ಸಿಎಂ ರಾಜೀನಾಮೆ ನೀಡಲಿ : ಛಲುವಾದಿ ಆಗ್ರಹ
ಯಾದಗಿರಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂಬ ವಿಶ್ವಾಸವಿದೆ ಎಂದಿರುವ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲುವಾದಿ ನಾರಾಯಣಸ್ವಾಮಿ ವಿಜಯೇಂದ್ರ ಅವರೊಬ್ಬ ಕ್ರೀಯಾಶೀಲ ಅಧ್ಯಕ್ಷರಾಗಿದ್ದಾರೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕನ ಬದಲಾವಣೆ ಸೇರಿದಂತೆಯೇ ಯಾರ ಬದಲಾವಣೆ ಇಲ್ಲ. ಈ ಬಗ್ಗೆ ಏನೇ ಇದ್ದರೂ ಪಕ್ಷದ ಹೈಕಮಾಂಡ ನೋಡಿಕೊಳ್ಳುತ್ತದೆ. ಪಕ್ಷದ ಸಂಘಟನೆ ವಿಚಾರವಾಗಿ ದೆಹಲಿಗೆ ರಾಜ್ಯಾಧ್ಯಕ್ಷರು ಹೋಗಿ ಬರುತ್ತಾರೆ. ಅದಕ್ಕೆ ಬೇರೆ ಕಲ್ಪನೆ ಕಟ್ಟುವುದು ಬೇಡ ಎಂದರು. ಇನ್ನೂ 2-3 ತಿಂಗಳಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು.