ್ಚರಿಕೆ!

The post ಆದಿಚುಂಚನಗಿರಿಗೆ ಮೋದಿ ಭೇಟಿ: ಭೈರವೈಕ್ಯ ಮಂದಿರ ಉದ್ಘಾಟನೆ appeared first on Samyukta Karnataka.

ಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಆಗಮನ: ಏಪ್ರಿಲ್ 15ರಂದು ಮಠಕ್ಕೆ ಹೋಗುವ ಮುನ್ನ ಈ ಸುದ್ದಿ ಓದಿ!
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಇದೀಗ ಸಂಭ್ರಮದ ಕಳೆ ಬಂದಿದೆ. ಏಪ್ರಿಲ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ನೂತನವಾಗಿ ನಿರ್ಮಿಸಲಾದ ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಸುಂದರ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಭಕ್ತರಿಗೆ ಮಹತ್ವದ ಸೂಚನ: ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಅಂದು ಬಿಗಿ ಪೊಲೀಸ್ ಭದ್ರತೆ ಇರಲಿದೆ. ಈ ಕಾರಣಕ್ಕಾಗಿ ಏಪ್ರಿಲ್ 15ರಂದು ಮಠ ಹಾಗೂ ದೇವಾಲಯಕ್ಕೆ ಸಾರ್ವಜನಿಕರು ಮತ್ತು ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಹಾಗಾಗಿ, ಅಂದು ಮಠಕ್ಕೆ ಭೇಟಿ ನೀಡಲು ಯೋಜಿಸಿರುವ ಭಕ್ತರು ಈ ಬದಲಾವಣೆಯನ್ನು ಗಮನಿಸಬೇಕೆಂದು ವಿನಂತಿಸಲಾಗಿದೆ.

ಕಾರ್ಯಕ್ರಮದ ವಿವರ: ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ನೇತೃತ್ವದಲ್ಲಿ ಏಪ್ರಿಲ್ 10 ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಏಪ್ರಿಲ್ 15ರಂದು ಬೆಳಗ್ಗೆ ಪ್ರಧಾನಿ ಮೋದಿ ಮಂದಿರ ಉದ್ಘಾಟಿಸಿದ ನಂತರ, ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಭವ್ಯ ಮಂದಿರವನ್ನು ಶ್ರೀಗಳ ಆಶಯದಂತೆ ಕೆಂಪು ಶಿಲೆಗಳಿಂದ ಅತ್ಯಂತ ಕಲಾತ್ಮಕವಾಗಿ 175*150 ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದೆ. ಭದ್ರತಾ ಕಾರಣಗಳಿಂದಾಗಿ ಅಂದು ಭಕ್ತರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ, ಆದ್ದರಿಂದ ಸಾರ್ವಜನಿಕರು ಮಠದೊಂದಿಗೆ ಸಹಕರಿಸಲು ಕೋರಲಾಗಿದೆ.

The post ಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಆಗಮನ: ಏಪ್ರಿಲ್ 15ರಂದು ಮಠಕ್ಕೆ ಹೋಗುವ ಮುನ್ನ ಈ ಸುದ್ದಿ ಓದಿ! appeared first on Samyukta Karnataka.

ನಾಪತ್ತೆಯಾಗಿದ್ದ ಗುತ್ತಿಗೆದಾರ ಶವವಾಗಿ ಪತ್ತೆ – ಅನುಮಾನಾಸ್ಪದ ಸಾವು
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲೊಂದು ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಪವನ್ (27) ಅವರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.

ಹುಣಸನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಪವನ್, ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಗುತ್ತಿಗೆದಾರರಾಗಿದ್ದರು. ಏಪ್ರಿಲ್ 2ರಂದು ಮನೆದಿಂದ “ಕೆಲಸದ ಸ್ಥಳಕ್ಕೆ ಹೋಗುತ್ತೇನೆ” ಎಂದು ಹೇಳಿ ಹೊರಟ ಅವರು, ಬಳಿಕ ಮನೆಗೆ ಮರಳಿರಲಿಲ್ಲ.

