Massive landslide Archives - Samyukta Karnataka

ಭೂಕುಸಿತದಲ್ಲಿ ಸಿಲುಕಿ ಪಾರಾದ ಬೈಕ್ ಸವಾರ: Video ವೈರಲ್
ಇಟಾನಗರ: ಅರುಣಾಚಲ ಪ್ರದೇಶದ ಲೋವರ್ ಸಿಯಾಂಗ್ ಜಿಲ್ಲೆಯ ಸಿಜಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಭಾರೀ ಭೂಕುಸಿತವು ಆತಂಕ ಸೃಷ್ಟಿಸಿದ್ದು, ಘಟನೆಯಲ್ಲಿ ಮೋಟಾರ್‌ಸೈಕಲ್ ಸವಾರನೊಬ್ಬ ಪರ್ವತದ ಇಳಿಜಾರಿನಿಂದ ಸಿಜಿ ನದಿಗೆ ಬಿದ್ದರೂ ಯಾವುದೇ ಗಂಭೀರ ಗಾಯಗಳಿಲ್ಲದೆ ಬದುಕುಳಿದಿರುವುದು ಅಚ್ಚರಿಯ ಸಂಗತಿಯಾಗಿದೆ.

ಭಾರೀ ಭೂಕುಸಿತದ ನಡುವೆ ಮೋಟಾರ್‌ಸೈಕಲ್ ಸವಾರನೊಬ್ಬ ಮಣ್ಣಿನ ಕುಸಿತದ ನಡುವೆ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಲೋವರ್ ಸಿಯಾಂಗ್ ಜಿಲ್ಲೆಯ ಸಿಜಿ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಭೂಕುಸಿತ ಸಂಭವಿಸಿದೆ.

ಇದನ್ನೂ ಓದಿ: SIR ಆತಂಕವೇ: ಜೂನ್‌ 30ರಂದು ಜನರ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿ ಉತ್ತರ

ಭೂಕುಸಿತದ ವೇಳೆ ರಸ್ತೆ ಮೂಲಕ ಸಂಚರಿಸುತ್ತಿದ್ದ ಮೋಟಾರ್‌ಸೈಕಲ್ ಸವಾರನೊಬ್ಬ ಮಣ್ಣು ಮತ್ತು ಕಲ್ಲುಗಳೊಂದಿಗೆ ನದಿಗೆ ಉರುಳಿದ್ದಾನೆ. ಸ್ಥಳೀಯರು ಮತ್ತು ರಕ್ಷಣಾ ತಂಡದ ನೆರವಿನಿಂದ ಆತನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಆತ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದ ಸಂದರ್ಭದಲ್ಲಿ ಕಿರಿದಾದ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿದ್ದ ಬೈಕ್ ಸವಾರ ಸಿಲುಕಿ ಸವಾರನು ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ.https://t.co/xtMLj2RDAm pic.twitter.com/Fdbnng9ihk
— Samyukta Karnataka (@SamyuktaKarnatk) June 29, 2026

ಭೂಕುಸಿತದಿಂದ ಅಪಾರ ಪ್ರಮಾಣದ ಮಣ್ಣು, ಬಂಡೆಗಳು ಹಾಗೂ ಮರಗಳು ಸಿಜಿ ನದಿಗೆ ಬಿದ್ದ ಪರಿಣಾಮ ನದಿಯ ಹರಿವು ಸಂಪೂರ್ಣ ತಡೆಯಲ್ಪಟ್ಟಿದೆ. ಇದರಿಂದ ತಾತ್ಕಾಲಿಕ ನೈಸರ್ಗಿಕ ಅಣೆಕಟ್ಟು ನಿರ್ಮಾಣವಾಗಿದ್ದು, ಅದರ ಹಿಂದಿನ ಭಾಗದಲ್ಲಿ ಕೃತಕ ಸರೋವರವೂ ರೂಪುಗೊಂಡಿದೆ.

