posco case Archives - Samyukta Karnataka

ಬಾಲಕನ ಮೇಲೆ ದೌರ್ಜನ್ಯ: ವಚನಾನಂದ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲು
ದಾವಣಗೆರೆ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪದಚ್ಯತಿಗೊಂಡ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ ಐಆರ್ ನ್ನು ಕೃತ್ಯ ನಡೆಸಿದ ಸ್ಥಳದ ವ್ಯಾಪ್ತಿಯ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಕೈಗೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ದುರುದಾರರ ಬಳಿ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಮಗನಿಂದ ಶ್ರೀ ವಚನಾನಂದ ಸ್ವಾಮೀಜಿ ಮಸಾಜ್ ಮಾಡಿಕೊಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ತಾಯಿಯೊಬ್ಬರು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ತನಿಖೆ ಈಗಾಗಲೇ ಪ್ರಾರಂಭಿಸಲಾಗಿದೆ. ಸಂತ್ರಸ್ತ ಬಾಲಕನ ಹೇಳಿಕೆಯನ್ನು ಪಡೆಯಲಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ.ಶೇಖರ್ ಮಾಹಿತಿ ನೀಡಿದ್ದಾರೆ.

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್ ಶ್ರೀ ವಚನಾನಂದ ಸ್ವಾಮೀಜಿ ಇತ್ತೀಚೆಗೆ ಗುರುಪೀಠದಿಂದ ಪದಚ್ಯುತಿಗೊಳಿಸಲಾಗಿತ್ತು. ಗುರುಪೀಠದಲ್ಲಿ ಇದ್ದ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಸ್ವಾಮೀಜಿ ಪದಚ್ಯುತಿಗೊಳಿಸಿದ ಬಳಿಕ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ವಚನಾನಂದ ಸ್ವಾಮೀಜಿ ಸೇರಿದಂತೆ ಕೆಲವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿತ್ತು.

The post ಬಾಲಕನ ಮೇಲೆ ದೌರ್ಜನ್ಯ: ವಚನಾನಂದ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲು appeared first on Samyukta Karnataka.