ನಾಪತ್ತೆಯಿಂದ ಶವ ಪತ್ತೆವರೆಗೆ: ಪವನ್ ನಾಪತ್ತೆಯಾದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಸಾಮಾಜಿಕ ಜಾಲತಾಣ ಖಾತೆಗಳನ್ನೂ ಡಿ-ಆಕ್ಟಿವೇಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು ತೀವ್ರ ಹುಡುಕಾಟ ನಡೆಸಿ, ಕೊನೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸೋಮವಾರ ಪವನ್ ಅವರ ಮೃತದೇಹ ಕಾವೇರಿ ನದಿಯಲ್ಲಿ ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಕೊಲೆ ಶಂಕೆ – ಕುಟುಂಬದ ಆರೋಪ: ಪವನ್ ಸಾವಿನ ಬಗ್ಗೆ ಕುಟುಂಬಸ್ಥರು ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, “ಇದು ಸಹಜ ಸಾವು ಅಲ್ಲ, ಕೊಲೆ ಮಾಡಿ ಬಳಿಕ ನದಿಗೆ ಎಸೆಯಲಾಗಿದೆ” ಎಂದು ಆರೋಪಿಸಿದ್ದಾರೆ. ಪವನ್ ದೊಡ್ಡ ಮೊತ್ತದ ಗುತ್ತಿಗೆ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಹಿನ್ನೆಲೆ, ವ್ಯವಹಾರಿಕ ವೈಷಮ್ಯ ಅಥವಾ ವೈಯಕ್ತಿಕ ಕಾರಣಗಳಿಂದ ಈ ಘಟನೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸ್ ತನಿಖೆ ಆರಂಭ: ಘಟನೆಯ ಸಂಬಂಧ ಕರ್ನಾಟಕ ಪೊಲೀಸ್ ಇಲಾಖೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೋಸ್ಟ್‌ಮಾರ್ಟಂ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

The post ನಾಪತ್ತೆಯಾಗಿದ್ದ ಗುತ್ತಿಗೆದಾರ ಶವವಾಗಿ ಪತ್ತೆ – ಅನುಮಾನಾಸ್ಪದ ಸಾವು appeared first on Samyukta Karnataka.

ಶ್ವಾನದಿಂದ ಬೆಕ್ಕಿನ ಮರಿಗೆ ಹಾಲು – ಅಪೂರ್ವ ದೃಶ್ಯ ವೈರಲ್
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದಲ್ಲಿ ಅಪರೂಪದ ಮಾನವೀಯತೆಗೂ ಮೀರಿದ ಪ್ರಾಣಿಪ್ರೀತಿಯ ಘಟನೆ ಗಮನಸೆಳೆದಿದೆ. ಚೇತನ್ ಎಂಬುವರ ಮನೆಯಲ್ಲಿ ಸಾಕಿರುವ ‘ಡೈಸಿ’ ಎಂಬ ಶ್ವಾನವು ಬೆಕ್ಕಿನ ಮರಿಗೆ ತನ್ನದೇ ಮಗು ಎಂಬಂತೆ ಹಾಲುಣಿಸಿ ತಾಯ್ತನ ಮೆರೆದಿರುವುದು ಎಲ್ಲರ ಮನಸೂರೆಗೊಂಡಿದೆ.

ಸಾಮಾನ್ಯವಾಗಿ “ನಾಯಿಯ ಮೊಲೆಯಲ್ಲಿ ಹಾಲಿದ್ದರೂ ಭಾಗ್ಯವಿಲ್ಲ” ಎಂಬ ಮಾತು ಕೇಳಿಬರುತ್ತದೆ. ಆದರೆ ಈ ಘಟನೆ ಆ ಮಾತಿಗೆ ತಲೆಕೆಳಗಾಗಿ, ಪ್ರಾಣಿಗಳಲ್ಲಿಯೂ ಮಮತೆ ಎಷ್ಟೊಂದು ಗಾಢವಾಗಿರಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ.

