NDA Archives - Samyukta Karnataka

ಬಿಹಾರನ ಹೊಸ ಅಧ್ಯಾಯ: NDA ಸರ್ಕಾರದ ಭರ್ಜರಿ ಸಂಪುಟ ವಿಸ್ತರಣೆ
ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ನೂತನ ಸಂಪುಟವನ್ನು ವಿಸ್ತರಿಸಿದ್ದು, ಒಟ್ಟು 32 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಸರ್ಕಾರದಲ್ಲಿ ಬಿಜೆಪಿ, ಜೆಡಿಯು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ಇತರೆ ಮೈತ್ರಿ ಪಕ್ಷಗಳ ನಾಯಕರಿಗೆ ಅವಕಾಶ ನೀಡಲಾಗಿದೆ.

ರಾಜಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಪ್ರಮುಖ ನಾಯಕರು ಸಾಕ್ಷಿಯಾದರು.

ನಿಶಾಂತ್ ಕುಮಾರ್‌ಗೆ ಸಚಿವ ಸ್ಥಾನ : ಮಾಜಿ ಮುಖ್ಯಮಂತ್ರಿ ನೀತಿಶ ಕುಮಾರ್‌ ಅವರ ಪುತ್ರ ನಿಶಾಂತ್ ಕುಮಾರ್ ಮೊದಲ ಬಾರಿಗೆ ಸಚಿವ ಸಂಪುಟ ಪ್ರವೇಶಿಸಿರುವುದು ಬಿಹಾರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಹಲವು ವರ್ಷಗಳಿಂದ ರಾಜಕೀಯದಿಂದ ದೂರವಿದ್ದ ನಿಶಾಂತ್ ಕುಮಾರ್ ಇದೀಗ ನೇರವಾಗಿ ಆಡಳಿತದ ಭಾಗವಾಗಿರುವುದು ಜೆಡಿಯು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಅನುಭವ ಮತ್ತು ಯುವ ನಾಯಕತ್ವಕ್ಕೆ ಒತ್ತು : ಹೊಸ ಸಂಪುಟದಲ್ಲಿ ಅನುಭವಿಗಳಿಗೂ ಯುವ ನಾಯಕರಿಗೂ ಸಮಾನ ಆದ್ಯತೆ ನೀಡಲಾಗಿದೆ. ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ಹಿರಿಯ ನಾಯಕರು ಶ್ರಾವಣ್ ಕುಮಾರ್ ಹಾಗೂ ಅಶೋಕ್ ಚೌಧರಿ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಬಿಜೆಪಿ ಮತ್ತು ಜೆಡಿಯು ಜೊತೆಗೆ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ (ರಾಮ್ ವಿಲಾಸ್) ಹಾಗೂ ಜಿತನ್ ರಾಮ್ ಮಾಂಝಿ ಅವರ ಹ್ಯಾಮ್ ಪಕ್ಷಕ್ಕೂ ಸಮರ್ಪಕ ಪ್ರತಿನಿಧಿತ್ವ ನೀಡಲಾಗಿದೆ.

ಸಾಮ್ರಾಟ್ ಚೌಧರಿ ನೇತೃತ್ವದಲ್ಲಿ ಹೊಸ ಅಧ್ಯಾಯ : ಸಾಮ್ರಾಟ್ ಚೌಧರಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದು ಮೊದಲ ದೊಡ್ಡ ಸಂಪುಟ ವಿಸ್ತರಣೆಯಾಗಿದೆ. ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾಗಿ ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ ಬಳಿಕ ಬಿಹಾರದಲ್ಲಿ ರಾಜಕೀಯ ಬದಲಾವಣೆ ನಡೆದಿತ್ತು. ಬಿಜೆಪಿ ಮೊದಲ ಬಾರಿಗೆ ಸ್ಪಷ್ಟ ನಾಯಕತ್ವದೊಂದಿಗೆ ಸರ್ಕಾರ ರಚಿಸಿದ್ದು, ಈಗ ಹೊಸ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಕಾರ್ಯ ಆರಂಭಿಸಿದೆ.

ಚುನಾವಣೆಗೆ ಒಗ್ಗಟ್ಟಿನ ಸಂದೇಶ : ಸಂಪುಟ ವಿಸ್ತರಣೆ ಸಮಾರಂಭದ ಮೂಲಕ ಎನ್‌ಡಿಎ ಮೈತ್ರಿಕೂಟವು ಬಿಹಾರದಲ್ಲಿ ತನ್ನ ಒಗ್ಗಟ್ಟನ್ನು ಪ್ರದರ್ಶಿಸಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ಸಮುದಾಯ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಗಮನಿಸಿ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಹೊಸ ಸರ್ಕಾರ ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗ ಹಾಗೂ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಎನ್‌ಡಿಎ ನಾಯಕರು ತಿಳಿಸಿದ್ದಾರೆ.

BJPಗೆ ಗುಡ್ ಬೈ ಹೇಳಿದ ಸ್ಥಳೀಯ ನಾಯಕರು: ಕಾಂಗ್ರೆಸ್‌ಗೆ ಸೇರ್ಪಡೆ

The post ಬಿಹಾರನ ಹೊಸ ಅಧ್ಯಾಯ: NDA ಸರ್ಕಾರದ ಭರ್ಜರಿ ಸಂಪುಟ ವಿಸ್ತರಣೆ appeared first on Samyukta Karnataka.