ಇದನ್ನೂ ಓದಿ: ಸೂಪಾ ಜಲಾಶಯ ಖಾಲಿ ಖಾಲಿ: ವಿದ್ಯುತ್ ಉತ್ಪಾದನೆ ಮೇಲೆ ಕರಿನೆರಳು

ಈ ಬೆಳವಣಿಗೆಯಿಂದಾಗಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಹಾಗೂ ಯಾವುದೇ ಸಮಯದಲ್ಲಿ ನೈಸರ್ಗಿಕ ಅಣೆಕಟ್ಟು ಒಡೆದು ಭಾರಿ ಪ್ರಮಾಣದ ನೀರು ಕೆಳಭಾಗದ ಪ್ರದೇಶಗಳಿಗೆ ಹರಿದು ಬರುವ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಸ್ಸಾಂನ ಕೆಲವು ಭಾಗಗಳು ಸೇರಿದಂತೆ ಕೆಳಮಟ್ಟದ ಪ್ರದೇಶಗಳಿಗೆ ಅಧಿಕಾರಿಗಳು ಪ್ರವಾಹ ಎಚ್ಚರಿಕೆ ನೀಡಿದ್ದಾರೆ.

ನದಿ ದಂಡೆಯ ಸಮೀಪ ವಾಸಿಸುವ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯವಿದ್ದಲ್ಲಿ ಸ್ಥಳಾಂತರಕ್ಕೆ ಸಿದ್ಧರಾಗುವಂತೆ ಸೂಚಿಸಲಾಗಿದೆ. ನದಿ ತೀರ ಪ್ರದೇಶಗಳಲ್ಲಿ ಅನಗತ್ಯ ಓಡಾಟ ನಡೆಸದಂತೆ ಆಡಳಿತ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಭೀಕರ ದುರಂತ: ಕಟ್ಟಡದ ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಸ್ಥಳೀಯ ಆಡಳಿತ ಹಾಗೂ ರಕ್ಷಣಾ ತಂಡಗಳು ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿವೆ. ಭೂಕುಸಿತದ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.

ಸ್ಥಳೀಯ ಆಡಳಿತ ಜನರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ಅನುಸರಿಸುವಂತೆ ಮನವಿ ಮಾಡಿದೆ.

ಯಲಹಂಕ : ಮುಂಬೈ–ಕೊಯಮತ್ತೂರು ರೈಲು ಇನ್ನು ಇಲ್ಲೂ ನಿಲುಗಡೆ

The post ಭೂಕುಸಿತದಲ್ಲಿ ಸಿಲುಕಿ ಪಾರಾದ ಬೈಕ್ ಸವಾರ: Video ವೈರಲ್ appeared first on Samyukta Karnataka.

ಕೇದಾರನಾಥ ಮಾರ್ಗದಲ್ಲಿ ಭೀಕರ ಭೂಕುಸಿತ: 10,450 ಯಾತ್ರಿಕರನ್ನು ಪ್ರಾಣಾಪಾಯದಿಂದ ರಕ್ಷಿಸಿದ ಸೇನಾ ಪಡೆಗಳು!
ಉತ್ತರಾಖಂಡದ ರುದ್ರಪ್ರಯಾಗದ ಕೇದಾರನಾಥ ಯಾತ್ರಾ ಮಾರ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಸಿಲುಕಿಕೊಂಡಿದ್ದ 10,450 ಯಾತ್ರಿಕರನ್ನು ಜಂಟಿ ರಕ್ಷಣಾ ಪಡೆಗಳು ಅತ್ಯಂತ ಯಶಸ್ವಿಯಾಗಿ ರಕ್ಷಿಸಿ, ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿವೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸೋನ್‌ಪ್ರಯಾಗ್‌ ಮತ್ತು ಗೌರಿಕುಂಡ ನಡುವಿನ ಮುಖ್ಯ ಹೆದ್ದಾರಿಯಲ್ಲಿ ಭಾರಿ ಮಳೆಯಿಂದಾಗಿ ಹಠಾತ್ ಭೂಕುಸಿತ ಉಂಟಾಗಿತ್ತು. ನಿರಂತರವಾಗಿ ಉರುಳುತ್ತಿದ್ದ ಬಂಡೆಗಳು, ಕಗ್ಗತ್ತಲು ಮತ್ತು ಭಾರಿ ಮಳೆಯ ಮಧ್ಯೆ ಸಾವಿರಾರು ಯಾತ್ರಿಕರು ಸಿಲುಕಿ ತೀವ್ರ ಆತಂಕಕ್ಕೊಳಗಾಗಿದ್ದರು. ಪರ್ವತ ಪ್ರದೇಶದ ಕಠಿಣ ಪರಿಸ್ಥಿತಿಯು ಯಾತ್ರಿಕರ ಜೀವಕ್ಕೆ ಕಂಟಕ ತಂದೊಡ್ಡಿತ್ತು.