ಮನೆಮಾಲೀಕ ಚೇತನ್ ಅವರ ಮಾಹಿತಿ ಪ್ರಕಾರ, ಇತ್ತೀಚೆಗೆ ಬೆಕ್ಕಿನ ಮರಿಯ ತಾಯಿ ಕಾಣೆಯಾಗಿದ್ದು, ಮಗು ಅಸಹಾಯಕವಾಗಿ ಇದ್ದ ಸಂದರ್ಭದಲ್ಲಿ ಡೈಸಿ ಅದನ್ನು ತನ್ನ ಮಗು ಎಂಬಂತೆ ಒಪ್ಪಿಕೊಂಡಿದೆ. ದಿನನಿತ್ಯವೂ ಅದನ್ನು ಹತ್ತಿರದಲ್ಲೇ ಇಟ್ಟುಕೊಂಡು ಹಾಲುಣಿಸುತ್ತಿದ್ದು, ತನ್ನ ಮಗುವಿನಂತೆ ಆರೈಕೆ ಮಾಡುತ್ತಿದೆ.

ಈ ದೃಶ್ಯವನ್ನು ಕಂಡ ಗ್ರಾಮಸ್ಥರು ಆಶ್ಚರ್ಯ ವ್ಯಕ್ತಪಡಿಸಿದ್ದು, “ಇದು ಮಾನವೀಯತೆಯ ಪಾಠ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಣಿ-ಪ್ರಾಣಿಗಳ ನಡುವಿನ ಸಹಜ ದ್ವೇಷವನ್ನು ಮೀರಿದ ಈ ಪ್ರೀತಿ ಎಲ್ಲರ ಗಮನ ಸೆಳೆದಿದೆ.

ವಿಶ್ವದ ಅತಿ ಹಳೆಯ ಆಮೆ ಜೊನಾಥನ್ ಜೀವಂತ

The post ಶ್ವಾನದಿಂದ ಬೆಕ್ಕಿನ ಮರಿಗೆ ಹಾಲು – ಅಪೂರ್ವ ದೃಶ್ಯ ವೈರಲ್ appeared first on Samyukta Karnataka.

ಮಂಡ್ಯ: ಅರ್ಚಕ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯ ಸಂಚು ಬಯಲು
ಅಪಘಾತದಂತೆ ತೋರಿಸಿದ ಹತ್ಯೆ: ಮಂಡ್ಯದಲ್ಲಿ ಅರ್ಚಕ ಸಿದ್ದಲಿಂಗಪ್ಪ ಕೊಲೆ ಪ್ರಕರಣ ಬಹಿರಂಗ

ಮಂಡ್ಯ: ಅರ್ಚಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್ ಬೆಳಕಿಗೆ ಬಂದಿದೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಕೊಲೆ ಮಾಡಿಸಲು ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಸಂಚು ರೂಪಿಸಿದ್ದ ಘಟನೆ ಮಂಡ್ಯ ಜಿಲ್ಲೆಯ ಮರಳಗಾಲ ಗ್ರಾಮದ ಬಳಿ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಮೃತರನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅವರು ಸ್ಥಳೀಯ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಶಾಲಿನಿ ಹಾಗೂ ಆಕೆಯ ಪ್ರಿಯಕರ ಹರೀಶ್ ಸೇರಿ ಈ ಕೊಲೆ ನಡೆಸಿರುವ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ.

ಒಂದೂವರೆ ವರ್ಷದಿಂದ ಅಕ್ರಮ ಸಂಬಂಧ: ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಶಾಲಿನಿ ಹಾಗೂ ಅದೇ ಗ್ರಾಮದ ಹರೀಶ್ ನಡುವೆ ಹಲವು ತಿಂಗಳುಗಳಿಂದ ಅಕ್ರಮ ಸಂಬಂಧವಿತ್ತು. ಸುಮಾರು ಒಂದೂವರೆ ವರ್ಷದ ಹಿಂದೆ ಸಿದ್ದಲಿಂಗಪ್ಪ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಬಳಿಕ ಪತ್ನಿಗೆ ಹಲವಾರು ಬಾರಿ ಬುದ್ಧಿವಾದ ಹೇಳಿ, ಸಂಬಂಧ ಮುರಿಯಲು ಒತ್ತಾಯಿಸಿದ್ದರು.

