ಬೆಂಗಳೂರು: ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಆರ್‌ಸಿಬಿಗೆ ಬ್ಯಾಟಿಂಗ ನೀಡಿದೆ.
ಮಹಿಳಾ ಪ್ರೀಮಿಯರ್ ಲೀಗ್‌ನ 14ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿಗೆ ಇದು ಮಹತ್ವದ ಪಂದ್ಯವಾಗಿದೆ. ಈಗಾಗಲೇ ಆರ್‌ಸಿಬಿ ಆಡಿರುವ 5 ಪಂದ್ಯಗಳಲ್ಲಿ ಕೇವಲ 2ರಲ್ಲಿ ಗೆದ್ದು, ಮೂರರಲ್ಲಿ ಸೋಲನುಭವಿಸಿದೆ. ಅದರಲ್ಲೂ ತವರು ಚಿನ್ನಸ್ವಾಮಿ ಅಂಗಳದಲ್ಲೇ ಸತತವಾಗಿ ಮೂರು ಸೋಲುಗಳ ಮೂಲಕ ಕೆಟ್ಟ ದಾಖಲೆ ಬರೆದಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಆಡಿದ 6 ಪಂದ್ಯಗಳಲ್ಲಿ ಕೇವಲ 2ರಲ್ಲಿ ಸೋತು, 4 ಪಂದ್ಯಗಳನ್ನು ಗೆದ್ದು 8 ಪಾಯಿಂಟ ಪಡೆದು ಮೊದಲ ಸ್ಥಾನದಲ್ಲಿದೆ,