ತಮಿಳುನಾಡು ಚುನಾವಣಾ ಕಣದಲ್ಲಿ ಎನ್‌ಡಿಎ ಒಗ್ಗಟ್ಟು Vs ವಿಜಯ್; ಸೀಟು ಹಂಚಿಕೆಯಲ್ಲೇ ದೋಸ್ತಿಗಳ ರಣತಂತ್ರ ಹೇಗಿದೆ?
ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಜೋರಾಗಿದೆ. ಎನ್‌ಡಿಎ ಮೈತ್ರಿಕೂಟವು ಮಹತ್ವದ ಹೆಜ್ಜೆ ಇಟ್ಟು, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಒಟ್ಟು 234 ಕ್ಷೇತ್ರಗಳ ಪೈಕಿ, ಎಐಎಡಿಎಂಕೆ 178 ಸ್ಥಾನಗಳಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದರೆ, ಬಿಜೆಪಿ 27 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಜೊತೆಗೆ ಪಿಎಂಕೆ 18 ಮತ್ತು ಎಎಂಎಂಕೆ 11 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಚೆನ್ನೈನ ರಾಯಪೆಟ್ಟಾದಲ್ಲಿರುವ ಎಐಎಡಿಎಂಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಸೀಟು ಹಂಚಿಕೆ ಒಪ್ಪಂದಕ್ಕೆ ಅಧಿಕೃತ ಮುದ್ರೆ ಬಿದ್ದಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸಮ್ಮುಖದಲ್ಲಿ ಈ ಒಪ್ಪಂದ ಅಂತಿಮಗೊಂಡಿತು.

ಈ ಬಗ್ಗೆ ಮಾತನಾಡಿದ ಪಳನಿಸ್ವಾಮಿ, “ನಮ್ಮ ಮೈತ್ರಿಕೂಟ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ರಾಜ್ಯದಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ವಿಶ್ವಾಸ ನಮ್ಮದು” ಎಂದು ತಿಳಿಸಿದ್ದಾರೆ.

2021ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಯ ಸ್ಥಾನಗಳಲ್ಲಿ ಏರಿಕೆ ಕಂಡು ಬಂದಿದೆ. ಕಳೆದ ಬಾರಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, ಇದೀಗ 27 ಸ್ಥಾನಗಳಲ್ಲಿ ತನ್ನ ಶಕ್ತಿ ಪರೀಕ್ಷೆಗೆ ಇಳಿದಿದೆ. ಇದರಿಂದ ಈ ಬಾರಿ ಎನ್‌ಡಿಎ ಮೈತ್ರಿಕೂಟ ಹೆಚ್ಚು ಬಲಿಷ್ಠವಾಗಿ ಕಣಕ್ಕಿಳಿದಿದೆ ಎಂಬ ವಿಶ್ಲೇಷಣೆ ಕೇಳಿ ಬರುತ್ತಿದೆ.

ಇನ್ನೊಂದೆಡೆ, ಪುದುಚೇರಿಯ ರಾಜಕೀಯದಲ್ಲೂ ಹೊಸ ಚಲನವಲನ ಕಂಡುಬರುತ್ತಿದೆ. ಜನಪ್ರಿಯ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ, ಯಾವುದೇ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದೆ. ಪುದುಚೇರಿಯ ಒಟ್ಟು 30 ಕ್ಷೇತ್ರಗಳಿಗೆ ಟಿವಿಕೆ ಪಕ್ಷ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಜನರ ಶಕ್ತಿಯ ಮೇಲೆ ನಂಬಿಕೆ ಇಟ್ಟು ಚುನಾವಣೆ ಎದುರಿಸುವುದಾಗಿ ಘೋಷಿಸಿದೆ. ಮೈತ್ರಿ ರಾಜಕೀಯ ಒಂದು ಕಡೆ ಸಾಗುತ್ತಿದ್ದರೆ, ಇನ್ನೊಂದೆಡೆ ಸ್ವತಂತ್ರ ಹೋರಾಟದ ಘೋಷಣೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ಒಟ್ಟಿನಲ್ಲಿ, ತಮಿಳುನಾಡು ಮತ್ತು ಪುದುಚೇರಿ ರಾಜಕೀಯ ರಂಗ ದಿನದಿಂದ ದಿನಕ್ಕೆ ರಂಗೇರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಪೈಪೋಟಿ ಕಾಣುವ ಸಾಧ್ಯತೆ ಇದೆ. ಈಗ ಎಲ್ಲರ ಗಮನ ಮೇ 04ರ ಚುನಾವಣಾ ಫಲಿತಾಂಶದತ್ತ ನೆಟ್ಟಿದೆ.

The post ತಮಿಳುನಾಡು ಚುನಾವಣಾ ಕಣದಲ್ಲಿ ಎನ್‌ಡಿಎ ಒಗ್ಗಟ್ಟು Vs ವಿಜಯ್; ಸೀಟು ಹಂಚಿಕೆಯಲ್ಲೇ ದೋಸ್ತಿಗಳ ರಣತಂತ್ರ ಹೇಗಿದೆ? appeared first on Samyukta Karnataka.