ಆದರೆ ಈ ವಿಷಯದಿಂದ ಬೇಸತ್ತ ಶಾಲಿನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಮುಗಿಸುವ ಯೋಜನೆ ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜೆಗೆ ತೆರಳಿದ್ದ ವೇಳೆ ಸಂಚು ಜಾರಿ: ಮಾ.6ರಂದು ಸಿದ್ದಲಿಂಗಪ್ಪ ಪೂಜೆಯ ಕೆಲಸಕ್ಕಾಗಿ ಮರಳಗಾಲ ಭಾಗಕ್ಕೆ ತೆರಳಿದ್ದರು. ಈ ವೇಳೆ ಶಾಲಿನಿ ತನ್ನ ಪ್ರಿಯಕರ ಹರೀಶ್‌ಗೆ ಮೆಸೇಜ್ ಮೂಲಕ ಮಾಹಿತಿ ನೀಡಿದ್ದಳು. ನಂತರ ಬೈಕ್‌ನಲ್ಲಿ ನಾಲೆ ಏರಿ ಮನೆಗೆ ಮರಳುತ್ತಿದ್ದ ಸಿದ್ದಲಿಂಗಪ್ಪನನ್ನು ಹರೀಶ್ ಹಾಗೂ ಅವನ ಇಬ್ಬರು ಸ್ನೇಹಿತರು ಮಾರ್ಗಮಧ್ಯೆ ಅಡ್ಡಗಟ್ಟಿದರು. ಬಳಿಕ ದೊಣ್ಣೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಅಪಘಾತದಂತೆ ತೋರಿಸಲು ಯತ್ನ: ಹತ್ಯೆಯ ಬಳಿಕ ಆರೋಪಿಗಳು ಮೃತದೇಹವನ್ನು ನಾಲೆಗೆ ತಳ್ಳಿಹಾಕಿ, ಘಟನೆ ಅಪಘಾತದಂತೆ ತೋರಿಸಲು ಯತ್ನಿಸಿದ್ದಾರೆ. ಸಿದ್ದಲಿಂಗಪ್ಪ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಹುಡುಕಾಟದ ವೇಳೆ ಸಿಡಿಎಸ್ ನಾಲೆ ದಡದಲ್ಲಿ ಸಿದ್ದಲಿಂಗಪ್ಪನ ಚಪ್ಪಲಿ ಹಾಗೂ ಬಟ್ಟೆಗಳು ಪತ್ತೆಯಾಗಿದ್ದವು. ನಂತರ ನಾಲೆಯಲ್ಲೇ ಮೃತದೇಹ ಹಾಗೂ ಬೈಕ್ ಪತ್ತೆಯಾಯಿತು.

ಪೊಲೀಸರಿಗೆ ಹುಟ್ಟಿದ ಅನುಮಾನ: ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಚಪ್ಪಲಿ ಸಿಕ್ಕಿದ್ದ ಸ್ಥಳದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು. ಇದರಿಂದ ಪ್ರಕರಣದ ಮೇಲೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಪೊಲೀಸರು ಶಾಲಿನಿ ಹಾಗೂ ಹರೀಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ತೀವ್ರ ವಿಚಾರಣೆಯ ವೇಳೆ ಕೊಲೆ ಸಂಚಿನ ಸಂಪೂರ್ಣ ರಹಸ್ಯ ಬಯಲಾಗಿದೆ. ನಂತರ ಪತ್ನಿ ಶಾಲಿನಿ, ಪ್ರಿಯಕರ ಹರೀಶ್ ಹಾಗೂ ಇತರರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

The post ಮಂಡ್ಯ: ಅರ್ಚಕ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯ ಸಂಚು ಬಯಲು appeared first on Samyukta Karnataka.