Suniel Shetty Archives - Samyukta Karnataka

‘ಲಂಬೋದರ 2.0’ ಚಿತ್ರದ ಗ್ರ್ಯಾಂಡ್ ರೆಡ್ ಕಾರ್ಪೆಟ್ ಪ್ರದರ್ಶನ: ಸಿನಿಮಾ ತಾರೆಯರು, ಜಾಗತಿಕ ಉದ್ಯಮಿಗಳ ದಂಡು ಭಾಗಿ!
ಬೆಂಗಳೂರು: ಅನಿಲ್ ಶೆಟ್ಟಿ ನಿರ್ಮಿಸಿ, ಪ್ರಮುಖ ಪಾತ್ರದಲ್ಲಿ ನಟಿಸಿರುವ ಹಾಗೂ ‘ಸಿಂಪಲ್’ ಸುನಿ ನಿರ್ದೇಶನದ ಬಹುನಿರೀಕ್ಷಿತ ‘ಲಂಬೋದರ 2.0’ ಸಿನಿಮಾದ ಭವ್ಯ ರೆಡ್ ಕಾರ್ಪೆಟ್ ಪ್ರದರ್ಶನ ನಗರದ ಬ್ರಿಗೇಡ್ ರಸ್ತೆಯ ಪಿವಿಆರ್ ಡೈರೆಕ್ಟರ್ಸ್ ಕಟ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಈ ಸಮಾರಂಭಕ್ಕೆ ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ತಾರೆಯರಷ್ಟೇ ಅಲ್ಲದೆ, ದೇಶ-ವಿದೇಶಗಳ ಖ್ಯಾತ ಉದ್ಯಮಿಗಳು ಆಗಮಿಸಿ ಚಿತ್ರತಂಡಕ್ಕೆ ಸಾಥ್ ನೀಡಿದ್ದು ವಿಶೇಷವಾಗಿತ್ತು.

ಚಿತ್ರದಲ್ಲಿ ‘ರಾಘವ್ ಕಶ್ಯಪ್’ ಎಂಬ ಖಳನಾಯಕನ ಪಾತ್ರ ನಿರ್ವಹಿಸಿರುವ ಬಾಲಿವುಡ್ ನಟ ಕುನಾಲ್ ಕಪೂರ್ ವಿಶೇಷವಾಗಿ ಬೆಂಗಳೂರಿಗೆ ಆಗಮಿಸಿ ಪ್ರದರ್ಶನದಲ್ಲಿ ಪಾಲ್ಗೊಂಡರು. ಇವರೊಂದಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ, ಅಶ್ವಿನಿ ಪುನೀತ್ ರಾಜ್‌ಕುಮಾರ್, ಪ್ರಗತಿ ಶೆಟ್ಟಿ, ಶ್ರೀಮುರಳಿ, ನಿಶ್ವಿಕಾ ನಾಯ್ಡು, ಶಾನ್ವಿ ಶ್ರೀವಾಸ್ತವ, ಮೇಘನಾ ಗಾಂವ್ಕರ್, ಕಾರ್ತಿಕ್ ಮಹೇಶ್ ಸೇರಿದಂತೆ ಹಲವು ತಾರೆಯರು ಭಾಗವಹಿಸಿ ಶುಭ ಹಾರೈಸಿದರು. ಅಲ್ಲದೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ವಿಪ್ರೋ ಅಧ್ಯಕ್ಷ ರಿಷದ್ ಪ್ರೇಮ್‌ಜಿ, ಪ್ರೊ. ಮನೋಜ್ ಲಾಡ್ವಾ ಹಾಗೂ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್ ಅವರಂತಹ ಜಾಗತಿಕ ಗಣ್ಯರು ಉಪಸ್ಥಿತರಿದ್ದು ಚಿತ್ರತಂಡಕ್ಕೆ ಬೆನ್ನುತಟ್ಟಿದರು.

ಮಹಾವೀರ್ ಜೈನ್ ಫಿಲ್ಮ್ಸ್ ಅರ್ಪಿಸಿರುವ, ‘ಮಾಸ್ ಪ್ರೊಡಕ್ಷನ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರವು ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ತಂತ್ರಜ್ಞಾನವು ಮನುಷ್ಯನ ಬದುಕಿನ ಮೇಲೆ ಬೀರುವ ಪರಿಣಾಮಗಳ ಸುತ್ತ ಹೆಣೆಯಲಾಗಿದೆ. ಅನಿಲ್ ಶೆಟ್ಟಿ, ಕುನಾಲ್ ಕಪೂರ್, ಸಾಚಿ ಬಿಂದ್ರಾ ಜೊತೆಗೆ ‘ಜಿಯಾ’ ಎಂಬ ನೈಜ ಹ್ಯೂಮನಾಯ್ಡ್ ರೋಬೋಟ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದೆ. ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಕಂಡಿರುವ ಈ ಚಿತ್ರ ತನ್ನ ವಿಭಿನ್ನ ಕಥಾವಸ್ತುವಿನ ಮೂಲಕ ಗಮನ ಸೆಳೆಯುತ್ತಿದೆ.

The post ‘ಲಂಬೋದರ 2.0’ ಚಿತ್ರದ ಗ್ರ್ಯಾಂಡ್ ರೆಡ್ ಕಾರ್ಪೆಟ್ ಪ್ರದರ್ಶನ: ಸಿನಿಮಾ ತಾರೆಯರು, ಜಾಗತಿಕ ಉದ್ಯಮಿಗಳ ದಂಡು ಭಾಗಿ! appeared first on Samyukta Karnataka.