ರಾತ್ರಿ 9:16 ರ ಸುಮಾರಿಗೆ ರುದ್ರಪ್ರಯಾಗ್ ಜಿಲ್ಲಾ ನಿಯಂತ್ರಣ ಕೊಠಡಿಯಿಂದ (DCR) ಬಂದ ತುರ್ತು ಮಾಹಿತಿಯ ಆಧಾರದ ಮೇಲೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು (NDRF) ಜಂಟಿಯಾಗಿ ಕಾರ್ಯಾಚರಣೆಗೆ ಇಳಿದವು. ಅತ್ಯಾಧುನಿಕ ಉಪಕರಣಗಳೊಂದಿಗೆ ತಕ್ಷಣ ಸ್ಥಳಕ್ಕೆ ಧಾವಿಸಿದ ಯೋಧರು, ಪ್ರಾಣದ ಹಂಗು ತೊರೆದು ಯಾತ್ರಿಕರಿಗೆ ಧೈರ್ಯ ತುಂಬುತ್ತಾ ಸುರಕ್ಷಿತ ಮಾರ್ಗಗಳ ಮೂಲಕ ಮುನ್ನಡೆಸಿದರು.

ಸತತ ಕಾರ್ಯಾಚರಣೆಯ ನಂತರ ಜೆಸಿಬಿ ಯಂತ್ರಗಳ ಸಹಾಯದಿಂದ ಹೆದ್ದಾರಿಯಲ್ಲಿದ್ದ ಮಣ್ಣು ಮತ್ತು ಬೃಹತ್ ಬಂಡೆಗಳನ್ನು ತೆರವುಗೊಳಿಸಲಾಗಿದ್ದು, ಸದ್ಯ ರಸ್ತೆ ಸಂಚಾರವನ್ನು ಪುನರಾರಂಭಿಸಲಾಗಿದೆ. ಹವಾಮಾನ ವೈಪರೀತ್ಯ ಮುಂದುವರಿದಿರುವುದರಿಂದ ಈ ಮಾರ್ಗದಲ್ಲಿ ಪ್ರಯಾಣಿಸುವ ಯಾತ್ರಿಕರಿಗೆ ‘ಹೈ ಅಲರ್ಟ್’ ಘೋಷಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಕಮಾಂಡೆಂಟ್ ಅರ್ಪಣ್‌ ಯಧುವಂಶಿ ಎಚ್ಚರಿಕೆ ನೀಡಿದ್ದಾರೆ.

The post ಕೇದಾರನಾಥ ಮಾರ್ಗದಲ್ಲಿ ಭೀಕರ ಭೂಕುಸಿತ: 10,450 ಯಾತ್ರಿಕರನ್ನು ಪ್ರಾಣಾಪಾಯದಿಂದ ರಕ್ಷಿಸಿದ ಸೇನಾ ಪಡೆಗಳು! appeared first on Samyukta Karnataka.