Mullayanagiri September 14 Archives - Samyukta Karnataka

ಪ್ರವಾಸಿಗರ ಗಮನಕ್ಕೆ: 14ರಂದು ಮುಳ್ಳಯ್ಯನಗಿರಿಗೆ ಪ್ರವಾಸಿಗರ ಪ್ರವೇಶ ಬಂದ್
ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಬಾಬಾಬುಡನ್‌ಗಿರಿ ಭಾಗಗಳಿಗೆ ಸೆಪ್ಟೆಂಬರ್ 14ರಂದು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಹಬ್ಬದ ಆಚರಣೆಗೆ ಬರುವ ಸ್ಥಳೀಯ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಮತ್ತು ವಾಹನಗಳ ತೀವ್ರ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಸಾಂಪ್ರದಾಯಿಕ ಪೂಜೆ, ಹಣ್ಣು-ಕಾಯಿ ನೈವೇದ್ಯ ಮತ್ತು ಚೌತಿ ಕಾಯಿ ಹೊಡೆಯುವ ಆಚರಣೆಗಾಗಿ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಧಾರ್ಮಿಕ ವಿಧಿವಿಧಾನಗಳಿಗೆ ಪ್ರವಾಸಿಗರ ವಾಹನಗಳಿಂದ ಯಾವುದೇ ರೀತಿಯ ತೊಂದರೆ ಅಥವಾ ಅಡಚಣೆ ಉಂಟಾಗಬಾರದು ಎಂಬ ಕಾರಣಕ್ಕೆ ಜಿಲ್ಲಾಡಳಿತ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಬ್ಬದ ದಿನದಂದು ಈ ಪರ್ವತ ಸಾಲುಗಳಲ್ಲಿ ತೀವ್ರ ಸ್ವರೂಪದ ಟ್ರಾಫಿಕ್ ಜಾಮ್ ಸಂಭವಿಸುವ ಸಾಧ್ಯತೆಯಿದೆ. ಸಾರ್ವಜನಿಕರ ಹಾಗೂ ಭಕ್ತಾದಿಗಳ ಹಿತದೃಷ್ಟಿಯಿಂದ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಭಾಗಗಳಿಗೆ ತೆರಳಲು ಯೋಜಿಸಿರುವ ಪ್ರವಾಸಿಗರು ಸೆಪ್ಟೆಂಬರ್ 14ರ ತಮ್ಮ ಪ್ರವಾಸವನ್ನು ಮುಂದೂಡಬೇಕೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ. ಒಂದು ದಿನದ ಮಟ್ಟಿಗೆ ಪ್ರವಾಸವನ್ನು ಬಂದ್‌ ಮಾಡಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

The post ಪ್ರವಾಸಿಗರ ಗಮನಕ್ಕೆ: 14ರಂದು ಮುಳ್ಳಯ್ಯನಗಿರಿಗೆ ಪ್ರವಾಸಿಗರ ಪ್ರವೇಶ ಬಂದ್ appeared first on Samyukta Karnataka.